ಮಕ್ಕಳ ಜೊತೆ ಮನಸ್ತಾಪ ಉಂಟಾಗಲಿದೆ, ಇರುವ ಮನೆಯನ್ನು ನವೀಕರಿಸಲಿದ್ದೀರಿ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಮಕ್ಕಳ ಜೊತೆ ಮನಸ್ತಾಪ ಉಂಟಾಗಲಿದೆ, ಇರುವ ಮನೆಯನ್ನು ನವೀಕರಿಸಲಿದ್ದೀರಿ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ

ಮಕ್ಕಳ ಜೊತೆ ಮನಸ್ತಾಪ ಉಂಟಾಗಲಿದೆ, ಇರುವ ಮನೆಯನ್ನು ನವೀಕರಿಸಲಿದ್ದೀರಿ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ

ಜುಲೈ 12ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (ಬರಹ: ಎಚ್‌. ಸತೀಶ್, ಜ್ಯೋತಿಷಿ).

ಮಕ್ಕಳ ಜೊತೆ ಮನಸ್ತಾಪ ಉಂಟಾಗಲಿದೆ, ಇರುವ ಮನೆಯನ್ನು ನವೀಕರಿಸಲಿದ್ದೀರಿ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ
ಮಕ್ಕಳ ಜೊತೆ ಮನಸ್ತಾಪ ಉಂಟಾಗಲಿದೆ, ಇರುವ ಮನೆಯನ್ನು ನವೀಕರಿಸಲಿದ್ದೀರಿ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (12th July 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಆಷಾಡ ಮಾಸ-ಶುಕ್ಲಪಕ್ಷ-ಶುಕ್ರವಾರ

ತಿಥಿ : ಷಷ್ಠಿ ಬೆಳಗ್ಗೆ 09.57 ರವರೆಗೂ ಇರುತ್ತದೆ ನಂತರ ಸಪ್ತಮಿ ಆರಂಭವಾಗುತ್ತದೆ.

ನಕ್ಷತ್ರ : ಉತ್ತರ ನಕ್ಷತ್ರವು 02.35 ರವರೆಗೂ ಇದ್ದು ನಂತರ ಹಸ್ತ ನಕ್ಷತ್ರ ಇರುತ್ತದೆ.

ಸೂರ್ಯೋದಯ: ಬೆಳಗ್ಗೆ 06.00

ಸೂರ್ಯಾಸ್ತ: ಸಂಜೆ 06.49

ರಾಹುಕಾಲ: 10.52 ರಿಂದ 12.28

ರಾಶಿ ಫಲ

ಸಿಂಹ

ಸ್ನೇಹಿತರೊಂದಿಗೆ ಪ್ರೀತಿ ವಿಶ್ವಾಸದಿಂದ ಬಾಳುವಿರಿ. ಕುಟುಂಬದವರ ಜೊತೆ ಯಾತ್ರಾಸ್ಥಳಕ್ಕೆ ಭೇಟಿ ನೀಡುವಿರಿ. ಅತಿಯಾದ ಸಿಟ್ಟು ಮತ್ತು ಹಟದ ಗುಣ ಕುಟುಂಬದಲ್ಲಿ ಬೇಸರ ಉಂಟುಮಾಡುತ್ತದೆ. ಉತ್ತಮ ನಡತೆಯ ಮೂಲಕ ಜನರ ಮನಸ್ಸನ್ನು ಗೆಲ್ಲುವಿರಿ. ಹಣಕಾಸಿನ ವಿಚಾರದಲ್ಲಿ ವಿಶೇಷ ಅನುಕೂಲ ನಿಮ್ಮದಾಗಲಿದೆ. ಉದ್ಯೋಗದಲ್ಲಿ ನಿಮ್ಮ ತೀರ್ಮಾನವೇ ಅಂತಿಮವಾಗುತ್ತದೆ. ವಾದ ವಿವಾದ ಉಂಟಾದರೂ ನಿಮ್ಮನ್ನು ಸೋಲಿಸಲಾಗದು. ಸರ್ಕಾರದ ಅಧೀನದಲ್ಲಿ ಮಾಡುವ ವ್ಯಾಪಾರದಲ್ಲಿ ಹೆಚ್ಚಿನ ಆದಾಯ ದೊರಕುತ್ತದೆ. ಭೂ ವಿವಾದವೊಂದು ಪರಿಹಾರಗೊಳ್ಳಲಿದೆ. ಸಹನೆಯಿಂದ ವರ್ತಿಸಿದಷ್ಟು ಒಳ್ಳೆಯದು.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ

