ದಿನ ಭವಿಷ್ಯ ಜುಲೈ 14; ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆ ಕೊಡಿಸಿ ದಿನಚರಿ ಶುರುಮಾಡಿ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ದಿನ ಭವಿಷ್ಯ ಜುಲೈ 14; ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆ ಕೊಡಿಸಿ ದಿನಚರಿ ಶುರುಮಾಡಿ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ

ದಿನ ಭವಿಷ್ಯ ಜುಲೈ 14; ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆ ಕೊಡಿಸಿ ದಿನಚರಿ ಶುರುಮಾಡಿ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ

Daily Horoscope Today July 14; ಪ್ರತಿ ರಾಶಿಗೂ ಅದರದ್ದೇ ಆದ ಅಧಿಪತಿ ಇದ್ದು, ಪಾಪ-ಪುಣ್ಯಗಳಿಗನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಅಂದಹಾಗೆ, ಜುಲೈ 14ರ ದಿನ ಭವಿಷ್ಯ ಪ್ರಕಾರ, ಕೆಲವರಿಗೆ ಆರೋಗ್ಯ ಸಮಸ್ಯೆ, ಹಣಕಾಸಿನ ಬಿಕ್ಕಟ್ಟು ಇದ್ದರೂ, ಶುಭಫಲವಿದೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಫಲ ಹೀಗಿದೆ. (ರಾಶಿಭವಿಷ್ಯ- ಎಚ್‌. ಸತೀಶ್, ಜ್ಯೋತಿಷಿ).

ದಿನ ಭವಿಷ್ಯ ಜುಲೈ 14; ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆ ಕೊಡಿಸಿ ದಿನಚರಿ ಶುರುಮಾಡಿ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ
ದಿನ ಭವಿಷ್ಯ ಜುಲೈ 14; ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆ ಕೊಡಿಸಿ ದಿನಚರಿ ಶುರುಮಾಡಿ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ

Daily Horoscope Today July 14; ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (14th July 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯನ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲಪಕ್ಷ, ಭಾನುವಾರ

ತಿಥಿ : ಅಷ್ಟಮಿ ಹ. 01.53 ರವರೆಗೂ ಇರುತ್ತದೆ. ಆನಂತರ ನವಮಿ ಆರಂಭವಾಗುತ್ತದೆ.

ನಕ್ಷತ್ರ : ಚಿತ್ತ ನಕ್ಷತ್ರವು ರಾತ್ರಿ 07.41 ರ ವರೆಗೂ ಇದ್ದು ಆನಂತರ ಸ್ವಾತಿ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ ಬೆಳಗ್ಗೆ 06.00

ಸೂರ್ಯಾಸ್ತ ಸಂಜೆ 06.49

ರಾಹುಕಾಲ : ಸಾಯಂಕಾಲ 05.16 ರಿಂದ ಸಾಯಂಕಾಲ 06.52

ದಿನ ಭವಿಷ್ಯ ಜುಲೈ 14; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಗಳ ರಾಶಿ ಭವಿಷ್ಯ

ಸಿಂಹ ರಾಶಿ: ಆತ್ಮೀಯರ ಜೊತೆಗೆ ಸಂತೋಷಕೂಟದಲ್ಲಿ ಭಾಗವಹಿಸುವಿರಿ. ಪರಿಸರ ಬದಲಾವಣೆಗಾಗಿ ಪರಸ್ಥಳಕ್ಕೆ ಪ್ರಯಾಣ ಬೆಳೆಸುವಿರಿ. ಕುಟುಂಬದ ಸಂತೋಷವನ್ನು ಕಾಪಾಡಲು ಯಶಸ್ವಿಯಾಗುವಿರಿ. ಮಕ್ಕಳ ಜೀವನಕ್ಕಾಗಿ ಸಕಲ ಸೌಕರ್ಯವನ್ನು ಕಲ್ಪಿಸುವಿರಿ. ಸ್ನೇಹಿತರಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧರಾಗುವಿರಿ. ಸಂಬಂಧ ಬಂಧುತ್ವಕ್ಕೆ ಬೆಲೆ ನೀಡುವ ನಿಮ್ಮನ್ನು ಎಲ್ಲರೂ ಗೌರವಿಸುತ್ತಾರೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರ ದೊರೆಯುತ್ತದೆ. ದಿನನಿತ್ಯದ ಆದಾಯದಲ್ಲಿ ಹಿನ್ನಡೆ ಉಂಟಾಗದು. ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿಸುವ ಪ್ರಯತ್ನ ಮಾಡುವಿರಿ. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗದ ವ್ಯವಸ್ಥೆ ಮಾಡುವಿರಿ. ಕುಟುಂಬದ ಹಿರಿಯರ ಆಶೀರ್ವಾದ ನಿಮಗಿರುತ್ತದೆ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಆಕಾಶನೀಲಿ ಬಣ್ಣ

