Horoscope Today: ಮಿತಿ ಮೀರಿದ ಖರ್ಚು ವೆಚ್ಚಗಳು ನೆಮ್ಮದಿ ಹಾಳು ಮಾಡಲಿದೆ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಮಿತಿ ಮೀರಿದ ಖರ್ಚು ವೆಚ್ಚಗಳು ನೆಮ್ಮದಿ ಹಾಳು ಮಾಡಲಿದೆ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ

Horoscope Today: ಮಿತಿ ಮೀರಿದ ಖರ್ಚು ವೆಚ್ಚಗಳು ನೆಮ್ಮದಿ ಹಾಳು ಮಾಡಲಿದೆ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ

12 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (12th April 2024 Daily Horoscope).

 ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (12th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಶುಕ್ಲಪಕ್ಷ-ಶುಕ್ರವಾರ

ತಿಥಿ : ಚೌತಿ 05.13 ರವರೆಗೂ ಇರುತ್ತದೆ ನಂತರ ಪಂಚಮಿ ಆರಂಭವಾಗುತ್ತದೆ.

ನಕ್ಷತ್ರ: ರೋಹಿಣಿ ನಕ್ಷತ್ರವು ರಾತ್ರಿ 4.37 ರವರೆಗೂ ಇರುತ್ತದೆ ನಂತರ ಮೃಗಶಿರ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.09

ಸೂರ್ಯಾಸ್ತ: ಸಂಜೆ 06.31

ರಾಹುಕಾಲ: 10.30 ರಿಂದ12.00

ರಾಶಿಫಲ

ಸಿಂಹ

ಕುಟುಂಬದ ಒಮ್ಮತದ ನಿರ್ಧಾರ ಎಲ್ಲರಲ್ಲೂ ನೆಮ್ಮದಿ ಉಂಟುಮಾಡುತ್ತದೆ. ಉದ್ಯೋಗದಲ್ಲಿ ನಿಮ್ಮ ಅವಿರತ ಪ್ರಯತ್ನದಿಂದ ಸಕಾರಾತ್ಮಕ ಬದಲಾವಣೆಗಳು ಉಂಟಾಗುತ್ತವೆ. ವಿದ್ಯಾರ್ಥಿಗಳು ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳುವರು. ಆತುರದಲ್ಲಿ ತಪ್ಪು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಆತ್ಮೀಯರ ಸಲಹೆ ಸೂಚನೆಯನ್ನು ಪಾಲಿಸಿದರೆ ಕಷ್ಟ ನಷ್ಟಗಳು ಕಡಿಮೆ ಆಗುತ್ತವೆ. ಸ್ವಂತ ಉದ್ಯಮದಲ್ಲಿ ದಿನ ಪೂರ್ತಿ ಒತ್ತಡ ಇರಲಿದೆ. ಕೊಟ್ಟ ಮಾತಿನಂತೆ ಇಂದು ಸಂಘ ಸಂಸ್ಥೆಯೊಂದಕ್ಕೆ ಧನ ಸಹಾಯ ಮಾಡಬೇಕಾಗುತ್ತದೆ. ಪಶು ಸಂಗೋಪನೆಯಲ್ಲಿ ಹೆಚ್ಚಿನ ಆದಾಯ ಗಳಿಸುವಿರಿ. ಬೇಸರದಿಂದ ದೂರವಾಗಲು ಮನರಂಜನೆಯನ್ನು ಅವಲಂಬಿಸುವಿರಿ.

ಪರಿಹಾರ : ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ : ನಸುಗೆಂಪು ಬಣ್ಣ

ಕನ್ಯಾ

ಕುಟುಂಬದ ಗಂಭೀರದ ವಾತಾರವರಣ ಮಾನಸಿಕ ಒತ್ತಡವನ್ನು ಹೆಚ್ಚಿಸುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಆಸಕ್ತಿ ತೋರುವಿರಿ. ಆದಾಯವು ಮಧ್ಯಮ ಗತಿಯಲ್ಲಿ ಇರುತ್ತದೆ. ಲಾಭದ ಲೆಕ್ಕಾಚಾರ ಮಾಡಿದ ನಂತರ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ಕುಟುಂಬದ ವಿಚಾರಗಳಿಗೆ ಮೊದಲ ಆದ್ಯತೆ ನೀಡುವಿರಿ. ಪ್ರೀತಿಯಿಂದ ಕೂಡಿದ ಮಾತುಕತೆಯ ಕಾರಣ ಸಂದಿಗ್ದತೆಯನ್ನು ತಿಳಿಗೊಳಿಸುತ್ತದೆ. ತಾಯಿಯಿಂದ ಹಣದ ಸಹಾಯ ದೊರೆಯಲಿದೆ. ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸುವಿರಿ. ಕೃಷಿ ಭೂಮಿಯನ್ನು ಕೊಳ್ಳುವ ನಿಮ್ಮ ಆಸೆ ಈಡೇರಲಿದೆ. ವಾದ ವಿವಾದದಿಂದ ದೂರ ಉಳಿಯುವಿರಿ. ಸ್ಥಿರವಾದ ಮನೋಧರ್ಮ ಹೊಸ ಜೀವನವನ್ನು ರೂಪಿಸುತ್ತದೆ.

