ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ತೀರ್ಥಯಾತ್ರೆಯಿಂದ ಮನಸ್ಸಿಗೆ ನೆಮ್ಮದಿ, ಹಣಕಾಸಿನ ವಿಚಾರದಲ್ಲಿ ಮೋಸ ಹೋಗಬಹುದು ಎಚ್ಚರ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ತೀರ್ಥಯಾತ್ರೆಯಿಂದ ಮನಸ್ಸಿಗೆ ನೆಮ್ಮದಿ, ಹಣಕಾಸಿನ ವಿಚಾರದಲ್ಲಿ ಮೋಸ ಹೋಗಬಹುದು ಎಚ್ಚರ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

14 ಜೂನ್‌ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (ಬರಹ: ಎಚ್‌. ಸತೀಶ್, ಜ್ಯೋತಿಷಿ)

ಯಾತ್ರಾಸ್ಥಳದ ಪ್ರವಾಸದಿಂದ ಮನಸ್ಸಿಗೆ ನೆಮ್ಮದಿ, ಹಣಕಾಸಿನ ವಿಚಾರದಲ್ಲಿ ಮೋಸ ಹೋಗಬಹುದು ಎಚ್ಚರ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಯಾತ್ರಾಸ್ಥಳದ ಪ್ರವಾಸದಿಂದ ಮನಸ್ಸಿಗೆ ನೆಮ್ಮದಿ, ಹಣಕಾಸಿನ ವಿಚಾರದಲ್ಲಿ ಮೋಸ ಹೋಗಬಹುದು ಎಚ್ಚರ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (14th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಶುಕ್ರವಾರ

ತಿಥಿ : ಅಷ್ಟಮಿ ರಾ. 10.36ರವರೆಗೂ ಇರುತ್ತದೆ ನಂತರ ನವಮಿ ಆರಂಭವಾಗುತ್ತದೆ.

ನಕ್ಷತ್ರ : ಉತ್ತರ ನಕ್ಷತ್ರವು ದಿನಪೂರ್ತಿ ಇರುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಬೆಳಗ್ಗೆ 06.45

ರಾಹುಕಾಲ: 10.47 ರಿಂದ 12.23

ರಾಶಿಫಲ

ಮೇಷ

ಹಣಕಾಸಿನ ವಿಚಾರದಲ್ಲಿ ತೊಂದರೆ ಇರುವುದಿಲ್ಲ. ಬೇರೆಯವರ ಮನ ಗೆಲ್ಲುವಂತೆ ಮಾತನಾಡಿ ನಿಮ್ಮ ಕೆಲಸ ಸಾಧಿಸಿಕೊಳ್ಳುವಿರಿ. ಆರ್ಥಿಕ ಪ್ರಗತಿ ಇರುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಯೋಜನೆಗಳಿಗೆ ಅನುಮತಿ ದೊರೆಯುತ್ತದೆ. ವಿದ್ಯಾರ್ಥಿಗಳು ತಮ್ಮ ಗುರಿ ತಲುಪಲಿದ್ದಾರೆ. ಹಣಕಾಸಿನ ವಿಚಾರದಲ್ಲಿ ಮೋಸ ಹೋಗಬಹುದು ಎಚ್ಚರಿಕೆಯಿಂದ ಇರಿ. ನಿಮ್ಮ ಮನಸ್ಸನ್ನು ಅರಿಯದವರು ನಿಮ್ಮನ್ನು ನಿಂದಿಸಬಹುದು. ಕೆಲಸದ ನಿಮಿತ್ತ ಪರಸ್ಠಳಕ್ಕೆ ತೆರಳುವ ಸಾಧ್ಯತೆ ಇದೆ. ವೈಭವದ ಜೀವನವನ್ನು ನಡೆಸುವಿರಿ. ಸಹೋದ್ಯೋಗಿಗಳ ಬಗ್ಗೆ ಅಭಿಮಾನವಿರುತ್ತದೆ. ಶುಚಿ ಇಲ್ಲದ ಆಹಾರ ಸೇವನೆಯಿಂದ ಅನಾರೋಗ್ಯ ಉಂಟಾಗುತ್ತದೆ. ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಸುಲಭವಾಗಿ ಖರ್ಚು ಮಾಡುವುದಿಲ್ಲ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ತಿಳಿ ಹಸಿರು

ವೃಷಭ

ನಿಮ್ಮಸಹಾಯದಿಂದ ಸೋದರರು ಕಷ್ಟದಿಂದ ಪಾರಾಗುತ್ತಾರೆ. ಯಾರದೋ ದಾಕ್ಷಿಣ್ಯಕ್ಕೆ ಮಣಿದು ಕೆಲಸ ಮಾಡುವುದಿಲ್ಲ. ನಿಮ್ಮ ಮನಸ್ಸಿಗೆ ಒಪ್ಪಿದರೆ ಮಾತ್ರ ಕೆಲಸ ಕಾರ್ಯಗಳಲ್ಲಿ ಮುಂದುವರೆಯುವಿರಿ. ನೀವು ತೆಗೆದುಕೊಳ್ಳುವ ತೀರ್ಮಾನಗಳು ಸರಿಯಾದ ಹಾದಿಯಲ್ಲಿ ಇರುತ್ತವೆ. ನಿರೀಕ್ಷಿದಂತೆ ಯಶಸ್ಸು ನಿಮ್ಮದಾಗುತ್ತದೆ. ನಿರ್ದಿಷ್ಟ ಕಾರಣದಿಂದ ಬಂಧು ಮಿತ್ರರಿಂದ ದೂರ ಉಳಿಯುವಿರಿ. ತೀರ್ಥಯಾತ್ರೆಯಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಅಳುಕಿನ ಸ್ವಭಾವವಿರುತ್ತದೆ. ಎಲ್ಲರ ವಿಶ್ವಾಸಕ್ಕೆ ಪಾತ್ರರಾಗುವಿರಿ. ಎಲ್ಲರೊಂದಿಗೆ ಉತ್ತಮ ಗೆಳೆತನ ಬೆಳೆಸುವಿರಿ. ಸಮಾಜದಲ್ಲಿ ವಿಶೇಷ ಗೌರವ ಲಭಿಸಲಿದೆ. ಕುಟುಂಬದ ಹಿರಿಯರ ಆರೋಗ್ಯದ ಹೊಣೆಗಾರಿಕೆ ನಿಮ್ಮದಾಗುತ್ತದೆ. ಇರುವ ಮನೆಯನ್ನು ನವೀಕರಿಸಲು ತೀರ್ಮಾನಿಸುವಿರಿ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ನಸು ಗೆಂಪು ಬಣ್ಣ

