Mercury Transit: ವೃಶ್ಚಿಕ ರಾಶಿಯಲ್ಲಿ ಬುಧ ಸಂಚಾರ; ಇವರಿಗೆ ನಿರೀಕ್ಷೆಗೂ ಮೀರಿದ ಲಾಭಗಳಿವೆ, 12 ರಾಶಿಯವರ ಶುಭ ಫಲಗಳಿವು
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Mercury Transit: ವೃಶ್ಚಿಕ ರಾಶಿಯಲ್ಲಿ ಬುಧ ಸಂಚಾರ; ಇವರಿಗೆ ನಿರೀಕ್ಷೆಗೂ ಮೀರಿದ ಲಾಭಗಳಿವೆ, 12 ರಾಶಿಯವರ ಶುಭ ಫಲಗಳಿವು

Mercury Transit: ವೃಶ್ಚಿಕ ರಾಶಿಯಲ್ಲಿ ಬುಧ ಸಂಚಾರ; ಇವರಿಗೆ ನಿರೀಕ್ಷೆಗೂ ಮೀರಿದ ಲಾಭಗಳಿವೆ, 12 ರಾಶಿಯವರ ಶುಭ ಫಲಗಳಿವು

ಬುಧ ಸಂಚಾರ: ಗ್ರಹಗಳ ಅಧಿಪತಿ ಬುಧ ಕೆಲವೇ ದಿನಗಳಲ್ಲಿ ಹಿಮ್ಮುಖವಾಗಲಿದ್ದಾನೆ. ನವೆಂಬರ್ 27 ರಿಂದ ವೃಶ್ಚಿಕ ರಾಶಿಯಲ್ಲಿ ಬುಧ ಹಿಮ್ಮುಖವಾಗಿ ಚಲಿಸುತ್ತಾನೆ. ಇದು ಮೇಷದಿಂದ ಮೀನ ರಾಶಿಯವರಿಗೆ ಯಾವ ರೀತಿಯ ಫಲಿತಾಂಶಗಳನ್ನು ನೀಡುತ್ತವೆ ಎಂಬುದನ್ನು ತಿಳಿಯೋಣ.

ವೃಶ್ಚಿಕ ರಾಶಿಯಲ್ಲಿ ಬುಧನ ಸಂಕ್ರಮಣವು 12 ರಾಶಿಯವರ ಮೇಲೆ ಏನೆಲ್ಲಾ ಪರಿಣಾಮಗಳನ್ನು ಬೀರುತ್ತವೆ ಎಂಬುದನ್ನು ಇಲ್ಲಿ ನೀಡಲಾಗಿದೆ.
ವೃಶ್ಚಿಕ ರಾಶಿಯಲ್ಲಿ ಬುಧನ ಸಂಕ್ರಮಣವು 12 ರಾಶಿಯವರ ಮೇಲೆ ಏನೆಲ್ಲಾ ಪರಿಣಾಮಗಳನ್ನು ಬೀರುತ್ತವೆ ಎಂಬುದನ್ನು ಇಲ್ಲಿ ನೀಡಲಾಗಿದೆ.

ಗ್ರಹಗಳ ಅಧಿಪತಿ ಬುಧನಿಗೆ ಜ್ಯೋತಿಷ್ಯದಲ್ಲಿ ವಿಶೇಷ ಸ್ಥಾನವಿದೆ. ಬುಧನನ್ನು ಬುದ್ಧಿವಂತಿಕೆ, ಸಂವಹನ, ಗಣಿತ, ಬುದ್ಧಿಶಕ್ತಿ ಹಾಗೂ ಸ್ನೇಹಕ್ಕೆ ಕಾರಣವಾದ ಗ್ರಹ ಎಂದು ಹೇಳಲಾಗುತ್ತದೆ. ಬುಧನು ಲಾಭದಾಯಕವಾಗಿದ್ದರೆ, ಒಬ್ಬ ವ್ಯಕ್ತಿಯು ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾನೆ. ಅದೇ ಬುಧನು ಅಶುಭವಾಗಿದ್ದಾಗ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ನವೆಂಬರ್ 27 ರಂದು ಬುಧನು ವೃಶ್ಚಿಕ ರಾಶಿಯಲ್ಲಿ ಹಿಮ್ಮುಖವಾಗಿ ಚಲಿಸಲಿದ್ದಾನೆ. ವೃಶ್ಚಿಕ ರಾಶಿಯಲ್ಲಿ ಬುಧ ಹಿಮ್ಮೆಟ್ಟುವಿಕೆಯು ಕೆಲವರಿಗೆ ಅದೃಷ್ಟವನ್ನು ತರಲಿದೆ. ಆದರೆ ಇತರೆ ರಾಶಿಯವರು ಜಾಗರೂಕರಾಗಿರಬೇಕು. ಬುಧದ ಹಿಮ್ಮುಖ ಸಂಚಾರದಿಂದ ಎಲ್ಲಾ 12 ಚಿಹ್ನೆಗಳ ಸ್ಥಿತಿಯು ಹೇಗೆ ಇರುತ್ತದೆ ಎಂಬುದನ್ನು ಕಂಡುಹಿಡಿಯೋಣ. ಮೇಷದಿಂದ ಮೀನದವರೆಗಿನ ಶುಭ, ಅಶುಭ ಫಲಿತಾಂಶಗಳು ಇಲ್ಲಿವೆ.

