ಹಣದ ಕೊರತೆ ಎದುರಾಗಬಹುದು, ಅತಿಯಾದ ಸಿಟ್ಟು ಆತ್ಮೀಯರನ್ನು ದೂರ ಮಾಡಲಿದೆ; ಸಿಂಹದಿಂದ ವೃಶ್ಚಿಕರಾಶಿವರೆಗಿನ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಹಣದ ಕೊರತೆ ಎದುರಾಗಬಹುದು, ಅತಿಯಾದ ಸಿಟ್ಟು ಆತ್ಮೀಯರನ್ನು ದೂರ ಮಾಡಲಿದೆ; ಸಿಂಹದಿಂದ ವೃಶ್ಚಿಕರಾಶಿವರೆಗಿನ ದಿನಭವಿಷ್ಯ

ಹಣದ ಕೊರತೆ ಎದುರಾಗಬಹುದು, ಅತಿಯಾದ ಸಿಟ್ಟು ಆತ್ಮೀಯರನ್ನು ದೂರ ಮಾಡಲಿದೆ; ಸಿಂಹದಿಂದ ವೃಶ್ಚಿಕರಾಶಿವರೆಗಿನ ದಿನಭವಿಷ್ಯ

10 ಜೂನ್‌ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (10th June 2024 Daily Horoscope).

ಅತಿಯಾದ ಸಿಟ್ಟು ಆತ್ಮೀಯರನ್ನು ದೂರ ಮಾಡಲಿದೆ; ಸಿಂಹದಿಂದ ವೃಶ್ಚಿಕರಾಶಿವರೆಗಿನ ದಿನಭವಿಷ್ಯ
ಅತಿಯಾದ ಸಿಟ್ಟು ಆತ್ಮೀಯರನ್ನು ದೂರ ಮಾಡಲಿದೆ; ಸಿಂಹದಿಂದ ವೃಶ್ಚಿಕರಾಶಿವರೆಗಿನ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (10th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲಪಕ್ಷ, ಸೋಮವಾರ

ತಿಥಿ: ಚೌತಿ ಬೆಳಿಗ್ಗೆ 4.33ರವರೆಗೂ ಇರುತ್ತದೆ. ಅನಂತರ ಪಂಚಮಿ ಆರಂಭವಾಗುತ್ತದೆ.

ನಕ್ಷತ್ರ: ಪುಷ್ಯ ನಕ್ಷತ್ರವು ರಾತ್ರಿ 10.25 ರವರೆಗೂ ಇರುತ್ತದೆ. ಅನಂತರ ಆಶ್ಲೇಷ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಿಗ್ಗೆ 5.52

ಸೂರ್ಯಾಸ್ತ: ಸಂಜೆ 6.45

ರಾಹುಕಾಲ: ಬೆಳಿಗ್ಗೆ 7.35 ರಿಂದ ಬೆಳಿಗ್ಗೆ 9.11

ಸಿಂಹ

ಸಂಬಂಧಪಟ್ಟ ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತವೆ. ಉದ್ಯೋಗದಲ್ಲಿ ಮೇಲ್ಮಟ್ಟದ ಯಶಸ್ಸನ್ನು ಕಾಣುವಿರಿ. ಕುಟುಂಬದಲ್ಲಿ ಎದುರಾಗುವ ಘಟನೆಯಿಂದ ಪರಸ್ಪರ ಭಿನ್ನಾಭಿಪ್ರಾಯ ಉಂಟಾಗುತ್ತದೆ. ತಂದೆ ಅಥವಾ ತಾಯಿಯ ಆರೋಗ್ಯದಲ್ಲಿ ತೊಂದರೆ ಕಂಡುಬರುತ್ತದೆ. ಅನಿವಾರ್ಯವಾಗಿ ವಾಸ ಸ್ಥಳವನ್ನು ಬದಲಾಯಿಸುವಿರಿ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ. ಉತ್ತಮ ವೇತನಕ್ಕಾಗಿ ಉದ್ಯೋಗವನ್ನು ಬದಲಾಯಿಸುವಿರಿ. ನಿಮ್ಮ ಮನಸ್ಸಿನ ಬಹುತೇಕ ಯೋಚನೆಗಳು ನಿಜವಾಗಲಿವೆ. ಹಣದ ಕೊರತೆ ಕಂಡು ಬರುತ್ತದೆ. ಹೊಸ ವಾಹನವನ್ನು ಕೊಳ್ಳುವ ಸಾಧ್ಯತೆ ಇದೆ. ಬಂಧು ಬಳಗದವರಿಂದ ದೂರವಿರುವಿರಿ. ಅಧ್ಯಯನಕ್ಕಾಗಿ ವಿದ್ಯಾರ್ಥಿಗಳು ವಿದೇಶಕ್ಕೆ ತೆರಳುವರು.

