Horoscope Today: ಶೀಘ್ರದಲ್ಲೇ ಈ ರಾಶಿಯವರ ಎಲ್ಲಾ ಪ್ರಯತ್ನಕ್ಕೂ ಶುಭಫಲ ದೊರೆಯಲಿದೆ; ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ
13 ಮಾರ್ಚ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (13th March 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(13th March 2024 Daily Horoscope).
ಇಂದಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಶುಕ್ಲಪಕ್ಷ-ಬುಧವಾರ
ತಿಥಿ: ತದಿಗೆ ಬೆಳಗ್ಗೆ 08.25 ವರೆಗೂ ಇರುತ್ತದೆ ನಂತರ ಉಪರಿ ಚೌತಿ ಇರುತ್ತದೆ.
ನಕ್ಷತ್ರ: ಅಶ್ವಿನಿ ನಕ್ಷತ್ರವು ರಾ.11.06 ರವರೆಗೆ ಇರುತ್ತದೆ ಆನಂತರ ಭರಣಿ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ06.29
ಸೂರ್ಯಾಸ್ತ: ಸಂಜೆ 06.29
ರಾಹುಕಾಲ: ಮಧ್ಯಾಹ್ನ 12.00 ರಿಂದ 01.30
ಧನಸ್ಸು
ಈ ದಿನವನ್ನು ಬಹುತೇಕ ವಿಶ್ರಾಂತಿಯಲ್ಲಿಯೇ ಕಳೆಯುವಿರಿ. ಬಿಡುವಿಲ್ಲದ ಕೆಲಸ ಕಾರ್ಯಗಳಿಂದ ದೈಹಿಕ ದೌರ್ಬಲ್ಯ ಕಾಡಬಹುದು. ಕುಟುಂಬದ ಹಿರಿಯರ ಪ್ರೀತಿ ವಿಶ್ವಾಸವನ್ನು ಸಂಪಾದಿಸುವಿರಿ. ಯಾವುದೇ ವಿಚಾರವಾದರೂ ಧೃಡವಾದ ಮನಸ್ಸಿನಿಂದ ಕೆಲಸವನ್ನು ಮಾಡುವುದಿಲ್ಲ. ಈ ಕಾರಣದಿಂದ ನಿಧಾನಗತಿಯ ಪ್ರಗತಿ ದೊರೆಯುತ್ತದೆ. ಮಕ್ಕಳಿಗಾಗಿ ಉತ್ತಮ ಸೌಲಭ್ಯವನ್ನು ನೀಡುವಿರಿ. ಕೂಡಿಟ್ಟ ಹಣವನ್ನು ಖರ್ಚು ಮಾಡುವ ಸಂಭವವಿದೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಆಸಕ್ತಿ ಇರುವುದಿಲ್ಲ. ಕೊಂಚವೂ ಯೋಚಿಸದೆ ಯಾವುದೇ ಕೆಲಸ ಕಾರ್ಯಗಳನ್ನು ಆರಂಭಿಸದಿರಿ. ಬೇರೆಯವರ ವಾದ ವಿವಾದಗಳಲ್ಲಿ ಮಧ್ಯಸ್ಥಿಕೆ ವಹಿಸಬೇಡಿ. ನಿಮ್ಮ ಪ್ರಯತ್ನಕ್ಕೆ ತಕ್ಕಂತ ಶುಭ ಫಲಗಳು ದೊರೆಯುತ್ತವೆ.
ಪರಿಹಾರ : ಬೆಳ್ಳಿ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಕಿತ್ತಳೆ
ಮಕರ
ಅವಿರತ ಶ್ರಮದ ಕೆಲಸ ಮನಸ್ಸಿಗೆ ಬೇಸರವನ್ನು ಉಂಟು ಮಾಡುತ್ತದೆ. ವಿಶ್ರಾಂತಿ ಮತ್ತು ಏಕಾಂತವನ್ನು ಬಯಸಿ ದೂರದ ಊರಿಗೆ ತೆರಳುವಿರಿ. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಭವಿಷ್ಯದ ಜೀವನಕ್ಕಾಗಿ ಹಣ ವಿನಿಯೋಗಿಸುವಿರಿ. ಸಮಯವನ್ನು ಅರಿತು ಮಾತನಾಡುವ ಕಾರಣ ವಿವಾದ ದೂರ ಉಳಿಯುತ್ತವೆ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಬಾಳುವಿರಿ. ಉದ್ಯೋಗದಲ್ಲಿ ನಿರೀಕ್ಷಿತ ಬದಲಾವಣೆಗಳು ಉಂಟಾಗಲಿವೆ. ತಂದೆ ಮಾಡುತ್ತಿದ್ದ ಉಪಕಸುಬೊಂದನ್ನು ಆಶ್ರಯಿಸುವಿರಿ. ಮಕ್ಕಳು ಕುಟುಂಬದ ಹಿರಿಯರ ನಿರೀಕ್ಷೆಯಂತೆ ನಡೆದುಕೊಳ್ಳುತ್ತಾರೆ. ಸಂಸಾರದಲ್ಲಿ ಉತ್ತಮ ಹೊಂದಾಣಿಕೆ ಇರಲಿ. ಅವಿವಾಹಿತರಿಗೆ ಆತ್ಮೀಯರ ಸಹಾಯದಿಂದ ವಿವಾಹ ನಿಶ್ಚಯವಾಗುತ್ತದೆ. ಅನಿವಾರ್ಯ ಕಾರಣಗಳಿಗಾಗಿ ವಾಸಸ್ಥಳ ಬದಲಾಯಿಸಬೇಕಾಗುತ್ತದೆ.
