ಕನ್ನಡ ಸುದ್ದಿ  /  Astrology  /  Horoscope Today Astrology Prediction 12 March 2024 Sagittarius Capricorn Aquarius Pisces Daily Horoscope Sts

Horoscope Today: ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ, ದಂಪತಿಗಳ ನಡುವೆ ಉತ್ತಮ ಬಾಂಧವ್ಯ; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ

ಮಾರ್ಚ್​ 12, ಮಂಗಳವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (12 March 2024 Daily Horoscope).

ಮಾರ್ಚ್​ 12ರ ದಿನಭವಿಷ್ಯ
ಮಾರ್ಚ್​ 12ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (12 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಮಂಗಳವಾರ

ತಿಥಿ : ಬಿದಿಗೆ ಬೆ.10.37ರವರೆಗು ಇದ್ದು ಆನಂತರ ತದಿಗೆ ಆರಂಭವಾಗುತ್ತದೆ.

ನಕ್ಷತ್ರ : ರೇವತಿ ನಕ್ಷತ್ರವು ರಾ.12.26 ರವರೆಗೆ ಇರುತ್ತದೆ. ಆನಂತರ ಅಶ್ವಿನಿ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.29

ಸೂರ್ಯಾಸ್ತ: ಸ.06.29

ರಾಹುಕಾಲ : ಬೆ. 03.00 ರಿಂದ ಮ.04.30

ರಾಶಿ ಫಲಗಳು

ಧನಸ್ಸು

ಆರೋಗ್ಯವನ್ನು ಸರಿಪಡಿಸಿಕೊಳ್ಳಲು ಹಣದ ಅವಶ್ಯಕತೆ ಇರುತ್ತದೆ. ಆಹಾರದ ವಿಚಾರದಲ್ಲಿ ಗಮನ ನೀಡಿದರೆ ಆರೋಗ್ಯದಲ್ಲಿ ಯಾವುದೇ ತೊಂದರೆ ಕಾಣದು. ಹೊಸ ಆಸೆ ಆಕಾಂಕ್ಷೆಗಳಿಂದ ವ್ಯಾಪಾರವನ್ನು ಆರಂಭಿಸುವಿರಿ. ಉದ್ಯೋಗದಲ್ಲಿ ಕೆಲವೊಂದು ಬದಲಾವಣೆಗಳು ಬೇಸರ ಮೂಡಿಸುತ್ತದೆ. ಪರಿಸರಕ್ಕೆ ಹೊಂದಿಕೊಂಡು ನಡೆಯಲೇಬೇಕಾದ ಪರಿಸ್ಥಿತಿ ಎದುರಾಗಲಿದೆ. ಕುಟುಂಬದಲ್ಲಿನ ಒಗ್ಗಟ್ಟು ಮನಸ್ಸಿಗೆ ಸಮಾಧಾನ ನೀಡಲಿದೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ದಂಪತಿಗಳ ನಡುವೆ ಅನಾವಶ್ಯಕ ವಾದ ವಿವಾದಗಳು ಇರಲಿವೆ. ಯಾವುದೇ ವಿಚಾರವಾದರೂ ತೆಗೆದುಕೊಂಡ ನಿರ್ಧಾರವನ್ನು ಬದಲಿಸದಿರಿ. ಹಣಕಾಸಿನ ಕೊರತೆ ಉಂಟಾದಲ್ಲಿ ಎಲ್ಲರ ಮೇಲು ಕೋಪಗೊಳ್ಳುವಿರಿ. ಶಾಂತಿ ಸಹನೆಯಿಂದ ವರ್ತಿಸಿದರೆ ಯಾವುದೇ ತೊಂದರೆ ಎದುರಾಗುವುದಿಲ್ಲ. ಮಕ್ಕಳ ಬೆಂಬಲ ನಿಮಗಿರುತ್ತದೆ.

ಪರಿಹಾರ : ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ.

ಅದೃಷ್ಟದ ಸಂಖ್ಯೆ :9

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ

ಮಕರ

ನಿಮ್ಮ ರೀತಿ ನೀತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗುತ್ತದೆ. ನಿಧಾನ ಗತಿಯ ಕೆಲಸ ನಿರ್ವಹಣೆ ಯಶಸ್ಸನ್ನು ನೀಡಲಿದೆ. ಉದ್ಯೋಗದಲ್ಲಿ ಯಾವುದೇ ತೊಂದರೆ ಕಾಣುವುದಿಲ್ಲ. ಕೆಲಸ ಕಾರ್ಯಗಳನ್ನು ಯಾವುದೇ ವಿವಾದಕ್ಕೆ ಸಿಲುಕದೆ ಪೂರ್ಣಗೊಳಿಸುವಿರಿ. ಆತ್ಮವಿಶ್ವಾಸದ ಕೊರತೆ ಇರುವುದಿಲ್ಲ. ಸದಾ ಒಳ್ಳೆಯದನ್ನೇ ಚಿಂತಿಸುವ ಕಾರಣ ಮಾನಸಿಕ ನೆಮ್ಮದಿ ಇರಲಿದೆ. ಉತ್ತಮ ಪ್ರಯತ್ನದಿಂದಾಗಿ ತಂದೆಯವರಿಗೆ ಸಂಬಂಧಿಸಿದ ಕೆಲಸವೊಂದು ಪೂರ್ಣಗೊಳ್ಳುತ್ತದೆ. ಸಾಲದ ವ್ಯವಹಾರ ಅಸೂಯೆಗೆ ಕಾರಣವಾಗಬಹುದು. ಮಕ್ಕಳ ಜೀವನ ಶೈಲಿ ಹೊಸ ಆಸೆ ಆಕಾಂಕ್ಷಿಗೆ ಬುನಾದಿಯಾಗುತ್ತದೆ. ಮಕ್ಕಳು ಮಾಡುವ ತಪ್ಪನ್ನು ಕ್ಷಮಿಸುತ್ತಾ ಬಾಳುವಿರಿ. ಉದ್ಯೋಗವನ್ನು ಬದಲಿಸಬೇಕಾದ ಸಂದರ್ಭ ಕೂಡಿಬರಲಿದೆ. ಕಷ್ಟದ ಸಂದರ್ಭದಲ್ಲಿ ಸೋದರಿಯಿಂದ ಹಣದ ಸಹಾಯ ದೊರೆಯುತ್ತದೆ.

