ದಿನ ಭವಿಷ್ಯ ಜುಲೈ 17; ಇಂದು ಉದ್ಯೋಗದಲ್ಲಿ ಕಿರಿಕಿರಿ, ಧನಸ್ಸು, ಮಕರ, ಕುಂಭ, ಮೀನ ರಾಶಿ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ದಿನ ಭವಿಷ್ಯ ಜುಲೈ 17; ಇಂದು ಉದ್ಯೋಗದಲ್ಲಿ ಕಿರಿಕಿರಿ, ಧನಸ್ಸು, ಮಕರ, ಕುಂಭ, ಮೀನ ರಾಶಿ ಭವಿಷ್ಯ

ದಿನ ಭವಿಷ್ಯ ಜುಲೈ 17; ಇಂದು ಉದ್ಯೋಗದಲ್ಲಿ ಕಿರಿಕಿರಿ, ಧನಸ್ಸು, ಮಕರ, ಕುಂಭ, ಮೀನ ರಾಶಿ ಭವಿಷ್ಯ

Daily Horoscope Today July 17; ಪ್ರತಿ ರಾಶಿಗೂ ಅದರದ್ದೇ ಆದ ಅಧಿಪತಿ ಇದ್ದು, ಪಾಪ-ಪುಣ್ಯಗಳಿಗನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಅಂದಹಾಗೆ, ಜುಲೈ 17ರ ದಿನ ಭವಿಷ್ಯ ಪ್ರಕಾರ, ಕೆಲವರಿಗೆ ಹಣಕಾಸಿನ ಬಿಕ್ಕಟ್ಟು, ಆರೋಗ್ಯ ಸಮಸ್ಯೆ, ಇದ್ದರೂ, ಶುಭಫಲವಿದೆ. ಧನಸ್ಸು, ಮಕರ, ಕುಂಭ, ಮೀನ ರಾಶಿ ಫಲ ಹೀಗಿದೆ. (ರಾಶಿಭವಿಷ್ಯ- ಎಚ್‌. ಸತೀಶ್, ಜ್ಯೋತಿಷಿ).

ದಿನ ಭವಿಷ್ಯ ಜುಲೈ 17; ಇಂದು ಉದ್ಯೋಗದಲ್ಲಿ ಕಿರಿಕಿರಿ, ಧನಸ್ಸು, ಮಕರ, ಕುಂಭ, ಮೀನ ರಾಶಿ ಭವಿಷ್ಯ
ದಿನ ಭವಿಷ್ಯ ಜುಲೈ 17; ಇಂದು ಉದ್ಯೋಗದಲ್ಲಿ ಕಿರಿಕಿರಿ, ಧನಸ್ಸು, ಮಕರ, ಕುಂಭ, ಮೀನ ರಾಶಿ ಭವಿಷ್ಯ

Daily Horoscope Today July 17; ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (17th July 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮಋತು, ಆಷಾಡ ಮಾಸ, ಶುಕ್ಲಪಕ್ಷ, ಬುಧವಾರ.

ತಿಥಿ : ಏಕಾದಶಿ ಸಾ. 05.37 ರವರೆಗು ಇರುತ್ತದೆ. ಆನಂತರ ದ್ವಾದಶಿ ಆರಂಭವಾಗುತ್ತದೆ.

ನಕ್ಷತ್ರ : ಅನೂರಾದ ನಕ್ಷತ್ರವು ರಾ. 01.03 ರವರೆಗು ಇದ್ದು ಆನಂತರ ಜ್ಯೇಷ್ಠ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ ಬೆ.06.01