ಮಿಥುನ

ಉದ್ಯೋಗ ಕ್ಷೇತ್ರದಲ್ಲಿ ನೆಮ್ಮದಿಯ ವಾತಾವರಣವಿರುತ್ತದೆ. ಎದುರಾಗಿದ್ದ ಅಡ್ಡಿ ಆತಂಕಗಳು ದೂರವಾಗುತ್ತವೆ. ನಿಮ್ಮ ಬುದ್ಧಿವಂತಿಕೆಗೆ ಸಹೋದ್ಯೋಗಿಗಳ ಸಹಕಾರವಿರುತ್ತದೆ. ಸ್ವಂತ ವಾಹನ ಕೊಳ್ಳುವಿರಿ. ಮನೆಯ ಅಂದ ಹೆಚ್ಚಿಸಲು ಹೆಚ್ಚಿನ ಹಣ ವೆಚ್ಚವಾಗುತ್ತದೆ. ಅನಿವಾರ್ಯವಾಗಿ ವಾಸ ಸ್ಥಳವನ್ನು ಬದಲಿಸುವ ನಿರ್ಧಾರಕ್ಕೆ ಬರುವಿರಿ. ತಾಯಿಯ ಆರೋಗ್ಯದಲ್ಲಿ ಏರಿಳಿತವಿರುತ್ತದೆ. ಬಂಧು ಬಳಗದಿಂದ ದೂರ ಉಳಿಯುವಿರಿ. ಉತ್ತಮ ಆರೋಗ್ಯ ಗಳಿಸಲು ಹೆಚ್ಚಿನ ಪ್ರಯತ್ನ ಬೇಕಾಗುತ್ತದೆ. ಸಮಾಜದಲ್ಲಿ ಪ್ರಭಾವಿ ವ್ಯಕ್ತಿಯಾಗಿ ಮುನ್ನಡೆಯುವಿರಿ. ಗಂಟಲಿಗೆ ಸಂಬಂಧಿಸಿದ ದೋಷವಿರುತ್ತದೆ. ನಿಮ್ಮ ಅನೇಕ ನಿರ್ಣಯಗಳು ಮತ್ತು ಅಭಿಪ್ರಾಯಗಳು ನಿಜವಾಗುತ್ತದೆ.

ಪರಿಹಾರ: ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಕಟಕ

ಮಾಡಿದ ತಪ್ಪನ್ನು ಸರಿಪಡಿಸಿಕೊಳ್ಳುವ ಚಾತುರ್ಯ ನಿಮ್ಮಲ್ಲಿ ಇರುತ್ತದೆ. ನಿಮ್ಮ ಕಣ್ಣಿನಲ್ಲಿ ಒಂದು ರೀತಿಯ ಆಕರ್ಷಣ ಶಕ್ತಿ ಇರುತ್ತದೆ. ಸಮಯಕ್ಕೆ ತಕ್ಕಂತೆ ಬುದ್ಧಿವಂತಿಕೆಯಿಂದ ಮಾತನಾಡಬಲ್ಲಿರಿ. ಆತ್ಮೀಯರಿಗೆ ಊಟ ತಿಂಡಿಯ ವ್ಯವಸ್ಥೆ ಮಾಡುವಲ್ಲಿ ಸಂತಸ ಕಾಣುವಿರಿ. ಕುಟುಂಬದಲ್ಲಿ ನಿಮಗೆ ವಿಶೇಷವಾದಂತಹ ಗೌರವ ಲಭಿಸುತ್ತದೆ. ರಾಜಕೀಯದಲ್ಲಿ ಇದ್ದಲ್ಲಿ ಉನ್ನತ ಮಟ್ಟಕ್ಕೆ ತಲುಪಿವಿರಿ. ನಿಮ್ಮ ಮಕ್ಕಳು ಯಶಸ್ಸಿನ ಪಥದಲ್ಲಿ ಸಾಗುತ್ತಾರೆ. ಉತ್ತಮ ವರಮಾನವಿರುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಹಿರಿಯ ಅಧಿಕಾರಿಗಳಿಗೆ ಹಣ ನೀಡುವ ಪ್ರಸಂಗ ಬರುತ್ತದೆ. ಮನದಲ್ಲಿ ಒಂದು ರೀತಿಯ ಭಯ ನಿಮ್ಮನ್ನು ಆವರಿಸಿರುತ್ತದೆ. ಎಲ್ಲವೂ ಒಳ್ಳೆಯದೇ ಎಂಬ ಭಾವನೆಯಿಂದ ಮುನ್ನುಗ್ಗಿದರೆ ಜಯವು ನಿಶ್ಚಿತವಾಗಿ ದೊರೆಯುತ್ತದೆ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.