ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಕುಟುಂಬದಲ್ಲಿ ಸಂತೋಷದ ವಾತಾವರಣ, ಮಕ್ಕಳಲ್ಲಿ ಸೋಮಾರಿತ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ

Horoscope Today: ಕುಟುಂಬದಲ್ಲಿ ಸಂತೋಷದ ವಾತಾವರಣ, ಮಕ್ಕಳಲ್ಲಿ ಸೋಮಾರಿತ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ

11 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (11th May 2024 Daily Horoscope).

ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ದಿನ ಭವಿಷ್ಯ
ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ದಿನ ಭವಿಷ್ಯ

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (11th May 2024 Horoscope)

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯನ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಶನಿವಾರ

ತಿಥಿ: ಚೌತಿ ರಾ. 04.10 ರವರೆಗು ಇರುತ್ತದೆ. ಆನಂತರ ಪಂಚಮಿ ಆರಂಭವಾಗುತ್ತದೆ.

ನಕ್ಷತ್ರ: ಮೃಗಶಿರ ನಕ್ಷತ್ರವು ಹ. 12.15 ರವರೆಗು ಇರುತ್ತದೆ. ಆನಂತರ ಆರ್ದ್ರೆ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 5.54

ಸೂರ್ಯಾಸ್ತ: ಸಂಜೆ 6.35

ರಾಹುಕಾಲ: ಬೆಳಗ್ಗೆ 9.09 ರಿಂದ ಬೆ.10.44

ಮೇಷ ರಾಶಿ

ಒಳ್ಳೆಯ ಭಾವನೆಯಿಂದ ದಿನವನ್ನು ಆರಂಭಿಸುವಿರಿ. ಪ್ರಸಕ್ತ ಸನ್ನಿವೇಶಕ್ಕೆ ಹೊಂದಿಕೊಂಡು ಜೀವನದ ರೀತಿಯನ್ನು ಬದಲಿಸುವಿರಿ. ಎಲ್ಲರಲ್ಲಿಯೂ ಸಹಕಾರದ ಮನೋಭಾವನೆ ತೋರುವಿರಿ. ಹೊಸ ಮನೆಯನ್ನು ಕೊಳ್ಳಲು ಯೋಚನೆ ಮಾಡುವಿರಿ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಬದಲಿಸುವುದಿಲ್ಲ. ಉದ್ಯೋಗದ ಕ್ಷೇತ್ರದಲ್ಲಿನ ಬದಲಾವಣೆಗಳಿಗೆ ಹೊಂದುಕೊಂಡು ನಡೆಯುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಹಿನ್ನೆಡೆ ಉಂಟಾಗಲಿದೆ. ಷೇರು ಮಾರುಕಟ್ಟೆಯಿಂದ ಹಣ ಗಳಿಸುವಿರಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಆಶಾಭಾವನೆ ಇರುತ್ತದೆ.

ಪರಿಹಾರ: ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ವೃಷಭ ರಾಶಿ

ನಿಮ್ಮ ಮನಸ್ಸಿಗೆ ಸರಿ ಎನಿಸುವ ಕೆಲಸ ಕಾರ್ಯಗಳನ್ನು ಮಾಡಲಿಚ್ಚಿಸುವಿರಿ. ನಂಬಿದವರ ಆಸೆ ಆಕಾಂಕ್ಷೆಗಳನ್ನು ಪೂರೈಸಲು ಪ್ರಯತ್ನಿಸುವಿರಿ. ಉದ್ಯೋಗದಲ್ಲಿಎಲ್ಲರ ಜೊತೆ ಸ್ನೇಹದಿಂದ ನಡೆದುಕೊಳ್ಳುವಿರಿ. ಸರಳ ಜೀವನವನ್ನು ಇಷ್ಟಪಡುವಿರಿ. ಅವಶ್ಯಕತೆಗೆ ತಕ್ಕಂತೆ ಹಣವನ್ನು ಖರ್ಚು ಮಾಡುವಿರಿ. ಆತ್ಮೀಯರಿಂದ ಹಣದ ಸಹಾಯ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಲಾಭ ಇರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ದೊರೆಯುತ್ತದೆ. ಆತ್ಮವಿಶ್ವಾಸದಿಂದ ವಿವಾದದಿಂದ ಪಾರಾಗುತ್ತೀರಿ. ಸಂಗಾತಿಯ ಜೊತೆಯಲ್ಲಿ ವಿದೇಶ ಪ್ರಯಾಣ ಮಾಡುವಿರಿ. ಆತುರದ ತೀರ್ಮನ ತೆಗೆದುಕೊಳ್ಳದಿರಿ.

