ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಬಂಧು ಬಳಗದವರಿಂದ ದೂರ ಉಳಿಯಲಿದ್ದೀರಿ, ದಂಪತಿ ನಡುವೆ ಮನಸ್ತಾಪ; ಧನಸ್ಸು, ಮಕರ, ಕುಂಭ, ಮೀನ ರಾಶಿ ಭವಿಷ್ಯ

ಬಂಧು ಬಳಗದವರಿಂದ ದೂರ ಉಳಿಯಲಿದ್ದೀರಿ, ದಂಪತಿ ನಡುವೆ ಮನಸ್ತಾಪ; ಧನಸ್ಸು, ಮಕರ, ಕುಂಭ, ಮೀನ ರಾಶಿ ಭವಿಷ್ಯ

13 ಜೂನ್‌ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (13th June 2024 Daily Horoscope).

ಧನಸ್ಸು, ಮಕರ, ಕುಂಭ, ಮೀನ ರಾಶಿ ಭವಿಷ್ಯ
ಧನಸ್ಸು, ಮಕರ, ಕುಂಭ, ಮೀನ ರಾಶಿ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(13th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಗುರುವಾರ

ತಿಥಿ: ಸಪ್ತಮಿ ರಾತ್ರಿ 08.37ರವರೆಗೂ ಇರುತ್ತದೆ ನಂತರ ಅಷ್ಟಮಿ ಆರಂಭವಾಗುತ್ತದೆ.

ನಕ್ಷತ್ರ: ಪುಬ್ಬ ನಕ್ಷತ್ರವು ರಾತ್ರಿ 04.40 ರವರೆಗೂ ಇದ್ದು ನಂತರ ಉತ್ತರ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.45

ರಾಹುಕಾಲ: 01.59 ರಿಂದ ಸಂಜೆ 03.35

ರಾಶಿಫಲ

ಧನಸ್ಸು

ಮಾಡುವ ಕೆಲಸವೆಲ್ಲವೂ ಸರಿಯಾದ ಹಾದಿಯಲ್ಲಿದೆ ಎಂಬ ಭಾವನೆ ಇರುತ್ತದೆ. ಇದರಿಂದಾಗಿ ಆತ್ಮೀಯರೇ ನಿಮ್ಮ ರೀತಿ ರಿವಾಜುಗಳನ್ನು ವಿರೋಧಿಸುತ್ತಾರೆ. ಆರೋಗ್ಯ ಸಮಸ್ಯೆ ಕಾಡಲಿದೆ. ಪ್ರತಿಯೊಂದು ಕೆಲಸ ಕಾರ್ಯದಲ್ಲಿಯೂ ಅಡ್ಡಿ ಆತಂಕವಿರುತ್ತದೆ. ಕಷ್ಟವೆನಿಸಿದರೂ ಎಲ್ಲಾ ರೀತಿಯ ಅನುಕೂಲತೆಗಳನ್ನು ಪಡೆಯುವಿರಿ. ಸಮಾಜದಲ್ಲಿ ಉನ್ನತ ಗೌರವ ಪ್ರತಿಷ್ಠೆ ಲಭಿಸುತ್ತದೆ. ವಿದ್ಯಾರ್ಥಿಗಳಿಗೆ ಉನ್ನತ ಅಧ್ಯಯನಕ್ಕೆ ವಿಶೇಷ ಅವಕಾಶ ದೊರೆಯುತ್ತದೆ. ಬೇಡದ ಖರ್ಚು ವೆಚ್ಚಗಳಿಂದ ಹಣದ ಕೊರತೆ ಇರುತ್ತದೆ. ಹೊಸ ವಾಹನವನ್ನು ಕೊಳ್ಳುವಿರಿ. ವಾಸ ಸ್ಥಳವನ್ನು ಬದಲಿಸುವಿರಿ. ನಿಮ್ಮ ಮಕ್ಕಳಿಗೆ ಪರಸ್ಥಳದಲ್ಲಿ ಉದ್ಯೋಗ ದೊರೆಯುತ್ತದೆ. ಉದ್ಯೋಗದ ಸಲುವಾಗಿ ತಂದೆಯವರು ದೂರದ ಊರಿಗೆ ತೆರಳುತ್ತಾರೆ.

