ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಬಹಳ ದಿನಗಳಿಂದ ಕಾಡುತ್ತಿದ್ದ ಆರೋಗ್ಯ ಸಮಸ್ಯೆಗೆ ಮುಕ್ತಿ, ಸಾಕು ಪ್ರಾಣಿಗಳಿಂದ ತೊಂದರೆ ಉಂಟಾಗಬಹುದು ಜಾಗ್ರತೆ: ಜು.10ರ ರಾಶಿಫಲ

ಬಹಳ ದಿನಗಳಿಂದ ಕಾಡುತ್ತಿದ್ದ ಆರೋಗ್ಯ ಸಮಸ್ಯೆಗೆ ಮುಕ್ತಿ, ಸಾಕು ಪ್ರಾಣಿಗಳಿಂದ ತೊಂದರೆ ಉಂಟಾಗಬಹುದು ಜಾಗ್ರತೆ: ಜು.10ರ ರಾಶಿಫಲ

ಜುಲೈ 10ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (ಬರಹ: ಎಚ್‌. ಸತೀಶ್, ಜ್ಯೋತಿಷಿ).

ಬಹಳ ದಿನಗಳಿಂದ ಕಾಡುತ್ತಿದ್ದ ಆರೋಗ್ಯ ಸಮಸ್ಯೆಗೆ ಮುಕ್ತಿ, ಸಾಕು ಪ್ರಾಣಿಗಳಿಂದ ತೊಂದರೆ ಉಂಟಾಗಬಹುದು ಜಾಗ್ರತೆ: ಜು.10ರ ರಾಶಿಫಲ
ಬಹಳ ದಿನಗಳಿಂದ ಕಾಡುತ್ತಿದ್ದ ಆರೋಗ್ಯ ಸಮಸ್ಯೆಗೆ ಮುಕ್ತಿ, ಸಾಕು ಪ್ರಾಣಿಗಳಿಂದ ತೊಂದರೆ ಉಂಟಾಗಬಹುದು ಜಾಗ್ರತೆ: ಜು.10ರ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (10th July 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಆಷಾಢ ಮಾಸ-ಶುಕ್ಲಪಕ್ಷ-ಬುಧವಾರ

ತಿಥಿ: ಚೌತಿ ಬೆಳಗ್ಗೆ 06.17 ರವರೆಗೂ ಇದ್ದು ನಂತರ ಪಂಚಮಿ ಆರಂಭವಾಗುತ್ತದೆ.

ನಕ್ಷತ್ರ : ಮಖೆ ನಕ್ಷತ್ರವು ಬೆಳಗ್ಗೆ 09.40 ರವರೆಗೂ ಇದ್ದು ನಂತರ ಪುಬ್ಬ ನಕ್ಷತ್ರ ಇರುತ್ತದೆ.