ಕನ್ಯಾ ರಾಶಿ: ಒಳ್ಳೆಯ ಅಭ್ಯಾಸಗಳನ್ನು ಬೆಳೆಸಿಕೊಂಡರೆ ಮಾತ್ರ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಬೇಡದ ವಿಚಾರಗಳಿಗೆ ಯೋಚನೆ ಮಾಡುವ ಕಾರಣ ತಲೆನೋವು ನಿಮ್ಮನ್ನು ಭಾದಿಸುತ್ತದೆ. ಮನಸ್ಸು ಎಷ್ಟೇ ಒಳ್ಳೆಯದಾದರೂ ದುಡುಕು ಮಾತಿನಿಂದ ಕೆಟ್ಟಹೆಸರು ಗಳಿಸುವಿರಿ. ಕುಟುಂಬದ ವಿರೋಧವನ್ನು ಎದುರಿಸಿ ಹೊಸ ವ್ಯಾಪಾರವನ್ನು ಆರಂಭಿಸುವಿರಿ. ಉದ್ಯೋಗದಲ್ಲಿ ಕೆಲಸದ ಒತ್ತಡ ಇರುತ್ತದೆ. ವಾದ ವಿವಾದಗಳನ್ನು ಕಡಿಮೆ ಮಾಡಿ ಮೌನದಿಂದ ಕೆಲಸ ಸಾಧಿಸುವಿರಿ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಸಾಧಾರಣ ಮಟ್ಟದಲ್ಲಿ ಮುಂದುವರೆಯುತ್ತಾರೆ. ಕಬ್ಬಿಣ ಅಥವಾ ವಾಹನಗಳಿಂದ ತೊಂದರೆ ಉಂಟಾಗಲಿದೆ ಎಚ್ಚರಿಕೆ ಇರಲಿ. ಪಾಲುಗಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ.

ಪರಿಹಾರ : ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 5

ಅಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ತುಲಾ ರಾಶಿ: ಸಣ್ಣ ಪ್ರಮಾಣದ ಕೆಲಸವಾದರು ಹೆಚ್ಚಿನ ಆಸಕ್ತಿಯಿಂದ ಮಾಡುವಿರಿ. ಬೇರೆಯವರು ಮಾಡುವ ತಪ್ಪುಗಳನ್ನು ಕಂಡುಹಿಡಿಯುವಿರಿ. ಮನದ ಬೇಸರವನ್ನು ಮರೆಮಾಚಲು ಎಲ್ಲರಿಂದಲೂ ದೂರುವಿರಿ. ನಿಮಗೆ ಇಷ್ಟವೆನಿಸುವ ಸೌಲಭ್ಯಗಳು ತಾನಾಗಿಯೇ ದೊರೆಯಲಿದೆ. ಕುಟುಂಬದಲ್ಲಿ ಸ್ನೇಹಮಯ ವಾತಾವರಣ ಕಂಡುಬರುತ್ತದೆ. ಆತ್ಮೀಯರಿಂದ ಉದ್ಯೋಗದಲ್ಲಿ ಎದುರಾಗುವ ಸಮಸ್ಯೆಯು ಪರಿಹಾರವಾಗಲಿದೆ. ನಿಮ್ಮ ಮಾತುಗಳನ್ನು ಎಲ್ಲರಿಗೂ ಗೌರವಿಸುತ್ತಾರೆ. ಕುಟುಂಬದ ಹಣಕಾಸಿನ ವಿಚಾರದಲ್ಲಿನ ತೀರ್ಮಾನಗಳನ್ನು ಎಲ್ಲರಿಗೂ ಒಪ್ಪಿಗೆಯಾಗುತ್ತದೆ. ವಿದ್ಯಾರ್ಥಿಗಳು ಸಮಯಕ್ಕೆ ಅನುಗುಣವಾಗಿ ವರ್ತಿಸಿ ಯಶಸ್ಸನ್ನು ಗಳಿಸುತ್ತಾರೆ. ಧಾರ್ಮಿಕ ಕಾರ್ಯಗಳಿಗೆ ಸಾಕ್ಷಿಯಾಗುವಿರಿ.

ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ

ವೃಶ್ಚಿಕ ರಾಶಿ: ಕುಟುಂಬದಲ್ಲಿ ಅನಗತ್ಯ ವಿಚಾರಗಳಿಗಾಗಿ ವಾದ ವಿವಾದಗಳು ಉಂಟಾಗುತ್ತವೆ. ಹಠದಿಂದ ಕೆಲಸಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಹಣಕಾಸಿನ ತೊಂದರೆ ದೂರವಾಗುತ್ತದೆ. ಕ್ರಮೇಣವಾಗಿ ಕುಟುಂಬದಲ್ಲೆ ಪರಸ್ಪರ ಸಹಮತ ಕಂಡುಬರುತ್ತದೆ. ನೆರೆಹೊರಗಿನ ಜನರ ಜೊತೆ ಸಹಬಾಳ್ವೆಯಿಂದ ಬಾಳುವಿರಿ. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಕಂಡುಬರದು. ಶಾಂತಿ ಸೌಹಾರದದಿಂದ ವರ್ತಿಸಿದಲ್ಲಿ ಜೀವನದಲ್ಲಿ ಹೊಸತನ ಆರಂಭವಾಗುತ್ತದೆ. ಭೂ ಸಂಬಂಧಿತ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳ ಆದಾಯದಲ್ಲಿ ಪ್ರಗತಿ ಕಂಡುಬರಲಿದೆ. ವಿದ್ಯಾರ್ಥಿಗಳು ದಿಟ್ಟತನದಿಂದ ಕಲಿಕೆಯಲ್ಲಿ ಮುಂದುವರಿಯುತ್ತಾರೆ. ಸಾಲದ ವ್ಯವಹಾರದಲ್ಲಿ ತೊಂದರೆ ಇರುತ್ತದೆ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.