Horoscope Today: ಅತಿಯಾದ ಆತ್ಮವಿಶ್ವಾಸ ಬೇಡ, ಆಸ್ತಿ ವಿವಾದದಿಂದ ಕುಟುಂಬದ ನೆಮ್ಮದಿಗೆ ಧಕ್ಕೆ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಅತಿಯಾದ ಆತ್ಮವಿಶ್ವಾಸ ಬೇಡ, ಆಸ್ತಿ ವಿವಾದದಿಂದ ಕುಟುಂಬದ ನೆಮ್ಮದಿಗೆ ಧಕ್ಕೆ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

Horoscope Today: ಅತಿಯಾದ ಆತ್ಮವಿಶ್ವಾಸ ಬೇಡ, ಆಸ್ತಿ ವಿವಾದದಿಂದ ಕುಟುಂಬದ ನೆಮ್ಮದಿಗೆ ಧಕ್ಕೆ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

13 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (13th April 2024 Daily Horoscope).

ಮೇಷ, ವೃಷಭ, ಮಿಥುನ, ಕಟಕ ರಾಶಿ ಭವಿಷ್ಯ
ಮೇಷ, ವೃಷಭ, ಮಿಥುನ, ಕಟಕ ರಾಶಿ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (13th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಶುಕ್ಲಪಕ್ಷ-ಶನಿವಾರ

ತಿಥಿ : ಪಂಚಮಿ 04.01 ರವರೆಗೂ ಇದ್ದು ನಂತರ ಷಷ್ಠಿ ಆರಂಭವಾಗುತ್ತದೆ.

ನಕ್ಷತ್ರ : ಮೃಗಶಿರ ನಕ್ಷತ್ರವು ರಾತ್ರಿ 04.37 ರವರೆಗೂ ಇದ್ದು ನಂತರ ಆರ್ದ್ರೆ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.08

ಸೂರ್ಯಾಸ್ತ: ಸಂಜೆ 06.31

ರಾಹುಕಾಲ: ಬೆಳಗ್ಗೆ 09.00 ರಿಂದ 10.30

ರಾಶಿಫಲ

ಮೇಷ

ನಿಮ್ಮ ಮನಸ್ಸು ಬೇರೆಯವರ ಕಷ್ಟನಷ್ಟಗಳಿಗೆ ಸ್ಪಂದಿಸುತ್ತದೆ. ದಿನನಿತ್ಯದ ಕೆಲಸ ಕಾರ್ಯಗಳ ನಡುವೆ ನಂಬಿ ಬಂದವರಿಗೆ ಸಹಾಯ ಮಾಡುವಿರಿ. ಮನದಲ್ಲಿನ ನೋವನ್ನು ಮರೆತು ಎಲ್ಲರ ಜೊತೆ ಸಂತಸದಿಂದ ಬಾಳುವಿರಿ. ಕುಟುಂಬದಲ್ಲಿ ಗೌರವವನ್ನು ಸಂಪಾದಿಸುವಿರಿ. ನಿಮ್ಮ ಆರೋಗ್ಯದ ಕಾಳಜಿ ಇರಲಿ. ಉದ್ಯೋಗದಲ್ಲಿನ ಅನಿರೀಕ್ಷತ ಬದಲಾವಣೆಗಳು ಶುಭಫಲಗಳನ್ನು ನೀಡುತ್ತವೆ. ವ್ಯಾಪಾರ ವ್ಯವಹಾರದ ಬಗ್ಗೆ ಆಸಕ್ತಿ ಇರುವುದಿಲ್ಲ. ಪ್ರಾಮಾಣಿಕ ಮನೋಭಾವನೆಯಿಂದ ಸಮಾಜದಲ್ಲಿ ಉನ್ನತ ಸ್ಥಾನವನ್ನು ಗಳಿಸುವಿರಿ. ಕುಟುಂಬದಲ್ಲಿ ನಡೆಯಬೇಕಿದ್ದ ವಿವಾಹ ಕಾರ್ಯವು ಮುಂದೆ ಹೋಗಲಿದೆ. ಸ್ನೇಹಿತರ ಆಗಮನ ಹೊಸ ಪರಿವರ್ತನೆಗೆ ಕಾರಣವಾಗಲಿದೆ. ಮನೆಯ ಸುತ್ತಮುತ್ತಲಿನ ಪರಿಸರವನ್ನು ಶುಭ್ರವಾಗಿ ಇಡುವಿರಿ.

ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಬೂದು ಬಣ್ಣ

ವೃಷಭ

ಕೌಟುಂಬಿಕ ಜೀವನದಲ್ಲಿ ಉಪಯುಕ್ತ ಬದಲಾವಣೆಗಳನ್ನು ತರುವಿರಿ. ಕುಟುಂಬದ ವಿಚಾರಗಳಲ್ಲಿ ನಿಮ್ಮ ತೀರ್ಮಾನವೇ ಅಂತಿಮವಾಗಲಿದೆ. ಉದ್ಯೋಗದಲ್ಲಿ ಆಶಾದಾಯಕ ಬದಲಾವಣೆ ಉಂಟಾಗಲಿದೆ. ಹೆಚ್ಚಿನ ಪ್ರಯತ್ನ ಪಟ್ಟಲ್ಲಿ ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಸೂಕ್ತ ಬದಲಾವಣೆ ಮಾಡುವಿರಿ. ಅತಿಯಾದ ಆತ್ಮವಿಶ್ವಾಸದಿಂದ ಸಂದಿಗ್ದತೆಗೆ ಒಳಗಾಗುವಿರಿ. ನರದ ದೋಷ ಇದ್ದಲ್ಲಿ ವೈದ್ಯರನ್ನು ಬೇಟಿ ಆಗುವುದು ಉತ್ತಮ. ಆಸ್ತಿಯ ವಿವಾದ ಕುಟುಂಬದ ನೆಮ್ಮದಿಗೆ ಧಕ್ಕೆ ತರುತ್ತದೆ. ತಂದೆ ಮತ್ತು ಸೋದರರ ನಡುವಿನ ಹಣದ ವಿಚಾರದ ಬಿನಾಭಿಪ್ರಾಯ ನೆಮ್ಮದಿಯನ್ನು ಕೆಡಿಸುತ್ತದೆ. ಅತಿಯಾಗಿ ಯೋಚಿಸದಿರಿ. ಪತ್ನಿಗೆ ಉದ್ಯೋಗ ದೊರೆತು ಹಣಕಾಸಿನ ಒತ್ತಡವು ಕಡಿಮೆಯಾಗುತ್ತದೆ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ 3

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಕಂದು ಬಣ್ಣ

ಮಿಥುನ

ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ಜಯ ಲಭಿಸುತ್ತದೆ. ಇದರಿಂದಾಗಿ ಶಾಂತಿ ನೆಮ್ಮದಿ ಇರಲಿದೆ. ಕುಟುಂಬದಲ್ಲಿ ಮಂಗಳ ಕಾರ್ಯವೊಂದು ನಡೆಯಲಿದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರವನ್ನು ಗಳಿಸಲು ಪ್ರಯತ್ನಿಸುವಿರಿ. ಕಠಿಣವಾದ ಕೆಲಸ ಕಾರ್ಯಗಳನ್ನು ಮಾಡಲು ಇಚ್ಚಿಸುವುದಿಲ್ಲ. ಕೆಲಸ ಕಾರ್ಯಗಳ ನಡುವೆ ವಿಶ್ರಾಂತಿ ಪಡೆಯುವಿರಿ. ಕೈ ಹಿಡಿದ ಕಾರ್ಯವನ್ನು ಪೂರ್ಣಗೊಳಿಸುವವರೆಗೂ ಹೊಸ ಕೆಲಸ ಆರಂಭಿಸುವುದಿಲ್ಲ. ಧಾರ್ಮಿಕ ವಿಧಿ ವಿಧಾನಗಳಲ್ಲಿ ಹೆಚ್ಚಿನ ಆಸಕ್ತಿ ಮೂಡುತ್ತದೆ. ಕೆಲಸ ಕಾರ್ಯಗಳಲ್ಲಿ ಅಡ್ಡಿ ಎದುರಾದರೆ ಮರು ಪ್ರಯತ್ನ ಮಾಡುವುದಿಲ್ಲ. ಕುಟುಂಬದ ಹಿರಿಯರ ಮಾರ್ಗದರ್ಶನದಂತೆ ನಡೆದರೆ ಯಾವುದೇ ತೊಂದರೆ ಎದುರಾಗದು.

ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕಪ್ಪು

ಕಟಕ

ಮನಸ್ಸಿನಲ್ಲಿ ಇರುವ ಯೋಜನೆಗಳು ಕಾರ್ಯಗತಗೊಳ್ಳುತ್ತವೆ. ಇದರಿಂದ ಹೊಸ ಆಸೆ ಆಕಾಂಕ್ಷಿಗಳು ಮೂಡಲಿವೆ. ಬುದ್ಧಿವಂತಿಕೆಯಿಂದ ನಿಮಗೆ ಅನುಕೂಲಕರವಾಗುವಂತಹ ಸನ್ನಿವೇಶಗಳನ್ನು ರೂಪಿಸುವಿರಿ. ಕುಟುಂಬದ ಹಿರಿಯರ ಕೆಲಸ ಕಾರ್ಯಗಳಲ್ಲಿ ಸಹಾಯ ಮಾಡುವಿರಿ. ಮನೆಯನ್ನು ಅಲಂಕರಿಸಬೇಕಾದ ಸರಂಜಾಮಗಳಿಗೆ ಹೆಚ್ಚಿನ ಹಣ ಬೇಕಾಗಬಹುದು. ಹಣಕಾಸಿನ ಪರಿಸ್ಥಿತಿಯನ್ನು ಸರಿಪಡಿಸಲು ಬಿಡುವಿನ ವೇಳೆ ವ್ಯಾಪಾರವೊಂದನ್ನು ಆರಂಭಿಸುವಿರಿ. ಭವಿಷ್ಯದ ಚಿಂತನೆಯಿಂದ ಹಣದ ಯೋಜನೆಯನ್ನು ಆರಂಭಿಸುರಿ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕೆಂಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.