ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ, ದುಡುಕಿ ಮಾತನಾಡದಿರಿ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

Horoscope Today: ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ, ದುಡುಕಿ ಮಾತನಾಡದಿರಿ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

14 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (14th April 2024 Daily Horoscope).

ಏಪ್ರಿಲ್‌ 14ರ ದಿನಭವಿಷ್ಯ
ಏಪ್ರಿಲ್‌ 14ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (14th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲಪಕ್ಷ, ಭಾನುವಾರ

ತಿಥಿ: ಷಷ್ಠಿ ಬೆಳಿಗ್ಗೆ 3.32ರವರೆಗೂ ಇರುತ್ತದೆ. ಅನಂತರ ಸಪ್ತಮಿ ಆರಂಭವಾಗುತ್ತದೆ.

ನಕ್ಷತ್ರ: ಆರ್ದ್ರೆ ನಕ್ಷತ್ರವು ಬೆಳಗಿನ ಜಾವ 5.05 ರವರೆಗೂ ಇರುತ್ತದೆ. ಅನಂತರ ಪುನರ್ವಸು ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಿಗ್ಗೆ 6.08

ಸೂರ್ಯಾಸ್ತ: ಸಂಜೆ 6.31

ರಾಹುಕಾಲ: ಸಂಜೆ 4.30 ರಿಂದ ಸಂಜೆ 6.00

ಸಿಂಹ

ಜೀವನದಲ್ಲಿ ಎದುರಾಗುವ ಅಡ್ಡಿ ಆತಂಕಗಳನ್ನು ಧೈರ್ಯದಿಂದ ಎದುರಿಸುವಿರಿ. ಕೈ ಹಿಡಿದ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ಅನಿರೀಕ್ಷಿತ ಆದಾಯವು ಮನಸ್ಸಿಗೆ ನೆಮ್ಮದಿ ನೀಡುತ್ತದೆ. ಉದ್ಯೋಗದಲ್ಲಿನ ಉನ್ನತ ಮಟ್ಟದ ಬದಲಾವಣೆಗಳು ನಿಮ್ಮ ಪರವಾಗಿರುತ್ತವೆ. ವ್ಯಾಪಾರ ವ್ಯವಹಾರಗಳಿಂದ ಹಣಕಾಸಿನ ಕೊರತೆ ಕಡಿಮೆಯಾಗಲಿದೆ. ಕೌಟುಂಬಿಕ ವಿಚಾರಗಳು ಸರಾಗವಾಗಿ ನಡೆಯಲಿದೆ. ಅವಿವಾಹಿತರಿಗೆ ಸಂಬಂಧಿಯೊಬ್ಬರ ಸಹಾಯದಿಂದ ವಿವಾಹ ನಿಶ್ಚಯವಾಗಲಿದೆ. ವಿದ್ಯಾರ್ಥಿಗಳಲ್ಲಿ ಗೆಲ್ಲುವ ಹಂಬಲ ಮನೆಮಾಡಿರುತ್ತದೆ. ಮಕ್ಕಳಿಗೆ ಉದ್ಯೋಗ ದೊರೆಯುವ ಸಾಧ್ಯತೆಗಳು ಕಂಡು ಬರುತ್ತದೆ. ಧಾರ್ಮಿಕ ಕೇಂದ್ರವೊಂದರ ಜವಾಬ್ದಾರಿ ದೊರೆಯುತ್ತದೆ.

ಪರಿಹಾರ: ಪುಟ್ಟ ಮಕ್ಕಳಿಗೆ ಬೆಣ್ಣೆ ನೀಡಿ ಇಂದಿನ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಹಾಲಿನಬಣ್ಣ

ಕನ್ಯಾ

ಒಣ ಮಾತುಕತೆಗೆ ಬೇರೆಯವರ ಪ್ರಭಾವಕ್ಕೆ ಒಳಗಾಗುವಿರಿ. ಕಷ್ಟ ಎನಿಸಿದರೂ ಸ್ವಂತ ನಿರ್ಧಾರಗಳಿಗೆ ಬದ್ದರಾಗುವಿರಿ. ಕೆಲಸ ಕಾರ್ಯಗಳ ಮಧ್ಯೆ ವಿಶ್ರಾಂತಿ ತೆಗೆದುಕೊಳ್ಳಲು ಮರೆಯದಿರಿ. ಅತಿ ಮುಖ್ಯವಾದ ಕೆಲಸ ಕಾರ್ಯಗಳನ್ನು ಮುಂದೂಡಬೇಕಾದೀತು. ಕುಟುಂಬದ ಸದಸ್ಯರನ್ನು ಟೀಕಿಸುವ ಬದಲು ಅವರ ಮನಸ್ಸನ್ನು ಗೆಲ್ಲಲು ಪ್ರಯತ್ನಿಸಿ. ಅನಿರೀಕ್ಷಿತವಾಗಿ ಆರೋಗ್ಯದಲ್ಲಿ ಏರಿಳಿತ ಕಂಡುಬರಲಿದೆ. ಉದ್ಯೋಗದಲ್ಲಿ ದುಡುಕಿನ ಮಾತನಾಡದೆ ಇದ್ದಲ್ಲಿ ಯಾವುದೇ ತೊಂದರೆ ಉಂಟಾಗದು. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಲಾಭಕ್ಕೆ ತಕ್ಕ ಖರ್ಚು ವೆಚ್ಚಗಳು ಇರುತ್ತವೆ. ವಿದ್ಯಾರ್ಥಿಗಳು ಸಹಪಾಠಿಗಳ ಜೊತೆ ಸ್ನೇಹದಿಂದ ವರ್ತಿಸುವರು. ಹಣವನ್ನು ಉಳಿಸುವ ಅಗತ್ಯವಿದೆ. ಮನೆಯಲ್ಲಿ ಕೆ್ಟ್ಟು ಹೋದ ಪದಾರ್ಥಗಳನ್ನು ವಿಲೇವಾರಿ ಮಾಡುವಿರಿ.

