Horoscope Today: ಉದ್ಯೋಗದಲ್ಲಿ ಮಹತ್ತರ ಬದಲಾವಣೆ, ಮಾಡಿದ ತಪ್ಪಿಗೆ ಪಶ್ಚಾತ್ತಾಪ ಪಡುವಿರಿ; ಧನುರಾಶಿಯಿಂದ ಮೀನದವರೆಗೆ ದಿನಭವಿಷ್ಯ
14th ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (14th April 2024 Daily Horoscope).

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(14th April 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲಪಕ್ಷ, ಭಾನುವಾರ
ತಿಥಿ: ಷಷ್ಠಿ ಬೆಳಿಗ್ಗೆ 3.32ರವರೆಗೂ ಇರುತ್ತದೆ. ಅನಂತರ ಸಪ್ತಮಿ ಆರಂಭವಾಗುತ್ತದೆ.
ನಕ್ಷತ್ರ: ಆರ್ದ್ರೆ ನಕ್ಷತ್ರವು ಬೆಳಗಿನ ಜಾವ 5.05 ರವರೆಗೂ ಇರುತ್ತದೆ. ಅನಂತರ ಪುನರ್ವಸು ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಿಗ್ಗೆ 6.08
ಸೂರ್ಯಾಸ್ತ: ಸಂಜೆ 6.31
ರಾಹುಕಾಲ: ಸಂಜೆ 4.30 ರಿಂದ ಸಂಜೆ 6.00
ಧನಸ್ಸು
ನಿಮ್ಮ ಆರೋಗ್ಯದ ಬಗ್ಗೆ ಭಯವಿರುತ್ತದೆ. ಆದರೆ ಯಾವುದೇ ತೊಂದರೆ ಇರುವುದಿಲ್ಲ. ಆತ್ಮಸ್ಥೈರ್ಯವನ್ನು ರೂಢಿಸಿಕೊಂಡಲ್ಲಿ ಯಶಸ್ಸು ನಿಮ್ಮದಾಗುತ್ತದೆ. ಯಾವುದೇ ಕೆಲಸ ಕಾರ್ಯಗಳು ನಿಮಗೆ ಅಸಾಧ್ಯವಲ್ಲ. ಕುಟುಂಬದಲ್ಲಿ ಮಕ್ಕಳಿಂದಾಗಿ ಸಂತೋಷ ಸಂಭ್ರಮ ಮನೆ ಮಾಡಿರುತ್ತದೆ. ಅಗತ್ಯವಿದ್ದಲ್ಲಿ ಹಣಕಾಸಿನ ವಿಚಾರದಲ್ಲಿ ಆಪ್ತರ ಸಲಹೆಯನ್ನು ಪಡೆಯುವಿರಿ. ಉದ್ಯೋಗದಲ್ಲಿ ತಡವಾದರೂ ನಿರೀಕ್ಷಿತ ಮತ್ತು ಸಕಾರಾತ್ಮಕ ಪ್ರತಿಕ್ರಿಯೆಗಳು ಲಭ್ಯವಾಗುತ್ತದೆ. ಬೇಸರ ಕಳೆಯಲು ಆರಂಭಿಸಿದ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯವಿರುತ್ತದೆ. ವಿದ್ಯಾರ್ಥಿಗಳು ಆಟದ ಜೊತೆ ಪಾಠದಲ್ಲಿಯೂ ಮುಂದಿರುತ್ತಾರೆ. ಸಾಧ್ಯವಾದಲ್ಲಿ ಕೋಪವನ್ನು ಕಡಿಮೆ ಮಾಡಿಕೊಳ್ಳಿ.
ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಕೇಸರಿ ಬಣ್ಣ
ಮಕರ
ಅಪರೂಪಕ್ಕೆ ಚುರುಕುತನದಿಂದ ದಿನದ ಕೆಲಸವನ್ನು ಆರಂಭಿಸುವಿರಿ. ಕುಟುಂಬದ ಸದಸ್ಯರ ಮನಸ್ಸು ಗೆಲ್ಲುವಿರಿ. ಉದ್ಯೋಗದಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತದೆ. ಸಮಾಜದ ಗಣ್ಯ ವ್ಯಕ್ತಿಯೊಬ್ಬರ ಸ್ನೇಹವು ಸಂಬಂಧವಾಗಿಸಲು ಎಲ್ಲರ ಸಹಾಯ ದೊರೆಯಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಸಮಪ್ರಮಾಣದ ಲಾಭ-ನಷ್ಟ ಇರುತ್ತದೆ. ವಿದ್ಯಾರ್ಥಿಗಳು ಅಂದಿನ ಕೆಲಸವನ್ನು ಅಂದೇ ಮಾಡುವ ಅಭ್ಯಾಸ ಬೆಳೆಸಿಕೊಳ್ಳಬೇಕು. ದಾಂಪತ್ಯದ ಗಂಭೀರವಾದ ಸಮಸ್ಯೆ ಪರಿಹಾರಗೊಳ್ಳುತ್ತದೆ. ಪಾರುಗಾರಿಕೆಯ ವ್ಯಾಪಾರವನ್ನು ಆರಂಭಿಸುವ ಸೂಚನೆಗಳಿವೆ. ವಿದೇಶಕ್ಕೆ ತೆರಳುವ ಅವಕಾಶ ದೊರೆಯುತ್ತದೆ. ದಿನನಿತ್ಯ ಬಳಸಲು ಹೊಸ ವಾಹನವನ್ನು ಕೊಳ್ಳುವಿರಿ.