ಪರಿಹಾರ : ಕೆಂಪು ಬೆಲ್ಲದಿಂದ ಮಾಡಿದ ದ್ರವಾಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ :4

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

ಕುಂಭ

ಅಶಕ್ತರಪರವಾಗಿ ಹೋರಾಟ ಮಾಡುವ ನಿಶ್ಚಯಕ್ಕೆ ಬರುವಿರಿ. ನಿಮ್ಮೆಲ್ಲಾ ಕೆಲಸ ಕಾರ್ಯಗಳಿಗೆ ಕುಟುಂಬದವರ ಸಹಮತವಿರುತ್ತದೆ. ಕಷ್ಟಪಟ್ಟು ದುಡಿದ ಹಣವನ್ನು ಸಮಾಜ ಸೇವೆಯಲ್ಲಿ ತೊಡಗಿಸುವಿರಿ. ಉದ್ಯೋಗದ ಬದಲಾವಣೆಗಳು ನಿಮ್ಮ ಪರವಾಗಿರುತ್ತದೆ. ಸದಾ ಮನದಲ್ಲಿ ಒಳ್ಳೆಯ ಭಾವನೆಗಳು ಮೂಡಲಿವೆ. ಆತ್ಮವಿಶ್ವಾಸದಿಂದ ಯಾವುದೇ ಕೆಲಸವನ್ನು ಸರಿದೂಗಿಸಬಲ್ಲಿರಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ದೊರೆಯಲಿದೆ. ದುಡುಕಿ ಮಾತನಾಡದೆ ಎಲ್ಲರೊಂದಿಗೆ ಸಹನಯಿಂದ ವರ್ತಿಸಿ. ನಿಮ್ಮ ಮನಸ್ಸನ್ನು ಅರಿತುಕೊಳ್ಳಲು ಸಾಧ್ಯವಾಗುವುದಿಲ್ಲ. ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ವಿದೇಶಕ್ಕೆ ತೆರಳಬಹುದು. ಮನೆತನಕ್ಕೆ ಸಂಬಂಧಿಸಿದ ಹಣಕಾಸಿನ ವಿಚಾರದಲ್ಲಿ ಜಯ ಲಭಿಸುತ್ತದೆ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.

ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಮೀನ

ವಯಸ್ಸಿನ ಅಂತರವಿಲ್ಲದೆ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವಿರಿ. ಕುಟುಂಬದಲ್ಲಿ ಆತಂಕದ ವಾತಾವರಣವಿದ್ದರೂ ತೊಂದರೆ ಇರದು. ಉದ್ಯೋಗದ ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಯಶಸ್ಸು ದೊರೆಯಲಿದೆ. ಮನದಲ್ಲಿ ಯಾವುದಾದರೂ ಒಂದು ವಿಚಾರಕ್ಕೆ ಯೋಚನೆ ಇರುತ್ತದೆ. ಅವಶ್ಯಕತೆ ಇದ್ದಲ್ಲಿ ಕುಟುಂಬದ ಸದಸ್ಯರಿಂದ ಹಣದ ಸಹಾಯ ದೊರೆಯುತ್ತದೆ. ಬಂಧು ವರ್ಗದವರ ಒಡಗೂಡಿ ದೀರ್ಘಕಾಲ ಪ್ರವಾಸಕ್ಕೆ ತೆರಳುವಿರಿ. ಒಲ್ಲದ ಮನಸ್ಸಿನಿಂದ ಮಾಡುವ ಕೆಲಸ ಯಶಸ್ವಿಯಾಗಲಿದೆ. ಜನರಿಗೆ ಅನುಕೂಲವಾಗುವಂತಹ ಸೇವಾಧಾರಿತ ವ್ಯವಹಾರವನ್ನು ಆರಂಭಿಸುವಿರಿ. ದಂಪತಿಗಳ ನಡುವೆ ಉತ್ತಮ ಬಾಂಧವ್ಯ ಮರುಕಳಿಸುತ್ತದೆ. ಸಂತಾನ ಲಾಭವಿದೆ. ಮಕ್ಕಳ ಜೀವನದಲ್ಲಿ ಕೆಲವೊಂದು ಅಸ್ವಭಾವಿಕ ಘಟನೆ ನಡೆಯಬಹುದು. ಪ್ರತಿಯೊಂದು ತೊಂದರೆಗೂ ಪರಿಹಾರವನ್ನು ಕಂಡುಹಿಡಿಯಬಲ್ಲಿರಿ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ತಯಾರಿಸಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಕೆಂಪು ಬಣ್ಣ

--------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).