ಸೂರ್ಯಾಸ್ತ ಸ.06.49

ರಾಹುಕಾಲ : ಹ. 12.29 ರಿಂದ ಹ. 02.05

ದಿನ ಭವಿಷ್ಯ ಜುಲೈ 17; ಧನು, ಮಕರ, ಕುಂಭ, ಮೀನ ರಾಶಿಗಳ ರಾಶಿ ಭವಿಷ್ಯ

ಧನಸ್ಸು ರಾಶಿ; ಹೆಚ್ಚಿನ ಆಸಕ್ತಿ ತೋರಿ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಸಾಧಿಸುವಿರಿ. ಮನಸ್ಸಿನ ಮೇಲೆ ಹತೋಟಿ ಸಾಧಿಸಲು ಸಾಧ್ಯವಾಗದು. ಉದ್ಯೋಗದಲ್ಲಿ ನಿಧಾನ ಗತಿಯ ಪ್ರಗತಿ ಕಂಡುಬರುತ್ತದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಿರಲಿ. ಉದ್ಯೋಗಕ್ಷೇತ್ರದಲ್ಲಿ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಅನಾವಶ್ಯಕವಾಗಿ ಹಿರಿಯ ಅಧಿಕಾರಿಗಳ ಜೊತೆಯಲ್ಲಿ ವಾದ ವಿವಾದ ಉಂಟಾಗಬಹುದು. ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಮುಂದುವರೆಯುತ್ತಾರೆ. ವ್ಯಾಪಾರ ವ್ಯವಹಾರದಲ್ಲಿ ಮಧ್ಯಮಗತಿಯ ವರಮಾನ ದೊರೆಯುತ್ತದೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ಧಾರ್ಮಿಕ ಕೇಂದ್ರಕ್ಕೆ ಕುಟುಂಬದವರ ಜೊತೆ ಬೇಟಿ ನೀಡುವಿರಿ.

ಪರಿಹಾರ : ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ.

ಅದೃಷ್ಟದ ಸಂಖ್ಯೆ : 8 ಅದೃಷ್ಟದ ದಿಕ್ಕು : ಈಶಾನ್ಯ ಅದೃಷ್ಟದ ಬಣ್ಣ: ನೀಲಿ ಬಣ್ಣ

ಮಕರ ರಾಶಿ; ಆತುರದ ಮಾತುಕತೆ ದೊಡ್ಡ ವಿವಾದಕ್ಕೆ ಕಾರಣವಾಗುತ್ತದೆ. ಸಾಹಸದ ಕ್ರೀಡೆಗಳಲ್ಲಿ ವಿಶೇಷ ಆಸಕ್ತಿ ಇರುತ್ತದೆ. ಸಾಹಸದ ಕಲಾವಿದರು ಉತ್ತಮ ಅವಕಾಶ ಪಡೆಯುತ್ತಾರೆ. ಕುಟುಂಬದಲ್ಲಿ ಉತ್ತಮ ಸಾಮರಸ್ಯ ಕಂಡುಬರುತ್ತದೆ. ಗೆಲುವೇ ಹವ್ಯಾಸವಾದ್ದರಿಂದ ಸೋಲನ್ನು ಒಪ್ಪುವುದಿಲ್ಲ. ಚಿಕ್ಕಪುಟ್ಟ ವಿಚಾರಗಳಿಗೂ ಹೆಚ್ಚಿನ ಪ್ರಾಶಸ್ತ್ಯ ನೀಡುವಿರಿ. ವಿದ್ಯಾರ್ಥಿಗಳು ಸ್ವಪ್ರಯತ್ನದಿಂದ ಗೆಲುವನ್ನು ಸಾಧಿಸುವರು. ವಾದ ವಿವಾದಗಳಿಂದ ದೂರ ಉಳಿಯುವುದು ಒಳಿತು. ಹೆಚ್ಚಿನ ಪರಿಶ್ರಮದಿಂದ ಹಣದ ವಿವಾದದಿಂದ ದೂರ ಉಳಿಯುವಿರಿ. ಆರೋಗ್ಯ ಉಳಿಸಿಕೊಳ್ಳಲು ದೈಹಿಕ ವ್ಯಾಯಾಮವನ್ನು ಅವಲಂಭಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ಮಕ್ಕಳ ಸಹಾಯ ದೊರೆಯುತ್ತದೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ.

ಪರಿಹಾರ : ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 3 ಅದೃಷ್ಟದ ದಿಕ್ಕು : ಪೂರ್ವ ಅದೃಷ್ಟದ ಬಣ್ಣ: ಹಾಲಿನ ಬಣ್ಣ

