ದಿನ ಭವಿಷ್ಯ ಜುಲೈ14; ಉದ್ಯೋಗ ಭದ್ರತೆಗೆ ಅಡ್ಡಿ ಇಲ್ಲ, ಧನು, ಮಕರ, ಕುಂಭ, ಮೀನ ರಾಶಿಗಳ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ದಿನ ಭವಿಷ್ಯ ಜುಲೈ14; ಉದ್ಯೋಗ ಭದ್ರತೆಗೆ ಅಡ್ಡಿ ಇಲ್ಲ, ಧನು, ಮಕರ, ಕುಂಭ, ಮೀನ ರಾಶಿಗಳ ರಾಶಿಫಲ

ದಿನ ಭವಿಷ್ಯ ಜುಲೈ14; ಉದ್ಯೋಗ ಭದ್ರತೆಗೆ ಅಡ್ಡಿ ಇಲ್ಲ, ಧನು, ಮಕರ, ಕುಂಭ, ಮೀನ ರಾಶಿಗಳ ರಾಶಿಫಲ

Daily Horoscope Today July 14; ಪ್ರತಿ ರಾಶಿಗೂ ಅದರದ್ದೇ ಆದ ಅಧಿಪತಿ ಇದ್ದು, ಪಾಪ-ಪುಣ್ಯಗಳಿಗನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಅಂದಹಾಗೆ, ಜುಲೈ 14ರ ದಿನ ಭವಿಷ್ಯ ಪ್ರಕಾರ, ಕೆಲವರಿಗೆ ಆರೋಗ್ಯ ಸಮಸ್ಯೆ, ಹಣಕಾಸಿನ ಬಿಕ್ಕಟ್ಟು ಇದ್ದರೂ, ಶುಭಫಲವಿದೆ. ಧನಸ್ಸು, ಮಕರ, ಕುಂಭ, ಮೀನ ರಾಶಿ ಫಲ ಹೀಗಿದೆ. (ರಾಶಿಭವಿಷ್ಯ- ಎಚ್‌. ಸತೀಶ್, ಜ್ಯೋತಿಷಿ).

ದಿನ ಭವಿಷ್ಯ ಜುಲೈ14; ಉದ್ಯೋಗ ಭದ್ರತೆಗೆ ಅಡ್ಡಿ ಇಲ್ಲ, ಧನು, ಮಕರ, ಕುಂಭ, ಮೀನ ರಾಶಿಗಳ ರಾಶಿಫಲ
ದಿನ ಭವಿಷ್ಯ ಜುಲೈ14; ಉದ್ಯೋಗ ಭದ್ರತೆಗೆ ಅಡ್ಡಿ ಇಲ್ಲ, ಧನು, ಮಕರ, ಕುಂಭ, ಮೀನ ರಾಶಿಗಳ ರಾಶಿಫಲ

Daily Horoscope Today July 14; ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (14th July 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯನ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲಪಕ್ಷ, ಭಾನುವಾರ

ತಿಥಿ : ಅಷ್ಟಮಿ ಹ. 01.53 ರವರೆಗೂ ಇರುತ್ತದೆ. ಆನಂತರ ನವಮಿ ಆರಂಭವಾಗುತ್ತದೆ.

ನಕ್ಷತ್ರ : ಚಿತ್ತ ನಕ್ಷತ್ರವು ರಾತ್ರಿ 07.41 ರ ವರೆಗೂ ಇದ್ದು ಆನಂತರ ಸ್ವಾತಿ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ ಬೆಳಗ್ಗೆ 06.00

