ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಮಿಥುನ ರಾಶಿಯಲ್ಲಿ ಸೂರ್ಯ, ಶುಕ್ರ, ಬುಧ ಸಂಯೋಗದ ತ್ರಿಗಾಹಿ ಯೋಗ; ಈ 3 ರಾಶಿಯವರಿಗೆ ಭಾರಿ ಅದೃಷ್ಟ -Trigrahi Yoga

ಮಿಥುನ ರಾಶಿಯಲ್ಲಿ ಸೂರ್ಯ, ಶುಕ್ರ, ಬುಧ ಸಂಯೋಗದ ತ್ರಿಗಾಹಿ ಯೋಗ; ಈ 3 ರಾಶಿಯವರಿಗೆ ಭಾರಿ ಅದೃಷ್ಟ -Trigrahi Yoga

Trigrahi Yoga: ಮಿಥುನ ರಾಶಿಯಲ್ಲಿ ಸೂರ್ಯ, ಶುಕ್ರ ಮತ್ತು ಬುಧ ಸಂಯೋಗದಿಂದ ತ್ರಿಗ್ರಾಹಿ ಯೋಗ ಉಂಟಾಗುತ್ತದೆ. ಜೂನ್ 29 ರವರೆಗೆ ಈ ಯೋಗದ ಪ್ರಭಾವದಿಂದ ಕೆಲವು ರಾಶಿಯವರಿಗೆ ಅದೃಷ್ಟ ಕೂಡಿಬರಲಿದೆ. ಯಾವ ರಾಶಿಯವರಿಗೆ ಲಾಭಗಳಿವೆ ಅನ್ನೋದನ್ನ ತಿಳಿಯೋಣ.

ಮಿಥುನ ರಾಶಿಯಲ್ಲಿ ಸೂರ್ಯ, ಶುಕ್ರ, ಬುಧ ಸಂಯೋಗದ ತ್ರಿಗಾಹಿ ಯೋಗ; ಈ 3 ರಾಶಿಯವರಿಗೆ ಭಾರಿ ಅದೃಷ್ಟ
ಮಿಥುನ ರಾಶಿಯಲ್ಲಿ ಸೂರ್ಯ, ಶುಕ್ರ, ಬುಧ ಸಂಯೋಗದ ತ್ರಿಗಾಹಿ ಯೋಗ; ಈ 3 ರಾಶಿಯವರಿಗೆ ಭಾರಿ ಅದೃಷ್ಟ

ಜ್ಯೋತಿಷ್ಯದಲ್ಲಿ ಗ್ರಹಗಳ ಸಂಚಾರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಈ ಸಂಕ್ರಮಣ ಎಲ್ಲಾ ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ. ನವಗ್ರಹಗಳು ಸ್ವಲ್ಪ ಸಮಯದ ನಂತರ ತಮ್ಮ ಸ್ಥಾನಗಳನ್ನ ಬದಲಾಯಿಸುತ್ತವೆ. ಈ ಬದಲಾವಣೆ ವ್ಯಕ್ತಿಯ ಜೀವನದ ಮೇಲೆ ಪರಿಣಾಮ ಬೀರುತ್ತವೆ. ಒಂದೇ ರಾಶಿಯಲ್ಲಿ ಒಂದು ಅಥವಾ ಹೆಚ್ಚಿನ ಗ್ರಹಗಳ ಸಾಗುವುದನ್ನು ಸಂಯೋಗ ಎಂದು ಕರೆಯಲಾಗುತ್ತದೆ. ಪ್ರಸ್ತುತ ಮಿಥುನ ರಾಶಿಯಲ್ಲಿ ಮೂರು ಗ್ರಹಗಳ ಸಂಯೋಗವಿದೆ. ಮೂರು ಗ್ರಹಗಳು ಒಂದೇ ರಾಶಿಯಲ್ಲಿದ್ದರೆ ತ್ರಿಗ್ರಾಹಿ ಯೋಗ ಉಂಟಾಗುತ್ತದೆ. ಈ ತ್ರಿಗ್ರಾಹಿ ಯೋಗವು ಸೂರ್ಯ, ಶುಕ್ರ ಮತ್ತು ಬುಧಗಳ ಸಂಯೋಜನೆಯಿಂದ ರೂಪುಗೊಂಡಿದೆ. ಈ ಯೋಗವನ್ನು ಜ್ಯೋತಿಷ್ಯದಲ್ಲಿ ಮಂಗಳಕರವೆಂದು ಪರಿಗಣಿಸಲಾಗಿದೆ. ಬುಧ, ಸೂರ್ಯ ಮತ್ತು ಶುಕ್ರನ ಸಂಯೋಜನೆಯನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ.

