ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಕುಟುಂಬದಲ್ಲಿ ಮಂಗಳ ಕಾರ್ಯ ನಡೆಯಲಿದೆ, ಹೆಣ್ಣುಮಕ್ಕಳು ಸಂಗೀತ ನಾಟ್ಯದಲ್ಲಿ ಸಾಧನೆ ಮಾಡಲಿದ್ದಾರೆ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ

ಕುಟುಂಬದಲ್ಲಿ ಮಂಗಳ ಕಾರ್ಯ ನಡೆಯಲಿದೆ, ಹೆಣ್ಣುಮಕ್ಕಳು ಸಂಗೀತ ನಾಟ್ಯದಲ್ಲಿ ಸಾಧನೆ ಮಾಡಲಿದ್ದಾರೆ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ

13 ಜೂನ್‌ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (13th June 2024 Daily Horoscope).

ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲಾ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (13th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಗುರುವಾರ

ತಿಥಿ: ಸಪ್ತಮಿ ರಾತ್ರಿ 08.37ರವರೆಗೂ ಇರುತ್ತದೆ ನಂತರ ಅಷ್ಟಮಿ ಆರಂಭವಾಗುತ್ತದೆ.

ನಕ್ಷತ್ರ: ಪುಬ್ಬ ನಕ್ಷತ್ರವು ರಾತ್ರಿ 04.40 ರವರೆಗೂ ಇದ್ದು ನಂತರ ಉತ್ತರ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.45

ರಾಹುಕಾಲ: 01.59 ರಿಂದ ಸಂಜೆ 03.35

ರಾಶಿಫಲ

ಸಿಂಹ

ಕುಟುಂಬ ಮತ್ತು ನೆರೆಹೊರೆಯವರ ಮನಸ್ಸಿಗೆ ಹತ್ತಿರವಾಗುವಿರಿ. ಬಂಧು-ಬಳಗದವರ ಕಷ್ಟಗಳಿಗೆ ಜೊತೆಯಾಗಿ ನಿಲ್ಲುವಿರಿ. ನಂಬಿಕೆ ಬರದೆ ಯಾರಿಗೂ ಹಣದ ಸಹಾಯ ಮಾಡುವುದಿಲ್ಲ. ಪರಂಪರೆ ಮತ್ತು ಪ್ರಾಚೀನ ಶಾಸ್ತ್ರಗಳಲ್ಲಿ ಆಸಕ್ತಿ ಮೂಡುತ್ತದೆ. ಹೆಣ್ಣುಮಕ್ಕಳು ಸಂಗೀತ ನಾಟ್ಯದಲ್ಲಿ ವಿಶೇಷ ಸಾಧನೆ ಮಾಡಲಿದ್ದಾರೆ. ವಾದ ವಿವಾದ ಉಂಟಾಗಬಹುದು. ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿನ ಆಸಕ್ತಿ ತೋರುವಿರಿ. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಕಾಣುವುದಿಲ್ಲ. ಅನಿರೀಕ್ಷಿತ ಧನ ಲಾಭವಿದೆ. ಮನ ಶಾಂತಿಗಾಗಿ ಧ್ಯಾನದ ಮಾರ್ಗವನ್ನು ಆರಿಸುವಿರಿ. ಬೇರೊಬ್ಬರ ಸಹಾಯವಿಲ್ಲದೆ ಸ್ವತಂತ್ರವಾಗಿ ನಿಮ್ಮ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಸೋದರರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳುವಿರಿ. ಅವಕಾಶ ದೊರೆತರೂ ಉದ್ಯೋಗ ಬದಲಿಸುವುದಿಲ್ಲ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ :1

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಹಸಿರು

ಕನ್ಯಾ

ಮನಸ್ಸಿಗೆ ಒಪ್ಪುವಂತಹ ಒಳ್ಳೆಯ ಕೆಲಸಗಳನ್ನು ಮಾಡುವಿರಿ. ನಿಮ್ಮಲ್ಲಿರುವ ಧೈರ್ಯ ಸೋಲಿನಿಂದ ಪಾರು ಮಾಡುತ್ತದೆ. ಕುಟುಂಬದ ಉನ್ನತ ಜವಾಬ್ದಾರಿಯು ನಿಮ್ಮದಾಗಲಿದೆ. ಸಮಾಜದಲ್ಲಿ ನಿಮಗೆ ಗೌರವಯುತ ಸ್ಥಾನ ದೊರೆಯಲಿದೆ. ನಿಮ್ಮ ಮನಸ್ಸಿನಲ್ಲಿ ಭವಿಷ್ಯದ ಜೀವನದ ಬಗ್ಗೆ ಹಲವಾರು ಯೋಚನೆಗಳು ಇರುತ್ತವೆ. ಯುವಕ ಯುವತಿಯರಿಗೆ ಕಣ್ಣಿನ ತೊಂದರೆ ಇರುತ್ತದೆ. ಕುಟುಂಬದಲ್ಲಿ ಮಂಗಳ ಕಾರ್ಯವೊಂದು ನಡೆಯಲಿದೆ. ಆರಂಭದಲ್ಲಿ ಅಡಚಣೆಗಳು ಎದುರಾದರೂ ಉದ್ಯೋಗದಲ್ಲಿ ಯಾವುದೇ ತೊಂದರೆ ಬಾರದು. ನಿಮ್ಮಲ್ಲಿರುವ ಒಳ್ಳೆಯತನವನ್ನು ದುರುಪಯೋಗಪಡಿಸಿಕೊಳ್ಳುವ ಜನರಿದ್ದಾರೆ ಎಚ್ಚರಿಕೆ ಇರಲಿ. ವಿದ್ಯಾರ್ಥಿಗಳು ತಮಗೆ ಅರಿವಿಲ್ಲದಂತೆ ಇಕ್ಕಟ್ಟಿನ ಪರಿಸ್ಥಿತಿಗೆ ಸಿಲುಕುತ್ತಾರೆ.

ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ : ನೀಲಿ ಬಣ್ಣ

ತುಲಾ

ಆತ್ಮೀಯರೇ ನಿಮ್ಮ ತೀರ್ಮಾನಗಳನ್ನು ವಿರೋಧಿಸುತ್ತಾರೆ. ಆದರೆ ಯಾವುದೇ ತೊಂದರೆ ಕಂಡುಬರುವುದಿಲ್ಲ. ಮಾತುಕತೆಯಿಂದ ಆತಂಕದ ಪರಿಸ್ಥಿತಿ ತಿಳಿಕೊಳ್ಳುತ್ತದೆ. ವಿವಿಧ ಮೂಲೆಗಳಿಂದ ಅನಿರೀಕ್ಷಿತ ಧನಲಾಭವಿದೆ. ಬೇಸಾಯದಲ್ಲಿ ಆಸಕ್ತಿ ಇದ್ದರೆ ಅದು ಇಂದು ಕಾರ್ಯರೂಪಕ್ಕೆ ಬರುತ್ತದೆ. ಆತ್ಮೀಯರನ್ನು ಅತಿ ಪ್ರೀತಿ ವಿಶ್ವಾಸದಿಂದ ನೋಡುವಿರಿ. ಸಾಕುಪ್ರಾಣಿಗಳ ಬಗ್ಗೆ ದಯೆ ತೋರುವಿರಿ. ಪ್ರಯೋಜನವಿಲ್ಲದ ವಿಚಾರಗಳಿಗಾಗಿ ಹಣ ಖರ್ಚಾಗುತ್ತದೆ. ದುಡುಕದೆ ನಿಧಾನವಾಗಿ ಸರಿಯಾದ ತೀರ್ಮಾನಗಳನ್ನು ತೆಗೆದುಕೊಳ್ಳುವಿರಿ. ನೀವೆಷ್ಟೇ ಬುದ್ಧಿವಂತರಾದರು ಪ್ರಯೋಜನವಾಗದು. ಸೋದರನ ಜೀವನದಲ್ಲಿ ಧನಾತ್ಮಕ ಬದಲಾವಣೆಗಳು ಕಂಡುಬರಲಿದೆ. ಯಾವುದೇ ವಿಚಾರವಾದರೂ ನಿಮ್ಮಲ್ಲಿರುವ ಜ್ಞಾನವನ್ನು ಎಲ್ಲರಲ್ಲೂ ಹಂಚಿಕೊಳ್ಳುವಿರಿ.

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು ನೈರುತ್ಯ

ಅದೃಷ್ಟದ ಬಣ್ಣ: ನೇರಳೆ

ವೃಶ್ಚಿಕ

ಯಾವುದೇ ಕಾರಣಕ್ಕೂ ಒಮ್ಮೆ ತೆಗೆದುಕೊಂಡ ತೀರ್ಮಾನವನ್ನು ಬದಲಾಯಿಸುವುದಿಲ್ಲ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ವರ್ತಿಸುವಿರಿ. ಕುಟುಂಬದಲ್ಲಿ ಅನಾವಶ್ಯಕ ವಾದ ವಿವಾದಗಳಿರುತ್ತವೆ. ಒಳ್ಳೆಯ ಕೆಲಸಗಳಿಗಾಗಿ ಹಣವನ್ನು ದೇಣಿಗೆಯಾಗಿ ನೀಡುವಿರಿ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಆಸಕ್ತಿ ತೋರುವುದಿಲ್ಲ. ಆತ್ಮೀಯರೊಂದಿಗೆ ಸಹನೆಯಿಂದ ವರ್ತಿಸುವಿರಿ. ಎಲ್ಲರ ಪ್ರೀತಿ ವಿಶ್ವಾಸ ನಿಮ್ಮದಾಗುತ್ತದೆ. ಮನಸ್ಸಿನ ಬೇಸರದಿಂದ ಹೊರ ಬರಲು ಯಾತ್ರಾಸ್ಥಳಕ್ಕೆ ಭೇಟಿ ನೀಡುವಿರಿ. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಅಧಿಕಾರ ದೊರೆಯುತ್ತದೆ. ಸಂತಾನ ಲಾಭವಿದೆ. ದಂಪತಿಗಳು ಸುಖ ಸಂತೋಷದಿಂದ ಬಾಳುತ್ತಾರೆ. ಮಕ್ಕಳಿಗೆ ವಿಶೇಷ ಸೌಕರ್ಯಗಳನ್ನು ಕಲ್ಪಿಸುವಿರಿ. ಕುಟುಂಬದಿಂದ ದೂರ ಉಳಿಯಲು ಪ್ರಯತ್ನಿಸುವಿರಿ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಗುಲಾಬಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

 

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.