ಪರಿಹಾರ: ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಮಿಥುನ ರಾಶಿ

ಕೆಲಸವನ್ನು ಬದಲಾಯಿಸುವ ನಿರ್ಧಾರದಿಂದಲೇ ದಿನವನ್ನು ಆರಂಭಿಸುವಿರಿ. ಅನಾವಶ್ಯಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವಿರಿ. ಸಮಾಧಾನಕರ ಆದಾಯ ಇರುತ್ತದೆ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ನೆಲೆಸಿರುತ್ತದೆ. ಉದ್ಯೋಗದಲ್ಲಿ ಆರೋಗ್ಯಕರ ಬದಲಾವಣೆಗಳು ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳ ಆದಾಯದಲ್ಲಿ ಕೊರತೆ ಉಂಟಾಗುತ್ತದೆ. ವಿದ್ಯಾರ್ಥಿಗಳಿಗೆ ದ್ವಂದ್ವ ಮನಸ್ಸಿರುತ್ತದೆ. ಮನದಲ್ಲಿ ಆತಂಕವಿದ್ದರೂ ಕಲಿಕೆಯಲ್ಲಿ ಹಿಂದೆ ಉಳಿಯುವುದಿಲ್ಲ. ಏಕಾಂಗಿತನವನ್ನು ಬಯಸುವಿರಿ. ಮಕ್ಕಳ ಜೊತೆಯಲ್ಲಿ ಕಿರು ಪ್ರವಾಸ ಕೈಗೊಳ್ಳುವಿರಿ. ಅವಿವಾಹಿತರಿಗೆ ವಿವಾಹವಾಗುವ ಯೋಗವಿದೆ. ಸಮಾಜದಲ್ಲಿ ಉತ್ತಮ ಗೌರವ ದೊರೆಯುತ್ತದೆ.

ಪರಿಹಾರ: ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 9

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಕಟಕ ರಾಶಿ

ಎಲ್ಲರನ್ನೂ ಒಂದೇ ದೃಷ್ಠಿಯಲ್ಲಿ ನೋಡುವ ಬುದ್ಧಿ ನಿಮ್ಮಲ್ಲಿ ಇರುತ್ತದೆ. ಕುಟುಂಬದಲ್ಲಿ ಸುಖ ಸಂತೋಷದ ವಾತಾವರಣ ಕಂಡುಬರುತ್ತದೆ. ಸೋಮಾರಿತನ ನಿಮ್ಮ ಮಕ್ಕಳನ್ನು ಕಾಡಲಿದೆ. ಸದಾ ಕಾಲ ಯಾವುದಾರೊಂದು ಕೆಲಸ ಕಾರ್ಯಗಳನ್ನು ಮಾಡುತ್ತಲೇ ಇರುವಿರಿ. ಉದ್ಯೋಗದಲ್ಲಿ ಅತಿ ಮುಖ್ಯವಾದ ಬದಲಾವಣೆ ಕಾಣಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಪ್ರಗತಿ ಕಂಡು ಬರುತ್ತದೆ. ವಿದ್ಯಾರ್ಥಿಗಳು ಛಲದಿಂದ ವಿದ್ಯಾಭ್ಯಾಸದಲ್ಲಿ ಮುಂದುವರೆಯುತ್ತಾರೆ. ಸಂತಾನ ಲಾಭವಿದೆ. ಆತ್ಮೀಯರ ಜೀವನದ ಉನ್ನತಿಗೆ ಕಾರಣರಾಗುವಿರಿ. ಹೆಣ್ಣುಮಕ್ಕಳಿಗೆ ಬೆಳೆಬಾಳುವ ಉಡುಗೊರೆಗಳು ಲಭಿಸುತ್ತದೆ.

ಪರಿಹಾರ: ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).