ಪರಿಹಾರ: ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಗುಲಾಬಿ ಬಣ್ಣ
ಕುಂಭ
ಸೋದರ ಅಥವಾ ಸೋದರಿಯ ಸಲುವಾಗಿ ಹಣ ಖರ್ಚು ಮಾಡಬೇಕಾಗುತ್ತದೆ. ಕುಟುಂಬದಲ್ಲಿ ಪ್ರೀತಿ ವಿಶ್ವಾಸ ನೆಲೆಸಿರುತ್ತದೆ. ಕುಟುಂಬದಲ್ಲಿನ ಒಗ್ಗಟ್ಟಿನಿಂದ ಎದುರಾಗುವ ಕಷ್ಟ ನಷ್ಟಗಳಿಂದ ಪಾರಾಗುವಿರಿ. ಉತ್ತಮ ಅವಕಾಶವನ್ನು ಪಡೆದು ಉದ್ಯೋಗವನ್ನು ಬದಲಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ತಂದೆಯ ಸಹಕಾರ ದೊರೆಯುತ್ತದೆ. ವಿದ್ಯಾರ್ಥಿಗಳು ಮನ ಬಿಚ್ಚಿ ಮಾತಾಡಿದಲ್ಲಿ ಸುಲಭವಾಗಿ ಯಶಸ್ಸು ದೊರೆಯುತ್ತದೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ತೊಂದರೆ ಎದುರಾಗುತ್ತದೆ. ಮಧುಮೇಹದಂತಹ ತೊಂದರೆಯಿಂದ ಬಳುತ್ತಿರುವವರು ಎಚ್ಚರಿಕೆಯಿಂದ ಇರಬೇಕು. ಹೊಸ ಹಣದ ವ್ಯವಹಾರವನ್ನು ಆರಂಭಿಸದಿರಿ. ಸುತ್ತಮುತ್ತಲಿನ ವಯೋವೃದ್ಧರಿಗೆ ಸಹಾಯಹಸ್ತ ನೀಡುವಿರಿ.
ಪರಿಹಾರ: ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.
ಅದೃಷ್ಟದ ಸಂಖ್ಯೆ: 8
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಬೂದುಬಣ್ಣ
ಮೀನ
ದಿನದ ಆರಂಭದಲ್ಲಿಯೇ ಸಂತಸದ ವರ್ತಮಾನವೊಂದನ್ನು ಕೇಳಲಿದ್ದೀರಿ. ಕುಟುಂಬದಲ್ಲಿ ಪರಸ್ಪರ ಹೊಂದಾಣಿಕೆಯ ಗುಣ ಇರುತ್ತದೆ. ಬುದ್ಧಿವಂತಿಕೆ ಮತ್ತು ಮಾತಿನಿಂದಲೇ ಯಾವುದೇ ಕೆಲಸವನ್ನು ಸಾಧಿಸಬಲ್ಲಿರಿ. ಗಾಳಿ ವರ್ತಮಾನವನ್ನು ನಂಬಿ ದುಡುಕಿನ ತೀರ್ಮಾನ ತೆಗೆದುಕೊಳ್ಳುವಿರಿ. ಮಾಡಿದ ತಪ್ಪಿಗೆ ಪಶ್ಚಾತ್ತಾಪ ಪಡುವಿರಿ. ಉದ್ಯೋಗದಲ್ಲಿ ಉನ್ನತ ಸ್ಥಾನಮಾನ ದೊರೆಯುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಆತ್ಮೀಯರಿಂದ ಹಣಕಾಸಿನ ನೆರವನ್ನು ಪಡೆಯುತ್ತಾರೆ. ಬೇಸಾಯದ ಬಗ್ಗೆ ಆಸಕ್ತಿ ಇದ್ದಲ್ಲಿ ಆರಂಭಿಸಲು ಇದು ಒಳ್ಳೆಯ ಸಮಯ. ಕಟ್ಟಡ ಕಟ್ಟಲು ಬೇಕಾದ ಸಾಮಗ್ರಿಗಳ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭವಿದೆ. ಮನೆಯ ಹೆಣ್ಣು ಮಗಳಿಗೆ ಉಡುಗೊರೆಯೊಂದನ್ನು ನೀಡುವಿರಿ.
ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 11
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ : ಕೆಂಪು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