ಪರಿಹಾರ: ಕೈ ಅಥವಾ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವುದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ: 9

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ : ಹೊಗೆಯ ಬಣ್ಣ

ತುಲಾ

ಮನಸ್ಸಿಗೆ ಮುದ ನೀಡುವ ಕೆಲಸ ಕಾರ್ಯಗಳನ್ನು ಮಾತ್ರ ಮಾಡುವಿರಿ. ನಿಮ್ಮ ಮನಗೆದ್ದ ಸ್ನೇಹಿತರು ಮತ್ತು ಬಂಧು-ಬಳಗದವರ ಜೊತೆ ವಿಶ್ವಾಸದಿಂದ ಬೆರೆಯುವಿರಿ. ಕುಟುಂಬದಲ್ಲಿ ಶಾಂತಿ ನೆಮ್ಮದಿಯ ವಾತಾವರಣ ನೆಲೆಸಿರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ದೊರೆಯುತ್ತದೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ವಿದ್ಯಾರ್ಥಿಗಳು ನಿರ್ಮಲವಾದ ಮನಸ್ಸಿನಿಂದ ಕಲಿಕೆಯಲ್ಲಿ ಮುಂದಿರುತ್ತಾರೆ. ಮನಸಿದ್ದರೆ ಮತ್ತು ಅನಿವಾರ್ಯವಾದರೆ ಉದ್ಯೋಗವನ್ನು ಬದಲಿಸಬಹುದು. ಭವಿಷ್ಯವನ್ನು ಉಜ್ವಲಗೊಳಿಸಲು ಹಣವನ್ನು ವಿವಿಧ ಯೋಜನೆಯಲ್ಲಿ ತೊಡಗಿಸುವಿರಿ. ಮನೆಯ ಸುತ್ತಮುತ್ತ ಶುಭ್ರತೆ ಕಾಪಾಡಲು ಪ್ರಯತ್ನಿಸುವಿರಿ. ಅತಿಯಾದ ಆತ್ಮವಿಶ್ವಾಸದಿಂದ ವಿವಾದಕ್ಕೆ ಕಾರಣವಾಗಲಿದೆ.

ಪರಿಹಾರ: ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಆಕಾಶನೀಲಿ ಬಣ್ಣ

ವೃಶ್ಚಿಕ

ಆತುರದಿಂದ ಮಾಡುವ ಕೆಲಸ ಕಾರ್ಯಗಳಿಂದ ನಷ್ಟ ಅನುಭವಿಸುವಿರಿ. ಕುಟುಂಬದ ಜನರ ಒಪ್ಪಿಗೆ ಪಡೆದು ಯಾವುದೇ ಕೆಲಸ ಮಾಡಿದರು ನಷ್ಟದ ಮಾತಿರುವುದಿಲ್ಲ. ಕುಟುಂಬದಲ್ಲಿ ಶಾಂತಿ ನೆಮ್ಮದಿಯ ಕೊರತೆ ಕಂಡು ಬರುತ್ತದೆ. ಸಂಗಾತಿಯಿಂದ ನಿಮ್ಮೆಲ್ಲ ಕೆಲಸ ಕಾರ್ಯಗಳಿಗೂ ಉತ್ತಮ ಸಹಾಯ ಸಹಕಾರ ದೊರೆಯುತ್ತದೆ. ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಕೆಲಸವೊಂದರಲ್ಲಿ ಯಶಸ್ಸನ್ನು ಗಳಿಸುವಿರಿ. ಕುಟುಂಬದ ಕಾರ್ಯಕ್ರಮವೊಂದು ಸರಳವಾದ ರೀತಿಯಲ್ಲಿ ನಡೆಯಲಿದೆ. ಉದ್ಯೋಗದಲ್ಲಿ ನೀರಸ ವಾತಾವರಣವಿರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಹಣದ ಕೊರತೆ ಕಂಡುಬಾರದು. ಪುಟ್ಟ ಮಕ್ಕಳಿಗೆ ಹೊಸ ಬಟ್ಟೆ ಅಥವಾ ಒಡವೆ ನೀಡುವಿರಿ.

ಪರಿಹಾರ: ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 7

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).