ಕನ್ನಡ ಸುದ್ದಿ  /  Astrology  /  Horoscope Today Astrology Prediction 12 March 2024 Leo Virgo Libra Scorpio Daily Horoscope Sts

Horoscope Today: ಆರ್ಥಿಕ ಪರಿಸ್ಥಿತಿಯಲ್ಲಿ ಪ್ರಗತಿ, ಸೋಲನ್ನು ಗೆಲುವಾಗಿ ಪರಿವರ್ತಿಸುವಿರಿ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

ಮಾರ್ಚ್​ 12, ಮಂಗಳವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (12 March 2024 Daily Horoscope).

ಮಾರ್ಚ್​ 12ರ ದಿನಭವಿಷ್ಯ
ಮಾರ್ಚ್​ 12ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (12 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಮಂಗಳವಾರ

ತಿಥಿ : ಬಿದಿಗೆ ಬೆ.10.37ರವರೆಗು ಇದ್ದು ಆನಂತರ ತದಿಗೆ ಆರಂಭವಾಗುತ್ತದೆ.

ನಕ್ಷತ್ರ : ರೇವತಿ ನಕ್ಷತ್ರವು ರಾ.12.26 ರವರೆಗೆ ಇರುತ್ತದೆ. ಆನಂತರ ಅಶ್ವಿನಿ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.29

ಸೂರ್ಯಾಸ್ತ: ಸ.06.29

ರಾಹುಕಾಲ : ಬೆ. 03.00 ರಿಂದ ಮ.04.30

ರಾಶಿ ಫಲಗಳು

ಸಿಂಹ

ವಿಶ್ರಾಂತಿಯೇ ಇಲ್ಲದೆ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕಾಗುತ್ತದೆ. ಹಠದ ಗುಣದಿಂದಾಗಿ ಆತ್ಮೀಯರ ಬೇಸರ ಎದುರಿಸಬೇಕಾಗುತ್ತದೆ. ಉತ್ತಮ ಆರೋಗ್ಯವಿರುತ್ತದೆ. ಬೇರೆ ದಾರಿ ಇಲ್ಲದೆ ಆತ್ಮೀಯರಿಗೆ ಹಣದ ಸಹಾಯ ಮಾಡುವಿರಿ. ಅನಿರೀಕ್ಷಿತ ಖರ್ಚು ವೆಚ್ಚಗಳಿಂದ ಹಣದ ಕೊರತೆ ಉಂಟಾಗಲಿದೆ. ಅನಿವಾರ್ಯವಾಗಿ ಕೂಡಿಟ್ಟ ಹಣವನ್ನು ಖರ್ಚು ಮಾಡುವಿರಿ. ಮಕ್ಕಳ ಆಶೋತ್ತರಗಳನ್ನು ಪೂರೈಸಲು ಹೆಚ್ಚಿನ ಹಣದ ಅವಶ್ಯಕತೆ ಇರಲಿದೆ. ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ ರೂಪುಗೊಳ್ಳಲಿದೆ. ಜೀವನದಲ್ಲಿ ಮರೆಯಲಾಗದ ಒಳ್ಳೆಯ ಘಟನೆ ಸಂಭವಿಸಲಿದೆ. ಉದ್ಯೋಗವನ್ನು ಬದಲಾಯಿಸುವ ಆಶಯ ವ್ಯಕ್ತಪಡಿಸುವಿರಿ. ವಾದ ವಿವಾದಗಳಿಗೆ ಎದುರಾಗದೆ ಎಲ್ಲರೊಂದಿಗೆ ಶಾಂತಿ ಸಂಯಮದಿಂದ ವರ್ತಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಎಳನೀರು ಮತ್ತು ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ :5

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಹಾಲಿನ ಬಣ್ಣ

ಕನ್ಯಾ

ನಿಮ್ಮಲ್ಲಿನ ಹಸನ್ಮುಖ ಎಲ್ಲರಲ್ಲಿಯೂ ಹೊಸ ಆಸೆಯನ್ನು ಉಂಟುಮಾಡುತ್ತದೆ. ವಿರೋಧಿಗಳು ನಿಮ್ಮ ಸ್ನೇಹಿತರಂತೆ ಬಾಳುತ್ತಾರೆ. ಒಮ್ಮೆ ತೆಗೆದುಕೊಂಡ ತೀರ್ಮಾನವನ್ನು ಬದಲಿಸದಿರಿ. ಮಾಡದ ತಪ್ಪನ್ನು ಒಪ್ಪಿಕೊಳ್ಳುವುದಿಲ್ಲ. ಸಣ್ಣಪುಟ್ಟ ತಪ್ಪಿಗೂ ಬೇರೆಯವರನ್ನು ಟೀಕಿಸುವಿರಿ. ಯಾವುದೇ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ. ಉದ್ಯೋಗದಲ್ಲಿನ ಕೆಲಸ ಕಾರ್ಯಗಳು ಸುಲಭವಾಗಿ ಪೂರ್ಣಗೊಳ್ಳಲಾರದು. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯವಿರುತ್ತದೆ. ಸ್ವತಂತ್ರವಾಗಿ ಯಾವುದೇ ಕೆಲಸವನ್ನು ಕೆಲಸ ಕಾರ್ಯಗಳನ್ನು ನಿರ್ವಹಿಸಬಲ್ಲಿರಿ. ಸಂಗಾತಿ ಮತ್ತು ಮಕ್ಕಳ ಜೊತೆ ಸಂತೋಷದಿಂದ ಇರಲು ಸಮಯ ನೀಡುವಿರಿ. ಆದಾಯವನ್ನು ಹೆಚ್ಚಿಸಿಕೊಳ್ಳಲು ವಂಶಾನುಗತವಾದ ಕೆಲಸವನ್ನು ಆವಲಂಭಿಸುವಿರಿ. ಮಕ್ಕಳ ವಿವಾಹಕ್ಕೆ ತಯಾರಿ ನಡೆಸುವಿರಿ.

