Horoscope Today: ಅಧ್ಯಾತ್ಮಿಕ ಗುರುಗಳ ಭೇಟಿಯಿಂದ ನೆಮ್ಮದಿ, ವ್ಯವಹಾರದಲ್ಲಿ ಲಾಭ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಅಧ್ಯಾತ್ಮಿಕ ಗುರುಗಳ ಭೇಟಿಯಿಂದ ನೆಮ್ಮದಿ, ವ್ಯವಹಾರದಲ್ಲಿ ಲಾಭ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ

Horoscope Today: ಅಧ್ಯಾತ್ಮಿಕ ಗುರುಗಳ ಭೇಟಿಯಿಂದ ನೆಮ್ಮದಿ, ವ್ಯವಹಾರದಲ್ಲಿ ಲಾಭ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ

12 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (12th May 2024 Daily Horoscope).

ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯ ದಿನ ಭವಿಷ್ಯ  ತಿಳಿಯಿರಿ
ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯ ದಿನ ಭವಿಷ್ಯ ತಿಳಿಯಿರಿ

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (12th May 2024 Horoscope)

ಇಂದಿನ ಪಂಚಾಂಗ

ಶ್ರೀಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಭಾನುವಾರ

ತಿಥಿ: ಪಂಚಮಿ ರಾ. 04.11 ರವರೆಗು ಇರುತ್ತದೆ. ಆನಂತರ ಷಷ್ಠಿ ಆರಂಭವಾಗುತ್ತದೆ.

ನಕ್ಷತ್ರ: ಆರ್ದ್ರೆ ನಕ್ಷತ್ರವು ಮಧ್ಯಾಹ್ನ 12.038 ರವರೆಗೆ ಇರುತ್ತದೆ. ಆನಂತರ ಪುನರ್ವಸು ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.05.55

ಸೂರ್ಯಾಸ್ತ: ಸ.06.36

ರಾಹುಕಾಲ: ಸ. 05.04 ರಿಂದ ಸ. 06.39

ಸಿಂಹ ರಾಶಿ

ಕುಟುಂಬದಲ್ಲಿ ಮಾನಸಿಕ ನೆಮ್ಮದಿ ಇರುವುದಿಲ್ಲ. ವಿದ್ಯಾರ್ಥಿಗಳು ನಿರೀಕ್ಷಿತ ಫಲಿತಾಂಶ ಪಡೆಯುತ್ತಾರೆ. ಉದ್ಯೋಗದಲ್ಲಿ ಪ್ರಗತಿ ಕಂಡು ಉನ್ನತ ಅಧಿಕಾರ ದೊರೆಯುತ್ತದೆ. ಭೂ ಸಂಬಂಧಿತ ವ್ಯಾಪಾರ ವ್ಯವಹಾರದಲ್ಲಿ ಲಾಭವಿರುತ್ತದೆ. ಧಾರ್ಮಿಕ ಕಾರ್ಯವೊಂದನ್ನು ಆಯೋಜಿಸುವಿರಿ. ಕುಟುಂಬದ ಹಿರಿಯರ ಆರೋಗ್ಯಕ್ಕಾಗಿ ಹೆಚ್ಚಿನ ಹಣ ಖರ್ಚಾಗುತ್ತದೆ. ಸಮಯಕ್ಕೆ ತಕ್ಕಂತೆ ಹಣದ ಸಹಾಯ ದೊರೆಯುತ್ತದೆ. ದಾಂಪತ್ಯದಲ್ಲಿ ಅನಾವಶ್ಯಕ ವಾದ ವಿವಾದಗಳು ಎದುರಾಗಲಿವೆ. ಕಾರ್ಮಿಕವೃಂದಕ್ಕೆ ವಿಶೇಷವಾದ ಲಾಭವಿದೆ. ವಿದ್ಯಾರ್ಥಿಗಳಿಗೆ ಅವಧಿಗೆ ಮುನ್ನವೇ ಉದ್ಯೋಗ ದೊರೆಯುತ್ತದೆ. ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ ಇರಲಿ.

ಪರಿಹಾರ: ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 1

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ಕನ್ಯಾ ರಾಶಿ

ತಂದೆಗೆ ಹಣದ ಸಹಾಯ ದೊರೆತು ಭೂವಿವಾದವು ಪರಿಹಾರವಾಗುತ್ತವೆ. ಕುಟುಂಬದಲ್ಲಿ ಒಮ್ಮತದ ಕೊರತೆ ಕಾಣುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಪರಿಶ್ರಮದಿಂದ ತಮ್ಮ ಗುರಿ ತಲುಪಲಿದ್ದಾರೆ. ಉದ್ಯೋಗದ ವಿಚಾರದಲ್ಲಿ ವಿಶೇಷ ಜ್ಞಾನ ಗಳಿಸಲು ವಿದೇಶಕ್ಕೆ ತೆರಳುತ್ತಾರೆ. ಮಕ್ಕಳಿಗೆ ಗಣ್ಯ ವ್ಯಕ್ತಿಗಳ ಆಶ್ರಯ ದೊರೆಯುತದೆ. ಬಂಧು ಬಳಗದವರ ಸಹಾಯದಿಂದ ಸೋದರಿಯ ವಿವಾಹ ನಿಶ್ಚಯವಾಗುತ್ತದೆ. ಸಮಾಜದಲ್ಲಿ ವಿಶೇಷ ಗೌರವಾದರಗಳು ಲಭಿಸುತ್ತವೆ. ಆಧ್ಯಾತ್ಮಿಕ ಗುರುಗಳ ಭೇಟಿಯಿಂದ ಮನಸ್ಸಿಗೆ ನೆಮ್ಮದಿ ಲಭಿಸುತ್ತದೆ. ಹಣಕಾಸಿನ ವಿಚಾರವಾಗಿ ಕಾನೂನಿನ ವಿವಾದವೊಂದು ಎದುರಾಗಲಿದೆ. ಸುಲಭವಾಗಿ ಯಾರನ್ನೂ ನಂಬುವುದಿಲ್ಲ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 4

ಅಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಆಕಾಶನೀಲಿ ಬಣ್ಣ

ತುಲಾ ರಾಶಿ

ಕುಟುಂಬದ ವಿಶೇಷವಾದ ಕೆಲಸವೊಂದು ಯಶಸ್ವಿಯಾಗಲು ಕಾರಣರಾಗುವಿರಿ. ಪರಸ್ಥಳದಲ್ಲಿ ಅಭಿವೃದ್ಧಿ ಹೊಂದುವಿರಿ. ದುಡುಕಿನ ಮಾತಿನ ಕಾರಣ ವಿರೋಧಿಗಳು ಹೆಚ್ಚುತ್ತಾರೆ. ಉಷ್ಣ ಅಥವಾ ರಕ್ತದೊತ್ತಡದ ತೊಂದರೆ ಇರುತ್ತದೆ. ಉದ್ಯೋಗದಲ್ಲಿದ್ದ ಅಡಚಣೆಗಳು ದೂರವಾಗಿ ಉತ್ಸಾಹ ಮೂಡುತ್ತದೆ. ಕ್ರಮೇಣವಾಗಿ ಮನದ ಆತಂಕ ದೂರವಾಗುತ್ತದೆ. ವಿದ್ಯಾರ್ಥಿಗಳಿಗೆ ಅನಾಯಾಸವಾಗಿ ಉತ್ತಮ ಫಲಗಳು ದೊರೆಯಲಿವೆ. ಸರಳವಾದ ಕೆಲಸ ಕಾರ್ಯಗಳಿಗೂ ಹೆಚ್ಚಿನ ಪ್ರಯತ್ನದ ಅವಶ್ಯಕತೆ ಇರುತ್ತದೆ. ಹಣಕಾಸಿನ ವಿಚಾರದಲ್ಲಿ ಹಿರಿಯವರ ಅನುಭವ ನಿಮಗೆ ಸಹಾಯವಾಗುತ್ತದೆ. ಸಂದರ್ಭಕ್ಕೆ ಅನುಗುಣವಾಗಿ ನಡೆದು ಗೆಲುವು ಸಾಧಿಸುವಿರಿ. ವಂಶದಲ್ಲಿ ನಿಮಗೆ ವಿಶೇಷವಾದ ಸ್ಥಾನ ಮಾನ ದೊರೆಯುತ್ತದೆ.

ಪರಿಹಾರ: ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 11

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಕೆಂಪು

ವೃಶ್ಚಿಕ ರಾಶಿ

ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಿ. ಯೋಗ ಮತ್ತು ಪ್ರಾಣಾಯಾಮದಿಂದ ಆರೊಗ್ಯದಲ್ಲಿ ಸ್ಥಿರತೆ ಗಳಿಸುವಿರಿ. ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವ ಕಾರಣ ವೃತ್ತಿಯಲ್ಲಿ ತೊಂದರೆ ಉಂಟಾಗಲಿದೆ. ನಿಮ್ಮ ಹಿರಿಯ ಅಧಿಕಾರಿಗಳ ಸಹಾಯ ದೊರೆಯುತ್ತದೆ. ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಕೆಲಸ ಕಾರ್ಯಗಳು ಯಶಸ್ಸಿಯಾಗಲಿವೆ. ಸಾರ್ವಜನಿಕ ಸಂಘ ಸಂಸ್ಥೆಗಳ ನಿರ್ವಹಣೆಯ ಜವಾಬ್ದಾರಿ ದೊರೆಯುತ್ತದೆ. ಬೆಳ್ಳಿ ಚಿನ್ನಾಭರಣಗಳ ಖರೀದಿ ಮಾಡುವಿರಿ. ಸಂಬಂಧಿಯೊಬ್ಬರೊಂದಿಗೆ ಪಾಲುಗಾರಿಕೆ ವ್ಯಾಪಾರ ಆರಂಭಿಸಿ ಯಶಸ್ವಿಯಾಗುವಿರಿ. ಹೊಸತನದ ನಿರೀಕ್ಷೆಯೊಂದಿಗೆ ಉದ್ಯೋಗ ಬದಲಿಸುವಿರಿ. ಸಾಲದ ವ್ಯವಹಾರದಲ್ಲಿ ಎಚ್ಚರಿಕೆ ಇದ್ದಷ್ಟೂ ಒಳ್ಳೆಯದು.

ಪರಿಹಾರ: ಬಲಗೈಯಲ್ಲಿ ಬೆಳ್ಳಿಯ ಕೈಖಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.