ಕಣ್ಣಿನ ತೊಂದರೆ ಇರುತ್ತದೆ, ನಿಮ್ಮಿಂದ ಸಹಾಯ ಪಡೆದವರೇ ವಿರೋಧಿಗಳಾಗುತ್ತಾರೆ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಕಣ್ಣಿನ ತೊಂದರೆ ಇರುತ್ತದೆ, ನಿಮ್ಮಿಂದ ಸಹಾಯ ಪಡೆದವರೇ ವಿರೋಧಿಗಳಾಗುತ್ತಾರೆ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಫಲ

ಕಣ್ಣಿನ ತೊಂದರೆ ಇರುತ್ತದೆ, ನಿಮ್ಮಿಂದ ಸಹಾಯ ಪಡೆದವರೇ ವಿರೋಧಿಗಳಾಗುತ್ತಾರೆ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಫಲ

12 ಜೂನ್‌ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (12th June 2024 Daily Horoscope).

ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಫಲ
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (12th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಬುಧವಾರ

ತಿಥಿ: ಷಷ್ಠಿ 06.53ರವರೆಗೂ ಇರುತ್ತದೆ. ಆನಂತರ ಸಪ್ತಮಿ ಆರಂಭವಾಗುತ್ತದೆ.

ನಕ್ಷತ್ರ : ಮಖೆ ನಕ್ಷತ್ರವು ರಾತ್ರಿ 02.16 ರವರೆಗು ಇರುತ್ತದೆ. ಆನಂತರ ಪುಬ್ಬ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.45

ರಾಹುಕಾಲ: 12.23 ರಿಂದ ಸಂಜೆ 01.59

ರಾಶಿಫಲ

ಸಿಂಹ

ಸಂಗಾತಿಯ ಆರೋಗ್ಯದಲ್ಲಿ ಏರುಪೇರು ಇರುತ್ತದೆ. ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಹವ್ಯಾಸಗಳಿದ್ದಲ್ಲಿ ಬಿಟ್ಟುಬಿಡುವುದು ಒಳ್ಳೆಯದು. ನಾನೇ ದೊಡ್ಡವ ಎಂಬ ಮನೋಭಾವನೆ ನಿಮ್ಮಲ್ಲಿ ಇರುತ್ತದೆ. ಹಣಕಾಸಿನ ವಿಚಾರದಲ್ಲಿ ಅತಿಯಾದ ಆಸೆ ಇರುವುದಿಲ್ಲ. ಇರುವ ಆದಾಯದಲ್ಲಿ ಸಂತೃಪ್ತಿಯಿಂದ ಜೀವನ ಮಾಡುವಿರಿ. ಆದರೆ ಉದ್ಯೋಗದಲ್ಲಿ ಉನ್ನತ ಅಧಿಕಾರವನ್ನು ಬಯಸುವಿರಿ. ಇದರಿಂದ ಸಹೋದ್ಯೋಗಿಗಳಿಗೆ ಅಸಮಾಧಾನ ಉಂಟಾಗುತ್ತದೆ. ಹಣಕಾಸು ಸಂಸ್ಥೆಯ ಒಡೆತನ ನಿಮ್ಮದಾಗುತ್ತದೆ. ಸಂಗಾತಿಯ ಸವಿಯಾದ ಮಾತಿನಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ. ನಿಮ್ಮ ಮನದ ಬಹುತೇಕ ಆಸೆಗಳು ಈಡೇರಲಿವೆ. ಕಣ್ಣಿನ ತೊಂದರೆ ಇರುತ್ತದೆ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ :10

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ನಸು ಗೆಂಪು

ಕನ್ಯಾ

ಆಡುವ ಮಾತಿನ ಮೇಲೆ ಗಮನವಿರಲಿ. ತಂದೆಗೆ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ದಾಂಪತ್ಯ ಜೀವನದಲ್ಲಿ ಸಂತೋಷ ನೆಮ್ಮದಿ ಮನೆ ಮಾಡಿರುತ್ತದೆ. ಉದ್ಯೋಗದಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ಹಟವಾದಿಗಳಾದ ಕಾರಣ ವಾದಕ್ಕೆ ಪ್ರತಿವಾದ ಸಿದ್ಧವಾಗಿರುತ್ತದೆ. ಸೋದರನಿಗೆ ಜೀವನದ ಬಗ್ಗೆ ಗಂಭೀರತೆ ಇರುವುದಿಲ್ಲ. ಯಾರ ಮನಸ್ಸಿಗೂ ಬೇಸರ ಬಾರದಂತೆ ನಡೆದುಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ನಿರೀಕ್ಷಿತ ಫಲಿತಾಂಶ ದೊರೆಯುವುದಿಲ್ಲ. ಬೇರೆಯವರ ಪ್ರತಿ ವಿಚಾರದಲ್ಲಿಯೂ ತಪ್ಪನ್ನು ಕಂಡುಹಿಡಿಯುವಿರಿ. ಗುರು ಹಿರಿಯರಲ್ಲಿ ವಿಶೇಷ ಭಕ್ತಿ ಇರುತ್ತದೆ. ಹೊಸದಾಗಿ ಮದುವೆ ಆದವರು ಸಂತೋಷದಿಂದ ಜೀವನ ನಡೆಸುತ್ತಾರೆ. ಸಮಾಜದಲ್ಲಿ ಜನಪ್ರಿಯ ವ್ಯಕ್ತಿಯಾಗಿ ಬಾಳುವಿರಿ.