ಕನ್ಯಾ

ಪದೇ ಪದೇ ಮನಸ್ಸನ್ನು ಬದಲಾಯಿಸಿ ಕುಟುಂಬದಲ್ಲಿ ಗಲಿಬಿಲಿಯ ವಾತಾವರಣ ಸೃಷ್ಟಿಸುವಿರಿ. ಅನಿರೀಕ್ಷಿತವಾಗಿ ಆತ್ಮೀಯರಿಂದ ಹಣದ ಸಹಾಯ ದೊರೆಯುತ್ತದೆ. ಉದ್ಯೋಗದಲ್ಲಿ ಅನಿರೀಕ್ಷಿತ ಘಟನೆಯಿಂದ ಕೋಪಗೊಳ್ಳುವಿರಿ. ಅನಿವಾರ್ಯವಾಗಿ ಉದ್ಯೋಗ ಬದಲಿಸುವ ನಿರ್ಧಾರ ಮಾಡುವಿರಿ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ನಿಧಾನಗತಿಯ ಪ್ರಗತಿ ಸಾಧಿಸುವಿರಿ. ಸ್ವಂತ ಜಮೀನು ಅಥವಾ ಮನೆ ಖರೀದಿಸುವ ಆಸೆ ನನಸಾಗಲಿದೆ. ಅವಿವಾಹಿತರಿಗೆ ವಿವಾಹದ ಸೂಚನೆ ಇದೆ. ಉಸಿರಿನ ತೊಂದರೆ ಇರುವವರು ಎಚ್ಚರಿಕೆ ವಹಿಸಿ. ಪಾಲುದಾರಿಕೆ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ವಿರುತ್ತದೆ. ಮನೆಯನ್ನು ನವೀಕರಿಸಲು ಯೋಜಿಸುವಿರಿ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಬಿಳಿ

ತುಲಾ

ನೀವೊಬ್ಬರೇ ತೆಗೆದುಕೊಳ್ಳುವ ತೀರ್ಮಾನ ಹೊಸ ಸಮಸ್ಯೆಗೆ ಕಾರಣವಾಗುತ್ತದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಾಯ ಸಹಕಾರ ದೊರೆಯುತ್ತದೆ. ವೃತ್ತಿ ಜೀವನದಲ್ಲಿ ಹೆಚ್ಚಿನ ಅನುಕೂಲ ದೊರೆಯುತ್ತದೆ. ವಿದ್ಯಾರ್ಥಿಗಳಿಗೆ ತಮ್ಮ ಆಶೋತ್ತರಗಳನ್ನು ಈಡೇರಿಸಿಕೊಳುವ ಸಾಧ್ಯತೆ ಇದೆ. ಸಂಗಾತಿಯ ಸಹಾಯದಿಂದ ಸಣ್ಣಪುಟ್ಟ ವ್ಯಾಪಾರ ಆರಂಭಿಸಿ ಯಶಸ್ಸನ್ನು ಗಳಿಸುವಿರಿ. ಮಕ್ಕಳ ಜೊತೆ ಮನಸ್ತಾಪ ಉಂಟಾಗುವ ಸೂಚನೆಗಳಿವೆ. ಹಣಕಾಸಿನ ತೊಂದರೆ ಇರುವುದಿಲ್ಲ. ಕಲುಷಿತ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ತೊಂದರೆ ಇರಲಿದೆ. ಪಾಲುದಾರಿಕೆಯ ವ್ಯಾಪಾರ ವ್ಯವಹಾರ ಲಾಭದಾಯಕ. ಇರುವ ಹಳೆ ಮನೆಯನ್ನು ನವೀಕರಿಸಲು ತೀರ್ಮಾನಿಸುವಿರಿ. ವ್ಯವಸಾಯದಲ್ಲಿ ಆಸಕ್ತಿ ಇರುತ್ತದೆ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು ಈಶಾನ್ಯ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ವೃಶ್ಚಿಕ

ಯಾರ ಸಲಹೆಗೂ ಸಮ್ಮತಿ ಸೂಚಿಸದೆ ನಿಮ್ಮದೇ ದಾರಿಯಲ್ಲಿ ನಡೆಯುವಿರಿ. ನಿಮ್ಮ ವಾದ ವಿವಾದದಿಂದ ಸಂಬಂಧಿಕರು ನಿಮ್ಮಿಂದ ದೂರ ಉಳಿಯುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚಿಕ್ಕಪುಟ್ಟ ಸಮಸ್ಯೆಗಳು ಎದುರಾದರೂ ತೊಂದರೆ ಇಲ್ಲ. ಕ್ರೀಡಾ ಮನೋಭಾವನೆ ಇರುವ ಕಾರಣ ಯಾವುದೇ ತೊಂದರೆ ಇಲ್ಲ. ಗೆಲ್ಲಬೇಕೆಂಬ ಆಸೆ ಒಳ್ಳೆಯದು ಆದರೆ ಹಟ ಬೇಡ. ಭೂ ಸಂಬಂಧಿತ ವ್ಯಾಪಾರ ವ್ಯವಹಾರಗಳಲ್ಲಿ ಲಾಭ ದೊರೆಯುತ್ತದೆ. ಆತ್ಮೀಯರು ನೀಡಬೇಕಿದ್ದ ಹಣವು ಸಮಯಕ್ಕೆ ದೊರೆಯಲಾರದು. ಮಕ್ಕಳಿಂದ ಹಣದ ಸಹಾಯ ದೊರೆಯುತ್ತದೆ. ಮಕ್ಕಳ ಬಗ್ಗೆ ಅನಾವಶ್ಯಕ ಒತ್ತಡ ಇರುತ್ತದೆ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಆಕಾಶ ನೀಲಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.