ನಿಮ್ಮ ತಪ್ಪಿನಿಂದ ಹಣಕಾಸಿನ ವಿಚಾರದಲ್ಲಿ ಸಮಸ್ಯೆ, ಉದ್ಯೋಗದಲ್ಲಿ ಮಹತ್ತರ ಬದಲಾವಣೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ನಿಮ್ಮ ತಪ್ಪಿನಿಂದ ಹಣಕಾಸಿನ ವಿಚಾರದಲ್ಲಿ ಸಮಸ್ಯೆ, ಉದ್ಯೋಗದಲ್ಲಿ ಮಹತ್ತರ ಬದಲಾವಣೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ನಿಮ್ಮ ತಪ್ಪಿನಿಂದ ಹಣಕಾಸಿನ ವಿಚಾರದಲ್ಲಿ ಸಮಸ್ಯೆ, ಉದ್ಯೋಗದಲ್ಲಿ ಮಹತ್ತರ ಬದಲಾವಣೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಜುಲೈ 12ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (ಬರಹ: ಎಚ್‌. ಸತೀಶ್, ಜ್ಯೋತಿಷಿ).

ನಿಮ್ಮ ತಪ್ಪಿನಿಂದ ಹಣಕಾಸಿನ ವಿಚಾರದಲ್ಲಿ ಸಮಸ್ಯೆ, ಉದ್ಯೋಗದಲ್ಲಿ ಮಹತ್ತರ ಬದಲಾವಣೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ನಿಮ್ಮ ತಪ್ಪಿನಿಂದ ಹಣಕಾಸಿನ ವಿಚಾರದಲ್ಲಿ ಸಮಸ್ಯೆ, ಉದ್ಯೋಗದಲ್ಲಿ ಮಹತ್ತರ ಬದಲಾವಣೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (12th July 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಆಷಾಡ ಮಾಸ-ಶುಕ್ಲಪಕ್ಷ-ಶುಕ್ರವಾರ

ತಿಥಿ : ಷಷ್ಠಿ ಬೆಳಗ್ಗೆ 09.57 ರವರೆಗೂ ಇರುತ್ತದೆ ನಂತರ ಸಪ್ತಮಿ ಆರಂಭವಾಗುತ್ತದೆ.

ನಕ್ಷತ್ರ : ಉತ್ತರ ನಕ್ಷತ್ರವು 02.35 ರವರೆಗೂ ಇದ್ದು ನಂತರ ಹಸ್ತ ನಕ್ಷತ್ರ ಇರುತ್ತದೆ.

ಸೂರ್ಯೋದಯ: ಬೆಳಗ್ಗೆ 06.00

ಸೂರ್ಯಾಸ್ತ: ಸಂಜೆ 06.49

ರಾಹುಕಾಲ: 10.52 ರಿಂದ 12.28

ರಾಶಿಫಲ

ಮೇಷ

ಬಿಡುವಿಲ್ಲದ ಕಾರ್ಯಗಳಿಂದ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ನಿಮ್ಮದೇ ಆದ ತಪ್ಪಿನಿಂದ ಹಣಕಾಸಿನ ವಿಚಾರದಲ್ಲಿ ಸಮಸ್ಯೆ ಎದುರಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಕುಟುಂಬದವರ ಸಲಹೆ ಸೂಚನೆಯನ್ನು ಪಾಲಿಸಿದರೆ ಒಳಿತು. ಉದ್ಯೋಗದಲ್ಲಿ ಮಾನಸಿಕ ಒತ್ತಡ ಇರಲಿದೆ. ವಿದ್ಯಾರ್ಥಿಗಳು ಆಟ ಪಾಠಗಳಲ್ಲಿ ಸದಾ ಮುಂಚೂಣಿಯಲ್ಲಿ ಇರುತ್ತಾರೆ. ತಂದೆಯವರ ಆರೋಗ್ಯದಲ್ಲಿನ ತೊಂದರೆ ಕಡಿಮೆಯಾಗುತ್ತದೆ. ಹೊಸ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ಗಳಿಸುವಿರಿ. ಅಲ್ಪತೃಪ್ತಿಯಿಂದ ಸಂತೋಷ ಪಡುವಿರಿ. ಜನೋಪಕಾರಿ ಕೆಲಸಗಳಲ್ಲಿ ಆಸಕ್ತಿ ಉಂಟಾಗುತ್ತದೆ. ಅತಿಯಾದ ಕೋಪಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ.

