Horoscope Today: ದೀರ್ಘಕಾಲದಿಂದ ಕಾಡುತ್ತಿದ್ದ ಅನಾರೋಗ್ಯ ಸಮಸ್ಯೆಗೆ ಪರಿಹಾರ, ಅನಿರೀಕ್ಷಿತ ಧನಲಾಭ: ಮೇ 13 ರ ದಿನ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ದೀರ್ಘಕಾಲದಿಂದ ಕಾಡುತ್ತಿದ್ದ ಅನಾರೋಗ್ಯ ಸಮಸ್ಯೆಗೆ ಪರಿಹಾರ, ಅನಿರೀಕ್ಷಿತ ಧನಲಾಭ: ಮೇ 13 ರ ದಿನ ಭವಿಷ್ಯ

Horoscope Today: ದೀರ್ಘಕಾಲದಿಂದ ಕಾಡುತ್ತಿದ್ದ ಅನಾರೋಗ್ಯ ಸಮಸ್ಯೆಗೆ ಪರಿಹಾರ, ಅನಿರೀಕ್ಷಿತ ಧನಲಾಭ: ಮೇ 13 ರ ದಿನ ಭವಿಷ್ಯ

13 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (13th May 2024 Daily Horoscope).

ಮೇ 13 ರ ದಿನ ಭವಿಷ್ಯ
ಮೇ 13 ರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (13th May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಸೋಮವಾರ

ತಿಥಿ: ಷಷ್ಠಿ ರಾತ್ರಿ 04.40 ರವರೆಗು ಇರುತ್ತದೆ. ಆನಂತರ ಸಪ್ತಮಿ ಆರಂಭವಾಗುತ್ತದೆ.

ನಕ್ಷತ್ರ : ಪುನರ್ವಸು ನಕ್ಷತ್ರವು 01.29 ರವರೆಗು ಇರುತ್ತದೆ. ಆನಂತರ ಪುಷ್ಯ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.55

ಸೂರ್ಯಾಸ್ತ: ಸಂಜೆ 06.36

ರಾಹುಕಾಲ: ಬೆಳಗ್ಗೆ 07.35 ರಿಂದ 09.10

ರಾಶಿಫಲ

ಸಿಂಹ

ಧಾರ್ಮಿಕ ಕೆಲಸ ಕಾರ್ಯಗಳಿಂದ ದಿನದ ಕೆಲಸವನ್ನು ಆರಂಭಿಸುವಿರಿ. ಆತ್ಮೀಯರಿಗೆ ಹಣದ ಸಹಾಯ ಮಾಡುವಿರಿ. ಕುಟುಂಬದವರೊಡನೆ ವಿಹಾರಕ್ಕೆ ತೆರಳುವಿರಿ. ದಂಪತಿ ನಡುವೆ ಇರುವ ಪ್ರೀತಿ ವಿಶ್ವಾಸವು ಹೆಚ್ಚುತ್ತದೆ. ಕುಟುಂಬದ ಅಗತ್ಯತೆಗಳನ್ನು ಪೂರೈಸಲು ಹೆಚ್ಚಿನ ಹಣ ಬೇಕಾಗಬಹುದು. ಕಲುಷಿತ ಆಹಾರ ಸೇವನೆಯಿಂದ ಅಜೀರ್ಣದ ತೊಂದರೆ ಉಂಟಾಗುತ್ತದೆ. ಅನಾವಶ್ಯಕವಾಗಿ ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ಸಮಾಜದ ಲೋಪ ದೋಷಗಳನ್ನು ತಿದ್ದುವ ಸಾಹಸಕ್ಕೆ ಕೈ ಹಾಕುವಿರಿ. ಸರ್ಕಾರದ ಅನುದಾನದಿಂದ ಕಮಿಷನ್ ವ್ಯವಹಾರದ ವ್ಯಾಪಾರವನ್ನು ಆರಂಭಿಸುವಿರಿ.

ಪರಿಹಾರ : ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು ಪಶ್ಚಿಮ

ಅದೃಷ್ಟದ ಬಣ್ಣ: ಗುಲಾಬಿ

ಕನ್ಯಾ

ಉದ್ಯೋಗದ ಜವಾಬ್ದಾರಿಗಳ ಬಗ್ಗೆ ಬೇಸರ ಉಂಟಾಗುತ್ತದೆ. ಕುಟುಂಬದ ಜನರೊಂದಿಗೆ ವೇಳೆ ಕಳೆಯಲು ಇಷ್ಟಪಡುವಿರಿ. ಭೂ ಸಂಬಂಧಿತ ಹಣದ ವ್ಯವಹಾರಗಳು ಸುಗಮವಾಗಿ ಸಾಗಲಿವೆ. ಪಾಲುದಾರಿಕೆ ವ್ಯಾಪಾರದಲ್ಲಿ ವಾದ ವಿವಾದ ಎದುರಾಗುತ್ತದೆ. ಬಂಧು ಬಳಗದವರ ಜೊತೆ ಅನಾವಶ್ಯಕ ಮನಸ್ತಾಪ ಉಂಟಾಗುತ್ತದೆ. ಆಡುವ ಮಾತನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ ಮೌನವಾಗಿರುವುದು ಒಳ್ಳೆಯದು. ಎದುರಾಗುವ ಅಡೆತಡೆಗಳ ನಡುವೆಯೂ ಕುಟುಂಬದ ಹಿತಾಸಕ್ತಿಯನ್ನು ಕಾಪಾಡುವಿರಿ. ಉದ್ಯೋಗದಲ್ಲಿ ಹೀರಿಯ ಅಧಿಕಾರಿಗಳ ನಿರೀಕ್ಷೆಯನ್ನು ತಲುಪಲು ಸಾಧ್ಯವಾಗುವುದಿಲ್ಲ. ಮಕ್ಕಳ ಆಟ ಪಾಠಗಳನ್ನು ನೋಡಿ ಮನದ ಬೇಸರವನ್ನುದೂರ ಮಾಡುವಿರಿ.

ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಬಿಳಿ

ತುಲಾ

ಬಹುದಿನದಿಂದ ಕಾಡುತ್ತಿದ್ದ ಆರೋಗ್ಯ ಸಮಸ್ಯೆ ದೂರವಾಗುತ್ತದೆ. ಕೆಲಸ ಮಾಡದ ವ್ಯಕ್ತಿಗಳಿಂದ ಅಂತರ ಕಾಪಾಡಿಕೊಳ್ಳುವಿರಿ. ಆತ್ಮಶಕ್ತಿಯನ್ನು ಬೆಳೆಸಿಕೊಂಡಲ್ಲಿ ಉತ್ತಮ ಆರೋಗ್ಯ ಲಭಿಸುತ್ತದೆ. ಅನಾವಶ್ಯಕವಾಗಿ ಹಣಕಾಸಿನ ವಿಚಾರದಲ್ಲಿ ಯೋಚನೆ ಮಾಡದಿರಿ. ಅನಿರೀಕ್ಷಿತ ಧನ ಲಾಭವಿರುತ್ತದೆ. ಅವಶ್ಯಕತೆ ಇದ್ದಲ್ಲಿ ಕುಟುಂಬದವರಿಂದ ಸಹಾಯ ದೊರೆಯುತ್ತದೆ. ಜನ ಜಂಗುಳಿಯಿಂದ ದೂರವಿದ್ದು ಏಕಾಂತದಲ್ಲಿ ಸಂತಸ ಪಡುವಿರಿ. ವಿದ್ಯಾರ್ಥಿಗಳು ಹಿರಿಯರ ಆಸೆ ಆಕಾಂಕ್ಷೆಗಳನ್ನು ಪೂರೈಸುತ್ತಾರೆ. ಸಂದಿಗ್ದ ಪರಿಸ್ಥಿತಿಯೊಂದು ಎದುರಾದರೂ ಸೂಕ್ತ ನಿರ್ಧಾರದಿಂದ ಪಾರಾಗುವಿರಿ. ಪರಿಸ್ಥಿತಿಗೆ ಹೊಂದಿಕೊಂಡು ನಡೆಯುವ ಕಾರಣ ವಿವಾದದಿಂದ ದೂರ ಉಳಿಯುವಿರಿ. ಅಧಿಕಾರಿಗಳಾಗಿದ್ದಲ್ಲಿ ವಿಶೇಷ ಅನುಕೂಲತೆಗಳು ದೊರೆಯುತ್ತವೆ.

ಪರಿಹಾರ : ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಬೂದು

ವೃಶ್ಚಿಕ

ಕುಟುಂಬದವರಿಂದ ಹೆಚ್ಚಿನ ಸಹಾಯ ಬಯಸುವಿರಿ. ನಿಮ್ಮ ನಿರೀಕ್ಷೆಯೊಂದು ಫಲ ನೀಡುವ ಕಾರಣ ಖುಷಿಯಾಗುತ್ತದೆ. ಸಂಗಾತಿಯ ಮನಸ್ಸಿಗೆ ಬೇಸರ ಉಂಟಾಗುವಂತೆ ನಡೆದುಕೊಳ್ಳುವಿರಿ. ಮಾಡಿದ ತಪ್ಪಿಗೆ ಕ್ಷಮೆ ಯಾಚಿಸುವುದರಿಂದ ತೊಂದರೆ ಉಂಟಾಗದು. ಕುಟುಂಬಕ್ಕೆ ಸಂಬಂಧಿಸಿದ ಕಾನೂನಿನ ಹೋರಾಟದಲ್ಲಿ ಜಯ ಗಳಿಸುವಿರಿ. ಅನಿರೀಕ್ಷಿತ ಖರ್ಚು ವೆಚ್ಚಗಳು ನಿಮ್ಮನ್ನು ಕಾಡಲಿವೆ. ಸಮಾಜದಲ್ಲಿ ಗೌರವಯುತ ಸ್ಥಾನಮಾನ ನಿಮ್ಮದಾಗುತ್ತದೆ. ಕಷ್ಟದಲ್ಲಿ ಇದ್ದವರಿಗೆ ಸ್ವಂತ ಇಚ್ಛೆಯಿಂದ ಸಹಾಯ ಮಾಡುವಿರಿ. ಹಣಕಾಸಿನ ವಿಚಾರದಲ್ಲಿ ವಿವಾದ ಉಂಟಾಗಲಿದೆ. ಆತ್ಮೀಯರಿಂದ ಪಡೆದ ಹಣವನ್ನು ಮರಳಿ ನೀಡುವಿರಿ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಯಾವುದೇ ರೀತಿಯ ಹಿನ್ನಡೆ ಉಂಟಾಗುವುದಿಲ್ಲ.

ಪರಿಹಾರ : ಕೈ ಅಥವ ಕಾಲಿನಲ್ಲಿ ಕಪ್ಪು ದಾರ ಧರಿಸುವದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಂದು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.