ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಅಗತ್ಯ, ಗಂಟಲಿಗೆ ಸಂಬಂಧಿಸಿದ ಸಮಸ್ಯೆ ಕಾಡಲಿದೆ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಅಗತ್ಯ, ಗಂಟಲಿಗೆ ಸಂಬಂಧಿಸಿದ ಸಮಸ್ಯೆ ಕಾಡಲಿದೆ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

12 ಜೂನ್‌ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (12th June 2024 Daily Horoscope).

ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (12th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಬುಧವಾರ

ತಿಥಿ: ಷಷ್ಠಿ 06.53ರವರೆಗೂ ಇರುತ್ತದೆ. ಆನಂತರ ಸಪ್ತಮಿ ಆರಂಭವಾಗುತ್ತದೆ.

ನಕ್ಷತ್ರ : ಮಖೆ ನಕ್ಷತ್ರವು ರಾತ್ರಿ 02.16 ರವರೆಗು ಇರುತ್ತದೆ. ಆನಂತರ ಪುಬ್ಬ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.45

ರಾಹುಕಾಲ: 12.23 ರಿಂದ ಸಂಜೆ 01.59

ರಾಶಿಫಲ

ಧನಸ್ಸು

ಮಾತಿನಲ್ಲಿ ಮೋಡಿ ಮಾಡಬಲ್ಲಿರಿ. ಸಮಯ ಅರಿತುಕೊಂಡು ನಿಮ್ಮ ಕೆಲಸವನ್ನು ಸಾಧಿಸಿಕೊಳ್ಳುವಿರಿ. ಯಾರನ್ನೂ ದ್ವೇಷಿಸುವ ಮನಸ್ಸು ಇರುವುದಿಲ್ಲ. ಎಲ್ಲರನ್ನು ಸಮಾನ ದೃಷ್ಟಿಯಿಂದ ಪ್ರೀತಿ ವಿಶ್ವಾಸದಿಂದ ಕಾಣುವಿರಿ. ನಿಮಗೆ ಸಹಾಯ ಮಾಡಲು ತಾವಾಗಿ ಹಲವಾರು ಜನ ಬರುತ್ತಾರೆ. ಯಾವುದೇ ಕೆಲಸ ಕಾರ್ಯಗಳು ಅಪೂರ್ಣವಾಗುವುದಿಲ್ಲ. ಹಣಕಾಸಿನ ಕೊರತೆ ಕಂಡುಬರುವುದಿಲ್ಲ. ಆರೋಗ್ಯ ಕಾಪಾಡಿಕೊಳ್ಳಲು ದೈಹಿಕ ಕಸರತ್ತನ್ನು ಆಶ್ರಯಿಸುವಿರಿ. ಕುಟುಂಬದ ಸದಸ್ಯರ ಜೊತೆಯಲ್ಲಿ ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡುವಿರಿ. ಅನಿರೀಕ್ಷಿತ ಧನ ಲಾಭವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಸಾಧನೆ ಮಾಡಲಿದ್ದಾರೆ. ಮಕ್ಕಳ ಮನಸ್ಸಿನಲ್ಲಿರುವ ಆಸೆಯನ್ನು ಅರಿಯಲು ವಿಫಲರಾಗುವಿರಿ.

ಪರಿಹಾರ : ಬೆಳ್ಳಿ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಆಕಾಶ ನೀಲಿ

ಮಕರ

ಕೆಲಸ ಕಾರ್ಯಗಳ ನಡುವೆ ಆರೋಗ್ಯವನ್ನು ಕಡೆಗಣಿಸಬೇಡಿರಿ. ಕಾರ್ಮಿಕ ಕ್ರಿಯಾವಿಧಿಗಳಲ್ಲಿ ಆಸಕ್ತಿ ಮೂಡುತ್ತದೆ. ಕುಟುಂಬದಲ್ಲಿ ಅನಾವಶ್ಯಕ ಪರಸ್ಪರ ಮನಸ್ತಾಪ ಉಂಟಾಗುತ್ತದೆ. ಆದರೆ ಸೋದರಿಯ ಸಹಾಯ ಸಹಕಾರ ಇರುತ್ತದೆ. ಉತ್ತಮ ಸ್ಥಾನ ಮಾನ ದೊರೆಯುತ್ತದೆ. ದಂಪತಿ ನಡುವೆ ಅನ್ಯೋನ್ಯತೆ ಇರುವುದಿಲ್ಲ. ಧಾರ್ಮಿಕ ಕೆಲಸ ಕಾರ್ಯಗಳನ್ನು ಮಾಡುವಿರಿ. ಕಣ್ಣಿನ ದೋಷ ಉಂಟಾಗುತ್ತದೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ಬೇಸರದಿಂದ ಹೊರ ಬರಲು ಮನರಂಜನ ಕೇಂದ್ರಕ್ಕೆ ತೆರಳುವಿರಿ. ಬಂಧು ಬಳಗದ ಜೊತೆಯಲ್ಲಿ ಉತ್ತಮ ಬಾಂಧವ್ಯ ಇರುವುದಿಲ್ಲ. ಯಾವುದೇ ಕೆಲಸ ಕಾರ್ಯಗಳು ಸುಲಭವಾಗಿ ನಡೆಯದು.

ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಕುಂಭ

ಅತಿಯಾದ ಆತ್ಮವಿಶ್ವಾಸವಿರುತ್ತದೆ. ಆಧುನಿಕ ತಂತ್ರಜ್ಞಾನದಲ್ಲಿ ವಿಶೇಷ ಜ್ಞಾನ ಸಂಪಾದಿಸುವಿರಿ. ಮಕ್ಕಳ ಜೀವನದಲ್ಲಿ ಒಳ್ಳೆಯ ಫಲಗಳು ದೊರೆಯಲಿವೆ. ಒಮ್ಮೆ ತೀರ್ಮಾನಿಸಿದ ಕೆಲಸ ಕಾರ್ಯಗಳನ್ನು ಸುಲಭವಾಗಿ ಪೂರ್ಣಗೊಳಿಸುವಿರಿ. ನಿಮ್ಮ ಒಳ್ಳೆಯ ಗುಣಸ್ವಭಾವ ಎಲ್ಲರ ಗಮನ ಸೆಳೆಯುತ್ತದೆ. ವಿದ್ಯಾರ್ಥಿಗಳು ಅನೇಕ ವಿಚಾರದಲ್ಲಿ ಅಧ್ಯಯನ ನಡೆಸುತ್ತಾರೆ. ಹಣಕಾಸಿನ ತೊಂದರೆ ಕಾಣುವುದಿಲ್ಲ. ಸಮಯಕ್ಕೆ ಹೊಂದಿಕೊಂಡು ನಡೆಯುವ ಬುದ್ಧಿವಂತಿಕೆ ನಿಮ್ಮಲ್ಲಿ ಇರುತ್ತದೆ. ಗಂಟಲಿಗೆ ಸಂಬಂಧಿಸಿದ ತೊಂದರೆ ಇರುತ್ತದೆ. ಒಳ್ಳೆಯ ನಡವಳಿಕೆಯಿಂದ ಎಲ್ಲರ ವಿಶ್ವಾಸ ಗಳಿಸುವಿರಿ. ಅತಿಯಾದ ಮಾತು ಕೆಲವರಲ್ಲಿ ಬೇಸರ ಮೂಡಿಸುತ್ತದೆ. ಮನದಲ್ಲಿರುವ ವಿಚಾರವನ್ನು ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಎಲೆ ಹಸಿರು

ಮೀನ

ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಹೋದರರ ಸಹಾಯ ಸಹಕಾರ ದೊರೆಯುತ್ತದೆ. ಕುಟುಂಬದಲ್ಲಿ ಸುಖ ಶಾಂತಿ ನೆಲೆಸಿರುತ್ತದೆ. ನವ ವಿವಾಹಿತರಿಗೆ ಸಂತಾನ ಲಾಭವಿದೆ. ಹಣಕಾಸಿನ ತೊಂದರೆ ಕಂಡು ಬರುವುದಿಲ್ಲ. ನಿಮ್ಮಲ್ಲಿರುವ ಒಳ್ಳೆಯ ಗುಣಗಳಿಗೆ ಎಲ್ಲರ ಮೆಚ್ಚುಗೆ ದೊರೆಯುತ್ತದೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ನೆರೆಹೊರೆಯವರ ಜೊತೆಯಲ್ಲಿ ಉತ್ತಮ ಬಾಂಧವ್ಯ ಇರುತ್ತದೆ. ಅತಿಯಾದ ಆಸೆ ಇರುತ್ತದೆ. ಸೋಲಿಗೆ ಹೆದರದೆ ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಗಳಿಸುವಿರಿ. ಪ್ರವಾಸದ ವೇಳೆ ನಿಮಗೆ ಇಷ್ಟವಾದಂತ ಅಮೂಲ್ಯ ವಸ್ತು ಕಳೆದು ಹೋಗಬಹುದು ಎಚ್ಚರಿಕೆಯಿಂದ ಇರಿ. ಹೊಸ ವಾಹನ ಕೊಳ್ಳುವಿರಿ. ಅತಿಯಾದ ವೇಗ ಅನರ್ಥಕ್ಕೆ ಕಾರಣವಾಗಬಹುದು.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ 3

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಕೇಸರಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).