ಕನ್ನಡ ಸುದ್ದಿ  /  Astrology  /  Horoscope Today Astrology Prediction 15 March 2024 Leo Virgo Libra Scorpio Daily Horoscope Sts

Horoscope Today: ನೋವನ್ನು ಮರೆತು ಸಂತಸದಿಂದ ದಿನ ಕಳೆಯಲು ಪ್ರಯತ್ನಿಸುವಿರಿ, ಸಾಲ ಪಡೆಯಬೇಡಿ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

ಮಾರ್ಚ್​ 15, ಶುಕ್ರವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (15 March 2024 Daily Horoscope).

ಮಾರ್ಚ್​ 15ರ ದಿನಭವಿಷ್ಯ
ಮಾರ್ಚ್​ 15ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (15 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಶುಕ್ರವಾರ

ತಿಥಿ : ಷಷ್ಠಿ ರಾ.03.29 ರವರೆಗು ಇರುತ್ತದೆ. ಆನಂತರ ಸಪ್ತಮಿ ಆರಂಭವಾಗುತ್ತದೆ.

ನಕ್ಷತ್ರ : ಕೃತ್ತಿಕ ನಕ್ಷತ್ರವು ರಾ.09.16 ರವರೆಗೆ ಇರುತ್ತದೆ. ಆನಂತರ ರೋಹಿಣಿ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.29

ಸೂರ್ಯಾಸ್ತ: ಸ.06.29

ರಾಹುಕಾಲ : ಬೆ.10.30 ರಿಂದ ಮ. 12.00

ರಾಶಿ ಫಲಗಳು

ಸಿಂಹ

ಕುಟುಂಬದಲ್ಲಿನ ಬಹು ಮುಖ್ಯ ಕೆಲಸವನ್ನು ಪೂರ್ಣಗೊಳಿಸುವಿರಿ. ಕ್ರೀಡಾಮನೋಭಾವನೆಯಿಂದ ಉದ್ಯೋಗದಲ್ಲಿ ಎದುರಾಗುವ ಸವಾಲುಗಳನ್ನು ಸ್ವೀಕರಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಉನ್ನತ ಮಟ್ಟದ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳು ದೃಢವಾದ ಮನಸ್ಸಿನಿಂದ ಫಲಿತಾಂಶವನ್ನು ಎದುರುನೋಡುತ್ತಾರೆ. ಸಮಯಕ್ಕೆ ತಕ್ಕಂತಹ ಸ್ಥಿತಿಪ್ರಜ್ಞೆಯಿಂದ ಅಪಾಯದಿಂದ ಪಾರಾಗುವಿರಿ. ಸ್ವಂತ ಬುದ್ಧಿ ಮತ್ತು ಪ್ರಯತ್ನದಿಂದ ಆರ್ಥಿಕ ಪ್ರಗತಿ ಸಾಧಿಸುವಿರಿ. ಬಂಧುವೊಬ್ಬರ ಆರೋಗ್ಯ ಸುಧಾರಣೆಗೆ ಕಾರಣರಾಗಿ ಒಳ್ಳೆಯ ಹೆಸರು ಗಳಿಸುವಿರಿ. ಸಮಾಜದ ಲೋಪದೋಷವನ್ನು ತಿದ್ದುವ ಸಾಹಸಕ್ಕೆ ಮುಂದಾಗುವಿರಿ. ದುಡುಕುತನವನ್ನು ಬಿಟ್ಟು ಜೀವನದಲ್ಲಿ ಮುನ್ನಡೆಯುವಿರಿ.

ಪರಿಹಾರ : ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಕೆಂಪು ಬಣ್ಣ

ಕನ್ಯಾ

ಅನಾವಶ್ಯಕವಾಗಿ ವಿವಾದಗಳಿಗೆ ಸಿಲುಕುವಿರಿ. ನೋವನ್ನು ಮರೆತು ಸಂತಸದಿಂದ ದಿನ ಕಳೆಯಲು ಪ್ರಯತ್ನಿಸುವಿರಿ. ಉದ್ಯೋಗದಲ್ಲಿನ ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಫಲಿತಾಂಶ ದೊರೆಯಲಿದೆ. ಉತ್ತಮ ಪ್ರಯತ್ನದಿಂದ ಆದಾಯವನ್ನು ಹೆಚ್ಚಿಸಿಕೊಳ್ಳುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭವಿರುತ್ತದೆ. ವರಮಾನ ಹೆಚ್ಚಿಸಿಕೊಳ್ಳಲು ಉಪವೃತ್ತಿಯನ್ನು ಆರಂಭಿಸುವಿರಿ. ವಿದ್ಯಾರ್ಥಿಗಳು ಮಾತನ್ನು ಕಡಿಮೆ ಮಾಡಿ ಭವಿಷ್ಯದ ಯೋಜನೆ ರೂಪಿಸಲಿದ್ದಾರೆ. ಒಳ್ಳೆಯ ಮಾತಿನಿಂದ ಎಲ್ಲರನ್ನು ಮೋಡಿಮಾಡಬಲ್ಲಿರಿ. ಮನಸ್ಸು ಒಳ್ಳೆಯದಾದರೂ ಆಡುವ ಮಾತು ಬೇಸರ ಮೂಡಿಸುತ್ತದೆ. ದೈಹಿಕ ಶಕ್ತಿ ಕಡಿಮೆಯಾಗುತ್ತದೆ. ಉತ್ತಮ ಆಹಾರವನ್ನು ಸಮಯಕ್ಕೆ ಸರಿಯಾಗಿ ಸೇವಿಸಿರಿ.

