ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಅಜೀರ್ಣದ ತೊಂದರೆ ಕಾಡಲಿದೆ, ನೀರಾವರಿ ಜಮೀನು ಖರೀದಿ ಸಾಧ್ಯತೆ; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ

Horoscope Today: ಅಜೀರ್ಣದ ತೊಂದರೆ ಕಾಡಲಿದೆ, ನೀರಾವರಿ ಜಮೀನು ಖರೀದಿ ಸಾಧ್ಯತೆ; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ

10 ಏಪ್ರಿಲ್ 2024 ಬುಧವಾರ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿ ರಾಶಿಗೂ ಅದರದ್ದೇ ಆದ ಅಧಿಪತಿ ಇದ್ದಾನೆ. ಆಯಾ ರಾಶಿಗಳ ಜನರು ಮಾಡುವ ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳ ಫಲಗಳು ಸಿಗುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನ ಭವಿಷ್ಯ ಇಲ್ಲಿದೆ. (10th April 2024 Daily Horoscope)

ಏಪ್ರಿಲ್‌ 10ರ ದಿನಭವಿಷ್ಯ
ಏಪ್ರಿಲ್‌ 10ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಸಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವುದು ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀಲವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್‌. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (10th April 2024 Horoscope)

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯನ, ವಸಂತ ಋತು, ಚೈತ್ರ ಮಾಸ, ಶುಕ್ಲಪಕ್ಷ, ಬುಧವಾರ

ತಿಥಿ: ಬಿದಿಗೆ ರಾತ್ರಿ 7.59 ರವರೆಗೂ ಇರುತ್ತದೆ. ಅನಂತರ ತದಿಗೆ ಆರಂಭವಾಗುತ್ತದೆ.

ನಕ್ಷತ್ರ: ಅಶ್ವಿನಿ ನಕ್ಷತ್ರವು ಬೆಳಿಗ್ಗೆ 6.57 ರವರೆಗೂ ಇರುತ್ತದೆ. ಉಪರಿ ಭರಣಿ ನಕ್ಷತ್ರ ಇರುತ್ತದೆ.

ಸೂರ್ಯೋದಯ: ಬೆಳಿಗ್ಗೆ 6.09

ಸೂರ್ಯಾಸ್ತ: ಸಂಜೆ 6.31

ರಾಹುಕಾಲ: ಬೆಳಿಗ್ಗೆ 12.00 ರಿಂದ ಮಧ್ಯಾಹ್ನ 1.30

ಧನಸ್ಸು

ಉದ್ಯೋಗದಲ್ಲಿ ಲಾಭದಾಯಕ ಬೆಳವಣಿಗಗಳು ಉಂಟಾಗಲಿವೆ. ವೃತ್ತಿಯಲ್ಲಿ ಅಧಿಕಾರದ ಜೊತೆ ಜವಾಬ್ದಾರಿಯು ಹೆಚ್ಚುತ್ತದೆ. ಸಮಾಜದಲ್ಲಿ ಗೌರವಯುತ ಸ್ಥಾನಮಾನ ದೊರೆಯುತ್ತದೆ. ಅಜೀರ್ಣದ ತೊಂದರೆ ಸದಾ ಕಾಡಲಿದೆ. ಕುಟುಂಬದಲ್ಲಿ ವಿವಾಹದ ಮಾತುಕತೆ ನಡೆಯುತ್ತದೆ. ಆದಾಯವನ್ನು ಹೆಚ್ಚಿಸಿಕೊಳ್ಳಲು ಹೊಸ ವ್ಯಾಪಾರವೊಂದನ್ನು ಆರಂಭಿಸುವಿರಿ. ಆದಾಯಕ್ಕೆ ತಕ್ಕಂತಹ ಖರ್ಚು ವೆಚ್ಚಗಳು ಎದುರಾಗುತ್ತವೆ. ಸಮಾಜದಲ್ಲಿ ಗೌರವಯುತ ಸ್ಥಾನಮಾನ ಗಳಿಸುವಿರಿ. ಹುಟ್ಟೂರಿನ ಪುರಾತನ ಮನೆಯನ್ನು ದುರಸ್ತಿಗೊಳಿಸುವಿರಿ. ನಿಮಗಿಷ್ಟವಾದ ಚಿನ್ನದ ಒಡವೆ ಕೊಳ್ಳುವಿರಿ. ತಂದೆಯವರ ವ್ಯಾಪಾರವನ್ನು ಒತ್ತಾಯಪೂರ್ವಕವಾಗಿ ಮುಂದುವರೆಸಬೇಕಾಗುತ್ತದೆ.

