Horoscope Today: ದೂರದ ಸಂಬಂಧಿಕರ ವಿರೋಧ ಎದುರಿಸಬೇಕಾಗುತ್ತದೆ; ಬೆನ್ನುನೋವಿನಿಂದ ಮುಕ್ತಿ; ಸಿಂಹದಿಂದ ವೃಶ್ಚಿಕರಾಶಿವರೆಗಿನ ರಾಶಿಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ದೂರದ ಸಂಬಂಧಿಕರ ವಿರೋಧ ಎದುರಿಸಬೇಕಾಗುತ್ತದೆ; ಬೆನ್ನುನೋವಿನಿಂದ ಮುಕ್ತಿ; ಸಿಂಹದಿಂದ ವೃಶ್ಚಿಕರಾಶಿವರೆಗಿನ ರಾಶಿಭವಿಷ್ಯ

Horoscope Today: ದೂರದ ಸಂಬಂಧಿಕರ ವಿರೋಧ ಎದುರಿಸಬೇಕಾಗುತ್ತದೆ; ಬೆನ್ನುನೋವಿನಿಂದ ಮುಕ್ತಿ; ಸಿಂಹದಿಂದ ವೃಶ್ಚಿಕರಾಶಿವರೆಗಿನ ರಾಶಿಭವಿಷ್ಯ

10 ಏಪ್ರಿಲ್ 2024 ಬುಧವಾರ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿ ರಾಶಿಗೂ ಅದರದ್ದೇ ಆದ ಅಧಿಪತಿ ಇದ್ದಾನೆ. ಆಯಾ ರಾಶಿಗಳ ಜನರು ಮಾಡುವ ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳ ಫಲಗಳು ಸಿಗುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನ ಭವಿಷ್ಯ ಇಲ್ಲಿದೆ. (10th April 2024 Daily Horoscope)

ಏಪ್ರಿಲ್‌ 10ರ ದಿನಭವಿಷ್ಯ
ಏಪ್ರಿಲ್‌ 10ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಸಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವುದು ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀಲವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್‌. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (10th April 2024 Horoscope)

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯನ, ವಸಂತ ಋತು, ಚೈತ್ರ ಮಾಸ, ಶುಕ್ಲಪಕ್ಷ, ಬುಧವಾರ

ತಿಥಿ: ಬಿದಿಗೆ ರಾತ್ರಿ 7.59 ರವರೆಗೂ ಇರುತ್ತದೆ. ಅನಂತರ ತದಿಗೆ ಆರಂಭವಾಗುತ್ತದೆ.

ನಕ್ಷತ್ರ: ಅಶ್ವಿನಿ ನಕ್ಷತ್ರವು ಬೆಳಿಗ್ಗೆ 6.57 ರವರೆಗೂ ಇರುತ್ತದೆ. ಉಪರಿ ಭರಣಿ ನಕ್ಷತ್ರ ಇರುತ್ತದೆ.

ಸೂರ್ಯೋದಯ: ಬೆಳಿಗ್ಗೆ 6.09

ಸೂರ್ಯಾಸ್ತ: ಸಂಜೆ 6.31

ರಾಹುಕಾಲ: ಬೆಳಿಗ್ಗೆ 12.00 ರಿಂದ ಮಧ್ಯಾಹ್ನ 1.30

ಸಿಂಹ

ಕುಟುಂಬದಲ್ಲಿ ಪರಸ್ಪರ ಉತ್ತಮ ಬಾಂಧವ್ಯ ರೂಪುಗೊಳ್ಳುತ್ತದೆ. ದಂಪತಿಗಳ ನಡುವೆ ಉತ್ತಮ ಅನುಬಂಧ ಇರಲಿದೆ. ಭವಿಷ್ಯದ ನೆಮ್ಮದಿಯ ಜೀವನಕ್ಕಾಗಿ ಸ್ಟಾಕ್‌ ಮತ್ತು ಷೇರಿನಲ್ಲಿ ಹಣವನ್ನು ವಿನಿಯೋಗಿಸುವಿರಿ. ವಂಶಾನುಗತವಾದ ವಿದ್ಯೆಯೊಂದರ ಆಸರೆ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ದೂರದ ಸಂಬಂಧಿಕರ ವಿರೋಧವನ್ನು ಎದುರಿಸಬೇಕಾಗುತ್ತದೆ. ಉದ್ಯೋಗದಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ವಯೋವೃದ್ಧರ ಆರೋಗ್ಯ್ಕವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿ. ವಿದ್ಯಾರ್ಥಿಗಳು ಮಾನಸಿಕ ಒತ್ತಡದಲ್ಲಿ ಇರುತ್ತಾರೆ. ತಂದೆಯ ಒಡೆತನದ ಸಂಸ್ಥೆ ವಿವಾದಕ್ಕೆ ಸಿಲುಕಬಹುದು. ಜನಸೇವೆಯಲ್ಲಿ ದಿನವನ್ನು ಕಳೆಯುವಿರಿ.