ಜೂನ್ 29 ರವರೆಗೆ ಮಿಥುನ ರಾಶಿಯಲ್ಲಿ ತ್ರಿಗ್ರಾಹಿ ಯೋಗ ಇರುತ್ತದೆ. ಅದರ ನಂತರ ಬುಧವು ಮಿಥುನ ರಾಶಿಯಿಂದ ಕಟಕಕ್ಕೆ ಪ್ರವೇಶಿಸುತ್ತಾನೆ. ತ್ರಿಗ್ರಾಹಿ ಯೋಗವನ್ನು ಹೊರತುಪಡಿಸಿ, ಈ ಮೂರು ಗ್ರಹಗಳು ವಿಭಿನ್ನ ಅದೃಷ್ಟ ಯೋಗಗಳನ್ನು ರೂಪಿಸುತ್ತವೆ. ಬುಧನು ಭದ್ರ ರಾಜಯೋಗವನ್ನು ನೀಡುತ್ತಾನೆ. ಇದು ಪಂಚಮಹಾ ಪುರುಷ ರಾಜಯೋಗಗಳಲ್ಲಿ ಒಂದಾಗಿದೆ. ಇವುಗಳ ಜೊತೆಗೆ ಬುಧ-ಸೂರ್ಯರ ಸಂಯೋಗದಿಂದ ಬುಧಾದಿತ್ಯ ಯೋಗವೂ, ಶುಕ್ರ-ಸೂರ್ಯರ ಸಂಯೋಗದಿಂದ ಶುಕ್ರಾದಿತ್ಯ ಯೋಗವೂ ಉಂಟಾಗುತ್ತದೆ. ಬುಧ ಮತ್ತು ಶುಕ್ರರು ಒಟ್ಟಾಗಿ ಲಕ್ಷ್ಮೀ ನಾರಾಯಣ ಯೋಗವನ್ನು ನೀಡುತ್ತಾರೆ. ಇಂತಹ ಸಂದರ್ಭಗಳಲ್ಲಿ ಮಿಥುನ ರಾಶಿಯಲ್ಲಿ ಈ 3 ಗ್ರಹಗಳು ಇರುವುದರಿಂದ ಕೆಲವು ರಾಶಿಯವರಿಗೆ ಅದೃಷ್ಟ ಒಲಿದು ಬಂದಿದೆ. ಮಿಥುನ ರಾಶಿಯಲ್ಲಿ ತ್ರಿಗ್ರಾಹಿ ಯೋಗವು ಯಾವ ರಾಶಿಯವರಿಗೆ ಒಳ್ಳೆಯದು ಎಂಬುದನ್ನು ತಿಳಿಯೋಣ.

ಮೇಷ ರಾಶಿ

ಮೇಷ ರಾಶಿಯವರಿಗೆ ಸೂರ್ಯ, ಶುಕ್ರ ಮತ್ತು ಬುಧ ಗ್ರಹಗಳ ಸಂಯೋಜನೆಯು ಶುಭಕರವಾಗಿದೆ. ಈ ಸಮಯದಲ್ಲಿ ನೀವು ತುಂಬಾ ಧನಾತ್ಮಕವಾಗಿರುತ್ತೀರಿ. ಪ್ರತಿ ಕೆಲಸದಲ್ಲೂ ಉತ್ಸಾಹದಿಂದ ಪಾಲ್ಗೊಳ್ಳುತ್ತಾರೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ತೋರಿಸುತ್ತಾರೆ. ಆರೋಗ್ಯವೂ ಚೆನ್ನಾಗಿರುತ್ತದೆ. ಮಕ್ಕಳೊಂದಿಗೆ ಸಮಯವನ್ನು ಕಳೆಯುತ್ತೀರಿ.