ಪರಿಹಾರ : ಪಕ್ಷಿಗಳಿಗೆ ಆಹಾರ ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು ಉತ್ತರ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ತುಲಾ

ಒತ್ತಡದ ಮನಸ್ಸಿನಿಂದ ಕುಟುಂಬಕ್ಕೆ ಸಂಬಂಧಿಸಿದ ತಪ್ಪು ನಿರ್ಧಾರ ತೆಗೆದುಕೊಳ್ಳುವಿರಿ. ಉದ್ಯೋಗ ಬದಲಾಯಿಸಲು ಪ್ರಯತ್ನಿಸಿದರೂ ಸಾಧ್ಯವಾಗದು. ಬಿಡುವಿಲ್ಲದ ಕೆಲಸ ಕಾರ್ಯಗಳು ದೈಹಿಕವಾಗಿ ಕುಗ್ಗುವಂತೆ ಮಾಡುತ್ತದೆ. ಅನಾವಶ್ಯಕ ಖರ್ಚು ವೆಚ್ಚುಗಳನ್ನು ಭರಿಸುವಲ್ಲಿ ಸಫಲರಾಗುವಿರಿ. ಮಿತಿಮೀರಿದ ಖರ್ಚು ವೆಚ್ಚಗಳು ನೆಮ್ಮದಿಯನ್ನು ಕೆಡಿಸುತ್ತದೆ. ದುಡುಕದೇ ಯೋಚಿಸಿ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ಕಾನೂನು ಪಾಲಕರಾದಲ್ಲಿ ಸಮಾಜದಲ್ಲಿ ಕೀರ್ತಿ ಪ್ರತಿಷ್ಠೆಯನ್ನು ಸಂಪಾದಿಸುವಿರಿ. ತಂದೆಯ ಜೊತೆ ವಾದ ವಿವಾದ ಉಂಟಾಗುತ್ತದೆ. ಬೇಸರದಿಂದ ಮೌನಕ್ಕೆ ಶರಣಾಗುವಿರಿ. ಸಾರಿಗೆ ವ್ಯವಸ್ಥೆಯ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ.

ಪರಿಹಾರ : ಸಿಹಿ ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು ಈಶಾನ್ಯ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ವೃಶ್ಚಿಕ

ವಿದ್ಯಾರ್ಥಿಗಳು ಹಟದಿಂದ ವಿದ್ಯಾಭ್ಯಾಸದಲ್ಲಿ ವಿಶೇಷವಾದ ಸಾಧನೆ ಮಾಡುತ್ತಾರೆ. ಮಹಿಳಾ ಉದ್ಯಮಿಗಳಿಗೆ ನಿರೀಕ್ಷಿತ ಯಶಸ್ಸು ದೊರೆಯಲಿದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ತಂದೆಯವರಿಗೆ ಉದ್ಯೋಗದಲ್ಲಿ ಬಡ್ತಿ ದೊರೆವ ಸೂಚನೆಗಳಿವೆ. ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳುವಿರಿ. ವ್ಯಾಪಾರ ವ್ಯವಹಾರದಲ್ಲಿ ನಿರಾಸಕ್ತಿ ಉಂಟಾಗಲಿದೆ. ಕುಟುಂಬದ ಜೊತೆ ಯಾತ್ರಾಸ್ಥಳಕ್ಕೆ ಪ್ರವಾಸ ಕೈಗೊಳ್ಳುವಿರಿ. ಸ್ವಂತ ಭೂಮಿ ಅಥವ ಮನೆಯನ್ನು ಕೊಳ್ಳುವಿರಿ. ನಿಮ್ಮ ಮಧ್ಯಸ್ಥಿಕೆಯಿಂದ ಮನೆತನದ ಆಸ್ತಿಯ ವಿವಾದ ಬಗೆಹರಿಯುವುದು. ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ. ಆತ್ಮೀಯರಿಂದ ಹಣದ ಸಹಾಯ ದೊರೆಯುತ್ತದೆ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಬೂದು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.