ಹೆಚ್ಚಿದ ಜವಾಬ್ದಾರಿಯಿಂದ ದೈಹಿಕ, ಮಾನಸಿಕವಾಗಿ ಬಳಲುವಿರಿ; ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ದಿನ ಭವಿಷ್ಯ
10 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (10th May 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (10th May 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಶುಕ್ರವಾರ
ತಿಥಿ: ತದಿಗೆ ರಾತ್ರಿ 04.40 ರವರೆಗೂ ಇದ್ದು ನಂತರ ಚೌತಿ ಆರಂಭವಾಗುತ್ತದೆ.
ನಕ್ಷತ್ರ: ರೋಹಿಣಿ ನಕ್ಷತ್ರವು 12.22 ರವರೆಗೂ ಇದ್ದು ನಂತರ ಮೃಗಶಿರ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 05.54
ಸೂರ್ಯಾಸ್ತ: ಸಂಜೆ 06.35
ರಾಹುಕಾಲ: 10.44 ರಿಂದ 12.19
ರಾಶಿಫಲ
ಮೇಷ
ಮನೆಯನ್ನು ವಿಸ್ತರಿಸಲು ಮತ್ತು ನವೀಕರಿಸಲು ಹಣ ಖರ್ಚಾಗಲಿದೆ. ಕೆಲ ದಿನಗಳಕಾಲ ವಾಸಸ್ಥಳವನ್ನು ಬದಲಿಸುವಿರಿ. ಕುಟುಂಬದಲ್ಲಿ ಎದುರಾಗುವ ಹಣದ ವಿಚಾರಗಳು ಬೇಸರ ಉಂಟು ಮಾಡಲಿವೆ. ದಂಪತಿಗಳ ನಡುವೆ ಉತ್ತಮ ಬಾಂಧವ್ಯ ರೂಪುಗೊಳ್ಳುತ್ತವೆ. ಆತ್ಮೀಯರ ಸಹಾಯದಿಂದ ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಉತ್ತಮ ಜ್ಞಾನ ಇರುತ್ತದೆ. ಕುಟುಂಬದ ಹಣದ ಜವಾಬ್ದಾರಿ ನಿಮ್ಮದಾಗಲಿದೆ. ಸರಳತೆಯೇ ನಿಮ್ಮ ಆಸ್ತಿಯಾಗಿರುತ್ತದೆ. ವಿದ್ಯಾರ್ಥಿಗಳ ಮನದಲ್ಲಿ ಬೇಸರ ಇರುತ್ತದೆ. ಅಧಿಕಾರಿಗಳು ಉದ್ಯೋಗಿಗಳ ಮನಸ್ಸನ್ನು ಗೆಲ್ಲಲು ಪ್ರಯತ್ನಿಸುವರು.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಕೇಸರಿ
ವೃಷಭ
ಉದ್ಯೋಗದಲ್ಲಿ ಅನಾವಶ್ಯಕ ವಿವಾದವೊಂದು ಎದುರಾಗುತ್ತದೆ. ಬದಲಾಗದ ವ್ಯಕ್ತಿತ್ವ ಮತ್ತು ಮನಸ್ಸು ಇರುವ ಕಾರಣ ಸುಖ ಜೀವನ ನಡೆಸುವಿರಿ. ಅವಶ್ಯಕತೆ ಇದ್ದಷ್ಟು ಹಣವನ್ನು ಸಂಪಾದಿಸುವಿರಿ. ಹಣದ ಕೊರತೆ ಕಡಿಮೆ ಮಾಡಲು ಸಣ್ಣಪುಟ್ಟ ವ್ಯಾಪಾರವನ್ನು ಆರಂಭಿಸುವಿರಿ. ಗಟ್ಟಿ ಮನಸ್ಸಿನಿಂದ ಉದ್ಯೋಗವನ್ನು ಬದಲಾಯಿಸುವಿರಿ. ಸೋದರನ ಜೊತೆಯಲಿ ಭೂವಿವಾದದಲ್ಲಿ ಸಿಲುಕುವಿರಿ. ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸಕ್ಕಾಗಿ ಪರಸ್ಥಳಕ್ಕೆ ತೆರಳುವರು. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಮಕ್ಕಳು ಮೊಮ್ಮಕ್ಕಳ ಆಗಮನ ಕುಟುಂಬದಲ್ಲಿ ಸಂತಸವನ್ನು ಉಂಟುಮಾಡುತ್ತದೆ. ಹೆಚ್ಚಿನ ಜವಾಬ್ದಾರಿಯು ದೈಹಿಕ ಶಕ್ತಿಯನ್ನು ಕುಂದಿಸುತ್ತದೆ.
ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ
ಮಿಥುನ
ಮನೆಯ ವಾತಾವರಣಕ್ಕೆ ಹೊಂದಿಕೊಂಡು ಹೋಗುವಿರಿ. ಮನೆಯಲ್ಲಿ ಸುಖ ಸಂತೋಷ ನೆಲೆಸುತ್ತವೆ. ಮನೆಯಲ್ಲಿರುವ ಪುಟ್ಟ ಮಕ್ಕಳ ಆರೋಗ್ಯದಲ್ಲಿ ತೊಂದರೆ ಆಗಬಹುದು. ಹಿರಿಯ ಅಧಿಕಾರಿಗಳು ಉದ್ಯೋಗದಲ್ಲಿನ ಸಮಸ್ಯೆಯನ್ನು ಪರಿಹರಿಸುತ್ತಾರೆ. ದಿನ ನಿತ್ಯದ ಖರ್ಚು ವೆಚ್ಚದ ಬಗ್ಗೆ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ಸಮಾಜದ ವಯೋವೃದ್ಧರನ್ನು ಪ್ರೀತಿ ವಿಶ್ವಾಸದಿಂದ ಕಾಣುವಿರಿ. ವಿದೇಶಿ ಸಂಸ್ಥೆಗಳಲ್ಲಿ ಉದ್ಯೋಗ ದೊರೆಯುತ್ತದೆ. ಒಳ್ಳೆಯ ಕೆಲಸಗಳಿಗೆ ಹಣ ಖರ್ಚು ಮಾಡುವಿರಿ. ನಿಶ್ಚಯವಾಗಿದ್ದ ವಿವಾಹವು ಕೆಲ ದಿನಗಳು ಮುಂದೂಡಲ್ಪಡುತ್ತದೆ. ಕುಟುಂಬದಿಂದ ದೂರವಾಗಿದ್ದ ಸೋದರನೊಬ್ಬ ಜಗಳ ಮರೆತು ಮರಳಿ ಬರುತ್ತಾರೆ. ವಿದ್ಯಾರ್ಥಿಗಳಿಗೆ ವಿಶೇಷ ಅನುಕೂಲತೆಗಳು ದೊರೆಯುತ್ತದೆ.
ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಕಪ್ಪು
ಕಟಕ
ದುಡುಕುತನದಿಂದ ತಂದೆಯವರೊಂದಿಗೆ ವಿವಾದ ಉಂಟಾಗಲಿದೆ. ಆತುರದಿಂದ ಮಾಡುವ ಕೆಲಸದಲ್ಲಿ ತೊಂದರೆ ಇರುತ್ತದೆ. ಸಂಗಾತಿಯ ಸಹಕಾರದಿಂದ ಯಾವುದೇ ಕೆಲಸ ಮಾಡಿದರೂ ಯಶಸ್ಸು ದೊರೆಯುತ್ತದೆ. ವಿದ್ಯಾರ್ಥಿಗಳು ಬಿಡುವಿಲ್ಲದೆ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಬೇಸಾಯದಲ್ಲಿ ಲಾಭವಿದೆ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಕುಟುಂಬದಲ್ಲಿ ಗಂಭೀರದ ವಾತಾವರಣ ಇರುತ್ತದೆ. ಉದ್ಯೋಗದಲ್ಲಿ ನಿರೀಕ್ಷಿಸಿದ ಮಾದರಿಯಲ್ಲಿ ಅಭಿವೃದ್ದಿ ಕಾಣದು. ಸಣ್ಣ ಪ್ರಮಾಣದ ವ್ಯಾಪಾರದಲ್ಲಿ ಲಾಭವಿರುತ್ತದೆ. ತಾಯಿಗೆ ಅನಾರೋಗ್ಯದ ತೊಂದರೆ ಉಂಟಾಗಬಹುದು. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಇರಲಿ. ರಕ್ತದ ಒತ್ತಡ ಇದ್ದಲ್ಲಿ ವೈದ್ಯರನ್ನು ಭೇಟಿಮಾಡಿ.
ಪರಿಹಾರ : ಮನೆಯಲ್ಲಿ ತುಪ್ಪದ ದೀಪ ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ತಿಳಿ ಹಸಿರು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
ಇದನ್ನೂ ಓದಿ: ಈ ತಾರೀಖಿನಂದು ಜನಿಸಿದವರು ಉನ್ನತ ಪದವಿಗೆ ಏರುತ್ತಾರೆ