ಸೂರ್ಯೋದಯ: ಬೆಳಗ್ಗೆ 05.59

ಸೂರ್ಯಾಸ್ತ: ಸಂಜೆ 06.49

ರಾಹುಕಾಲ: 12.28 ರಿಂದ 02.04

ರಾಶಿಫಲ

ಮೇಷ

ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಆಸಕ್ತಿ ಇರುತ್ತದೆ. ಸಮಾಜದಲ್ಲಿ ನೆನಪಿಡುವಂತಹ ವ್ಯಕ್ತಿಯಾಗಿ ಬಾಳುವಿರಿ. ವಂಶದ ಹಿರಿಯರ ಹೆಸರನ್ನು ಉಳಿಸುವ ಕಾರ್ಯಕ್ರಮವನ್ನು ಆಯೋಜಿಸುವಿರಿ. ರಾಜಕೀಯದಲ್ಲಿ ಇದ್ದರೆ ವಿಶೇಷ ಸಹಕಾರ ಮತ್ತು ಗೌರವ ಲಭಿಸುತ್ತದೆ. ತಂದೆಯವರ ಅಧೀನದಲ್ಲಿ ಮಾಡುವ ವ್ಯಾಪಾರ ವ್ಯವಹಾರದಲ್ಲಿ ಲಾಭವಿರುತ್ತದೆ. ನಿಮಗೆ ಅರಿಯದಂತೆ ಹಣಕಾಸಿನ ವಿವಾದದಲ್ಲಿ ಸಿಲುಕುವಿರಿ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುತ್ತದೆ. ನಿಮ್ಮನ್ನು ಹೊಗಳಿದವರು ಸಹಾಯ ಮಾಡದೆ ದೂರ ಹೋಗುತ್ತಾರೆ. ಸಂಬಂಧಿಕರ ಜೊತೆ ಭೂವಿವಾದ ವಿರುತ್ತದೆ. ಮುಖ್ಯವಾದ ಕೆಲಸ ಒಂದನ್ನು ಪೂರ್ಣಗೊಳಿಸಲು ವಿಫಲರಾಗುವಿರಿ. ನಿಮ್ಮ ತಂದೆಯವರ ನಡೆ ನುಡಿಯಲ್ಲಿ ನಿಜಾಂಶ ಇರುತ್ತದೆ. ಇದರಿಂದಾಗಿ ಅವರಿಗೆ ಮಿತ್ರರಿಗಿಂತ ವಿರೋಧಿಗಳೇ ಹೆಚ್ಚಾಗಿರುತ್ತಾರೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ವೃಷಭ

ದೊಡ್ಡದು ಚಿಕ್ಕದು ಎಂಬ ಭಾವನೆ ಇರದ ಕಾರಣ ಯಶಸ್ಸಿನ ಜೀವನದಲ್ಲಿ ಮುಂದುವರೆಯುವಿರಿ. ಯಾರ ಸಲಹೆಯನ್ನೂ ಸುಲಭವಾಗಿ ಒಪ್ಪಿಕೊಳ್ಳುವುದಿಲ್ಲ. ಸಣ್ಣ ಪುಟ್ಟ ವ್ಯಾಪಾರದಲ್ಲಿಯೂ ಹೆಚ್ಚಿನ ಲಾಭ ಪಡೆಯುವಿರಿ. ಕುಟುಂಬಕ್ಕಾಗಿ ಆತ್ಮೀಯರಿಂದ ಹಣದ ಸಹಾಯ ಪಡೆಯುವಿರಿ. ಕುಟುಂಬದ ಸದಸ್ಯರೊಂದಿಗೆ ಪ್ರವಾಸಕ್ಕೆ ತೆರಳುವಿರಿ. ಮಕ್ಕಳೊಂದಿಗೆ ಸಂತಸದಿಂದ ದಿನ ಕಳೆಯುವಿರಿ. ಅಪರೂಪಕ್ಕೆ ಸೋದರಿಯ ಆಗಮನದಿಂದ ಮನೆಯಲ್ಲಿ ಹಬ್ಬದ ವಾತಾವರಣ ಉಂಟಾಗಲಿದೆ. ಸ್ವಂತ ಬಳಕೆಗಾಗಿ ಹೊಸ ವಾಹನವನ್ನು ಕೊಳ್ಳುವಿರಿ. ಭವಿಷ್ಯದ ಜೀವನಕ್ಕಾಗಿ ಹಣ ಉಳಿಸುವ ಯೋಚನೆ ಸಾಕಾರಗೊಳ್ಳಲಿದೆ. ಚಿನ್ನ ಬೆಳ್ಳಿ ಪದಾರ್ಥಗಳಿಗಾಗಿ ಹೆಚ್ಚಿನ ಹಣ ಒದಗಿಸಬೇಕಾಗುತ್ತದೆ.

ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಮಿಥುನ

ದಿನ ನಿತ್ಯದ ಕೆಲಸ ಕಾರ್ಯಗಳನ್ನು ಮನಸ್ಸಿಟ್ಟು ಪೂರ್ಣಗೊಳಿಸುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆ ಮನರಂಜನಾ ಸ್ಥಳಕ್ಕೆ ತೆರಳುವಿರಿ. ಆದಾಯ ಮತ್ತು ಖರ್ಚು ವೆಚ್ಚಗಳನ್ನು ಸಮಾನವಾಗಿ ಸ್ವೀಕರಿಸುವಿರಿ. ಲಾಭವೆನಿಸುವ ಕೆಲಸವನ್ನಷ್ಟೇ ಆಯ್ದುಕೊಳ್ಳುವಿರಿ. ಮನದಲ್ಲಿರುವ ನೋವನ್ನು ಮರೆತು ಎಲ್ಲರೊಂದಿಗೆ ಸಂತೋಷ ಹಂಚಿಕೊಳ್ಳುವಿರಿ. ನಿಮ್ಮ ಮಕ್ಕಳ ಜೀವನದಲ್ಲಿ ಮನ ಮೆಚ್ಚುವಂತಹ ಬದಲಾವಣೆಗಳು ಉಂಟಾಗಲಿವೆ. ಅನಿರೀಕ್ಷಿತ ಧನಲಾಭವಿರುತ್ತದೆ. ಕೆಲಸ ಕಾರ್ಯಗಳ ಮಧ್ಯೆ ನಿಮ್ಮ ಆರೋಗ್ಯದ ಬಗ್ಗೆಯೂ ಗಮನ ನೀಡುವಿರಿ. ಸ್ನೇಹ ಪ್ರೀತಿಯಿಂದ ಜನರ ಮನಸ್ಸನ್ನು ಗೆಲ್ಲುವಿರಿ. ಸಮಾಜದ ಗಣ್ಯ ವ್ಯಕ್ತಿಯಾಗಿ ಬಾಳುವಿರಿ. ಆದಾಯ ಹೆಚ್ಚಿಸಿಕೊಳ್ಳಲು ಪಾಲುದಾರಿಕೆ ವ್ಯಾಪಾರ ಆರಂಭಿಸುವಿರಿ.

ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಬೂದು

ಕಟಕ

ಒಪ್ಪಿಕೊಂಡ ಕರ್ತವ್ಯವನ್ನು ನಿರ್ವಹಿಸುವುದೇ ಜೀವನದ ಮುಖ್ಯ ಉದ್ದೇಶವಾಗುತ್ತದೆ. ಕುಟುಂಬದಲ್ಲಿ ನಿರೀಕ್ಷಿಸಿದ ಮಟ್ಟದಲ್ಲಿ ಶುಭಫಲಗಳು ದೊರೆಯಲಿದೆ. ಯಾತ್ರಾ ಸ್ಥಳಕ್ಕೆ ಕುಟುಂಬದ ಸದಸ್ಯರೊಂದಿಗೆ ಭೇಟಿ ನೀಡುವಿರಿ. ಹಣದ ಕೊರತೆಯನ್ನು ಕಡಿಮೆ ಮಾಡಲು ಬಿಡುವಿನ ವೇಳೆಯಲ್ಲಿ ವ್ಯಾಪಾರವೊಂದನ್ನು ಆರಂಭಿಸುವಿರಿ. ನವದಂಪತಿಗಳಿಗೆ ಸಂತಾನ ಲಾಭವಿದೆ. ಹಳೆಯ ಅನಾರೋಗ್ಯದ ಸಮಸ್ಯೆಯು ಬಗೆ ಹರಿಯುತ್ತದೆ. ಸಂಗೀತ, ಯೋಗಗಳಲ್ಲಿ ಪರಿಣಿತಿ ಗಳಿಸುವಿರಿ. ಮನೆಯ ಸುತ್ತಮುತ್ತಲಿನ ವಯೋವೃದ್ಧರಿಗೆ ಸಹಾಯ ಮಾಡುವಿರಿ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಆತ್ಮೀಯರೊಬ್ಬರು ಸಹಾಯ ಮಾಡುತ್ತಾರೆ. ಸಾಕುಪ್ರಾಣಿಗಳಿಂದ ತೊಂದರೆ ಉಂಟಾಗಬಹುದು.

ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕಂದು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).