ಕನ್ನಡ ಸುದ್ದಿ  /  Astrology  /  Horoscope Today Astrology Prediction 13th March 2024 Leo Virgo Libra Scorpio Daily Horoscope Sts

Horoscope Today: ಆತ್ಮೀಯರೊಬ್ಬರಿಂದ ನಿರಾಸೆ, ಸಾಲ ಮಾಡಿ ತೊಂದರೆಗೆ ಸಿಲುಕುವಿರಿ, ಎಚ್ಚರ; ಮಾರ್ಚ್‌ 13 ರಾಶಿ ಭವಿಷ್ಯ

13 ಮಾರ್ಚ್‌ 2024, ಬುಧವಾರ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (13th March 2024 Daily Horoscope).

13 ಮಾರ್ಚ್‌ 2024, ಬುಧವಾರ
13 ಮಾರ್ಚ್‌ 2024, ಬುಧವಾರ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (13th March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಶುಕ್ಲಪಕ್ಷ-ಬುಧವಾರ

ತಿಥಿ: ತದಿಗೆ ಬೆಳಗ್ಗೆ 08.25 ವರೆಗೂ ಇರುತ್ತದೆ ನಂತರ ಉಪರಿ ಚೌತಿ ಇರುತ್ತದೆ.

ನಕ್ಷತ್ರ: ಅಶ್ವಿನಿ ನಕ್ಷತ್ರವು ರಾ.11.06 ರವರೆಗೆ ಇರುತ್ತದೆ ಆನಂತರ ಭರಣಿ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ06.29

ಸೂರ್ಯಾಸ್ತ: ಸಂಜೆ 06.29

ರಾಹುಕಾಲ: ಮಧ್ಯಾಹ್ನ 12.00 ರಿಂದ 01.30

ಸಿಂಹ

ಹಿರಿಯರ ಸಮ್ಮತಿ ಇಲ್ಲದೆ ಸ್ವತಂತ್ರವಾಗಿ ಯಾವುದೇ ಕೆಲಸ ಮಾಡಲಾಗುವುದಿಲ್ಲ. ಇದರಿಂದ ಅನಾವಶ್ಯಕ ತೊಂದರೆ ಎದುರಿಸಬೇಕು. ಎದುರಾಗುವ ಅಡ್ಡಿ ಆತಂಕಗಳನ್ನು ಜಯಿಸಿ ಕೆಲಸ ಕಾರ್ಯಗಳಲ್ಲಿ ಯಶಸ್ಸು ಗಳಿಸುವಿರಿ. ಉದ್ಯೋಗದಲ್ಲಿ ಅತಿ ಮುಖ್ಯ ಕೆಲಸವೊಂದು ಅಪೂರ್ಣಗೊಳ್ಳಲಿದೆ. ಅನಿರೀಕ್ಷಿತ ಲಾಭ ಸಂತೋಷ ತಂದುಕೊಡಲಿದೆ. ಸ್ನೇಹಿತರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ. ಬಿಡುವಿಲ್ಲದ ಕೆಲಸದ ಕಾರಣ ದಾಂಪತ್ಯದಲ್ಲಿ ಮನಸ್ತಾಪ ಇರಲಿದೆ. ಆತ್ಮೀಯರೊಂದಿಗೆ ವಿಶ್ವಾಸದಿಂದ ಪಾಲುಗಾರಿಕೆಯ ವ್ಯಾಪಾರವನ್ನು ಆರಂಭಿಸುವಿರಿ. ಕುಟುಂಬದ ಸದಸ್ಯರ ಸುಖ ಜೀವನಕ್ಕಾಗಿ ಯಾವುದೇ ತ್ಯಾಗಕ್ಕೂ ಸಿದ್ಧರಾಗುವಿರಿ. ಸಾಲದ ವ್ಯವಹಾರದಿಂದ ತೊಂದರೆಗೆ ಸಿಲುಕುವಿರಿ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಎಲೆ ಹಸಿರು

ಕನ್ಯಾ

ಕುಟುಂಬದಲ್ಲಿ ಬಿಗುವಿನ ವಾತಾವರಣವಿರುತ್ತದೆ. ಶಾಂತ ಸ್ವಭಾವದವರಾದ ನೀವು ಕೋಪಗೊಳ್ಳುವ ಪ್ರಸಂಗವೊಂದು ನಡೆಯಲಿದೆ. ಅನಾವಶ್ಯಕವಾಗಿ ತೆಗೆದುಕೊಂಡ ನಿರ್ಣಯಗಳನ್ನು ಬದಲಿಸುವಿರಿ. ಅತಿಯಾದ ಚಿಂತೆ ಒಳ್ಳೆಯದಲ್ಲ. ಆತ್ಮೀಯರೊಬ್ಬರಿಂದ ನಿರಾಸೆ ಉಂಟಾಗಬಹುದು. ಮನಸ್ಸಿಲ್ಲದೆ ಹೋದರೂ ಕೆಲವರಿಗೆ ಹಣದ ಸಹಾಯ ಮಾಡುವಿರಿ. ಉತ್ತಮ ಅವಕಾಶ ದೊರೆಯುವ ಕಾರಣ ಉದ್ಯೋಗ ಬದಲಿಸುವಿರಿ. ಆರ್ಥಿಕ ಪರಿಸ್ಥಿತಿಯಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಇದ್ದ ಬಿಕ್ಕಟ್ಟು ಪರಿಹಾರಗೊಳ್ಳುತ್ತದೆ. ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಹಣದ ಅವಶ್ಯಕತೆ ಇರಲಿದೆ. ಆರೋಗ್ಯದಲ್ಲಿ ಚೇತರಿಕೆ ಇರಲಿದೆ.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕೇಸರಿ

ತುಲಾ

ಆರೋಗ್ಯದಲ್ಲಿ ಸ್ಥಿರತೆ ಕಾಪಾಡಿಕೊಂಡು ಕೆಲಸ ಕಾರ್ಯಗಳಲ್ಲಿ ಮುನ್ನಡೆಯುವಿರಿ. ಸಾಧ್ಯವಾದಷ್ಟು ತೀವ್ರಗತಿಯಲ್ಲಿ ದೊರೆಯುವ ಜವಾಬ್ದಾರಿಯನ್ನು ಪೂರ್ಣಗೊಳಿಸಲು ಬಯಸುವಿರಿ. ಗುರಿ ಇಲ್ಲದೆ ದುಡಿಯದೇ ಎಲ್ಲರೂ ಮೆಚ್ಚುವಂತಹ ಕೆಲಸ ಕಾರ್ಯಗಳನ್ನು ಮಾಡುವಿರಿ. ಆಂತರಿಕ ಶತ್ರುಗಳ ಬಗ್ಗೆ ಗಮನಹರಿಸಿ. ಕುಟುಂಬದಲ್ಲಿ ಒಬ್ಬರನ್ನೊಬ್ಬರು ಅರಿತು ಬಾಳುವಿರಿ. ಕೇವಲ ಲಾಭ ದೊರೆಯುವ ಕೆಲಸ ಕಾರ್ಯಗಳನ್ನು ಮಾಡಲಿಚ್ಚಿಸುವಿರಿ. ಹಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವಿರಿ. ಸಂಬಂಧಿಕರ ಜೊತೆಯಲ್ಲಿ ವಾದ ವಿವಾದ ಇರಲಿವೆ. ದಾಂಪತ್ಯ ಜೀವನದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ಬೇಸರದಿಂದ ಹೊರಬಂದು ಕಿರು ಪ್ರವಾಸ ಕೈಗೊಳ್ಳುವಿರಿ. ಉದ್ಯೋಗದಲ್ಲಿ ಸಾಕಷ್ಟು ಬದಲಾವಣೆಗಳು ಕಂಡು ಬರಲಿವೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕಂದು

ವೃಶ್ಚಿಕ

ಕುಟುಂಬದ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಕೋಪ ತೊರೆದು ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ವ್ಯವಹರಿಸುವಿರಿ. ಕುಟುಂಬದಲ್ಲಿ ಉತ್ತಮ ಬಾಂಧವ್ಯ ಇರಲಿದೆ. ಸೋಲು ಮತ್ತು ಗೆಲುವನ್ನು ಒಂದೇ ದೃಷ್ಟಿಯಿಂದ ಸ್ವೀಕರಿಸುವಿರಿ. ಹಣ ಗಳಿಸುವುದರ ಜೊತೆ ಉಳಿಸುವ ತೀರ್ಮಾನಕ್ಕೆ ಬರುವಿರಿ. ಹೆಚ್ಚಿನ ಖರ್ಚನ್ನು ಭರಿಸಲು ಸ್ವಂತ ವ್ಯಾಪಾರ ಆರಂಭಿಸುವಿರಿ. ಭವಿಷ್ಯದ ಜೀವನಕ್ಕಾಗಿ ಹಣದ ಉಳಿತಾಯ ಮಾಡುವಿರಿ. ನಿಮ್ಮ ಕೆಲಸ ಕಾರ್ಯಗಳಿಗೆ ಎಲ್ಲರಿಂದ ಮೆಚ್ಚುಗೆ ಗಳಿಸುವಿರಿ. ಬಿಡುವಿನ ವೇಳೆಯಲ್ಲಿ ಜನಸೇವೆ ಮಾಡುವ ಅವಕಾಶ ದೊರೆಯಲಿದೆ. ಸಂಗಾತಿಯು ನಿಮ್ಮೆಲ್ಲಾ ಕೆಲಸ ಕಾರ್ಯಗಳಿಗೆ ಪೂರ್ಣ ಸಹಕಾರ ನೀಡುತ್ತಾರೆ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕೆಂಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).