ಪರಿಹಾರ: ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ಮಕರ

ಕುಟುಂಬದಲ್ಲಿಅನಿಶ್ಚಿತ ವಾತಾವರಣ ಇರುತ್ತದೆ. ಸಂದರ್ಭಕ್ಕೆ ಹೊಂದಿಕೊಂಡು ಬಾಳಲು ಪ್ರಯತ್ನಿಸಿ. ಆಧುನಿಕ ತಂತ್ರಜ್ಞಾನ ತಿಳಿದವರಿಗೆ ವಿದೇಶದಲ್ಲಿ ಉದ್ಯೋಗ ಲಭಿಸುತ್ತದೆ. ಯಂತ್ರೋಪಕರಣ ತಯಾರಿಕಾ ಸಂಸ್ಥೆಯನ್ನು ಆರಂಭಿಸುವಿರಿ. ಆದಾಯದ ಕೊರತೆಯಿಂದ ಪಾರಾಗಲು ವಂಶಾನುಗತವೃತ್ತಿಯೊಂದನ್ನು ಆರಂಭಿಸುವಿರಿ. ಹೊಸ ವಾಹನವನ್ನು ಕೊಳ್ಳುವಿರಿ. ನೀರಾವರಿ ಭೂಮಿಯನ್ನು ಕೊಳ್ಳುವಿರಿ. ಆರೋಗ್ಯವನ್ನು ಸ್ಥಿರವಾಗಿರಿಸಿಕೊಳ್ಳಲು ದೈಹಿಕ ವ್ಯಾಯಾಮದ ಮೊರೆ ಹೋಗುವಿರಿ. ಹಣಕಾಸಿನ ಕೊರತೆ ಇದ್ದಲ್ಲಿ ಕುಟುಂಬದ ಹಿರಿಯರ ಸಹಾಯ ದೊರೆಯುತ್ತದೆ. ವಂಶದ ಹಳೆಯ ಮನೆಯನ್ನು ನವೀಕರಣಗೊಳಿಸುವಿರಿ. ಮನೆಯ ಮುಂದಿನ ಗಿಡಗಳನ್ನು ಸಂರಕ್ಷಿಸುವಿರಿ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ಕುಂಭ

ಬರಿ ಮಾತಿನಿಂದಲೇ ನಿಮ್ಮ ಸ್ವಂತ ಕೆಲಸ ಕಾರ್ಯಗಳನ್ನು ಸಾಧಿಸಬಲ್ಲಿರಿ. ನೀರಿಗೆ ಸಂಬಂಧಿಸಿದ ಸಂಸ್ಥೆಯ ನಿರ್ವಹಣೆ ನಿಮ್ಮದಾಗಲಿದೆ. ಸರ್ಕಾರಿ ಆಡಳಿತದ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ಹಿರಿಯ ಅಧಿಕಾರಿಗಳ ಅನುಕಂಪವನ್ನು ಪಡೆಯುವಿರಿ. ಹಣದ ವ್ಯಾಮೋಹ ಇರದು. ವಿದ್ಯಾರ್ಥಿಗಳು ಮೌನವಾಗಿ ಎಲ್ಲವನ್ನೂ ಸಾಧಿಸಬಲ್ಲರು. ಸ್ವಂತ ವ್ಯಾಪಾರ ವಹಿವಾಟನಲ್ಲಿ ಲಾಭ ಗಳಿಸುವಿರಿ. ಸೋದರರ ವ್ಯಾಪಾರದಲ್ಲಿ ಸಹಭಾಗಿತ್ವ ದೊರೆಯಲಿದೆ. ಕಷ್ಟವಿಲ್ಲದ ಸಂಪಾದನೆಯ ದಾರಿ ಹುಡುಕುವಿರಿ. ಬಹುಹಿಂದಿನ ಹಣದ ವಿವಾದವೊಂದು ನಿವಾರಣೆ ಆಗಲಿದೆ. ಆಹಾರ ಪದಾರ್ಥಗಳ ಸರಬರಾಜಿನ ಉದ್ಯೋಗದಲ್ಲಿ ಲಾಭವಿದೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೆಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಆಕಾಶನೀಲಿ ಬಣ್ಣ

ಮೀನ

ಕುಟುಂಬದ ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ. ಕುಟುಂಬದ ನಿರ್ವಹಣೆಯ ವಿಚಾರದಲ್ಲಿ ಯಾರೊಬ್ಬರ ಸಲಹೆಯನ್ನೂ ಪಾಲಿಸುವುದಿಲ್ಲ. ವಿನಾಕಾರಣ ಉದ್ಯೋಗವನ್ನು ಬದಲಿಸುವಿರಿ. ಹಣಕಾಸಿನ ಸಂಸ್ಥೆಯನ್ನು ಆರಂಭಿಸುವಿರಿ. ಸಂಗಾತಿಯ ಸಹಾಯ ಸಹಕಾರ ಸದಾ ದೊರೆಯುತ್ತದೆ. ವಿದ್ಯಾರ್ಥಿಗಳು ವ್ಯಾಸಂಗದಲ್ಲಿ ನೂತನ ಸಾಧನೆ ಮಾಡಲಿದ್ದಾರೆ. ಕುಟುಂಬದ ಹಿರಿಯರ ಜವಾಬ್ದಾರಿಯನ್ನು ಹಂಚಿಕೊಳ್ಳುವಿರಿ. ತಂದೆಗೆ ಬರಬೇಕಿದ್ದ ಆಸ್ತಿಯ ವಿವಾದವನ್ನು ಬಗೆಹರಿಸುವಿರಿ. ಗುರಿ ತಲುಪುವವರಿಗೆ ಕೆಲಸ-ಕಾರ್ಯದ ವಿಚಾರವನ್ನು ರಹಸ್ಯವಾಗಿಡುವಿರಿ. ಗುರುಪೀಠವೊಂದರ ಸಂಪೂರ್ಣ ಜವಾಬ್ದಾರಿ ಒಪ್ಪಿಕೊಳ್ಳುವಿರಿ. ನೀರಿರುವ ಪ್ರದೇಶಕ್ಕೆ ಎಲ್ಲರ ಜೊತೆ ಪ್ರವಾಸಕ್ಕೆ ತೆರಳುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಪೂಜಾದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ರಕ್ತದ ಬಣ್ಣ

 

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 85468 65832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಗೌರಿವಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).