ಆಸ್ತಿ ವಿಚಾರದಲ್ಲಿ ತಂದೆಯೊಂದಿಗೆ ಮನಸ್ತಾಪ, ದುಡುಕು ಮಾತಿನಿಂದ ವಿವಾದ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ
10 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (10th May 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (10th May 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಶುಕ್ರವಾರ
ತಿಥಿ: ತದಿಗೆ ರಾತ್ರಿ 04.40 ರವರೆಗೂ ಇದ್ದು ನಂತರ ಚೌತಿ ಆರಂಭವಾಗುತ್ತದೆ.
ನಕ್ಷತ್ರ: ರೋಹಿಣಿ ನಕ್ಷತ್ರವು 12.22 ರವರೆಗೂ ಇದ್ದು ನಂತರ ಮೃಗಶಿರ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 05.54
ಸೂರ್ಯಾಸ್ತ: ಸಂಜೆ 06.35
ರಾಹುಕಾಲ: 10.44 ರಿಂದ 12.19
ರಾಶಿಫಲ
ಸಿಂಹ
ಸಣ್ಣ ಪುಟ್ಟ ವಿಚಾರಗಳನ್ನೂ ದೊಡ್ಡ ವಿವಾದವನ್ನಾಗಿ ಮಾಡುವಿರಿ. ಎಲ್ಲರ ಜೊತೆ ಹೊಂದಾಣಿಕೆಯ ಗುಣ ಬೆಳೆಸಿಕೊಂಡಲ್ಲಿ ಕುಟುಂಬದಲ್ಲಿ ಶಾಂತಿ ನೆಲೆಸುತ್ತದೆ. ತಂದೆಯ ಸಹಾಯದಿಂದ ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ಭೂಮಿಯ ವಿಚಾರದಲ್ಲಿ ಕೊಂಚ ಮೋಸವಾಗುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರ ಜೊತೆಯಲ್ಲಿ ಪುಣ್ಯಕ್ಷೇತ್ರ ದರ್ಶನಕ್ಕೆ ತೆರಳುವಿರಿ. ವಿದ್ಯಾರ್ಥಿಗಳ ನಿರೀಕ್ಷೆಯು ನಿಜವಾಗಲಿದೆ. ಉತ್ತಮ ಪ್ರಯತ್ನದಿಂದ ವಿದೇಶದಲ್ಲಿ ನೆಲೆಸಲು ಸಾಧ್ಯವಾಗಲಿದೆ. ಜನಸೇವೆಯಲ್ಲಿ ನಿರತರಾಗಿರುವವರಿಗೆ ವಿಶೇಷ ಗೌರವ ಲಭಿಸುತ್ತದೆ. ಉತ್ತಮ ಆರೋಗ್ಯ ಪಡೆಯಲು ಆಹಾರ ಕ್ರಮವನ್ನು ಬದಲಿಸುವಿರಿ.
ಪರಿಹಾರ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ನಸುಗೆಂಪು
ಕನ್ಯಾ
ಸಾಂಪ್ರದಾಯಿಕ ಔಷಧೋಪಚಾರದಿಂದ ಆರೋಗ್ಯವನ್ನು ಕಾಪಾಡಿಕೊಳ್ಳುವಿರಿ. ಸ್ವಂತ ನಿರ್ಧಾರಗಳ ಮೇಲೆ ಅತಿಯಾದ ನಂಬಿಕೆ ಇದ್ದಲ್ಲಿ ತೊಂದರೆ ಉಂಟಾಗಲಿದೆ. ಕುಟುಂಬದ ಮಹಿಳಾ ಸದಸ್ಯರೊಬ್ಬರ ನಿರ್ಧಾರದಿಂದ ಹಣದ ಸಮಸ್ಯೆಯೊಂದು ನಿವಾರಣೆ ಆಗುವುದು. ಕಲಾವಿದರಿಗೆ ವಿಶೇಷವಾದ ಅವಕಾಶಗಳು ದೊರೆಯಲಿದೆ. ಶುಭ ಕಾರ್ಯಕ್ರಮಗಳ ಆಯೋಜನೆ ಮಾಡುವಲ್ಲಿ ಯಶಸ್ಸನ್ನು ಕಾಣುವಿರಿ. ಉದ್ಯೋಗದಲ್ಲಿ ಯಾವುದೇ ತೊಂದರೆ ಇರದು. ದುಡುಕಿನ ಮಾತಿನಿಂದ ವಿವಾದವನ್ನು ಉಂಟುಮಾಡಲಿದೆ. ಸ್ವಂತ ಉದ್ದಿಮೆ ಇದ್ದಲ್ಲಿ ಉತ್ಪನ್ನಗಳಿಗೆ ದೇಶ ವಿದೇಶಗಳಲ್ಲಿ ಬೇಡಿಕೆ ಹೆಚ್ಚುತ್ತದೆ. ಗಣ್ಯವ್ಯಕ್ತಿಯೊಬ್ಬರ ಒಡನಾಟ ದೊರೆಯುತ್ತದೆ. ತಂದೆಯವರಿಗೆ ಅನಾವಶ್ಯಕ ಖರ್ಚು ವೆಚ್ಚಗಳಿರುತ್ತವೆ.
