ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಉತ್ತಮ ಆದಾಯವಿದ್ದರೂ ಹಣದ ಕೊರತೆ, ಹಠದ ಸ್ವಭಾವ ಇರುತ್ತೆ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ

Horoscope Today: ಉತ್ತಮ ಆದಾಯವಿದ್ದರೂ ಹಣದ ಕೊರತೆ, ಹಠದ ಸ್ವಭಾವ ಇರುತ್ತೆ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ

11 ಜೂನ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (11th June 2024 Horoscope).

ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ದಿನ ಭವಿಷ್ಯ ತಿಳಿಯಿರಿ
ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ದಿನ ಭವಿಷ್ಯ ತಿಳಿಯಿರಿ

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (11th June 2024 Horoscope)

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಮಂಗಳವಾರ

ತಿಥಿ: ಪಂಚಮಿ ಸಾ. 05.29 ರವರೆಗೂ ಇರುತ್ತದೆ. ಆನಂತರ ಷಷ್ಠಿ ಆರಂಭವಾಗುತ್ತದೆ.

ನಕ್ಷತ್ರ: ಆಶ್ಲೇಷ ನಕ್ಷತ್ರವು ರಾ. 12.08 ರವರೆಗು ಇರುತ್ತದೆ. ಆನಂತರ ಮಖ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.45

ರಾಹುಕಾಲ: ಹ. 03.35 ರಿಂದ ಸ. 05.11

ಮೇಷ ರಾಶಿ

ಹಠದ ಸ್ವಭಾವ ಇರುತ್ತದೆ. ಏಕಾಗ್ರತೆಯಿಂದ ಆರಂಭಿಸಿದ ಕೆಲಸಗಳನ್ನು ಯಶಸ್ವಿಗೊಳಿಸುವಿರಿ. ನಿಮ್ಮ ತಾಯಿಯವರು ಆತ್ಮೀಯರಿಗೆ ಹಣದ ಸಹಾಯ ಮಾಡುತ್ತಾರೆ. ಆದಾಯಕ್ಕೆ ಕೊರತೆ ಇರುವುದಿಲ್ಲ. ಆದರೆ ಅತಿಯಾದ ಕೋಪ ಮನಸ್ಸಿನ ನೆಮ್ಮದಿಯನ್ನು ಹಾಳು ಮಾಡುತ್ತದೆ. ಯುವಕ ಯುವತಿಯರಿಗೆ ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ಸಮಾಜದ ಗಣ್ಯ ವ್ಯಕ್ತಿಗಳ ಸಹಾಯ ಸಹಕಾರ ದೊರೆಯಲಿದೆ. ವಿದ್ಯಾರ್ಥಿಗಳು ತಮ್ಮ ಗುರಿ ತಲುಪಲು ಹೆಚ್ಚು ಪ್ರಯತ್ನ ಪಡಬೇಕು. ವಿದ್ಯೆಗೆ ತಕ್ಕಂತಹ ಉದ್ಯೋಗ ದೊರೆಯಲಿದೆ. ಸಮಾಜದಲ್ಲಿ ಉನ್ನತ ಸ್ಥಾನಮಾನ ದೊರೆಯುತ್ತದೆ.

ಪರಿಹಾರ: ತಲೆಗೆ ಹಾಲಲ್ಲಿಟ್ಟು ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ರಕ್ತದ ಕೆಂಪು

ವೃಷಭ ರಾಶಿ

ಸಂಗಾತಿಯು ಅಧಿಕ ದೇಹದ ತೂಕದಿಂದ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ನಿಮಗೆ ಬಿಡುವಿಲ್ಲದ ಕೆಲಸ ಕಾರ್ಯಗಳು ಇರುತ್ತವೆ. ಹೆಚ್ಚಿನ ಪ್ರಯತ್ನವಿದ್ದರೂ ಸಾಧಾರಣ ಫಲ ಪಡೆಯುವಿರಿ. ವಾಹನ ಚಲಾಯಿಸುವ ವೇಳೆ ಎಚ್ಚರಿಕೆ ಇರದಿದ್ದರೆ ದಂಡ ತೆರಬೇಕಾಗುವುದು. ಸಾಕುಪ್ರಾಣಿಗಳಿಂದ ತೊಂದರೆ ಉಂಟಾಗುತ್ತದೆ. ನಿಮ್ಮಿಂದ ಸೋದರನ ಜೀವನದಲ್ಲಿ ಪ್ರಗತಿ ಕಂಡುಬರುತ್ತದೆ. ಕಷ್ಟದ ವೇಳೆಯಲ್ಲಿಯೂ ಭಯಪಡದೆ ಸರಿಯಾದ ತೀರ್ಮಾನಗಳನ್ನು ತೆಗೆದುಕೊಳ್ಳುವಿರಿ. ಕುಟುಂಬದ ಮತ್ತು ನೆರೆಹೊರೆಯವರ ವಿಶ್ವಾಸವನ್ನು ಗಳಿಸುವಿರಿ. ಹಣಕಾಸಿನ ವ್ಯವಹಾರಗಳ ವಿಚಾರದಲ್ಲಿ ನಿಮ್ಮ ತಾಯಿಯವರ ಸಲಹೆ ಪಾಲಿಸುವಿರಿ. ಸಾಲ ಅಥವಾ ಸಹಾಯವಾಗಿ ಯಾರಿಂದಲೂ ಹಣವನ್ನು ಪಡೆಯುವುದಿಲ್ಲ.