ಕುಂಭ ರಾಶಿ; ಹಠದ ಗುಣದಿಂದ ಹೊರಬರಲು ಪ್ರಯತ್ನಿಸಿ. ಒಳ್ಳೆಯ ವಿಚಾರವನ್ನು ಎಲ್ಲರ ಜೊತೆ ಹಂಚಿಕೊಳ್ಳುವಿರಿ. ದಿಡೀರನೆ ಆರೋಗ್ಯದಲ್ಲಿ ಸಮಸ್ಯೆ ಕಂಡು ಬರುತ್ತದೆ. ಸಾಧ್ಯವಾದಷ್ಟು ತ್ವರಿತಗತಿಯಲ್ಲಿ ಸೂಕ್ತ ತೀರ್ಮಾನಗಳನ್ನು ತೆಗೆದುಕೊಳ್ಳಲು ಪ್ರಯತ್ನಿಸಿ. ಮನದಲ್ಲಿರುವ ವಿಚಾರಗಳನ್ನು ಬೇರೆಯವರಲ್ಲಿ ಹಂಚಿಕೊಳ್ಳುವುದಿಲ್ಲ. ನಿಮ್ಮ ಸಮಸ್ಯೆಗಳಿಗೆ ಆತ್ಮೀಯರ ಸಹಾಯದಿಂದ ಪರಿಹಾರ ದೊರೆಯಬಹುದು. ಕುಟುಂಬದಲ್ಲಿ ನೆಮ್ಮದಿಯ ಪರಿಸ್ಥಿತಿ ಇರುತ್ತದೆ. ನಿಮ್ಮ ಮಾತಿಗೆ ಎಲ್ಲರಿಂದಲೂ ಗೌರವ ಲಭಿಸುತ್ತದೆ. ಉದ್ಯೋಗದಲ್ಲಿ ಅತಿ ಮುಖ್ಯ ಬದಲಾವಣೆ ಉಂಟಾಗಲಿದೆ. ಕುಟುಂಬದ ಸಂಪೂರ್ಣ ಹೊಣೆ ನಿಮ್ಮದಾಗುತ್ತದೆ. ಪಾಲುಗಾರಿಕೆಯ ವ್ಯಾಪಾರದಲ್ಲಿ ಉತ್ತಮ ಲಾಭವಿದೆ. ಪ್ರಾಣಿ ಪಕ್ಷಿಗಳ ಮೇಲೆ ಅನುಕಂಪ ದೊರೆಯುತ್ತದೆ.

ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6 ಅದೃಷ್ಟದ ದಿಕ್ಕು : ದಕ್ಷಿಣ ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ಮೀನ ರಾಶಿ; ಬಿಡುವಿಲ್ಲದ ಕೆಲಸ ಕಾರ್ಯಕ್ರಮದ ಕಾರಣ ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತದೆ. ಎದುರಾಗುವ ಚಿಕ್ಕ ಸಮಸ್ಯೆಯನ್ನು ಸಹ ಗಂಭೀರವಾಗಿ ತೆಗೆದುಕೊಳ್ಳುವಿರಿ. ಕುಟುಂಬದಲ್ಲಿ ಅನಾವಶ್ಯಕ ವಿಚಾರದ ಬಗ್ಗೆ ವಾದ ವಿವಾದ ಇರುತ್ತದೆ. ಉದ್ಯೋಗದಲ್ಲಿ ಮೇಲ್ಮಟ್ಟದ ಅಧಿಕಾರ ದೊರೆಯುತ್ತದೆ. ವಿದ್ಯಾರ್ಥಿಗಳು ಸಹಪಾಠಿಗಳ ಜೊತೆ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಮಕ್ಕಳ ಜೀವನದಲ್ಲಿ ಉನ್ನತ ಮಟ್ಟದ ಯಶಸ್ಸು ದೊರೆಯುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ ದೊರೆಯಲಿದೆ. ಕುಟುಂಬದ ಸದಸ್ಯರ ಬಗ್ಗೆ ಹೆಚ್ಚಿನ ಕಾಳಜಿ ತೋರುವಿರಿ. ದಂಪತಿಗಳ ನಡುವೆ ಇದ್ದ ಸಮಸ್ಯೆಯೊಂದು ಬಗೆಹರಿಯುತ್ತದೆ. ಮನದ ಬೇಸರ ಕಳೆಯಲು ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡುವಿರಿ.

ಪರಿಹಾರ : ಮಕ್ಕಳಿಗೆ ಗೋಧಿಯಿಂದ ತಯಾರಿಸಿದ ಸಿಹಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ 9 ಅದೃಷ್ಟದ ದಿಕ್ಕು : ನೈರುತ್ಯ ಅದೃಷ್ಟದ ಬಣ್ಣ : ಹೊಗೆಯ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.