ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಅಗತ್ಯ, ತಾಯಿಯ ಆರೋಗ್ಯದಲ್ಲಿ ಚೇತರಿಕೆ; ಮೇ 14ರ ದಿನ ಭವಿಷ್ಯ

Horoscope Today: ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಅಗತ್ಯ, ತಾಯಿಯ ಆರೋಗ್ಯದಲ್ಲಿ ಚೇತರಿಕೆ; ಮೇ 14ರ ದಿನ ಭವಿಷ್ಯ

14 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (14th May 2024 Daily Horoscope).

ಮೇ 14ರ ದಿನ ಭವಿಷ್ಯ
ಮೇ 14ರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (14th May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ

ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಮಂಗಳವಾರ

ತಿಥಿ: ಸಪ್ತಮಿ ಬೆ 05.38 ರವರೆಗೂ ಇದ್ದು ನಂತರ ಅಷ್ಟಮಿ ಆರಂಭವಾಗುತ್ತದೆ.

ನಕ್ಷತ್ರ: ಪುಷ್ಯ ನಕ್ಷತ್ರವು 02.51 ರವರೆಗೂ ಇದ್ದು ನಂತರ ಆಶ್ಲೇಷ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.55

ಸೂರ್ಯಾಸ್ತ: ಸಂಜೆ 06.36

ರಾಹುಕಾಲ: 03.30 ರಿಂದ 05.05

ರಾಶಿಫಲ

ಸಿಂಹ

ಅವಿರತ ಶ್ರಮದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ಮನೆ ಮಂದಿಯೊಂದಿಗೆ ವಿಹಾರ ಧಾಮಕ್ಕೆ ಪ್ರವಾಸವನ್ನು ಆಯೋಜಿಸುವಿರಿ. ಉತ್ತಮ ಆದಾಯ ಇರುವ ಕಾರಣ ದೀರ್ಘಕಾಲದ ಹಣಕಾಸಿನ ಯೋಜನೆಯನ್ನು ರೂಪಿಸುವಿರಿ. ಸ್ವಾರ್ಥ ಬುದ್ಧಿ ಇಲ್ಲದ ನೀವು ಆತ್ಮೀಯರ ಕೆಲಸ ಕಾರ್ಯಗಳಲ್ಲಿ ಸಹಕರಿಸುವಿರಿ. ಬೇರೆಯವರಿಗೆ ನೀಡುವ ಭರವಸೆಯನ್ನು ಕಷ್ಟವಾದರೂ ಈಡೇರಿಸುವಿರಿ. ಸಂಗಾತಿಯೊಂದಿಗೆ ಕಿರು ಪ್ರವಾಸ ಕೈಗೊಳ್ಳುವಿರಿ. ತಲೆಗೆ ಪೆಟ್ಟಾಗಬಹುದು ಎಚ್ಚರಿಕೆ ಇರಲಿ. ಮಕ್ಕಳಿಗೆ ಹಣಕಾಸಿನ ಸಂಸ್ಥೆಯಲ್ಲಿ ಉದ್ಯೋಗ ದೊರೆಯಲಿದೆ. ಬಹು ದಿನಗಳಾದ ನಂತರ ಆತ್ಮೀಯರೊಬ್ಬರನ್ನು ಭೇಟಿ ಮಾಡುವಿರಿ. ಆರೋಗ್ಯ ಕಾಪಾಡಿಕೊಳ್ಳಲು ಯೋಗ ವ್ಯಾಯಾಮವನ್ನು ಕಲಿಯುವಿರಿ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ತಾಯಿಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ.

ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಎಲೆ ಹಸಿರು

ಕನ್ಯಾ

ಬಹುದಿನದಿಂದ ಇದ್ದ ಆರೋಗ್ಯದಲ್ಲಿನ ತೊಂದರೆ ದೂರವಾಗುತ್ತದೆ. ಮೊದಲ ಆದ್ಯತೆಯನ್ನು ನಿಮ್ಮ ಸ್ವಂತ ಕೆಲಸಗಳಿಗೆ ನೀಡುವಿರಿ. ಯಾವುದೇ ವಿಚಾರದಲ್ಲಿಯೂ ದೃಢ ತೀರ್ಮಾನವನ್ನು ತೆಗೆದುಕೊಳ್ಳಲಾರಿರಿ. ಬಹಳ ಸುಲಭವಾಗಿ ಬೇರೆಯವರ ಒತ್ತಡಕ್ಕೆ ಮಣಿಯುವಿರಿ. ಹಣಕಾಸಿನ ಕೊರತೆ ಇದ್ದಲ್ಲಿ ಕುಟುಂಬದ ಸದಸ್ಯರಿಂದ ಸಹಾಯ ದೊರೆಯುತ್ತದೆ. ಹಣಕಾಸಿನ ವಿವಾದವೊಂದು ಕಾನೂನಿನ ಸಹಾಯದಿಂದ ಕೊನೆಗೊಳ್ಳುತ್ತದೆ. ಕುಟುಂಬದಲ್ಲಿ ಸದಾ ಕಾಲ ಸಂತೋಷ ಸಂಭ್ರಮ ನೆಲೆಸಿರುತ್ತವೆ. ನಿಮ್ಮ ಆಪ್ತರೊಂದಿಗೆ ಕಿರು ಪ್ರವಾಸ ಕೈಗೊಳ್ಳುವಿರಿ. ನಿಮ್ಮ ಕೀರ್ತಿ ಪ್ರತಿಷ್ಠೆಗೆ ಕುಂದು ತರಲು ವಿರೋಧಿಗಳು ಪ್ರಯತ್ನಿಸುತ್ತಾರೆ. ನಿಮ್ಮ ಮನದ ಇಂಗಿತವನ್ನು ಸುಲಭವಾಗಿ ಯಾರಲ್ಲಿಯೂ ಹೇಳಿಕೊಳ್ಳುವುದಿಲ್ಲ.

ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಕೇಸರಿ

ತುಲಾ

ಮನಸ್ಸು ನಿರ್ಮಲವಾಗಿರುತ್ತದೆ. ನ್ಯಾಯದ ಹಾದಿಯಲ್ಲಿ ನಡೆಯುವ ನೀವು ಯಾವುದಾದರೂ ಒಂದು ಚಟುವಟಿಕೆಯಲ್ಲಿ ತೊಡಗುವಿರಿ. ಜೀವನದಲ್ಲಿ ಮರೆಯಲಾಗದಂಥ ಘಟನೆಯೊಂದು ನಡೆಯಲಿದೆ. ಜೀವನವು ಸುಖ ಸಂತೋಷಗಳಿಂದ ಕೂಡಿರುತ್ತವೆ. ಬೇರೆಯವರ ಕೆಲಸ ಕಾರ್ಯಗಳನ್ನು ಸುಲಭವಾಗಿ ಪ್ರಶಂಶಿಸುವುದಿಲ್ಲ. ನಿಮ್ಮದೇ ಆದ ತೀರ್ಮಾನಗಳಿಗೆ ಬದ್ಧರಾಗುವಿರಿ. ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಿ. ನಿಮ್ಮ ಶ್ರಮಕ್ಕೆ ತಕ್ಕಂತಹ ಫಲಿತಾಂಶ ದೊರೆಯುತ್ತದೆ. ಒಮ್ಮೆ ತೀರ್ಮಾನಿಸಿದರೆ ಯಾವುದೇ ಕೆಲಸವು ನಿಮಗೆ ಅಸಾಧ್ಯ ಎನಿಸುವುದಿಲ್ಲ. ಮಕ್ಕಳೊಂದಿಗೆ ಉತ್ತಮ ಒಡನಾಟ ನಿಮ್ಮ ಯೋಚನೆಗಳನ್ನು ದೂರ ಮಾಡುತ್ತದೆ. ಯಾರೊಂದಿಗೂ ಅನವಶ್ಯಕವಾಗಿ ವಾದ ವಿವಾದದಲ್ಲಿ ತೊಡಗುವುದಿಲ್ಲ.

ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಕೆಂಪು

ವೃಶ್ಚಿಕ

ಧೈರ್ಯ ಮತ್ತು ಸಾಹಸದ ಗುಣವನ್ನು ಬೆಳೆಸಿಕೊಳ್ಳುವುದು ಒಳ್ಳೆಯದು. ಯಾವುದೇ ರೀತಿಯ ಸಮಸ್ಯೆಗಳಿಗೆ ಬೆದರುವುದಿಲ್ಲ. ಸಮಯಕ್ಕೆ ತಕ್ಕಂತೆ ವರ್ತಿಸಿ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ಸದಾಕಾಲ ಒಳ್ಳೆಯ ಪ್ರತಿಫಲಗಳನ್ನು ನಿರೀಕ್ಷಿಸುವಿರಿ. ಮಾನಸಿಕವಾಗಿ ಸಶಕ್ತರಾದ ನೀವು ಯಾರ ಸಹಾಯವೂ ಇಲ್ಲದೆ ಕೆಲಸ ಕಾರ್ಯಗಳನ್ನು ನಿರ್ವಹಿಸಬಲ್ಲಿರಿ. ಆತ್ಮೀಯರ ಮತ್ತು ಸ್ನೇಹಿತರೊಂದಿಗೆ ಅನಾವಶ್ಯಕವಾಗಿ ಮನಸ್ತಾಪ ಉಂಟಾಗಲಿದೆ. ಹಣಕಾಸಿನ ವಿಚಾರದಲ್ಲಿ ಒರಟುತನದಿಂದ ವರ್ತಿಸುವಿರಿ. ನಿಮ್ಮ ಮನಸ್ಸಿಗೆ ಸರಿ ಎನಿಸುವ ಕೆಲಸ ಕಾರ್ಯಗಳನ್ನು ಮಾತ್ರ ನಿರ್ವಹಿಸುವಿರಿ. ನಿಮ್ಮ ಪ್ರತಿಭೆಗೆ ಸವಾಲೆನಿಸುವಂತಹ ಕೆಲಸ ಕಾರ್ಯಗಳು ಎದುರಾಗಲಿವೆ. ಸಿಡುಕಿನ ಬುದ್ಧಿ ಕಡಿಮೆ ಮಾಡಿಕೊಳ್ಳಿರಿ.

ಪರಿಹಾರ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಿತ್ತಳೆ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).