ಪರಿಹಾರ : ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಮಕರ

ಉದ್ಯೋಗದಲ್ಲಿ ಅಧಿಕಾರಿಯಾಗಿ ಬಡ್ತಿ ದೊರೆಯುತ್ತದೆ. ಸಂತಾನ ಲಾಭವಿದೆ. ಮಕ್ಕಳು ಸುಖ ಸಂತೋಷದಿಂದ ಬಾಳ್ವೆ ನಡೆಸುತ್ತಾರೆ. ಯಾವುದೇ ವಿಚಾರವಾದರೂ ಅದರ ಬಗ್ಗೆ ಸಂಪೂರ್ಣ ಅಧ್ಯಯನ ನಡೆಸುವಿರಿ. ಮಧ್ಯ ವಯಸ್ಕರಾದಲ್ಲಿ ಜೀವನದಲ್ಲಿನ ಕಷ್ಟಗಳು ಕಡಿಮೆಯಾಗಲಿವೆ ಉದ್ಯೋಗದಲ್ಲಿ ಕೆಲವೊಮ್ಮೆ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಬಿಡುವಿಲ್ಲದಂತೆ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕಾಗುತ್ತದೆ. ಬಂಧು ಬಳಗದವರಿಂದ ದೂರವಿರಲು ಬಯಸುತ್ತೀರಿ. ಸಹಾಯ ಮಾಡಿದವರಿಗೆ ಸ್ನೇಹ ಪ್ರೀತಿಯನ್ನು ನೀಡುವಿರಿ. ಎಲ್ಲರಿಗೂ ಇಷ್ಟವಾಗುವಂತೆ ಮಾತನಾಡುವಿರಿ. ಹಣದ ತೊಂದರೆ ಕಂಡುಬರುವುದಿಲ್ಲ ಭವಿಷ್ಯದ ಜೀವನವನ್ನು ದೃಷ್ಠಿಯಾಗಿರಿಸಿಕೊಂಡು ಹಣ ಉಳಿತಾಯ ಮಾಡುವಿರಿ.

ಪರಿಹಾರ : ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಬೂದು

ಕುಂಭ

ಕುಟುಂಬದ ಬಹುತೇಕ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕಾಗುತ್ತದೆ. ಸಮಾಜದಲ್ಲಿ ಪ್ರಭಾವಿ ವ್ಯಕ್ತಿಗಳಾಗಿ ಬಾಳುವಿರಿ. ಹಣಕಾಸಿನ ಕೊರತೆ ಕಂಡುಬರುವುದಿಲ್ಲ. ವಿದ್ಯಾಭ್ಯಾಸದಲ್ಲಿ ಅಲ್ಪ ಮಟ್ಟದ ಹಿನ್ನಡೆ ಕಂಡು ಬರುತ್ತದೆ. ಊಹಾಪೋಹಗಳನ್ನು ನಂಬದೇ ಹೋದರೂ ಚಾಡಿ ಮಾತುಗಳನ್ನು ಕೇಳುವಿರಿ. ಕೆಟ್ಟ ಹವ್ಯಾಸಗಳಿದ್ದರೆ ಅದರಿಂದ ದೂರ ಉಳಿಯುವ ನಿಶ್ಚಯ ಮಾಡುವಿರಿ. ದಂಪತಿ ನಡುವೆ ಅನಾವಶ್ಯಕ ಮನಸ್ತಾಪವಿರುತ್ತದೆ. ವೈಭವದ ಜೀವನವನ್ನು ನಡೆಸಲು ಇಷ್ಟಪಡುವಿರಿ. ಸಮಯಕ್ಕೆ ತಕ್ಕಂತೆ ಬುದ್ಧಿವಂತಿಕೆಯಿಂದ ವರ್ತಿಸುವಿರಿ. ಶ್ರಮಜೀವಿಗಳ ಬಗ್ಗೆ ಪ್ರೀತಿ ಅನುಕಂಪ ಇರುತ್ತದೆ. ಉದರ ವಾಯುವಿನ ದೋಷ ನಿಮ್ಮನ್ನು ಕಾಡುತ್ತದೆ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಂದು

ಮೀನ

ನಿಮ್ಮ ಸಹಾಯದಿಂದ ಸೋದರರು ಉನ್ನತ ಮಟ್ಟ ತಲುಪುತ್ತಾರೆ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಬಾಳಲು ಇಷ್ಟಪಡುವಿರಿ. ಸುಲಭವಾಗಿ ಯಾವುದೇ ಕೆಲಸವನ್ನು ಆರಂಭಿಸುವುದಿಲ್ಲ. ಆದರೆ ಒಮ್ಮೆ ನಿರ್ಧರಿಸಿದ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಬಂಧು ಬಳಗದವರ ಮೇಲೆ ನಂಬಿಕೆ ಇರುವುದಿಲ್ಲ. ಕುಟುಂಬದ ಸದಸ್ಯರ ಜೊತೆ ಪ್ರವಾಸಕ್ಕೆ ತೆರಳುವಿರಿ. ಸೋದರಿಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಮನದಲ್ಲಿ ಆತಂಕದ ಭಾವನೆ ಇರುತ್ತದೆ. ಅನಾವಶ್ಯಕ ಖರ್ಚು ವೆಚ್ಚಗಳಿಂದ ಹಣದ ಕೊರತೆ ಉಂಟಾಗುತ್ತದೆ. ಒಳ್ಳೆಯ ಮನಸ್ಸಿರುವ ನೀವು ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ. ಎಲ್ಲರೊಂದಿಗೆ ಹೊಂದಿಕೊಂಡು ಬಾಳುವಿರಿ. ದಂಪತಿ ನಡುವೆ ಉತ್ತಮ ಅನುಬಂಧವಿರುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೇಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 7

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಕಪ್ಪು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.