ಮೇಷ ರಾಶಿ

ಮನಸ್ಸು ವಿಚಲಿತವಾಗಿರುತ್ತದೆ. ಆತ್ಮವಿಶ್ವಾಸದ ಕೊರತೆ ಇರುತ್ತೆ. ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ವ್ಯಾಪಾರದಲ್ಲಿ ಹೆಚ್ಚಳ ಕಂಡುಬರಲಿದೆ. ಲಾಭ ಪಡೆಯುವ ಸಾಧ್ಯತೆಗಳಿವೆ. ಹೆಚ್ಚಿನ ಪ್ರಯತ್ನ ಇರುತ್ತದೆ.

ವೃಷಭ ರಾಶಿ

ಮನಸ್ಸಿಗೆ ಸಂತೋಷವಾಗಿರುತ್ತದೆ. ಆದರೂ ಮಾತನಾಡುವಾಗ ಶಾಂತವಾಗಿರಿ. ಅನಗತ್ಯ ಚರ್ಚೆಗಳನ್ನು ತಪ್ಪಿಸಿ. ಉದ್ಯೋಗದಲ್ಲಿ ಬದಲಾವಣೆಯಾಗುವ ಸಾಧ್ಯತೆಗಳಿವೆ. ಆದಾಯ ಹೆಚ್ಚಾಗುತ್ತದೆ, ನೀವು ಸ್ಥಳ ಬದಲಾಗಬಹುದು.

ಮಿಥುನ ರಾಶಿ

ಮನಸ್ಸಿನಲ್ಲಿ ಏರಿಳಿತಗಳಿರುತ್ತವೆ. ಆತ್ಮವಿಶ್ವಾಸದ ಕೊರತೆಯನ್ನು ಎದುರಿಸುತ್ತೀರಿ. ಶೈಕ್ಷಣಿಕ ಕೆಲಸಗಳ ಬಗ್ಗೆ ಎಚ್ಚರವಿರಲಿ. ನಿಮಗೆ ಸರಕಾರದಿಂದ ಬೆಂಬಲ ಸಿಗಲಿದೆ. ನಿಮ್ಮ ವ್ಯಾಪಾರದಲ್ಲಿ ಲಾಭವನ್ನು ಕಾಣುತ್ತೀರಿ.

ಕಟಕ ರಾಶಿ

ಮನಸ್ಸಿನಲ್ಲಿ ನಕಾರಾತ್ಮಕ ಆಲೋಚನೆಗಳನ್ನು ತಪ್ಪಿಸಿ. ಮಾತಿನಲ್ಲಿ ಮಾಧುರ್ಯವಿರುತ್ತದೆ. ತಾಳ್ಮೆಯಿಂದಿರಿ. ಉದ್ಯೋಗ ಬದಲಾವಣೆ ಸಾಧ್ಯತೆ ಇದೆ. ಆದಾಯ ಹೆಚ್ಚಾಗಲಿದೆ. ಕೆಲಸದಲ್ಲಿ ಹೆಚ್ಚಿನ ಆಸಕ್ತಿಯನ್ನು ತೋರಿಸುತ್ತೀರಿ.

ಸಿಂಹ ರಾಶಿ

ಮನಸ್ಸು ವಿಚಲಿತವಾಗಬಹುದು. ನಿಮ್ಮ ಆರೋಗ್ಯವನ್ನು ನೋಡಿಕೊಳ್ಳಿ. ಅನಗತ್ಯ ಕೋಪವನ್ನು ತಪ್ಪಿಸಿ. ಹೆಚ್ಚಿನ ಪ್ರಯತ್ನ ಇರುತ್ತದೆ. ಕಚೇರಿಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಮಾನಸಿಕ ಸಮಸ್ಯೆಯಿಂದ ಮುಕ್ತರಾಗುತ್ತೀರಿ. ತಾಳ್ಮೆ ಹೆಚ್ಚಾಗುತ್ತದೆ.

