ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಗಂಟಲಿನ ಸೋಂಕು ಕಾಡಲಿದೆ, ಸ್ವಂತ ಮನೆ ಕೊಳ್ಳುವ ಕನಸಿಗೆ ಚಾಲನೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಗಂಟಲಿನ ಸೋಂಕು ಕಾಡಲಿದೆ, ಸ್ವಂತ ಮನೆ ಕೊಳ್ಳುವ ಕನಸಿಗೆ ಚಾಲನೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

13 ಜೂನ್‌ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (13th June 2024 Daily Horoscope).

ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (13th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಗುರುವಾರ

ತಿಥಿ: ಸಪ್ತಮಿ ರಾತ್ರಿ 08.37ರವರೆಗೂ ಇರುತ್ತದೆ ನಂತರ ಅಷ್ಟಮಿ ಆರಂಭವಾಗುತ್ತದೆ.

ನಕ್ಷತ್ರ: ಪುಬ್ಬ ನಕ್ಷತ್ರವು ರಾತ್ರಿ 04.40 ರವರೆಗೂ ಇದ್ದು ನಂತರ ಉತ್ತರ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.45

ರಾಹುಕಾಲ: 01.59 ರಿಂದ ಸಂಜೆ 03.35

ರಾಶಿಫಲ

ಮೇಷ

ಉತ್ತಮ ಬುದ್ಧಿಶಕ್ತಿ ಇರುತ್ತದೆ. ಆದರೆ ಚಂಚಲ ಸ್ವಭಾವ ಮತ್ತು ಅನುಮಾನದ ಗುಣದಿಂದಾಗಿ ಅದರ ಬಳಕೆ ಆಗುವುದಿಲ್ಲ. ದಿನನಿತ್ಯದ ಕಾರ್ಯಕ್ರಮಗಳಲ್ಲಿ ಅನಾವಶ್ಯಕ ಆಡಚಣೆಗಳು ಎದುರಾಗಲಿವೆ. ಸ್ತ್ರೀಯರು ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ನಿರ್ವಹಿಸುತ್ತಾರೆ. ಆದರೆ ಅಪವಾದವೊಂದು ಬರುತ್ತದೆ. ಗಂಟಲಿನ ಸೋಂಕು ನಿಮ್ಮನ್ನು ಕಾಡಲಿದೆ. ಅತ್ತೆಯವರ ಆರೋಗ್ಯದಲ್ಲಿ ತೊಂದರೆ ಕಂಡು ಬರುತ್ತದೆ. ಗಂಡು ಮಕ್ಕಳ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಇರುತ್ತದೆ. ಮೃದುವಾಗಿ ಮಾತನಾಡಬಲ್ಲಿರಿ. ಈ ಕಾರಣದಿಂದ ಶತ್ರುಗಳು ಮಿತ್ರರಾಗುತ್ತಾರೆ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಆಸಕ್ತಿ ತೋರುವಿರಿ. ಸಮಾಜದ ಹಿರಿಯ ವ್ಯಕ್ತಿಗಳನ್ನು ಭೇಟಿ ಮಾಡುವಿರಿ. ಸ್ವಂತ ಮನೆ ಕೊಳ್ಳುವ ಯೋಜನೆಗೆ ಚಾಲನೆ ದೊರೆಯುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ವೃಷಭ

ಗುರು ಹಿರಿಯರ ಮಾರ್ಗದರ್ಶನದಿಂದ ಸಂತೋಷದಿಂದ ಬಾಳುವಿರಿ. ವಿದ್ಯಾರ್ಥಿಗಳು ಹೆಚ್ಚಿನ ಪ್ರಯತ್ನದಿಂದ ಮಾತ್ರ ಯಶಸ್ಸನ್ನು ಗಳಿಸಲು ಸಾಧ್ಯ. ವಿವಾದಗಳಲ್ಲಿ ಹೆಚ್ಚಿನ ಆಸಕ್ತಿ ಇರುತ್ತದೆ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಬಾಳುವಿರಿ. ಕವಿಗಳು ಮತ್ತು ಬರಹಗಾರರಿಗೆ ಹೊಸ ಅವಕಾಶ ದೊರೆಯುತ್ತದೆ. ದೇಹದಲ್ಲಿ ನೋವಿರುತ್ತದೆ. ಚರ್ಮದ ಸಮಸ್ಯೆ ಗುಣವಾಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ವಿಶೇಷ ಆಸಕ್ತಿ ತೋರುವಿರಿ. ನಿಮ್ಮದೇ ಮನಸ್ಥಿತಿಯುಳ್ಳ ಸ್ನೇಹಿತರೊಂದಿಗೆ ಭವಿಷ್ಯದ ಬಗ್ಗೆ ಚರ್ಚಿಸುವಿರಿ. ಪಾಲುದಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷಿತ ಧನ ಲಾಭವಿರುತ್ತದೆ. ಸ್ನೇಹಿತರಿಗಾಗಿ ಮನರಂಜನಾ ಕೂಟವನ್ನು ಆಯೋಜಿಸುವಿರಿ. ದಂಪತಿ ನಡುವೆ ಉತ್ತಮ ಅನುಬಂಧ ಇರುತ್ತದೆ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕೆಂಪು

ಮಿಥುನ

ಗೃಹಿಣಿಯರಿಗೆ ಉತ್ತಮ ಆರೋಗ್ಯವಿರುತ್ತದೆ. ಹೊಸ ವಾಹನ ಕೊಳ್ಳುವಿರಿ. ಧಾರ್ಮಿಕ ಕೆಲಸವೊಂದನ್ನು ನಡೆಸಿ ಕೊಡುವಿರಿ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಇರುವಿರಿ.ಕಷ್ಟದಲ್ಲಿರುವವರಿಗೆ ಹಣಕಾಸಿನ ಸಹಾಯ ಮಾಡುವಿರಿ. ಕುಟುಂಬದಲ್ಲಿನ ಜವಾಬ್ದಾರಿಗಳನ್ನು ಸುಲಭವಾಗಿ ನಿರ್ವಹಿಸುವಿರಿ.ನಿಮ್ಮ ವಯಸ್ಸಿನ ಜನರ ನಡುವೆ ನಾಯಕರಾಗಿ ಬಾಳುವಿರಿ. ಅವಿವಾಹಿತರಿಗೆ ಆತ್ಮಿಯರೊಂದಿಗೆ ವಿವಾಹದ ಮಾತುಕತೆ ನಡೆಯಲಿದೆ. ಅನಿವಾರ್ಯವಾಗಿ ಆಹಾರ ಪದ್ಧತಿ ಬದಲಾಗುತ್ತದೆ. ಸಂಗಾತಿಯ ಜೊತೆಯಲ್ಲಿ ಉತ್ತಮ ಆತ್ಮೀಯತೆ ಇರುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಒಳ್ಳೆಯ ಲಾಭದೊರೆಯುತ್ತದೆ. ಮನೆಯನ್ನು ಶುಭ್ರಗೊಳಿಸಲು ಸಹಕಾರ ನೀಡುವಿರಿ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕಿತ್ತಳೆ

ಕಟಕ

ಅನಾರೋಗ್ಯದಿಂದ ಪಾರಾಗುವಿರಿ. ಯುವಕರಿಗೆ ವಿಶೇಷ ಸೌಕರ್ಯಗಳು ದೊರೆಯಲಿವೆ. ನಿರುದ್ಯೋಗಿಗಳಿಗೆ ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ಲಭಿಸುತ್ತದೆ. ಒಂದಕ್ಕಿಂತಲೂ ಹೆಚ್ಚು ಉದ್ಯೋಗ ಮಾಡುವಿರಿ. ಹಣಕಾಸಿನ ಸ್ಥಿತಿಯಲ್ಲಿ ಮಹತ್ತರ ಬದಲಾವಣೆ ಕಂಡುಬರುತ್ತದೆ. ಹಣವನ್ನು ಉಳಿಸಲು ಸಾಧ್ಯವಾಗದೆ ಹೋದರೂ ತೊಂದರೆ ಇರುವುದಿಲ್ಲ. ಯಾರೊಬ್ಬರ ಸಲಹೆಯನ್ನು ಒಪ್ಪುವುದಿಲ್ಲ. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಗೌರವಕ್ಕೆ ಪಾತ್ರರಾಗುವಿರಿ. ಬಂಧು-ಬಳಗದವರ ಸಹಾಯದಿಂದ ಜೀವನದ ತೊಂದರೆಗಳಿಂದ ಮುಕ್ತಿ ಪಡೆಯುವಿರಿ. ಆರೋಗ್ಯದಲ್ಲಿ ಯಾವುದೇ ತೊಂದರೆ ಎದುರಾಗುವುದಿಲ್ಲ. ವಿದ್ಯಾರ್ಥಿಗಳು ಆತಂಕದ ಕ್ಷಣಗಳನ್ನು ಎದುರಿಸುತ್ತಾರೆ. ವಾಹನ ತೊಂದರೆ ಉಂಟಾಗಬಹುದು, ಎಚ್ಚರಿಕೆಯಿಂದ ಇರಿ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಹಳದಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.