Horoscope Today: ಕಷ್ಟದ ಸಮಯದಲ್ಲಿ ಗೆಲ್ಲುವ ತಂತ್ರ ತಿಳಿದಿರತ್ತೆ, ದಾಂಪತ್ಯ ಜೀವನ ಸುಖಮಯ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ
ಮಾರ್ಚ್ 11, ಸೋಮವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (11 March 2024 Daily Horoscope).

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (11 March 2024 Daily Horoscope).
ಇಂದಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಸೋಮವಾರ
ತಿಥಿ : ಪಾಡ್ಯ ಬೆ.12.58 ರವರೆಗು ಇದ್ದು ಆನಂತರ ಬಿದಿಗೆ ಆರಂಭವಾಗುತ್ತದೆ.
ನಕ್ಷತ್ರ : ಉತ್ತರಾಭಾದ್ರ ನಕ್ಷತ್ರವು ರಾ.01.58 ರವರೆಗೆ ಇರುತ್ತದೆ. ಆನಂತರ ರೇವತಿ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆ.06.29
ಸೂರ್ಯಾಸ್ತ: ಸ.06.29
ರಾಹುಕಾಲ : ಬೆ. 07.30 ರಿಂದ ಬೆ.09.00
ರಾಶಿ ಫಲಗಳು
ಸಿಂಹ
ಜನಸಾಮಾನ್ಯರ ಮಧ್ಯೆ ನಾಯಕನಾಗಿ ಹೊರಹೊಮ್ಮುವಿರಿ. ಕುಟುಂಬದಲ್ಲಿ ಸಂತಸದ ಕ್ಷಣಗಳು ಎದುರಾಗಲಿವೆ. ದುಬಾರಿ ಉಡುಗೊರೆಯೊಂದು ದೊರೆಯಲಿದೆ. ಎಲ್ಲರ ಸಹಾಯ ಸಹಕಾರ ನಿಮಗೆ ದೊರೆಯಲಿದೆ. ಸಂಗಾತಿಯ ಹಣಕಾಸಿನ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡಬೇಡಿರಿ. ಅವಶ್ಯಕತೆ ಇರುವ ವೇಳೆಯಲ್ಲಿ ಸಂಗಾತಿಯಿಂದ ಹಣದ ಸಹಾಯ ದೊರೆಯುತ್ತದೆ. ಕುಟುಂಬದ ಕಿರಿಯ ಸದಸ್ಯರಿಗೆ ಎಲ್ಲರಿಂದ ಸಹಾನುಭೂತಿ ದೊರೆಯುತ್ತದೆ. ದಂಪತಿಗಳ ಚಿಂತನೆ ಮತ್ತು ಯೋಜನೆಗಳು ಒಂದೇ ಹಾದಿಯಲ್ಲಿ ಸಾಗಲಿವೆ. ಉದ್ಯೋಗ ಮಾಡಲು ಆಸಕ್ತಿ ಇರುವುದಿಲ್ಲ. ಎಲ್ಲರ ಸಹಾಯದಿಂದ ವ್ಯಾಪಾರವನ್ನು ಆರಂಭಿಸುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ಯಾರಿಗೂ ಹಣದ ಸಹಾಯ ಮಾಡಲು ಇಚ್ಚಿರುವುದಿಲ್ಲ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ
ಕನ್ಯಾ
ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಲು ಶ್ರಮಿಸುವಿರಿ. ಹಣದ ವ್ಯವಹಾರದಲ್ಲಿ ಯಾವುದೇ ತೊಂದರೆ ಎದುರಾಗುವುದಿಲ್ಲ. ನಿಮ್ಮಲ್ಲಿ ವಿಶೇಷವಾದ ಜನಾಕರ್ಷಕ ಬುದ್ಧಿ ಇರುತ್ತದೆ. ನಿಮ್ಮಲ್ಲಿನ ಒಳ್ಳೆಯ ವ್ಯಕ್ತಿತ್ವ ಹೊಸ ಸ್ನೇಹಿತರನ್ನು ಗಳಿಸಿಕೊಡುತ್ತದೆ. ದಾಂಪತ್ಯ ಜೀವನದಲ್ಲಿ ಇದ್ದ ವಿವಾದವು ಕೊನೆಗೊಳ್ಳುತ್ತದೆ. ಸಂಪೂರ್ಣ ವಿಚಾರವನ್ನು ಅರಿತುಕೊಂಡು ಹಣಕಾಸಿನ ಯೋಜನೆಯನ್ನು ಆರಂಭಿಸಿ. ಕಲಾವಿದರಿಗೆ ಉತ್ತಮ ಅವಕಾಶ ದೊರೆಯುತ್ತದೆ. ಆರಂಭಿಸಬೇಕಿದ್ದ ಹೊಸ ವ್ಯಾಪಾರವನ್ನು ಮುಂದೂಡುವಿರಿ. ಸ್ವಂತ ಬುದ್ಧಿವಂತಿಕೆಯಿಂದ ದೊಡ್ಡ ವಿವಾದ ದೂರವಾಗುತ್ತದೆ. ಮಕ್ಕಳ ಆರೋಗ್ಯದಲ್ಲಿ ಏರಿಳಿತ ಉಂಟಾಗುವ ಸಾಧ್ಯತೆ ಇದೆ. ವಂಶಕ್ಕೆ ಸಂಬಂಧಿಸಿದ ಆಸ್ತಿಯಲ್ಲಿ ನಿಮಗೆ ಸಮಪಾಲು ಲಭಿಸುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ.
ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ
ತುಲಾ
ಹೆಚ್ಚಿನ ಆತ್ಮವಿಶ್ವಾಸ ಹೊಸ ಆಸೆ ಆಕಾಂಕ್ಷೆಗಳನ್ನುಮೂಡಿಸುತ್ತದೆ. ಸುಲಭವಾಗಿ ಸೋಲನ್ನು ಒಪ್ಪದೆ ಗೆಲುವಿಗಾಗಿ ಹೋರಾಡುವಿರಿ. ದಿಟ್ಟತನದಿಂದ ಒತ್ತಡದ ಸನ್ನಿವೇಶವನ್ನು ಎದುರಿಸುವಿರಿ. ದುರಾಸೆಗೆ ಒಳಗಾಗದೆ ಅಲ್ಪ ತೃಪ್ತಿಗೆ ಸಂತಸ ಪಡುವಿರಿ. ಹಣಕಾಸಿನ ವಿಚಾರವನ್ನು ರಹಸ್ಯವಾಗಿ ನಿರ್ವಹಿಸುವಿರಿ. ಖರ್ಚು ವೆಚ್ಚಗಳನ್ನು ಕಡಿಮೆ ಮಾಡಿ. ನಿಮ್ಮ ಮನಸ್ಸಿಗೆ ಸಂತೋಷವೆನಿಸುವ ವರ್ತಮಾನವೊಂದು ದೊರೆಯಲಿದೆ. ನಡೆಯಬೇಕಿದ್ದ ಮಂಗಳ ಕಾರ್ಯವನ್ನು ಮುಂದೂಡಬೇಕಾಗುತ್ತದೆ. ಕಷ್ಟಕರ ಸಮಯದಲ್ಲಿಯೂ ಗೆಲ್ಲುವ ತಂತ್ರ ತಿಳಿದಿರುತ್ತದೆ. ಕುಟುಂಬದಲ್ಲಿ ಪರಸ್ಪರ ಸಾಮರಸ್ಯ ಇರಲಿದೆ. ಉದ್ಯೋಗವನ್ನು ಬದಲಿಸುವ ನಿರ್ಧಾರವನ್ನು ಕೈಬಿಡುವಿರಿ. ಸಂಗಾತಿಯು ತೆಗೆದುಕೊಳ್ಳುವ ತೀರ್ಮಾನವೊಂದು ಮುಜುಗರ ಉಂಟುಮಾಡಲಿದೆ.
ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಬಿಸಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಹಾಲಿನ ಬಣ್ಣ
ವೃಶ್ಚಿಕ
ಕುಟುಂಬದ ಬಹುಮುಖ್ಯ ಕೆಲಸಗಳನ್ನು ಮಾತ್ರ ಮಾಡುವಿರಿ. ಮನದಲ್ಲಿರುವ ಆಸೆ ಆಕಾಂಕ್ಷೆಗಳನ್ನು ಸುಲಭವಾಗಿ ಯಾರಲ್ಲಿಯೂ ಹೇಳಿಕೊಳ್ಳುವುದಿಲ್ಲ. ನೋವನ್ನು ನುಂಗಿ ಸಂತೋಷವನ್ನು ಹಂಚುವಿರಿ. ಉದ್ಯೋಗದಲ್ಲಿ ಯಾವುದೇ ರೀತಿಯ ಬದಲಾವಣೆಗಳು ಉಂಟಾಗುವುದಿಲ್ಲ. ಮನದಲ್ಲಿನ ಬೇಸರವನ್ನು ದೂರ ಮಾಡಲು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವಿರಿ. ಭೂ ವ್ಯವಹಾರದಲ್ಲಿ ಬಂಡವಾಳ ತೊಡಗಿಸುವಿರಿ. ದೂರವಾದ ಸಂಬಂಧಗಳನ್ನು ಮತ್ತೊಮ್ಮೆ ಬೆಸೆಯುವ ತಂತ್ರ ರೂಪಿಸುವಿರಿ. ನಿಮ್ಮ ಸ್ವಂತ ಕೆಲಸ ಕಾರ್ಯಗಳನ್ನು ಮನಸ್ಸಿಗೆ ಒಪ್ಪುವಂತೆ ಮಾರ್ಪಾಡು ಮಾಡುವಿರಿ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಬೇಗನೆ ಕೋಪ ಬಂದರು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಲ್ಲಿರಿ.
ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಹೊಗೆಯ ಬಣ್ಣ
-------------
ಜ್ಯೋತಿಷಿ: ಎಚ್. ಸತೀಶ್, ಬೆಂಗಳೂರು
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ವಿಭಾಗ