ಪರಿಹಾರ: ಹಣೆಯಲ್ಲಿ ತಿಲಕವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಎಲೆಹಸಿರು

ಮಿಥುನ ರಾಶಿ

ಉದ್ಯೋಗದಲ್ಲಿನ ನಿಮ್ಮ ಕಾರ್ಯ ವೈಖರಿಯನ್ನು ಹಿರಿಯ ಅಧಿಕಾರಿಗಳು ಮೆಚ್ಚುತ್ತಾರೆ. ವಾಹನವೊಂದು ಉಡುಗೊರೆಯಾಗಿ ದೊರೆಯುತ್ತದೆ. ಹಣಕಾಸಿನ ತೊಂದರೆ ಇರುವುದಿಲ್ಲ. ತಾಯಿಯವರಿಗೆ ಅನಾರೋಗ್ಯವಿರುತ್ತದೆ. ಉದ್ಯೋಗಕ್ಕೆ ನೀಡುವಷ್ಟೇ ಪ್ರಾಮುಖ್ಯತೆಯನ್ನು ಸ್ವಂತ ಕೆಲಸ ಕಾರ್ಯಗಳು ನೀಡುವಿರಿ. ಕುಟುಂಬದ ಹೊರಗಿನವರನ್ನು ಪ್ರೀತಿ ವಿಶ್ವಾಸದಿಂದ ಕಾಣುವಿರಿ. ಸ್ಥಿರವಾದ ಮನಸ್ಥಿತಿ ಇರುವುದಿಲ್ಲ. ಬಿಡುವಿನ ವೇಳೆ ಬೇರೆಯವರಿಗೆ ಸಹಾಯ ಮಾಡುವಿರಿ. ದಾಂಪತ್ಯದಲ್ಲಿ ವಿಶೇಷವಾದಂತಹ ಪ್ರೀತಿ ವಿಶ್ವಾಸ ಮನೆ ಮಾಡಿರುತ್ತದೆ. ಬಿಡುವಿನ ವೇಳೆ ಸಮಾಜಸೇವೆ ಮಾಡುವಿರಿ. ಕುಟುಂಬದ ಸ್ತ್ರೀಯರಿಗೆ ಅನಾವಶ್ಯಕ ಚಿಂತೆ ಇರುತ್ತದೆ. ಅನಿರೀಕ್ಷಿತ ಧನ ಲಾಭವಿರುತ್ತದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ. .

ಅದೃಷ್ಟದ ಸಂಖ್ಯೆ: 9

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಕೇಸರಿ

ಕಟಕ ರಾಶಿ

ಒಮ್ಮೆ ನಿರ್ಧರಿಸಿದ ಕೆಲಸವನ್ನು ಅಗತ್ಯವಾಗಿ ಮಾಡುವಿರಿ. ಗೌರವ ಪ್ರತಿಷ್ಠೆಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧರಾಗುವಿರಿ. ನಿಮ್ಮ ತಾಯಿಯ ಧೈರ್ಯದ ಗುಣ ನಿಮಗೆ ದಾರಿದೀಪವಾಗುತ್ತದೆ. ಉತ್ತಮ ಆದಾಯವಿದ್ದರೂ ಹಣದ ಕೊರತೆ ನಿಮ್ಮನ್ನು ಕಾಡುತ್ತದೆ. ವಯೋವೃದ್ದರೂ ದೂರದ ಸಂಬಂಧಿಕರನ್ನು ಭೇಟಿ ಮಾಡುತ್ತಾರೆ. ಹಿರಿಯರ ಆರೋಗ್ಯದಲ್ಲಿ ಸ್ಥಿರತೆ ಲಭಿಸುತ್ತದೆ. ನಿಮ್ಮ ಯಶಸ್ಸನ್ನು ತಾಳದ ವಿರೋಧಿಗಳು ತೊಂದರೆಗಳನ್ನು ಸೃಷ್ಟಿಸುತ್ತಾರೆ. ಸೋದರನಿಗೆ ಅನಾರೋಗ್ಯ ವಿರುತ್ತದೆ. ಕಣ್ಣುಅಥವಾ ಎದೆ ಉರಿತದ ತೊಂದರೆ ನಿಮ್ಮನ್ನು ಕಾಡುತ್ತದೆ. ನೀರಿರುವ ಪ್ರದೇಶಗಳಲ್ಲಿ ತೊಂದರೆ ಇರುತ್ತದೆ ಎಚ್ಚರವಿರಲಿ.

ಪರಿಹಾರ: ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)