ಸೂರ್ಯಾಸ್ತ ಸಂಜೆ 06.49

ರಾಹುಕಾಲ : ಸಾಯಂಕಾಲ 05.16 ರಿಂದ ಸಾಯಂಕಾಲ 06.52

ದಿನ ಭವಿಷ್ಯ ಜುಲೈ 14; ಧನು, ಮಕರ, ಕುಂಭ, ಮೀನ ರಾಶಿಗಳ ರಾಶಿ ಭವಿಷ್ಯ

ಧನಸ್ಸು ರಾಶಿ: ದುಡುಕದೆ ಕುಟುಂಬದ ಎಲ್ಲರ ಮಾತನ್ನು ಆಲಿಸುವಿರಿ. ವಯಸ್ಸಿನಲ್ಲಿ ಚಿಕ್ಕವರಾದರು ಅವರ ಸಲಹೆ ಎನಿಸಿದಲ್ಲಿ ಒಪ್ಪಿಕೊಳ್ಳುವಿರಿ. ಸಮಾಜದ ನಾಯಕತ್ವವನ್ನು ಒಪ್ಪಿಕೊಳ್ಳುವಿರಿ. ನಿಮ್ಮ ಮನಸ್ಸಿನ ಆಶೋತ್ತರಗಳು ಬಹುತೇಕ ಈಡೇರಲಿವೆ. ಮಕ್ಕಳ ಆಸೆ ಆಕಾಂಕ್ಷೆಗಳನ್ನು ನೆರವೇರಿಸುವಿರಿ. ನಗುವಿನ ಮೊಗದಿಂದ ಎಲ್ಲರ ಮನಸ್ಸನ್ನು ಗೆಲ್ಲುವಿರಿ. ಸ್ವಂತ ಕೆಲಸ ಕಾರ್ಯಗಳಲ್ಲಿ ಯಾರೊಬ್ಬರ ಸಹಾಯ ದೊರೆಯುವುದಿಲ್ಲ. ಉದ್ಯೋಗದಲ್ಲಿ ನಿಮ್ಮ ಪ್ರಯತ್ನದ ಫಲವಾಗಿ ಉತ್ತಮ ಬದಲಾವಣೆಗಳು ಉಂಟಾಗಲಿವೆ. ವಿದ್ಯಾರ್ಥಿಗಳು ಹೆಚ್ಚಿನ ಶ್ರದ್ಧೆಯಿಂದ ಕಲಿಕೆಯಲ್ಲಿ ಮುಂಚೂಣಿಯಲ್ಲಿ ಸಾಗುತ್ತಾರೆ. ಎರಡಕ್ಕಿಂತಲೂ ಹೆಚ್ಚಿನ ಮೂಲದ ಆದಾಯ ಇರುತ್ತದೆ. ಜನೋಪಕಾರಿ ಕೆಲಸ ಕಾರ್ಯಗಳಲ್ಲಿ ಆಸಕ್ತಿ ಮೂಡುತ್ತದೆ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಮಕರ ರಾಶಿ: ಚುರುಕುತನದಿಂದ ಕುಟುಂಬದ ಜವಾಬ್ದಾರಿಯನ್ನು ನಿರ್ವಹಿಸುವಿರಿ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಇರುತ್ತದೆ. ಹಿರಿ ವ್ಯಕ್ತಿಯೊಬ್ಬರ ಸಹಾಯ ದೊರೆಯುತ್ತದೆ. ವಿವಾದವು ಎದುರಾದಾಗ ಶಾಂತಿಯುತ ಮಾತುಕತೆಯಿಂದ ಪರಿಹಾರ ಕಂಡುಹಿಡಿಯುವಿರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಉತ್ತಮ ಫಲಿತಾಂಶ ದೊರೆಯುತ್ತದೆ. ಉದ್ಯೋಗದಲ್ಲಿ ಸಂತೋಷದ ಸನ್ನಿವೇಶಗಳು ಎದುರಾಗಲಿವೆ. ಸ್ವಂತ ವ್ಯಾಪಾರ ವ್ಯವಹಾರಗಳು ಸುಗಮವಾಗಿ ನಡೆಯುತ್ತವೆ. ಶೀತದದೋಷವು ನಿಮ್ಮನ್ನು ಕಾಡಲಿದೆ. ತಾಯಿಯವರ ಸಹಭಾಗಿತ್ವದಲ್ಲಿ ಸಣ್ಣಮಟ್ಟದ ವ್ಯಾಪಾರವನ್ನು ಆರಂಭಿಸುವಿರಿ. ಸಂಗಾತಿಯೊಂದಿಗೆ ಅನಾವಶ್ಯಕ ಮನಸ್ತಾಪ ಉಂಟಾಗುತ್ತದೆ. ಧಾರ್ಮಿಕ ಕೇಂದ್ರಕ್ಕೆ ಬೇಟಿ ನೀಡುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ನೈಋತ್ಯ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಕುಂಭ ರಾಶಿ: ಆರೋಗ್ಯದಲ್ಲಿ ತೊಂದರೆ ಎದುರಾಗುತ್ತದೆ. ಬೇರೆಯವರ ಒತ್ತಡಕ್ಕೆ ಮಣಿದು ವಾಸಸ್ಥಳವನ್ನು ಬದಲಿಸುವಿರಿ. ಸ್ವಂತ ವೈದ್ಯದಿಂದ ತೊಂದರೆ ಒಳಗಾಗುವಿರಿ. ವಾದ ವಿವಾದದ ಕಾರಣ ಕುಟುಂಬದಲ್ಲಿ ಗಂಭೀರದ ಪರಿಸ್ಥಿತಿ ಎದುರಾಗುತ್ತದೆ. ಉದ್ಯೋಗದಲ್ಲಿ ನಿಮ್ಮ ಕಾರ್ಯತತ್ಪರತೆಗೆ ಎಲ್ಲರ ಬೆಂಬಲ ದೊರೆಯುತ್ತದೆ. ಉದ್ಯೋಗದಲ್ಲಿ ಯಾವುದೇ ಬದಲಾವಣೆ ಎದುರಾಗದು. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಪ್ರಯತ್ನವಿದ್ದರೂ ಸಮಾನ್ಯ ಮಟ್ಟದ ಲಾಭ ಗಳಿಸುವಿರಿ. ವಿದ್ಯಾರ್ಥಿಗಳು ಕೆಲಕೆಯಲ್ಲಿ ಉತ್ಸಾಹ ತೋರುವುದಿಲ್ಲ. ಅತಿಯಾದ ಆಸೆ ತೊಂದರೆಗೆ ಕಾರಣವಾಗುತ್ತದೆ. ತಂದೆಯ ಸಹಾಯ ನಿಮಗೆ ದೊರೆಯುತ್ತದೆ. ಮನೆಯ ಸೌಂಧರ್ಯವನ್ನು ಹೆಚ್ಚಿಸುವಲ್ಲಿ ಹೆಚ್ಚಿನ ಆಸಕ್ತಿ ತೋರುವಿರಿ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಮೀನ ರಾಶಿ: ಕುಟುಂಬದ ಒಳಿತಿಗೆ ಮೊದಲ ಆದ್ಯತೆಯನ್ನು ನೀಡುವಿರಿ. ನಿಮ್ಮ ಸ್ವಂತ ಕೆಲಸ ಕಾರ್ಯಗಳಿಗೆ ಯಾರ ಸಹಾಯವು ದೊರೆಯುವುದಿಲ್ಲ. ಮಕ್ಕಳಿಗೆ ಉಡುಗೊರೆಯೊಂದನ್ನು ನೀಡುವಿರಿ. ಯಾವ ಒತ್ತಡಕ್ಕೂ ಮಣಿಯದೆ ಸ್ವಂತ ನಿರ್ಧಾರಗಳಿಗೆ ಬದ್ದರಾಗುವಿರಿ. ಉದ್ಯೋಗದಲ್ಲಿ ಎಲ್ಲರ ವಿಶ್ವಾಸವನ್ನು ತೆಗೆದುಕೊಂಡು ಯಶಸ್ಸನ್ನು ಗಳಿಸುವಿರಿ. ಕುಟುಂಬದಲ್ಲಿ ನಿಮ್ಮ ಸಂಗಾತಿಯದೇ ಸಾಮ್ರಾಜ್ಯವಾಗಿರುತ್ತದೆ. ಹಿರಿಯರು ಕಿರಿಯರೆನ್ನದೆ ಎಲ್ಲರೂ ನಿಮ್ಮನ್ನು ಗೌರವಿಸುತ್ತಾರೆ. ವಿಶ್ರಾಂತಿ ಇಲ್ಲದೆ ದುಡಿಯಬೇಕಾಗುತ್ತದೆ. ಉದ್ಯೋಗವನ್ನು ಬದಲಿಸುವ ಸಾಧ್ಯತೆ ಇರುತ್ತದೆ. ನಿಮ್ಮ ಆರೋಗ್ಯದಲ್ಲಿ ಏರುಪೇರು ಉಂಟಾದರೂ ಯಾವುದೇ ತೊಂದರೆಯಾಗದು. ವಿದ್ಯಾರ್ಥಿಗಳ ಕಲಿಕೆಯ ಮಟ್ಟ ಹೆಚ್ಚುತ್ತದೆ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಖಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ 7

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಹಳದಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.