ಕುಟುಂಬದಲ್ಲಿ ಅನಾವಶ್ಯಕ ವಾದ ವಿವಾದ, ಬಹಳ ದಿನಗಳಿಂದ ಕಾಡುತ್ತಿದ್ದ ಆರೋಗ್ಯ ಸಮಸ್ಯೆ ನಿವಾರಣೆ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಕುಟುಂಬದಲ್ಲಿ ಅನಾವಶ್ಯಕ ವಾದ ವಿವಾದ, ಬಹಳ ದಿನಗಳಿಂದ ಕಾಡುತ್ತಿದ್ದ ಆರೋಗ್ಯ ಸಮಸ್ಯೆ ನಿವಾರಣೆ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಕುಟುಂಬದಲ್ಲಿ ಅನಾವಶ್ಯಕ ವಾದ ವಿವಾದ, ಬಹಳ ದಿನಗಳಿಂದ ಕಾಡುತ್ತಿದ್ದ ಆರೋಗ್ಯ ಸಮಸ್ಯೆ ನಿವಾರಣೆ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಜುಲೈ 12ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (ಬರಹ: ಎಚ್‌. ಸತೀಶ್, ಜ್ಯೋತಿಷಿ).

ಕುಟುಂಬದಲ್ಲಿ ಅನಾವಶ್ಯಕ ವಾದ ವಿವಾದ, ಬಹಳ ದಿನಗಳಿಂದ ಕಾಡುತ್ತಿದ್ದ ಆರೋಗ್ಯ ಸಮಸ್ಯೆ ನಿವಾರಣೆ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
ಕುಟುಂಬದಲ್ಲಿ ಅನಾವಶ್ಯಕ ವಾದ ವಿವಾದ, ಬಹಳ ದಿನಗಳಿಂದ ಕಾಡುತ್ತಿದ್ದ ಆರೋಗ್ಯ ಸಮಸ್ಯೆ ನಿವಾರಣೆ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(12th July 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಆಷಾಡ ಮಾಸ-ಶುಕ್ಲಪಕ್ಷ-ಶುಕ್ರವಾರ

ತಿಥಿ : ಷಷ್ಠಿ ಬೆಳಗ್ಗೆ 09.57 ರವರೆಗೂ ಇರುತ್ತದೆ ನಂತರ ಸಪ್ತಮಿ ಆರಂಭವಾಗುತ್ತದೆ.

ನಕ್ಷತ್ರ : ಉತ್ತರ ನಕ್ಷತ್ರವು 02.35 ರವರೆಗೂ ಇದ್ದು ನಂತರ ಹಸ್ತ ನಕ್ಷತ್ರ ಇರುತ್ತದೆ.

ಸೂರ್ಯೋದಯ: ಬೆಳಗ್ಗೆ 06.00

ಸೂರ್ಯಾಸ್ತ: ಸಂಜೆ 06.49

ರಾಹುಕಾಲ: 10.52 ರಿಂದ 12.28

ರಾಶಿಫಲ

ಧನಸ್ಸು

ಬಹಳ ದಿನಗಳಿಂದ ಕಾಡುತ್ತಿದ್ದ ಆರೋಗ್ಯ ಸಮಸ್ಯೆ ನಿವಾರಣೆಯಾಗಲಿದೆ. ಆರೋಗ್ಯದ ಸ್ಥಿರತೆಗಾಗಿ ಯೋಗ ಪ್ರಾಣಾಯಾಮದಂಥ ಅಭ್ಯಾಸಗಳನ್ನು ರೂಡಿಸಿಕೊಳ್ಳುವಿರಿ. ವಿದ್ಯಾರ್ಥಿಗಳು ಒತ್ತಡದಿಂದ ಇದ್ದರೂ ಸಾಧನೆಯಲ್ಲಿ ಮುಂದಿರುತ್ತಾರೆ. ಮನೆಗೆ ಸಂಬಂಧಪಟ್ಟ ಕೆಲಸ ಕಾರ್ಯಕ್ಕಾಗಿ ಹಣದ ಕೊರತೆ ಉಂಟಾಗುತ್ತದೆ. ಸಂತಾನ ಲಾಭವಿದೆ. ಅತಿ ಮುಖ್ಯವಾದ ಕೆಲಸವೊಂದು ಅರ್ಧಕ್ಕೆ ನಿಲ್ಲಲಿದೆ. ಸ್ವಗೃಹ ಭೂ ಲಾಭವಿದೆ. ಕುಟುಂಬದ ಸದಸ್ಯರೊಂದಿಗೆ ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡುವಿರಿ. ಆಹಾರದಲ್ಲಿ ಮಿತಿ ಇರದೇ ಹೋದಲ್ಲಿ ಅನಾರೋಗ್ಯ ಖಚಿತ. ಉದ್ಯೋಗ ಬದಲಿಸುವ ನಿರ್ಧಾರಕ್ಕೆ ಬರುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕೆಂಪು

ಮಕರ

ಹಣಕಾಸಿನ ವಿಚಾರದಲ್ಲಿ ಅನಾವಶ್ಯಕ ಯೋಚನೆ ಮಾಡುವಿರಿ. ದುಡುಕುತನದ ಮಾತುಕತೆ ನಿಮ್ಮ ಒಳ್ಳೆತನವನ್ನು ಮರೆ ಮಾಡುತ್ತದೆ. ಕುಟುಂಬದಲ್ಲಿನ ವಾದ ವಿವಾದಗಳು ಒತ್ತಡಕ್ಕೆ ಕಾರಣವಾಗುತ್ತದೆ. ತಾಯಿ ಅಥವಾ ತಂದೆಯ ಮಾತನ್ನು ಕೇಳಿದರೆ ದೊಡ್ಡ ವಿಪತ್ತಿನಿಂದ ಪಾರಾಗಬಹುದು. ಉದ್ಯೋಗದಲ್ಲಿ ಯಾವುದೇ ಬದಲಾವಣೆ ಕಾಣುವುದಿಲ್ಲ. ದಿನವಿಡೀ ಒಂದು ರೀತಿಯ ಬೇಸರ ನಿಮ್ಮನ್ನು ಕಾಡುತ್ತದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಹೆಚ್ಚಿನ ಶ್ರದ್ಧೆಯಿಂದ ಮುಂದುವರೆಯುತ್ತಾರೆ. ರುಚಿಕರವಾದ ಆಹಾರ ಸೊಗಸಾದ ನಿದ್ದೆ ನಿಮ್ಮದಾಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಎಚ್ಚರಿಕೆಯಿಂದ ವರ್ತಿಸಿ.

ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಎಲೆ ಹಸಿರು

ಕುಂಭ

ಸ್ವಾರ್ಥ ರಹಿತ ಜೀವನ ನಡೆಸುವಿರಿ. ಎಚ್ಚರಿಕೆ ವಹಿಸದಿದ್ದಲ್ಲಿ ಹಣದ ವಿಚಾರದಲ್ಲಿ ಮೋಸ ಹೋಗುವಿರಿ. ಕಷ್ಟಕ್ಕೆ ಸ್ಪಂದಿಸುವ ನೀವು ಜನಾನುರಾಗಿಯಾಗಿ ಮುಂದುವರೆಯುವಿರಿ. ಮನದ ನೋವನ್ನು ಯಾರಿಗೂ ಹೇಳುವುದಿಲ್ಲ. ಕುಟುಂಬದಲ್ಲಿ ಸೌಹಾರ್ದಯುತ ವಾತಾವರಣ ಉಂಟು ಮಾಡುವಿರಿ. ಆತ್ಮೀಯರ ಜೊತೆ ಕಿರು ಪ್ರವಾಸ ಕೈಗೊಳ್ಳುವಿರಿ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಅತಿಯಾಗಿ ಯೋಚನೆ ಮಾಡಿದರೆ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ಸೋದರನ ಜೊತೆ ಇದ್ದ ಮನಸ್ತಾಪ ಕೊನೆಗೊಳ್ಳುವುದು.

ಪರಿಹಾರ : ಗೋಶಾಲೆಗೆ ಧನ ಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕೇಸರಿ

ಮೀನ

ಕುಟುಂಬದ ವಿಚಾರದಲ್ಲಿ ಒಳ್ಳೆಯದನ್ನೇ ನಿರೀಕ್ಷಿಸುವಿರಿ. ಒಳ್ಳೆಯದನ್ನೇ ಮಾಡುವಿರಿ. ಇದರಿಂದಾಗಿ ದಿನವಿಡೀ ಸಂತಸದ ಕ್ಷಣಗಳು ಮನೆ ಮಾಡಿರುತ್ತದೆ. ಆತ್ಮೀಯ ಸಂಬಂಧಿಕರು ಅಥವಾ ಸ್ನೇಹಿತರು ಅನಿರೀಕ್ಷಿತವಾಗಿ ಮನೆಗೆ ಆಗಮಿಸುತ್ತಾರೆ. ಆಡುವ ಮಾತಿನಲ್ಲಿ ವಿಷಾದದ ಛಾಯೆ ತುಂಬಿರುತ್ತದೆ. ಅನಿರೀಕ್ಷಿತ ಧನ ಲಾಭವಿರುತ್ತದೆ. ಮಾತುಕತೆ ಮೂಲಕ ಕುಟುಂಬದ ದೊಡ್ಡ ವಿವಾದವನ್ನು ಕೊನೆಗೊಳಿಸುವಿರಿ. ಉದ್ಯೋಗದಲ್ಲಿ ನಿಮ್ಮ ಮಾತಿಗೆ ಹೆಚ್ಚಿನ ಪುರಸ್ಕಾರ ದೊರೆಯುತ್ತದೆ. ಬಡ್ತಿಯನ್ನು ನಿರೀಕ್ಷಿಸಬಹುದು. ಕೆಲಸದ ಮಧ್ಯೆ ವಿಶ್ರಾಂತಿಯ ಅಗತ್ಯತೆ ಇದೆ. ಸಂತಾನ ಲಾಭವಿದೆ. ಮನೆಯಲ್ಲಿನ ಸದಸ್ಯರ ನಡುವೆ ಅನಾವಶ್ಯಕ ವಾದ ವಿವಾದಗಳು ಇರುತ್ತವೆ. ಶಾಂತಿ ಸಹನೆಯಿಂದ ವರ್ತಿಸುವಿರಿ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ 5

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಮಣ್ಣಿನ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.