Horoscope Today: ಅವಿವಾಹಿತರಿಗೆ ವಿವಾಹ ಯೋಗ, ಭೂ ವಿವಾದದಲ್ಲಿ ಜಯಗಳಿಸುವಿರಿ; ಧನು, ಮಕರ, ಕುಂಭ, ಮೀನ ರಾಶಿಯರ ದಿನ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಅವಿವಾಹಿತರಿಗೆ ವಿವಾಹ ಯೋಗ, ಭೂ ವಿವಾದದಲ್ಲಿ ಜಯಗಳಿಸುವಿರಿ; ಧನು, ಮಕರ, ಕುಂಭ, ಮೀನ ರಾಶಿಯರ ದಿನ ಭವಿಷ್ಯ

Horoscope Today: ಅವಿವಾಹಿತರಿಗೆ ವಿವಾಹ ಯೋಗ, ಭೂ ವಿವಾದದಲ್ಲಿ ಜಯಗಳಿಸುವಿರಿ; ಧನು, ಮಕರ, ಕುಂಭ, ಮೀನ ರಾಶಿಯರ ದಿನ ಭವಿಷ್ಯ

11 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (11th May 2024 Daily Horoscope).

ಧನು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ
ಧನು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (11th May 2024 Horoscope)

ಇಂದಿನ ಪಂಚಾಂಗ

ಶ್ರೀಕ್ರೋಧಿನಾಮ ಸಂವತ್ಸರ-ಉತ್ತರಾಯನ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಶನಿವಾರ

ತಿಥಿ: ಚೌತಿ ರಾ. 04.10 ರವರೆಗು ಇರುತ್ತದೆ. ಆನಂತರ ಪಂಚಮಿ ಆರಂಭವಾಗುತ್ತದೆ.

ನಕ್ಷತ್ರ: ಮೃಗಶಿರ ನಕ್ಷತ್ರವು ಹ. 12.15 ರವರೆಗು ಇರುತ್ತದೆ. ಆನಂತರ ಆರ್ದ್ರೆ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 5.54

ಸೂರ್ಯಾಸ್ತ: ಸಂಜೆ 6.35

ರಾಹುಕಾಲ: ಬೆಳಗ್ಗೆ 9.09 ರಿಂದ ಬೆ.10.44

ಧನಸ್ಸು ರಾಶಿ

ನಿಮ್ಮದಲ್ಲದ ಜವಾಬ್ದಾರಿಗಳನ್ನು ಒಪ್ಪಿಕೊಳ್ಳುವಿರಿ. ಕೆಲಸ ಕಾರ್ಯಗಳ ನಡುವೆ ವಿಶ್ರಾಂತಿಯನ್ನು ಮರೆಯುವುದಿಲ್ಲ. ಬಹು ಮುಖ್ಯವಾದ ತಿರುವೊಂದು ಕುಟುಂಬದಲ್ಲಿ ಗೋಚರಿಸುತ್ತದೆ. ಕುಟುಂಬದಲ್ಲಿ ಸಹಾಯ ಸಹಕಾರ ಸದಾ ನಿಮಗೆ ದೊರೆಯಲಿದೆ. ಉದ್ಯೋಗದಲ್ಲಿ ಬದಲಾವಣೆಯೊಂದು ನಿಮ್ಮ ವ್ಯಕ್ತಿತ್ವವನ್ನು ಬದಲಿಸುತ್ತದೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳು ಒತ್ತಡವನ್ನು ಮರೆತು ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ತಾಯಿಯವರ ಆರೋಗ್ಯದಲ್ಲಿ ಏರಿಳಿತ ಉಂಟಾಗಬಹುದು. ಹಣದ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ.

ಪರಿಹಾರ: ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಮಕರ ರಾಶಿ

ಅನರ್ಥದ ಮಾತಿನಿಂದಾಗಿ ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗಲಿವೆ. ಆದಾಯದಲ್ಲಿ ದಿಢೀರ್ ಹೆಚ್ಚಳ ಕಂಡುಬರುತ್ತದೆ. ಕ್ರಿಯಾಶೀಲತೆಯಿಂದ ಜೀವನದಲ್ಲಿ ಅಭಿವೃದ್ಧಿಯನ್ನು ಗಳಿಸುವಿರಿ. ಮಕ್ಕಳು ಹೊಂದಾಣಿಕೆಯ ಬುದ್ದಿಯನ್ನು ಬೆಳೆಸಿಕೊಳ್ಳುವುದು ಒಳ್ಳೆಯದು. ಹೆಚ್ಚಿನ ಪ್ರಯತ್ನದಿಂದ ಮಾತ್ರ ಕೆಲಸವನ್ನು ಪೂರ್ಣಗೊಳಿಸುವಿರಿ. ಉದ್ಯೋಗದಲ್ಲಿ ಯಾವುದೇ ತೊಂದರೆ ಎದುರಾಗದು. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ನಷ್ಟವಾಗುವುದಿಲ್ಲ. ವ್ಯವಸಾಯದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಭೂ ವಿವಾದದಲ್ಲಿ ಜಯಗಳಿಸುವಿರಿ. ಆತ್ಮೀಯರಿಗೆ ಹೊಸ ಬಟ್ಟೆಯನ್ನು ಉಡುಗೊರೆಯಾಗಿ ನೀಡುವಿರಿ.

