ಕನ್ನಡ ಸುದ್ದಿ  /  Astrology  /  Horoscope Today Astrology Prediction 15 March 2024 Sagittarius Capricorn Aquarius Pisces Daily Horoscope Sts

Horoscope Today: ಮಕ್ಕಳಿಂದ ಸಿಗಲಿದೆ ಶುಭಸುದ್ದಿ, ಉದಾಸೀನದಿಂದ ಅಪೂರ್ವ ಅವಕಾಶ ಕಳೆದುಕೊಳ್ಳುವಿರಿ; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ

ಮಾರ್ಚ್​ 15, ಶುಕ್ರವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (15 March 2024 Daily Horoscope).

ಮಾರ್ಚ್​ 15ರ ದಿನಭವಿಷ್ಯ
ಮಾರ್ಚ್​ 15ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (15 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಶುಕ್ರವಾರ

ತಿಥಿ : ಷಷ್ಠಿ ರಾ.03.29 ರವರೆಗು ಇರುತ್ತದೆ. ಆನಂತರ ಸಪ್ತಮಿ ಆರಂಭವಾಗುತ್ತದೆ.

ನಕ್ಷತ್ರ : ಕೃತ್ತಿಕ ನಕ್ಷತ್ರವು ರಾ.09.16 ರವರೆಗೆ ಇರುತ್ತದೆ. ಆನಂತರ ರೋಹಿಣಿ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.29

ಸೂರ್ಯಾಸ್ತ: ಸ.06.29

ರಾಹುಕಾಲ : ಬೆ.10.30 ರಿಂದ ಮ. 12.00

ರಾಶಿ ಫಲಗಳು

ಧನಸ್ಸು

ನಿಮ್ಮ ರೀತಿ ನೀತಿಯನ್ನು ಎಲ್ಲರೂ ಪ್ರಶಂಸಿಸುತ್ತಾರೆ. ಒತ್ತಾಯ ಪೂರ್ವಕವಾಗಿ ಯಾವುದೇ ಕೆಲಸ ಮಾಡಲಾರಿರಿ. ಉದ್ಯೋಗದಲ್ಲಿ ಪ್ರಯತ್ನ ಮತ್ತು ನಿಷ್ಠೆಗೆ ತಕ್ಕಂತಹ ಪ್ರತಿಫಲ ದೊರೆಯಲಿದೆ. ಹಿರಿಯರ ಪ್ರಶಂಸೆ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಲಾಭ ನಷ್ಟದ ಬಗ್ಗೆ ಯೋಚಿಸುವುದಿಲ್ಲ. ಎಲ್ಲರನ್ನೂ ಸರಿ ಸಮಾನವಾಗಿ ಕಾಣುವಿರಿ. ಹಣದ ಕೊರತೆಯಿಂದ ಹೊರಬರಲು ಸಣ್ಣ ಪ್ರಮಾಣದ ವ್ಯಾಪಾರವನ್ನು ಆರಂಭಿಸುವಿರಿ. ಆಪ್ತರ ಆಗಮನ ಸಂತೋಷಕ್ಕೆ ಕಾರಣವಾಗುತ್ತದೆ. ಆರೋಗ್ಯದ ಬಗ್ಗೆ ಗಮನವಿರಲಿ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ವಂಶದ ಆಸ್ತಿಯ ವಿಚಾರದಲ್ಲಿ ಅನಾವಶ್ಯಕ ಚರ್ಚೆ ನಡೆಯಲಿದೆ. ಮಕ್ಕಳಿಂದ ಶುಭವರ್ತಮಾನವೊಂದು ಬರಲಿದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನೀಲಿ ಬಿಳಿ ಬಣ್ಣ

ಮಕರ

ವಿಶ್ರಾಂತಿಯನ್ನು ಪಡೆಯುವ ಕಾರಣ ಕುಟುಂಬದ ಕೆಲಸ ಕಾರ್ಯಗಳು ಅಸ್ಥಿರಗೊಳ್ಳಲಿವೆ. ಉದ್ಯೋಗದಲ್ಲಿ ಹೆಚ್ಚಿನ ಪ್ರಯತ್ನದಿಂದ ಯಶಸ್ಸು ಸಾಧಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಆತ್ಮೀಯರ ಸಹಾಯ ದೊರೆಯಲಿದೆ. ನಿಮ್ಮ ಚಿಕ್ಕ ವಯಸ್ಸಿನವರ ಮೇಲೆ ನಂಬಿಕೆ ಇಡಬೇಕು. ಮಕ್ಕಳು ಮನರಂಜನೆಯನ್ನು ಬಯಸುವ ಕಾರಣ ಹಣ ಖರ್ಚಾಗಲಿದೆ. . ಮಾನಸಿಕ ಒತ್ತಡದಿಂದ ಆರೋಗ್ಯದಲ್ಲಿ ತೊಂದರೆ ಉಂಟಾಗಬಹುದು. ಸಂಗಾತಿಯ ಸಹಾಯದಿಂದ ಮನದ ದುಗುಡ ದೂರವಾಗುತ್ತದೆ. ಆತ್ಮೀಯರಿಂದ ಹಣದ ಸಹಾಯ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ಅವಸರದ ನಿರ್ಣಯ ತೆಗೆದುಕೊಳ್ಳದಿರಿ. ಆರೋಗ್ಯದ ಬಗ್ಗೆ ಗಮನ ಇರಲಿ.

ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೇರಳೆ ಬಣ್ಣ

ಕುಂಭ

ಹಣಕಾಸಿನ ವಿಚಾರದಲ್ಲಿ ಆತಂಕದ ಭಾವನೆ ಮನದಲ್ಲಿರುತ್ತದೆ. ಉದ್ಯೋಗದಲ್ಲಿ ಅಧಿಕಾರಿಗಳ ಮತ್ತು ಸಹೋದ್ಯೋಗಿಗಳ ಪ್ರೋತ್ಸಾಹ ಹೊಸ ಸಾಧನೆಗೆ ಕಾರಣವಾಗುತ್ತದೆ. ವ್ಯಾಪಾರ ವ್ಯವಹಾರಗಳು ನಿಧಾನಗತಿಯಲ್ಲಿ ಸಾಗಲಿವೆ. ಮಕ್ಕಳು ಸೋಮಾರಿತನ ಬಿಟ್ಟು ಮನೆಗೆ ಸಂಬಂಧಿಸಿದ ಕೆಲಸದಲ್ಲಿ ಮುಂದುವರೆಯುವರು. ಉದಾಸೀನ ಮನೋಭಾವನೆಯಿಂದ ಅಪೂರ್ವ ಅವಕಾಶವನ್ನು ಕಳೆದುಕೊಳ್ಳುವಿರಿ. ಬಹುದಿನದ ಹಿಂದೆ ಪಡೆದಿದ್ದ ಸಾಲದ ಹಣವನ್ನು ಮರುಪಾವತಿ ಮಾಡುವಿರಿ. ಮಾತುಕತೆಯಿಂದ ಕೌಟುಂಬಿಕ ಸಮಸ್ಯೆಯೊಂದನ್ನು ಬಗೆಹರಿಸುವಿರಿ. ಕಣ್ಣಿನ ತೊಂದರೆ ಉಂಟಾಗಬಹುದು ಎಚ್ಚರಿಕೆ ಇರಲಿ. ಮನಸ್ಸಿನ ಭಾವನೆಗಳನ್ನು ಹಂಚಿಕೊಳ್ಳಲು ಪ್ರಯತ್ನಿಸಿ. ದೂರದ ಸ್ಥಳಕ್ಕೆ ಪ್ರಯಾಣ ಬೆಳೆಸುವಿರಿ.

ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಮೀನ

ಜೀವನದಲ್ಲಿ ಹೊಸ ಭರವಸೆಯೊಂದು ಮೂಡುತ್ತದೆ. ಕುಟುಂಬದಲ್ಲಿ ಪ್ರತಿ ವಿಚಾರದಲ್ಲಿಯೂ ಚರ್ಚೆ ನಡೆಯಲಿದೆ. ಉದ್ಯೋಗದಲ್ಲಿ ಕೆಲಸದ ಒತ್ತಡದ ನಡುವೆಯೂ ಗೌರವ ಗಳಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಸಹಮತದ ಅಗತ್ಯವಿದೆ. ಯಾವ ಒತ್ತಡಕ್ಕೂ ಮಣಿಯದೆ ಹಣಕಾಸಿನ ಸ್ಥಿತಿಯ ಬಗ್ಗೆ ಸ್ವಂತ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ವಿದ್ಯಾರ್ಥಿಗಳ ಸಾಧನೆ ಎಲ್ಲರ ಮನ ಗೆಲ್ಲಲಿದೆ. ಅನಗತ್ಯವಾದ ಖರ್ಚು ವೆಚ್ಚಗಳು ಕಸಿ ವಿಸಿಯನ್ನು ಉಂಟುಮಾಡುತ್ತದೆ. ಅತಿಯಾದ ಊಹೆಯಿಂದ ಇಂದಿನ ಸಂತೋಷವನ್ನು ಕಡೆಗಣಿಸದಿರಿ. ಪದೇ ಪದೇ ಮನಸ್ಸನ್ನು ಬದಲಾಯಿಸದೆ ಹೋದಲ್ಲಿ ಸಂತಸದ ಜೀವನ ಇರುತ್ತದೆ. ಸಂಗಾತಿ ಮತ್ತು ಮಕ್ಕಳ ಜೊತೆ ಸಂತೋಷದ ಘಳಿಗೆ ಕಳೆಯುವಿರಿ.

ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಆಕಾಶನೀಲಿ ಬಣ್ಣ

-----------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).