ಪರಿಹಾರ : ತಲೆಗೆ ಹಾಲು ಹಚ್ಚಿ ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ
ತುಲಾ
ಕುಟುಂಬದ ಆಸ್ತಿ ವಿಚಾರದಲ್ಲಿ ತಂದೆಯೊಂದಿಗೆ ಮನಸ್ತಾಪ ಇರುತ್ತದೆ. ಚಂಚಲ ಮನಸ್ಸಿನ ಕಾರಣ ಕೆಲಸ ಕಾರ್ಯಗಳಲ್ಲಿ ಹಿನ್ನೆಡೆ ಇರುತ್ತದೆ. ಸಾರಿಗೆ ವ್ಯವಸ್ಥೆ ಕಲ್ಪಿಸುವ ವ್ಯವಹಾರದಲ್ಲಿ ಲಾಭವಿರುತ್ತದೆ. ಸಾರಿಗೆ ಸಂಸ್ಥೆಯ ಏಜೆನ್ಸಿಯಿಂದ ಉತ್ತಮ ಲಾಭಾಂಶ ದೊರೆಯುತ್ತದೆ. ಕಷ್ಟಪಟ್ಟು ಮಾಡುವ ಕೆಲಸದಲ್ಲಿ ಆಸಕ್ತಿ ಇರುವುದಿಲ್ಲ. ಯಾರನ್ನೂ ಸುಲಭವಾಗಿ ನಂಬುವುದಿಲ್ಲ. ಸಿಹಿ ಖಾದ್ಯಗಳಿಂದ ದೂರವಿದ್ದಲ್ಲಿ ಆರೋಗ್ಯದಲ್ಲಿ ಚೇತರಿಕೆ ಇರುತ್ತದೆ. ಚಾಡಿ ಮಾತನ್ನು ನಂಬಿ ಕುಟುಂಬದ ಸ್ವಾಸ್ಥ್ಯ ಕೆಡಿಸುವಿರಿ. ಭೂವಿವಾದದಲ್ಲಿ ಜಯ ಗಳಿಸುವಿರಿ. ಸೋದರಿಯ ವಿವಾಹದ ಮಾತುಕತೆ ನಡೆಯುತ್ತದೆ. ಬೆಳ್ಳಿ ಮತ್ತು ಚಿನ್ನದ ಖರೀದಿ ಮಾಡುವಿರಿ. ಆತಿಯಾದ ಆತುರ ಒಳ್ಳೆಯದಲ್ಲ.
ಪರಿಹಾರ : ಹಣೆಯಲ್ಲಿ ತಿಲಕವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಬಿಳಿ ಬಣ್ಣ
ವೃಶ್ಚಿಕ
ಮಗಳ ಆರೋಗ್ಯವನ್ನು ಕಾಪಾಡಿಕೊಳ್ಳಿರಿ. ಆಹಾರದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಆದಾಯದಲ್ಲಿ ವ್ಯತ್ಯಯ ಉಂಟಾಗುತ್ತದೆ. ರಿಯಲ್ ಎಸ್ಟೇಟ್ ಉದ್ದಿಮೆಯಲ್ಲಿ ಉದ್ಯೋಗ ಲಭಿಸುತ್ತದೆ. ತಂದೆಗೆ ಉದ್ಯೋಗದಲ್ಲಿ ಬಡ್ತಿ ದೊರೆವ ಕಾರಣ ದೂರದ ಊರಿಗೆ ತೆರಳುತ್ತಾರೆ. ಹಣದ ಕೊರತೆ ನಿಮ್ಮನ್ನು ಕಾಡುತ್ತದೆ. ವಿದ್ಯಾರ್ಥಿಗಳು ಕೊಂಚ ತಡವಾಗಿ ಯಶಸ್ಸನ್ನು ಕಾಣುತ್ತಾರೆ. ತಾಯಿಗೆ ಅನಾರೋಗ್ಯ ಇರುತ್ತದೆ ನೀರಿನೊಂದಿಗೆ ಚೆಲ್ಲಾಟವಾಡದಿರಿ. ಮಕ್ಕಳ ಜೀವನದಲ್ಲಿನ ತೊಂದರೆಯು ದೂರವಾಗಲಿದೆ. ಕುಟುಂಬದಲ್ಲಿ ಪ್ರಮುಖ ಘಟನೆಯೊಂದು ನಡೆದು ಮನಸ್ತಾಪ ದೂರವಾಗಲಿದೆ. ಕಲಾವಿದರಿಗೆ ಉತ್ತಮ ಅವಕಾಶ ದೊರೆಯಲಿದೆ. ಹೋಟೆಲ್ ವ್ಯಾಪಾರವನ್ನು ಆರಂಭಿಸುವ ಆಸೆ ಈಡೇರುತ್ತದೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಬೂದು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).