ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಕುಟುಂಬದ ಸದಸ್ಯರ ನಡುವೆ ಹಣಕಾಸಿನ ವಿಚಾರಕ್ಕೆ ಭಿನ್ನಾಭಿಪ್ರಾಯ, ಮಕ್ಕಳ ಆರೋಗ್ಯದಲ್ಲಿ ಏರುಪೇರು; ಮೇ 14ರ ರಾಶಿಫಲ

Horoscope Today: ಕುಟುಂಬದ ಸದಸ್ಯರ ನಡುವೆ ಹಣಕಾಸಿನ ವಿಚಾರಕ್ಕೆ ಭಿನ್ನಾಭಿಪ್ರಾಯ, ಮಕ್ಕಳ ಆರೋಗ್ಯದಲ್ಲಿ ಏರುಪೇರು; ಮೇ 14ರ ರಾಶಿಫಲ

14 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (14th May 2024 Daily Horoscope).

ಮೇ 14ರ ರಾಶಿಫಲ
ಮೇ 14ರ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(14th May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ

ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಮಂಗಳವಾರ

ತಿಥಿ: ಸಪ್ತಮಿ ಬೆ 05.38 ರವರೆಗೂ ಇದ್ದು ನಂತರ ಅಷ್ಟಮಿ ಆರಂಭವಾಗುತ್ತದೆ.

ನಕ್ಷತ್ರ: ಪುಷ್ಯ ನಕ್ಷತ್ರವು 02.51 ರವರೆಗೂ ಇದ್ದು ನಂತರ ಆಶ್ಲೇಷ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.55

ಸೂರ್ಯಾಸ್ತ: ಸಂಜೆ 06.36

ರಾಹುಕಾಲ: 03.30 ರಿಂದ 05.05

ರಾಶಿಫಲ

ಧನಸ್ಸು

ಅಜೀರ್ಣದ ಹೊರತಾಗಿ ಉತ್ತಮ ಆರೋಗ್ಯ ಇರುತ್ತದೆ. ಕೋಪವು ಬಂದಷ್ಟೇ ವೇಗವಾಗಿ ಮರೆಯಾಗುತ್ತದೆ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ. ಯಾವುದೇ ರೀತಿಯ ತೊಂದರೆ ಎದುರಾಗುವುದಿಲ್ಲ. ಕೈ ಹಿಡಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಗಳಿಸುವಿರಿ. ಕಷ್ಟದಲ್ಲಿ ಇದ್ದವರಿಗೆ ಸಹಾಯವನ್ನು ಮಾಡುವಿರಿ. ಎಲ್ಲರೂ ಮೆಚ್ಚುವಂತೆ ನಡೆದುಕೊಂಡು ಸಮಾಜದಲ್ಲಿ ಉನ್ನತ ಸ್ಥಾನವನ್ನು ಗಳಿಸುವಿರಿ. ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ ಉಂಟಾಗುತ್ತದೆ. ತಾಯಿಗೆ ಮಕ್ಕಳ ವಿಚಾರದಲ್ಲಿ ಚಿಂತೆ ಇರುತ್ತದೆ. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗ ದೊರೆಯಲಿದೆ. ವಿದ್ಯಾರ್ಥಿಗಳು ಎಲ್ಲರ ನಿರೀಕ್ಷೆಯನ್ನು ಮೀರಿ ವಿದ್ಯಾಭ್ಯಾಸದಲ್ಲಿ ಉನ್ನತ ಮಟ್ಟ ತಲುಪುತ್ತಾರೆ.

ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಹಳದಿ

ಮಕರ

ಮನದಲ್ಲಿ ಯಾವುದೇ ವಿಶೇಷ ಆಸೆ ಆಕಾಂಕ್ಷೆಗಳು ಇರುವುದಿಲ್ಲ. ಇದರಿಂದಾಗಿ ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಇರಲಿದೆ. ಅವಶ್ಯಕತೆ ಇದ್ದಲ್ಲಿ ಸೋದರದಿಂದ ಹಣದ ಸಹಾಯ ದೊರೆಯುತ್ತದೆ. ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ. ಆಡುವ ಮಾತನ್ನು ಕಡಿಮೆ ಮಾಡಿ ಕೆಲಸವನ್ನು ಹೆಚ್ಚಿಸುವುದು ಒಳ್ಳೆಯದು. ಯಾರ ಮೇಲೂ ಒತ್ತಡ ಹಾಕುವುದಿಲ್ಲ. ನೀವಾಯಿತು ನಿಮ್ಮ ಕೆಲಸವಾಯಿತು ಎಂಬಂತೆ ಬಾಳುವಿರಿ. ಕೇವಲ ಕುಟುಂಬವಲ್ಲದೆ ಸಮಾಜದಲ್ಲಿಯೂ ಉನ್ನತ ಗೌರವ ಗಳಿಸುವಿರಿ. ಉದ್ಯೋಗ ಬದಲಿಸುವ ಯೋಚನೆ ಇದೆ. ಮನಸ್ಸು ಒಳ್ಳೆಯದಾದರೂ ದುಡುಕಿ ಆಡುವ ಮಾತಿನಿಂದ ವಿರೋಧಿಗಳನ್ನು ಸೃಷ್ಟಿಸುವಿರಿ. ಆತುರದ ಗುಣ ಇರುವುದಿಲ್ಲ.