ಕನ್ಯಾ ರಾಶಿ

ಬುಧನ ಹಿಮ್ಮುಖ ಸಂಚಾರದಿಂದ ಕನ್ಯಾರಾಶಿಯವರ ಮನಸ್ಸಿನಲ್ಲಿ ಗೊಂದಲ ಉಂಟಾಗುತ್ತೆ. ಅತಿಯಾದ ಕೋಪವನ್ನು ತಪ್ಪಿಸಿ. ಶೈಕ್ಷಣಿಕ ಮತ್ತು ಬೌದ್ಧಿಕ ಅನ್ವೇಷಣೆಗಳಲ್ಲಿ ಆಸಕ್ತಿ ಇರುತ್ತದೆ. ಉದ್ಯೋಗದಲ್ಲಿ ಬದಲಾವಣೆಯಾಗುವ ಸಾಧ್ಯತೆಗಳಿವೆ. ಆದಾಯ ಹೆಚ್ಚಲಿದೆ. ಕೆಲಸದ ವ್ಯಾಪ್ತಿ ಕೂಡ ಹೆಚ್ಚುತ್ತದೆ.

ತುಲಾ ರಾಶಿ

ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಆದರೆ ನಿಮ್ಮ ಮನಸ್ಸಿನಲ್ಲಿ ನಕಾರಾತ್ಮಕ ಆಲೋಚನೆಗಳನ್ನು ತಪ್ಪಿಸಿ. ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಉನ್ನತ ಸ್ಥಾನವನ್ನು ಪಡೆಯುತ್ತೀರಿ. ಆದಾಯ ಹೆಚ್ಚಲಿದೆ. ಲಾಭ ಪಡೆಯುವ ಸಾಧ್ಯತೆಗಳಿವೆ.

ವೃಶ್ಚಿಕ ರಾಶಿ

ಮನಸ್ಸಿನಲ್ಲಿ ಶಾಂತಿ ಮತ್ತು ಸಂತೋಷವಿದೆ. ಕಲೆ ಮತ್ತು ಸಂಗೀತದಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಹೆಚ್ಚಳ ಕಂಡುಬರಲಿದೆ. ಲಾಭ ಹೆಚ್ಚಾಗಲಿದೆ. ಗೌರವ ಪಡೆಯುತ್ತೀರಿ. ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಧನು ರಾಶಿ

ಮನಸ್ಸಿಗೆ ಸಂತೋಷವಾಗಲಿದೆ. ಮಾತನಾಡುವಾಗ ತಾಳ್ಮೆಯಿಂದಿರಿ. ಅನಗತ್ಯ ಜಗಳಗಳನ್ನು ತಪ್ಪಿಸಿ. ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ವ್ಯಾಪಾರದಲ್ಲಿ ಹೆಚ್ಚಳ ಕಂಡುಬರಲಿದೆ.

ಮಕರ ರಾಶಿ

ಮನಸ್ಸು ವಿಚಲಿತವಾಗುತ್ತದೆ. ತಾಳ್ಮೆಯಿಂದಿರಿ. ನಿಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಡಿ. ಕುಟುಂಬದ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಹೆಚ್ಚು ಓಡಾಟ ಇರುತ್ತದೆ. ಜೀವನವು ನೋವಿನಿಂದ ಕೂಡಿದೆ. ವೆಚ್ಚಗಳು ಹೆಚ್ಚಾಗುತ್ತವೆ.

ಕುಂಭ ರಾಶಿ

ತುಂಬಾ ಆತ್ಮವಿಶ್ವಾಸದಿಂದ ಇರುತ್ತೀರಿ, ಆದರೆ ತಾಳ್ಮೆಯಿಂದಿರಲು ಪ್ರಯತ್ನಿಸಿ. ಕುಟುಂಬದ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಶೈಕ್ಷಣಿಕ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ. ನಿಮ್ಮ ಪೋಷಕರಿಂದ ಹಣವನ್ನು ಪಡೆಯಬಹುದು.

ಮೀನ ರಾಶಿ

ಆತ್ಮವಿಶ್ವಾಸದಿಂದ ಇರುತ್ತೀರಿ. ಆದರೆ ನಿಮ್ಮ ಮನಸ್ಸು ಕೂಡ ತೊಂದರೆಗೊಳಗಾಗಬಹುದು. ಯಾವುದೇ ಧಾರ್ಮಿಕ ಸ್ಥಳಗಳಿಗೆ ಕುಟುಂಬದೊಂದಿಗೆ ಹೋಗಬಹುದು. ವಾಹನ ಸೌಕರ್ಯ ಹೆಚ್ಚಾಗಬಹುದು.

ಗಮನಿಸಿ: ಇದು ಪ್ರಚಲಿತದಲ್ಲಿರುವ ಧಾರ್ಮಿಕ ನಂಬಿಕೆಗಳನ್ನು ಆಧರಿಸಿದ ಬರಹ. ಓದುಗರಿಗೆ ಮಾಹಿತಿ ನೀಡುವ ಉದ್ದೇಶದಿಂದಷ್ಟೇ ಪ್ರಕಟಿಸಲಾಗಿದೆ.

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.