ತುಲಾ ರಾಶಿ

ತುಲಾ ರಾಶಿಯವರಿಗೆ ಬುಧ, ಶುಕ್ರ ಮತ್ತು ಸೂರ್ಯನ ಸಂಯೋಜನೆಯು ಲಾಭದಾಯಕವೆಂದು ಪರಿಗಣಿಸಲಾಗಿದೆ. ಗ್ರಹಗಳ ಚಲನೆಯಲ್ಲಿನ ಬದಲಾವಣೆಯಿಂದಾಗಿ ಈ ರಾಶಿಗೆ ಸೇರಿದ ಜನರು ಧಾರ್ಮಿಕ ಚಟುವಟಿಕೆಗಳಲ್ಲಿ ಹೆಚ್ಚು ಆಸಕ್ತಿ ವಹಿಸುತ್ತಾರೆ. ನಿಮ್ಮ ಹಣಕಾಸಿನ ಪರಿಸ್ಥಿತಿ ಸ್ಥಿರವಾಗಿರುತ್ತದೆ. ಆದರೆ ವೆಚ್ಚವನ್ನು ನಿಯಂತ್ರಿಸುವ ಅವಶ್ಯಕತೆಯಿದೆ. ಆಗ ಮಾತ್ರ ನೀವು ಹಣವನ್ನು ಉಳಿಸಬಹುದು. ದಾಂಪತ್ಯ ಜೀವನ ಸಂತೋಷದಿಂದ ಕೂಡಿರುತ್ತದೆ. ಕಷ್ಟದ ಸಮಯದಲ್ಲಿ ಕುಟುಂಬ ಸದಸ್ಯರ ಬೆಂಬಲ ಪಡೆಯುತ್ತೀರಿ.

ಇದನ್ನೂ ಓದಿ: ವೃಷಭ ರಾಶಿಯಲ್ಲಿ ಸೂರ್ಯ, ಬುಧ ಸಂಯೋಜನೆಯಿಂದ ಬುಧಾದಿತ್ಯ ರಾಜಯೋಗ; ಈ ರಾಶಿಯವರಿಗೆ ಸರ್ಕಾರಿ ಕೆಲಸ ಗ್ಯಾರಂಟಿ

ಮಿಥುನ ರಾಶಿ

ತ್ರಿಗ್ರಾಹಿ ಯೋಗವು ಮಿಥುನ ರಾಶಿಯಲ್ಲಿ ಸೂರ್ಯ, ಶುಕ್ರ ಮತ್ತು ಬುಧಗಳ ಸಂಯೋಗದಿಂದ ರೂಪುಗೊಳ್ಳುತ್ತದೆ. ಈ ಪರಿಣಾಮವು ಮಿಥುನ ರಾಶಿಯವರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಆದಾಯವನ್ನು ಹೆಚ್ಚಿಸಿಕೊಳ್ಳಲು ಅನೇಕ ಹೊಸ ಮೂಲಗಳನ್ನು ಕಂಡುಕೊಳ್ಳುವಿರಿ. ಈ ತಿಂಗಳು ನೀವು ಎಲ್ಲದರಲ್ಲೂ ಯಶಸ್ವಿಯಾಗುತ್ತೀರಿ. ವೃತ್ತಿ ಜೀವನದಲ್ಲಿ ಕೆಲವು ಹೊಸ ಜವಾಬ್ದಾರಿಗಳನ್ನು ಸ್ವೀಕರಿಸುತ್ತೀರಿ. ನಿಮ್ಮ ಸಂಗಾತಿ ಅಥವಾ ಪ್ರೇಮಿಯೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ.

ಗಮನಿಸಿ: ಇದು ಪ್ರಚಲಿತದಲ್ಲಿರುವ ಧಾರ್ಮಿಕ ನಂಬಿಕೆಗಳನ್ನು ಆಧರಿಸಿದ ಬರಹ. ಓದುಗರಿಗೆ ಮಾಹಿತಿ ನೀಡುವ ಉದ್ದೇಶದಿಂದಷ್ಟೇ ಪ್ರಕಟಿಸಲಾಗಿದೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.