ಪರಿಹಾರ: ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣುಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ : ಕಪ್ಪು ಬಣ್ಣ

ಕನ್ಯಾ

ಕುಟುಂಬದಲ್ಲಿನ ಬದಲಾವಣೆಗಳು ಶಾಂತಿ ನೆಲೆಸಲು ಕಾರಣವಾಗಲಿದೆ. ಹೊಸ ಮನೆ ಕೊಳ್ಳುವ ಆಸೆ ಸಾಕಾರಗೊಳ್ಳುತ್ತದೆ. ಸಾರಿಗೆ ಸಂಚಾರದ ಆಯೋಜನೆಯಲ್ಲಿ ಉತ್ತಮ ಲಾಭವಿರುತ್ತದೆ. ಸ್ವಂತ ಬಳಕೆಗಾಗಿ ಹೊಸ ವಾಹನಕೊಳ್ಳುವಿರಿ. ಸಮಾಜದ ಗಣ್ಯವ್ಯಕ್ತಿಯೊಬ್ಬರ ಸಹಾಯ ದೊರೆಯುತ್ತದೆ. ಬುದ್ಧಿವಂತಿಕೆಯ ಮಾತಿನ ಸಹಾಯದಿಂದ ವಿವಾದವೊಂದನ್ನು ಗೆಲ್ಲುವಿರಿ. ವಿದ್ಯಾರ್ಥಿಗಳು ಉನ್ನತ ವಿಧ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳುವರು. ಸ್ವಂತ ವ್ಯಾಪಾರದಲ್ಲಿ ಲಾಭವಿರುತ್ತದೆ. ಬಡ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವಿರಿ. ಮನೆಯಲ್ಲಿನ ಪೂಜಾಸ್ಥಳವನ್ನು ನವೀಕರಣಗೊಳಿಸುವಿರಿ. ಬೆನ್ನುನೋವಿನಿಂದ ಮುಕ್ತಿ ದೊರೆಯುತ್ತದೆ.

ಪರಿಹಾರ: ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ

ತುಲಾ

ತೊಂದರೆಯಲ್ಲಿ ಸಿಲುಕಿದವರಿಗೆ ಹಣದ ಸಹಾಯ ಮಾಡುವ ಯೋಜನೆ ಮಾಡುವಿರಿ. ಬಾಳಸಂಗಾತಿಯಿಂದ ವ್ಯಾಪಾರ ವ್ಯವಹಾರದಲ್ಲಿ ಸಹಾಯ ದೊರೆಯುತ್ತದೆ. ಉದ್ಯೋಗಲ್ಲಿನ ಆಗುಹೋಗುಗಳು ನಿಮ್ಮ ಪರವಾಗಿರುತ್ತವೆ. ಸಮಾಜದಲ್ಲಿ ಉನ್ನತ ಸ್ಥಾನ ದೊರೆಯುತ್ತದೆ. ದೇಶ ವಿದೇಶಗಳನ್ನು ಸುತ್ತುವ ಅವಕಾಶ ದೊರೆಯುತ್ತದೆ. ಸಂಗೀತ ಭರತನಾಟ್ಯ ಬಲ್ಲ ವಿದ್ಯಾರ್ಥಿಗಳಿಗೆ ವಿಶೇಷ ಗೌರವ ದೊರೆಯುತ್ತದೆ. ಅವಿವಾಹಿತರಿಗೆ ವಿವಾಹದ ಮಾತುಕತೆ ನಡೆಯಲಿದೆ. ಕುಟುಂಬದ ವ್ಯಾಜ್ಯಗಳನ್ನು ತೀರ್ಮಾನಿಸುವ ಸಲುವಾಗಿ ಸಂದಾನಕೇಂದ್ರವನ್ನು ಆರಂಭಿಸುವಿರಿ. ಸಾಲದ ವ್ಯವಹಾರದಿಂದ ದೂರವಿರಿ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ನಸುಗೆಂಪುಬಣ್ಣ

ವೃಶ್ಚಿಕ

ಹಠದ ಮನೋಭಾವದಿಂದ ಕೈಹಿಡಿದ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಸುಲಭವಾಗಿ ಯಾರ ಸಲಹೆಯನ್ನು ಒಪ್ಪಿಕೊಳ್ಳುವುದಿಲ್ಲ. ನೇರವಾದ ನಡೆ ನುಡಿಯಿಂದ ಕುಟುಂಬದಲ್ಲಿ ಬೇಸರ ಉಂಟಾಗಲಿದೆ. ಅನಾವಶ್ಯಕವಾಗಿ ಎಲ್ಲರ ಮೇಲೆ ಕೋಪಗೊಳ್ಳುವಿರಿ. ತಂದೆಯವರ ಅನುಪಸ್ಥಿತಿಯಲ್ಲಿ ಮನೆಯ ಜವಾಬ್ದಾರಿ ನಿರ್ವಹಿಸಬೇಕಾಗುತ್ತದೆ. ಉದ್ಯೋಗದಲ್ಲಿ ಯಾವುದೇ ಬದಲಾವಣೆ ಉಂಟಾಗದು. ವಿವಾದದ ಕಾರಣ ಪಾಲುಗಾರಿಕೆಯ ವ್ಯಾಪಾರದ ಹಕ್ಕನ್ನು ಕಾನೂನುರೀತ್ಯ ಪಡೆಯುವಿರಿ. ಬಿಡುವಿಲ್ಲದ ಕೆಲಸ ಕಾರ್ಯಗಳಿಂದ ದೇಹಾಲಸ್ಯ ಉಂಟಾಗುತ್ತದೆ. ವ್ಯವಸಾಯದಲ್ಲಿ ಆಸಕ್ತಿ ಉಂಟಾಗಲಿದೆ.

ಪರಿಹಾರ: ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 85468 65832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಗೌರಿವಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.