ಪರಿಹಾರ : ಹಣೆಯಲ್ಲಿ ತಿಲಕ ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಹಸಿರು

ಕುಂಭ

ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ತೋರುವಿರಿ. ಕುಟುಂಬದಲ್ಲಿನ ಕಾರ್ಯಕ್ರಮಗಳಿಗಾಗಿ ಹೆಚ್ಚಿನ ಹಣ ಹೊಂದಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಆಸಕ್ತಿ ತೋರದೆ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಾರೆ. ನಿಮ್ಮ ರೀತಿ ನೀತಿಗಳಿಂದ ಹೆತ್ತವರಲ್ಲಿ ಬೇಸರ ಮೂಡುತ್ತದೆ. ಸಮಯದ ಪರಿವಿಲ್ಲದೆ ಸ್ವಂತ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ ಕಂಡು ಬರುತ್ತದೆ. ದಂಪತಿ ನಡುವೆ ಭಾವನಾತ್ಮಕ ಸಂಬಂಧವಿರುತ್ತದೆ. ಅನಿರೀಕ್ಷಿತವಾಗಿ ದೀರ್ಘಕಾಲದ ಪ್ರವಾಸವನ್ನು ಕೈಗೊಳ್ಳುವಿರಿ. ಆರಂಭಿಸಿದ ಮುಖ್ಯವಾದ ಕೆಲಸವೊಂದು ಅಪೂರ್ಣಗೊಳ್ಳಲಿದೆ. ಕುಟುಂಬದ ಸದಸ್ಯರ ನಡುವೆ ಹಣಕಾಸಿನ ವಿಚಾರದಲ್ಲಿ ಭಿನ್ನಾಭಿಪ್ರಾಯ ಇರಲಿದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನೇರಳೆ

ಮೀನ

ಉತ್ತಮ ಆರೋಗ್ಯಕ್ಕಾಗಿ ದಿನನಿತ್ಯದ ಆಹಾರ ಕ್ರಮದಲ್ಲಿ ಬದಲಾವಣೆ ತರುವಿರಿ. ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಲಾಭ ದೊರೆಯುತ್ತದೆ. ಹಣಕಾಸಿನ ಪರಿಸ್ಥಿತಿಯನ್ನು ಉತ್ತಮಗೊಳಿಸಲು ಉಪವೃತ್ತಿಯೊಂದನ್ನು ಆರಂಭಿಸುವಿರಿ. ಕುಟುಂಬದ ಸದಸ್ಯರ ನಡುವೆ ಉತ್ತಮ ಅನುಬಂಧ ಇರಲಿದೆ. ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಉದ್ಯೋಗದಲ್ಲಿ ಬದಲಾವಣೆ ಉಂಟಾಗಲಿವೆ. ಹೆಚ್ಚಿನ ಪ್ರಯತ್ನದಿಂದ ಮಾತ್ರ ವಿವಾಹ ಕಾರ್ಯ ನೆರವೇರಲಿದೆ. ಹಣಕಾಸಿನ ವ್ಯವಹಾರದಲ್ಲಿ ಆತ್ಮೀಯರೊಂದಿಗೆ ವಾದ ವಿವಾದದಲ್ಲಿ ತೊಡಗುವಿರಿ. ಪ್ರಯೋಜನವಿಲ್ಲದ ಕೆಲಸ ಕಾರ್ಯಗಳಲ್ಲಿ ತೊಡಗಬೇಕಾಗುತ್ತದೆ. ನಿಮ್ಮ ಮಕ್ಕಳ ಆರೋಗ್ಯದಲ್ಲಿ ಏರಿಳಿತ ಕಂಡು ಬರಲಿದೆ. ಸಾಲದ ವಿಚಾರದ ಚಿಂತೆ ನಿಮ್ಮನ್ನು ಕಾಡಲಿದೆ.

ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 11

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).