ಪರಿಹಾರ: ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಬೂದು ಬಣ್ಣ

ಕುಂಭ ರಾಶಿ

ಶಾಂತಿ ಸಂಯಮದಿಂದ ಬಾಳುವುದು ಒಳ್ಳೆಯದು. ಕುಟುಂಬದಲ್ಲಿ ಅಸಮಾಧಾನದ ವಾತಾವರಣ ತುಂಬಿರುತ್ತದೆ. ಉದ್ಯೋಗದಲ್ಲಿ ಯಶಸ್ಸು ದೊರೆಯುತ್ತದೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ನಷ್ಟವಾಗದು. ಯಂತ್ರೋಪಕರಣಗಳ ಅಥವಾ ವಾಹನಗಳ ವ್ಯಾಪಾರದಲ್ಲಿ ವಿಶೇಷ ಹಣಗಳಿಕೆ ಕಂಡುಬರುತ್ತದೆ. ಕಲಾವಿದರಿಗೆ ಸುಖಮಯ ಜೀವನ ಇರುತ್ತದೆ. ದೊರೆವ ಅವಕಾಶಗಳನ್ನು ಸರಿಯಾಗಿ ಬಳಸಬೇಕು. ಪಾಲುಗಾರಿಕೆ ವ್ಯಾಪಾರವನ್ನು ಆರಂಭಿಸಿ ಯಶಸ್ಸನ್ನು ಗಳಿಸುವಿರಿ. ಕಮಿಷನ್ ಆಧಾರಿತ ವೃತ್ತಿ ಬಲು ಸೂಕ್ತ. ಸದರಿ ಇರುವ ಮನೆಯನ್ನು ಬದಲಾಯಿಸುವಿರಿ. ಮನೆ ಕಟ್ಟಲು ಬೇಕಾದ ಪರಿಕರಗಳ ಸರಬರಾಜಿನಲ್ಲಿ ಉತ್ತಮ ವರಮಾನ ಇರುತ್ತದೆ.

ಪರಿಹಾರ: ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 9

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

ಮೀನ ರಾಶಿ

ದೇಹದಲ್ಲಿ ನೀರಿನ ಅಂಶ ಹೆಚ್ಚಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಕುಟುಂಬದಲ್ಲಿ ಉತ್ತಮ ಬಾಂಧವ್ಯ ಉಂಟಾಗುವ ಸಾಧ್ಯತೆಗಳು ಇವೆ. ತಪ್ಪು ಮಾಹಿತಿ ಯಿಂದಾಗಿ ಸೋದರರ ಜೊತೆಯಲ್ಲಿ ವಾಗ್ವಾದ ಉಂಟಾಗುತ್ತದೆ. ಅರಮನೆಸ್ಸಿನಿಂದ ಆರಂಭಿಸಿದ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಗಳಿಸುತ್ತಾರೆ. ಬೇರೆಯವರ ಮನಸ್ಸಿಗೆ ನೋವಾಗದಂತೆ ಮಾತನಾಡುವುದು ಸೂಕ್ತ. ವ್ಯಾಪಾರ ವ್ಯವಹಾರದಲ್ಲಿ ಆಕಸ್ಮಿಕ ಧನ ಲಾಭವಿದೆ. ಬರವಣಿಗೆಯಲ್ಲಿ ಉತ್ತಮ ಯಶಸ್ಸನ್ನು ಕಾಣುವಿರಿ. ಕಲಾವಿದರು ವಿದೇಶ ಸುತ್ತಿ ಬರುತ್ತಾರೆ. ವಂಶಾನುಗತವಾಗಿ ಬಂದ ವಿದ್ಯೆಯೊಂದು ಅನುಕೂಲಕ್ಕೆ ಬರಲಿದೆ. ಅವಿವಾಹಿತರಿಗೆ ವಿವಾಹ ಯೋಗವಿದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 7

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಕೇಸರಿಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.