ಪರಿಹಾರ: ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಕಂದು ಬಣ್ಣ

ಕನ್ಯಾ

ಹೆದರಿಕೆಯ ಗುಣವಿರುತ್ತದೆ. ಯಾವುದೇ ಕೆಲಸ ಕಾರ್ಯಗಳನ್ನು ಮನಸ್ಸಿಟ್ಟು ಮಾಡಲಾಗುವುದಿಲ್ಲ. ಒಮ್ಮೆ ತೆಗೆದುಕೊಂಡ ತೀರ್ಮಾನವನ್ನು ಅನಾವಶ್ಯಕವಾಗಿ ಬದಲಾಯಿಸುವಿರಿ. ದಿನನಿತ್ಯದ ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಸಾಗಲಿವೆ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದ್ಯೋಗದಲ್ಲಿ ಅಪವಾದ ಒಂದನ್ನು ಎದುರಿಸಬೇಕಾಗುತ್ತದೆ. ಸಂಗಾತಿಗೆ ರಕ್ತಹೀನತೆಯ ತೊಂದರೆ ಇರುತ್ತದೆ. ಸಂಚಾರದಿಂದ ನಿರೀಕ್ಷಿತ ಅನುಕೂಲಗಳು ದೊರೆಯಲಿವೆ. ಇರುವ ಹಣವನ್ನು ಪೂರ್ವಯೋಜನೆ ಇಲ್ಲದೆ ಖರ್ಚು ಮಾಡುವಿರಿ. ಮನೆಯಲ್ಲಿರುವ ಚಿಕ್ಕ ಮಕ್ಕಳಿಗೆ ಲೋಹದ ವಸ್ತುವಿನಿಂದ ತೊಂದರೆ ಉಂಟಾಗಬಹುದು. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಆಸಕ್ತಿ ತೋರುವಿರಿ. ಅರಸಿ ಬಂದವರಿಗೆ ಅನ್ನದಾನ ಮಾಡುವಿರಿ. ಬೇರೆಯವರ ಮಕ್ಕಳನ್ನು ಪ್ರೀತಿಯಿಂದ ಕಾಣುವಿರಿ.

ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

ತುಲಾ

ನಿಮ್ಮ ಜವಾಬ್ದಾರಿಯು ಹೆಚ್ಚುವ ಕಾರಣ ಮಾನಸಿಕ ಒತ್ತಡವಿರುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ವಾದ ವಿವಾದಗಳನ್ನು ಕಡಿಮೆ ಮಾಡುವುದು ಒಳ್ಳೆಯದು. ಕಷ್ಟದಲ್ಲಿ ಇರುವ ಮಕ್ಕಳಿಗೆ ಸಹಾಯ ಮಾಡುವಿರಿ. ಅತಿಯಾದ ಸಿಟ್ಟಿನ ಬುದ್ಧಿ ಇರುವ ಕಾರಣ ಆತ್ಮೀಯರು ದೂರವಾಗುತ್ತಾರೆ. ಎಲ್ಲರೂ ಹೆಮ್ಮೆಪಡುವಂತಹ ಕೆಲಸವನ್ನು ಮಾಡುವಿರಿ. ಸೋದರನಿಗೆ ಗಣ್ಯ ವ್ಯಕ್ತಿಗಳಿಂದ ಸಹಾಯ ದೊರೆಯುತ್ತದೆ. ಸಂಗಾತಿಗೆ ಪಿತ್ತದ ತೊಂದರೆ ಇರುತ್ತದೆ. ಯಾವುದೇ ಕೆಲಸ ಕಾರ್ಯಗಳನ್ನು ಮಾಡಬಲ್ಲಿರಿ. ಆರೋಗ್ಯದ ಬಗ್ಗೆ ಗಮನವಿರಲಿ. ಹಣಕಾಸಿನ ವ್ಯವಹಾರದಲ್ಲಿ ಉತ್ತಮ ಲಾಭವಿರುತ್ತದೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೆಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ

ವೃಶ್ಚಿಕ

ಸಮಾಜದಲ್ಲಿ ಗೌರವಯುತ ಸ್ಥಾನಮಾನ ದೊರೆಯುತ್ತದೆ. ಯಾವುದೇ ಕೆಲಸ ಕಾರ್ಯಗಳನ್ನು ಸುಲಭವಾಗಿ ಮಾಡಬಲ್ಲಿರಿ. ವಿರೋಧಿಗಳ ವಿರುದ್ಧ ಜಯ ಗಳಿಸುವಿರಿ. ಸಂತಾನ ಲಾಭವಿದೆ. ಮಹಿಳೆಯರು ಹೊಸ ವಾಹನವನ್ನು ಕೊಳ್ಳುತ್ತಾರೆ. ಕೈಕಾಲುಗಳಲ್ಲಿ ಊತ ಕಂಡು ಬರಬಹುದು. ಬುದ್ಧಿವಂತಿಕೆಯಿಂದ ಎಲ್ಲರ ಮನೆಗೆಲ್ಲುವಂತೆ ಮಾತನಾಡುವಿರಿ. ಸೋದರನಿಗೆ ಸಹಾಯ ಹಸ್ತ ನೀಡುವಿರಿ. ನರನಿಶ್ಯಕ್ತಿಯಿಂದ ಬಳಲುವಿರಿ. ಸಂಗಾತಿಗೆ ಅನಿರೀಕ್ಷಿತ ಶುಭ ಫಲಗಳು ದೊರೆಯುತ್ತವೆ. ದಂಪತಿಗಳ ನಡುವೆ ಉತ್ತಮ ಅನುಬಂಧ ಇರುತ್ತದೆ. ಸಂಗಾತಿ ಮತ್ತು ಮಕ್ಕಳ ಜೊತೆಯಲ್ಲಿ ದೀರ್ಘ ಕಾಲದ ಪ್ರವಾಸಕ್ಕೆ ತೆರಳುವಿರಿ. ಅತಿಯಾದ ಆಸೆ ಇರುವುದಿಲ್ಲ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.