Horoscope Today: ಎಲ್ಲ ಕೆಲಸಕ್ಕೆ ಸಂಗಾತಿಯ ಸಹಕಾರ ಸಿಗಲಿದೆ, ಅನಗತ್ಯ ಯೋಚನೆಯಿಂದ ತಲೆನೋವು; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಎಲ್ಲ ಕೆಲಸಕ್ಕೆ ಸಂಗಾತಿಯ ಸಹಕಾರ ಸಿಗಲಿದೆ, ಅನಗತ್ಯ ಯೋಚನೆಯಿಂದ ತಲೆನೋವು; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

Horoscope Today: ಎಲ್ಲ ಕೆಲಸಕ್ಕೆ ಸಂಗಾತಿಯ ಸಹಕಾರ ಸಿಗಲಿದೆ, ಅನಗತ್ಯ ಯೋಚನೆಯಿಂದ ತಲೆನೋವು; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

ಮಾರ್ಚ್​ 10, ಭಾನುವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (10 March 2024 Daily Horoscope).

ಮಾರ್ಚ್​ 10ರ ದಿನಭವಿಷ್ಯ
ಮಾರ್ಚ್​ 10ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (10 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಭಾನುವಾರ

ತಿಥಿ : ಅಮಾವಾಸ್ಯೆ ಬೆ.03.22 ರವರೆಗು ಇದ್ದು ಆನಂತರ ಪಾಡ್ಯ ಆರಂಭವಾಗುತ್ತದೆ.

ನಕ್ಷತ್ರ : ಪೂರ್ವಾಭಾದ್ರ ನಕ್ಷತ್ರವು ರಾ.03.37 ರವರೆಗೆ ಇರುತ್ತದೆ. ಆನಂತರ ಉತ್ತರಾಭಾದ್ರ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.29

ಸೂರ್ಯಾಸ್ತ: ಸ.06.28

ರಾಹುಕಾಲ : ಸ.04.30 ರಿಂದ ಸ.06.00

ರಾಶಿ ಫಲಗಳು

ಸಿಂಹ

ಕುಟುಂಬದ ಹೆಚ್ಚಿನ ಜವಾಬ್ದಾರಿ ನಿಮ್ಮ ವಿಶ್ರಾಂತಿಯನ್ನು ಕಸಿಯುತ್ತದೆ. ಕುತೂಹಲ ಮತ್ತು ಕ್ರಿಯಾಶೀಲತೆ ನಿಮ್ಮ ಜೀವನಕ್ಕೆ ಹೊಸ ಅರ್ಥ ನೀಡುತ್ತದೆ. ಎಲ್ಲರಿಗೂ ಸಹಾಯ ಮಾಡುವ ಗುಣ ಮೆಚ್ಚುಗೆಗೆ ಪಾತ್ರವಾಗುತ್ತದೆ. ಆದರೆ ಮಾನಸಿಕ ಒತ್ತಡ ಹೆಚ್ಚುತ್ತದೆ. ಆರೋಗ್ಯದಲ್ಲಿ ಕ್ಷಿಪ್ರ ಬದಲಾವಣೆಗಳು ಕಂಡು ಬರಲಿವೆ. ಉದ್ಯೋಗದಲ್ಲಿಅನಿವಾರ್ಯವಾಗಿ ನಿಮ್ಮ ಜವಾಬ್ದಾರಿಯನ್ನು ಬೇರೆಯವರು ನಿರ್ವಹಿಸಬೇಕಾಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಆಸಕ್ತಿ ಕುಂದುತ್ತದೆ. ಅಗತ್ಯವಿದ್ದ ವಸ್ತುಗಳನ್ನು ಮಾತ್ರ ಕೊಳ್ಳುವ ಕಾರಣ ಹಣಕಾಸಿನ ಸಮಸ್ಯೆ ನಿವಾರಣೆಯಾಗಲಿದೆ. ವಿವಾದದಿಂದ ದೂರವಾಗುವ ಸಲುವಾಗಿ ನಿಮಗೆ ನೀವೇ ಮಾತಿನ ನಿರ್ಬಂಧಕ್ಕೆ ಒಳಪಡುವಿರಿ. ಸಂಗಾತಿಯಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಸುಲಭವಾಗಿ ನಿಮ್ಮನ್ನು ಯಾರು ಸಮಾಧಾನಪಡಿಸಲಾರರು. ಅನಿವಾರ್ಯವಾಗಿ ಆತ್ಮೀಯರಿಂದ ಹಣವನ್ನು ಪಡೆಯಬೇಕಾಗುತ್ತದೆ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