ಪರಿಹಾರ : ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ತುಲಾ

ಕುಟುಂಬದಲ್ಲಿ ಆತಂಕದ ಪರಿಸ್ಥಿತಿ ಎದುರಾಗುತ್ತದೆ. ವಯೋವೃದ್ಧರ ಆರೋಗ್ಯದ ಬಗ್ಗೆ ಗಮನ ಇರಬೆಕು. ಉದ್ಯೋಗದಲ್ಲಿನ ರೀತಿ ನೀತಿಗಳನ್ನು ಬದಲಿಸಲು ಪ್ರಯತ್ನಿಸುವಿರಿ. ನಿಮ್ಮೆಲ್ಲಾ ಕೆಲಸಗಳಿಗೆ ಹಿರಿಯ ಅಧಿಕಾರಿಗಳ ಸಹಕಾರ ದೊರೆಯಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ವಿದ್ಯಾರ್ಥಿಗಳ ಕಾರ್ಯಕ್ಷಮತೆ ಮತ್ತು ಕ್ರಿಯಾಶೀಲತೆ ಎಲ್ಲರ ಗಮನ ಸೆಳೆಯುತ್ತದೆ. ಕಲುಷಿತ ಆಹಾರದ ಕಾರಣದಿಂದ ಆರೋಗ್ಯದಲ್ಲಿ ತೊಂದರೆ ಉಂಟಾಗಬಹುದು. ಸಾಲವಾಗಿ ಹಣವನ್ನು ತೆಗೆದುಕೊಳ್ಳಬೇಡಿರಿ. ಕುಟುಂಬದ ಹಿರಿಯರ ಜೊತೆಯಲ್ಲಿ ಯಾತ್ರಾಸ್ಥಳಕ್ಕೆ ತೆರಳುವಿರಿ. ಕುಟುಂಬದಲ್ಲಿನ ಮಂಗಳ ಕಾರ್ಯ ನಿಮ್ಮ ಗೈರುಹಾಜರಿಯಲ್ಲಿ ನೆರವೇರುತ್ತದೆ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಹಳದಿ ಬಣ್ಣ

ವೃಶ್ಚಿಕ

ನಿಮ್ಮ ಮುಖ್ಯವಾದ ಕೆಲಸವನ್ನು ಪೂರ್ಣಗೊಳಿಸಲಾರಿರಿ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಆದಾಯ ಇಲ್ಲದೆ ಹೋದರೂ ನಷ್ಟವಾಗದು. ಉದ್ಯೋಗದಲ್ಲಿ ಸಣ್ಣಪುಟ್ಟ ತಪ್ಪುಗಳ್ಳನ್ನು ಸರಿಪಡಿಸಿಕೊಂಡು ಮುಂದುವರೆಯುವಿರಿ. ವಿದ್ಯಾರ್ಥಿಗಳು ಮುಂಗೋಪದಿಂದ ಹಿರಿಯರ ಅವಕೃಪೆಗೆ ಗುರಿಯಾಗಲಿದ್ದಾರೆ. ದಂಪತಿಗಳ ನಡುವೆ ಅನಾವಶ್ಯಕವಾದ ವಿವಾದ ಉಂಟಾಗಲಿದೆ. ಮಹನೀಯರೊಬ್ಬರ ಸಹವಾಸದಿಂದ ಮನಸ್ಸು ಬದಲಾಗುತ್ತದೆ. ಅಜೀರ್ಣದ ತೊಂದರೆಯಿಂದ ಬಳಲುವಿರಿ. ವಂಶಾಧಾರಿತ ವ್ಯಾಪಾರ ವ್ಯವಹಾರಗಳಲ್ಲಿ ಲಾಭ ದೊರೆಯುತ್ತದೆ. ಸೋದರಿಗೆ ಹಣದ ಸಹಾಯ ಮಾಡುವಿರಿ. ಎಲ್ಲರಜೊತೆ ಕಿರುಪ್ರವಾಸ ಕೈಗೊಳ್ಳುವಿರಿ. ಸಂತಾನ ಲಾಭವಿದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೆಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಹಸಿರು ಬಣ್ಣ

-----------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).