ಪರಿಹಾರ : ತಾಯಿಯವರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ತುಲಾ

ಬೇರೆಯವರ ಮನಸ್ಸನ್ನು ನೋಯಿಸದೆ ನಡೆದುಕೊಳ್ಳಿ. ಕುಟುಂಬದಲ್ಲಿ ನಿಮ್ಮ ನಿರ್ಧಾರಕ್ಕೆ ಎಲ್ಲರ ಸಮ್ಮತಿ ದೊರೆಯುತ್ತದೆ. ಮಾಡಿದ ತಪ್ಪನ್ನು ಒಪ್ಪುವ ಕಾರಣ ಎಲ್ಲರ ಸಹಕಾರ ದೊರೆಯುತ್ತದೆ. ಸಣ್ಣಪುಟ್ಟ ನಿರಾಸೆಯನ್ನು ತಾಳದೆ ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ಉದ್ಯೋಗದಲ್ಲಿ ಗಡಿಬಿಡಿಯ ವಾತಾವರಣ ಉಂಟಾಗಲಿದೆ. ಅನಿವಾರ್ಯವಾಗಿ ಉದ್ಯೋಗ ಬದಲಿಸುವಿರಿ. ಆರ್ಥಿಕ ಪರಿಸ್ಥಿತಿಯಲ್ಲಿ ಪ್ರಗತಿ ಕಂಡು ಬರುತ್ತದೆ. ಎಲ್ಲರ ಪ್ರೀತಿ ವಿಶ್ವಾಸ ದೊರೆಯಲಿದೆ. ಅವಿವಾಹಿತರಿಗೆ ವಿವಾಹದ ಮಾತುಕತೆ ಆಗಲಿದೆ. ಹಿರಿಯರು ಮತ್ತು ಗೃಹಿಣಿಯರು ಕೆಲಸ ಕಾರ್ಯದ ನಡುವೆಯೂ ವಿಶ್ರಾಂತಿಯನ್ನು ತೆಗೆದುಕೊಳ್ಳಬೇಕು. ವ್ಯಾಪಾರ ವ್ಯವಹಾರಗಳಲ್ಲಿ ಆತ್ಮೀಯರೊಂದಿಗೆ ಅನಿರೀಕ್ಷಿತವಾದ ಒಪ್ಪಂದ ಏರ್ಪಡುತ್ತದೆ.

ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಆಕಾಶ ನೀಲಿ ಬಣ್ಣ

ವೃಶ್ಚಿಕ

ಯಾವುದೇ ಪರಿಸ್ಥಿತಿಯನ್ನು ಧೈರ್ಯವಾಗಿ ಎದುರಿಸುವಿರಿ. ಇದರಿಂದ ಎಲ್ಲರ ಗಮನ ಗಳಿಸುವಿರಿ. ನಗುವಿನ ಮರೆಯಲ್ಲಿಯೇ ಸೋಲನ್ನು ಗೆಲುವಾಗಿ ಪರಿವರ್ತಿಸುವಿರಿ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಿರಲಿ. ಯಾರೋ ಮಾಡಿದ ತಪ್ಪಿಗೆ ನೀವು ಸಂದಿಗ್ದತೆಗೆ ಸಿಲುಕುವಿರಿ. ನಿಮ್ಮದಲ್ಲದ ವಿಚಾರಗಳಿಗೆ ಹಣವನ್ನು ಖರ್ಚು ಮಾಡುವಿರಿ. ಉದ್ಯೋಗದಲ್ಲಿ ಉನ್ನತ ಸ್ಥಾನ ಲಭ್ಯವಾಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಹಠವನ್ನು ಬಿಟ್ಟು ಆತ್ಮೀಯರ ಸಲಹೆ ಒಪ್ಪಿಕೊಳ್ಳಿ. ರಕ್ತಕ್ಕೆ ಸಂಬಂಧಿಸಿದ ತೊಂದರೆ ಇದ್ದಲ್ಲಿ ಎಚ್ಚರಿಕೆಯಿಂದ ಇರಿ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಕಂಡು ಬರುತ್ತದೆ. ಕೆಲಸದ ನಿಮಿತ್ತ ಕುಟುಂಬದ ಜೊತೆ ಬೆರೆಯಲು ಸಾಧ್ಯವಾಗುವುದಿಲ್ಲ. ಸಂಗಾತಿಯ ಸಹಕಾರವಿರುತ್ತದೆ.

ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ರಕ್ತದ ಬಣ್ಣ

--------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).