ಪರಿಹಾರ : ಬೆಳ್ಳಿ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕಂದು

ವೃಷಭ

ನಿಮ್ಮ ಮನದ ಸಂತೋಷವನ್ನು ಎಲ್ಲರೊಂದಿಗೆ ಹಂಚಿಕೊಳ್ಳುವಿರಿ. ನಿರಾಶೆ ಮತ್ತು ದು:ಖವನ್ನು ಮನದಲ್ಲಿಯೇ ಮುಚ್ಚಿಡುವಿರಿ. ದೊಡ್ಡ ಮೊತ್ತದ ಹಣ ನಿಮಗೆ ದೊರೆಯುತ್ತದೆ. ಸ್ವಂತ ಅವಶ್ಯಕತೆಗಳಿಗಾಗಿ ಕೂಡಿಟ್ಟ ಹಣ ಖರ್ಚಾಗುತ್ತದೆ. ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆಗಳು ಉಂಟಾಗುತ್ತವೆ. ಕುಟುಂಬದಲ್ಲಿ ಸಂತೋಷದ ವಾತಾವರಣವಿರುತ್ತದೆ. ವಿದ್ಯಾರ್ಥಿಗಳು ಅನಾರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಶ್ರದ್ಧೆಯಲ್ಲಿನ ಕೊರತೆಯ ಕಾರಣ ಕಲಿಕೆಯಲ್ಲಿ ಹಿಂದುಳಿಯಲಿದ್ದಾರೆ. ವ್ಯಾಪಾರ ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ವರಮಾನದಲ್ಲಿ ಹೆಚ್ಚಿನ ನಿರೀಕ್ಷೆ ಬೇಡ. ಮನೆಯ ಹಿರಿಯರ ಆರೋಗ್ಯದ ಕಡೆ ಗಮನವಿರಲಿ. ಮನೆಯ ಹೆಣ್ಣು ಮಕ್ಕಳ ಜೀವನದಲ್ಲಿ ಶಾಂತಿ ನೆಮ್ಮದಿ ಇರುತ್ತದೆ.

ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಪ್ಪು

ಮಿಥುನ

ನಿಮ್ಮ ನಿಸ್ವಾರ್ಥದ ಮನಸ್ಸು ಕುಟುಂಬದ ಸಂತಸಕ್ಕೆ ಕಾರಣವಾಗುತ್ತದೆ. ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಬದಲಿಸದೆ ಎದುರಾಗುವ ಸವಾಲುಗಳನ್ನು ಗೆಲ್ಲುವಿರಿ. ಬೇರೆಯವರ ಹೊಗಳಿಕೆಗೆ ಮರುಳಾಗಿ ಮೋಸ ಹೋಗುವಿರಿ ಎಚ್ಚರ. ಮನೆಯ ನಿರ್ವಹಣೆಯ ವಿಚಾರಕ್ಕೆ ಹೆಚ್ಚಿನ ಖರ್ಚು ವೆಚ್ಚ ಉಂಟಾಗುತ್ತದೆ. ಉದ್ಯೋಗದಲ್ಲಿ ಅಧಿಕಾರಿಯ ಸ್ಥಾನ ನಿಮಗೆ ಲಭಿಸುತ್ತದೆ. ವಿದ್ಯಾರ್ಥಿಗಳು ಕಷ್ಟಪಟ್ಟು ತಮ್ಮ ಕಾರ್ಯ ಸಾಧಿಸುತ್ತಾರೆ. ಮನರಂಜನೆ ಕಾರ್ಯಕ್ರಮಗಳಿಗಾಗಿ ಹಣ ಖರ್ಚು ಮಾಡುವಿರಿ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ವರಮಾನದಲ್ಲಿ ತೊಂದರೆ ಇರುತ್ತದೆ. ಕಿರಿಯ ಸೋದರಿ ಅಥವಾ ಸೋದರನ ಮದುವೆ ವಿಚಾರವು ಹೆಚ್ಚಿನ ಪ್ರಾಮುಖ್ಯತೆ ಗಳಿಸುತ್ತದೆ. ಮನೆ ಮಂದಿ ಜೊತೆ ಕಿರುಪ್ರವಾಸ ಕೈಗೊಳ್ಳುವಿರಿ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸ ಆರಂಭಿಸಿರಿ

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ತಿಳಿ ಹಸಿರು

ಕಟಕ

ಕೆಲಸ ಕಾರ್ಯಗಳಲ್ಲಿ ಇದ್ದ ಒತ್ತಡ ದೂರವಾಗಲಿವೆ. ಇದರಿಂದಾಗಿ ಉದ್ಯೋಗದಲ್ಲಿ ನಿರೀಕ್ಷಿತ ಉನ್ನತ ಹುದ್ಧೆ ಲಭಿಸುತ್ತದೆ. ಸಹನೆಯಿಂದ ವರ್ತಿಸುವ ಕಾರಣ ಮುಖ್ಯವಾದ ಅವಕಾಶವೊಂದು ದೊರೆಯಲಿದೆ. ನೀವು ಮಾಡುವ ತೀರ್ಮಾನದಿಂದ ಹಣದ ತೊಂದರೆಯಿಂದ ಪಾರಾಗುವಿರಿ. ಭೂ ವ್ಯವಹಾರದಲ್ಲಿ ಉತ್ತಮ ಆದಾಯವಿರುತ್ತದೆ. ವಿದ್ಯಾರ್ಥಿಗಳು ಪರಿಸ್ಥಿತಿಯ ಒತ್ತಡದ ಕಾರಣ ಗೊಂದಲಕ್ಕೆ ಒಳಗಾಗುತ್ತಾರೆ. ದುಡುಕು ಮಾತಿನಿಂದ ಮೈ ಮೇಲೆ ತೊಂದರೆ ಎಳೆದುಕೊಳ್ಳುವಿರಿ. ಆತ್ಮೀಯರಲ್ಲಿ ಬೇಸರ ಉಂಟಾಗುವ ಘಟನೆಯೊಂದು ನಡೆಯುತ್ತದೆ. ಹಣ ಉಳಿತಾಯ ಮಾಡುವಿರಿ. ಅನಾವಶ್ಯಕ ಓಡಾಟ ನೆಮ್ಮದಿ ಕೆಡಿಸುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ ದೊರೆಯುತ್ತದೆ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ. ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನಸು ಗೆಂಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.