ಪರಿಹಾರ: ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ. .

ಅದೃಷ್ಟದ ಸಂಖ್ಯೆ : 1

ಅಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ

ತುಲಾ

ಆರಂಭಿಸಿದ ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ನಡೆಯಲಿವೆ. ಆದರೆ ಸೋಲು ನಿಮ್ಮ ಬಳಿ ಸುಳಿಯುವುದಿಲ್ಲ. ಕೀರ್ತಿ ಪ್ರತಿಷ್ಠೆಗಾಗಿ ಯಾವುದೇ ತ್ಯಾಗ ಮಾಡಬಲ್ಲಿರಿ. ತೂಕ ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸುವಿರಿ. ಸಮಯಕ್ಕೆ ತಕ್ಕಂತೆ ವರ್ತಿಸಿ ಆಪತ್ತಿನಿಂದ ಪಾರಾಗುವಿರಿ. ಕುಟುಂಬದ ಒಳಗೂ ಹೊರಗೂ ಉನ್ನತ ಮಟ್ಟದ ಗೌರವ ಲಭಿಸುತ್ತದೆ. ವಯಸ್ಸಿನ ಅಂತರವಿಲ್ಲದೆ ಎಲ್ಲರೂ ನಿಮ್ಮ ನಿರ್ಧಾರಕ್ಕೆ ಮನ್ನಣೆ ನೀಡುತ್ತಾರೆ. ಭೂಮಿ ಅಥವಾ ಮನೆಯನ್ನು ಕೊಳ್ಳುವ ಯೋಜನೆಯನ್ನು ಸಿದ್ಧಪಡಿಸುವಿರಿ. ಹಟದ ಗುಣವಿರುತ್ತದೆ. ಆದರೆ ದುಡುಕುವುದಿಲ್ಲ. ನಿಮ್ಮಿಂದ ಸಹಾಯ ಪಡೆದವರೇ ನಿಮಗೆ ವಿರೋಧಿಗಳಾಗುತ್ತಾರೆ. ನಿಮ್ಮ ದುಡುಕಿನ ಮಾತಿನಿಂದ ಸಂಗಾತಿಗೆ ಬೇಸರ ಉಂಟಾಗುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು ಈಶಾನ್ಯ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ವೃಶ್ಚಿಕ

ಅತ್ತೆಯ ಮನೆಯವರೊಂದಿಗೆ ವಾದ ವಿವಾದ ಇರುತ್ತವೆ. ಹೃದಯದ ತೊಂದರೆ ಇದ್ದರೆ ಎಚ್ಚರಿಕೆಯಿಂದ ಇರಬೇಕು. ಒಂದೇ ರೀತಿಯ ಕೆಲಸಗಳಿಂದ ಬೇಸರಗೊಂಡು ಹೊಸ ಕೆಲಸ ಆರಂಭಿಸುವಿರಿ. ಸೋದರ ಸೋದರಿಯರ ಹಣಕಾಸಿನ ತೊಂದರೆ ದೂರವಾಗುತ್ತದೆ. ತಾಳ್ಮೆಯಿಂದ ವರ್ತಿಸಿದರೂ ಕೋಪ ಬಂದಾಗ ಉದ್ವೇಗದಿಂದ ಪ್ರತಿಕ್ರಿಯಿಸುವಿರಿ. ಸೋಲನ್ನು ಒಪ್ಪುವುದಿಲ್ಲ. ಸತತ ಪ್ರಯತ್ನದಿಂದ ಗೆಲುವನ್ನು ಸಾಧಿಸುವಿರಿ. ಅವಕಾಶ ದೊರೆತಾಗ ಬೇರೆಯವರಿಗೆ ಸಹಾಯ ಮಾಡುವಿರಿ. ಮಂತ್ರ ತಂತ್ರಗಳಲ್ಲಿ ನಂಬಿಕೆ ಇರುತ್ತದೆ. ವಿದ್ಯಾರ್ಥಿಗಳು ಸಾಧನೆ ಮಾಡುತ್ತಾರೆ. ಕುಟುಂಬದಲ್ಲಿ ವಿವಾಹ ಕಾರ್ಯವನ್ನು ನಿಮ್ಮ ಇಚ್ಛೆಯಂತೆ ನಡೆಸಲು ತೀರ್ಮಾನಿಸುವಿರಿ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಬೂದು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

 

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.