ಕನ್ಯಾ

ಮನೆಯಲ್ಲಿಯೇ ಇರುವುದು ನಿಮಗೆ ಬೇಸರದ ಸಂಗತಿ. ಹಾಗೆಯೇ ಸದಾಕಾಲ ಕೆಲಸವನ್ನು ಮಾಡಲು ಸಿದ್ಧರಿಲ್ಲ. ಚಿಕ್ಕ ಪುಟ್ಟ ವಿಚಾರಗಳಿಗೂ ಸಿಡುಕಿನಿಂದ ವರ್ತಿಸುವಿರಿ. ಕುಟುಂಬದ ಕೆಲಸ ಕಾರ್ಯಗಳು ಅಪೂರ್ಣಗೊಳ್ಳಬಹುದು. ಆದರೆ ನಿಮ್ಮ ಸಹಾಯಕ್ಕೆ ಬೇರೊಬ್ಬರು ಸಿದ್ದರಿರುತ್ತಾರೆ. ವಯಸ್ಸಿನ ಭೇದವಿಲ್ಲದೆ ಹೊರಾಂಗಣ ಕ್ರೀಡೆಗಳಲ್ಲಿ ಭಾಗವಹಿಸುವಿರಿ. ನಿಮ್ಮ ತಪ್ಪನ್ನು ಮುಚ್ಚಿಟ್ಟು ಬೇರೆಯವರ ತಪ್ಪನ್ನು ಟೀಕಿಸುವಿರಿ. ಆದರೆ ಸಂತೋಷ ಸಂಭ್ರಮಗಳಿಗೆ ಪಾರವಿರುವುದಿಲ್ಲ. ಸುತ್ತಮುತ್ತಲಿನ ಜನರ ವಿಶ್ವಾಸವನ್ನು ಗಳಿಸಿ ಸಂತಸದಿಂದ ಬಾಳುವಿರಿ. ಸಂಗಾತಿಯ ಮನಸ್ಸಿಗೆ ನೋವನ್ನುಂಟು ಮಾಡುವುದಿಲ್ಲ. ಎಲ್ಲರೊಂದಿಗೆ ದೀರ್ಘಕಾಲದ ಪ್ರವಾಸಕ್ಕೆ ತೆರಳುವಿರಿ. ಅನಗತ್ಯ ಯೋಚನೆ ತಲೆ ನೋವಿಗೆ ಕಾರಣವಾಗುತ್ತದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರ್ಣ ಸಹಕಾರ ನೀಡುವಿರಿ.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ತುಲಾ

ಮುಖ್ಯವಾದ ಕೆಲಸ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಬಯಸುವಿರಿ. ಇದರಿಂದ ವಿಶ್ರಾಂತಿ ಇಲ್ಲದಂತಾಗುತ್ತದೆ. ಅನಾವಶ್ಯಕ ಚಿಂತೆ ಕುಟುಂಬದ ನೆಮ್ಮದಿಯನ್ನು ಕಡಿಮೆ ಮಾಡುತ್ತದೆ. ಕಾದು ನೋಡುವ ತಂತ್ರ ಒಳ್ಳೆಯದು. ಎಲ್ಲರೊಂದಿಗೆ ಸಹನೆಯಿಂದ ವರ್ತಿಸಿದರೆ ಯಾವುದೇ ತೊಂದರೆ ಇರದು. ಉದ್ಯೋಗದ ಬಹುದಿನದ ಕಾರ್ಯಯೋಜನೆಯೊಂದು ಪೂರ್ಣಗೊಳ್ಳಲಿದೆ. ಹೊಸತನದ ನಿರೀಕ್ಷೆ ನವ ಚೈತನ್ಯವನ್ನು ತುಂಬಲಿದೆ. ವ್ಯಾಪಾರ ವ್ಯವಹಾರಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಹಣಕಾಸಿನ ತೊಂದರೆ ಕಂಡುಬರದು. ದೈಹಿಕವಾಗಿ ಸದೃಢರಾಗುವಿರಿ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಮುಖ್ಯಸ್ಥಾನವನ್ನು ಅಲಂಕರಿಸುವಿರಿ. ಕೆಲಸದ ನಿಮಿತ್ತ ಕುಟುಂಬದಿಂದ ದೂರದ ಸ್ಥಳದಲ್ಲಿ ಉಳಿಯ ಬೇಕಾಗಬಹುದು.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ವೃಶ್ಚಿಕ

ಬಿಡುವಿಲ್ಲದ ಕೆಲಸ ಕಾರ್ಯಗಳಿಂದ ದೈಹಿಕ ಶಕ್ತಿಯು ಕಡಿಮೆಯಾಗುತ್ತದೆ. ವಿಶ್ರಾಂತಿಯ ಅಗತ್ಯತೆ ಬಹಳವಿದೆ. ಮುಖ್ಯವಾಗಿ ಗೃಹಿಣಿಯರ ಆರೋಗ್ಯದಲ್ಲಿ ತೊಂದರೆ ಇರಬಹುದು. ಕುಟುಂಬದಲ್ಲಿ ಹೊಂದಾಣಿಕೆ ಮೇಲುಗೈ ಸಾಧಿಸುತ್ತದೆ. ಉದ್ಯೋಗದಲ್ಲಿ ನಿಮ್ಮ ಅವಕಾಶ ಬೇರೆಯವರ ಪಾಲಾಗಬಹುದು. ಆದರೆ ಆತ್ಮೀಯರ ಸಹಾಯದಿಂದ ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ದೊರೆಯಬಹುದು. ಆಸ್ತಿಯ ವಿವಾದವಿದ್ದಲ್ಲಿ ಎಚ್ಚರಿಕೆ ವಹಿಸಿ. ಹೊಸ ಬಗೆಯ ವ್ಯಾಪಾರ ವ್ಯವಹಾರಗಳನ್ನು ಆರಂಭಿಸುವಿರಿ. ವಿದ್ಯಾರ್ಥಿಗಳು ಆವಿಷ್ಕಾರ ಮನೋಭಾವನೆಯನ್ನು ಹೊಂದಿರುತ್ತಾರೆ. ವಿದೇಶಕ್ಕೆ ವಿಶೇಷ ಅಭ್ಯಾಸ ಮಾಡಲು ತೆರಳಬಹುದು. ಒಳ್ಳೆಯ ಹಾಸ್ಯದ ಮನೋಭಾವನೆ ಇರುವ ಕಾರಣ ಶತ್ರುಗಳು ಮಿತ್ರರಾಗುತ್ತಾರೆ. ನಿಮ್ಮೆಲ್ಲಾ ಕೆಲಸ ಕಾರ್ಯಗಳು ಸಂಗಾತಿಯಿಂದ ಸಂಪೂರ್ಣ ಸಹಕಾರ ದೊರೆಯುತ್ತದೆ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.