ಪರಿಹಾರ : ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹೊಸ ಉಡುಗೆ ತೊಡುಗೆ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಹಳದಿ
ಕುಂಭ
ಹೆಚ್ಚು ಮಾತನಾಡದೆ ಕೆಲಸ ಕಾರ್ಯಗಳಲ್ಲಿ ನಿರತರಾಗುವಿರಿ. ಯಶಸ್ಸು ದೊರೆಯುವವರೆಗೂ ಪ್ರಯತ್ನ ಮುಂದುವರಿಸುವಿರಿ. ಎದುರಾಗುವ ಸಮಸ್ಯೆಗಳನ್ನು ತಾಳ್ಮೆ ಮತ್ತು ಏಕಾಗ್ರತೆಯಿಂದ ಪರಿಹರಿಸುವಿರಿ. ಕುಟುಂಬದಲ್ಲಿ ಎಲ್ಲರೂ ಜವಾಬ್ದಾರಿಯನ್ನು ಹಂಚಿಕೊಳ್ಳಲಿದ್ದಾರೆ. ಹಣಕಾಸಿನ ವ್ಯವಹಾರಗಳಲ್ಲಿ ಅನುಭವಸ್ಥರ ಸಲಹೆಯನ್ನು ಪಾಲಿಸುವುದು ಒಳಿತು. ದಾಂಪತ್ಯ ಜೀವನದಲ್ಲಿ ಪರಸ್ಪರ ಪ್ರೀತಿ ಮತ್ತು ನಂಬಿಕೆ ಇರಲಿ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ಎಲ್ಲರೊಂದಿಗೆ ತಾಳ್ಮೆಯಿಂದ ವರ್ತಿಸುವಿರಿ. ಕುಟುಂಬದ ಅಗತ್ಯತೆಗಳನ್ನು ಪೂರೈಸಲು ಉತ್ಸುಕರಾಗುವಿರಿ. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಕಂಡು ಬರುವುದಿಲ್ಲ.
ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಹಸಿರು
ಮೀನ
ಆರೋಗ್ಯದಲ್ಲಿ ಏರಿಳಿತ ಇರಲಿದೆ. ಕುಟುಂಬಕ್ಕೆ ಸಂಬಂಧಿಸಿದ ಹಣಕಾಸಿನ ವಿವಾದವೊಂದು ಪರಿಹಾರಗೊಳ್ಳಲಿದೆ. ಶಾಂತಿ ನೆಮ್ಮದಿಯ ಜೀವನ ನಡೆಸುವಿರಿ. ಒಮ್ಮೆ ತೆಗೆದುಕೊಂಡ ನಿರ್ಣಯಗಳನ್ನು ಬದಲಿಸದಿರಿ. ಮನಸ್ಸಿನಲ್ಲಿ ಸಂಗಾತಿಯ ಬಗ್ಗೆ ಆಲೋಚನೆ ಇರಲಿದೆ. ನಿಮ್ಮ ನಂಬಿಕಸ್ಥ ವ್ಯಕ್ತಿಯೊಬ್ಬರು ವಿವಾದವನ್ನು ಉಂಟು ಮಾಡಬಹುದು. ಜನಸೇವಾಪರ ಕಾರ್ಯಕ್ರಮಗಳ ನೇತೃತ್ವವನ್ನು ವಹಿಸುವಿರಿ. ಆದಾಯಕ್ಕೆ ತಕ್ಕ ಖರ್ಚು ವೆಚ್ಚಗಳು ಬರಲಿವೆ. ಉದ್ಯೋಗ ಬದಲಿಸುವ ಸಾಧ್ಯತೆಗಳಿವೆ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ. ದಂಪತಿ ನಡುವೆ ಇದ್ದ ಮನಸ್ತಾಪ ಕೊನೆಗೊಳ್ಳುವುದು. ವಿದ್ಯಾರ್ಥಿಗಳ ಫಲಿತಾಂಶವು ತೃಪ್ತಿದಾಯಕವಾಗಿರುತ್ತದೆ. ನೀರಿರುವ ಪ್ರದೇಶಗಳಿಗೆ ಪ್ರವಾಸ ಹೋದಲ್ಲಿ ಎಚ್ಚರಿಕೆಯಿಂದ ಇರುವುದು ಕ್ಷೇಮ.
ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ : ನೀಲಿ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ವಿಭಾಗ