ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಅನಿರೀಕ್ಷಿತ ಧನಲಾಭ, ಷೇರು ವ್ಯವಹಾರದಲ್ಲಿ ಆದಾಯ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯ ದಿನ ಭವಿಷ್ಯ

Horoscope Today: ಅನಿರೀಕ್ಷಿತ ಧನಲಾಭ, ಷೇರು ವ್ಯವಹಾರದಲ್ಲಿ ಆದಾಯ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯ ದಿನ ಭವಿಷ್ಯ

15 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (15th April 2024 Daily Horoscope).

ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (15th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಶುಕ್ಲಪಕ್ಷ-ಸೋಮವಾರ

ತಿಥಿ: ಸಪ್ತಮಿ 03.34 ರವರೆಗೂ ಇದ್ದು ನಂತರ ಅಷ್ಟಮಿ ಆರಂಭವಾಗುತ್ತದೆ.

ನಕ್ಷತ್ರ : ಪುನರ್ವಸು ನಕ್ಷತ್ರವು ಮಂಗಳವಾರ ಬೆಳಗ್ಗೆ 06.03 ರವರೆಗೂ ಇದ್ದು ನಂತರ ಪುಷ್ಯ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.07

ಸೂರ್ಯಾಸ್ತ: ಸಂಜೆ 06.31

ರಾಹುಕಾಲ : ಬೆಳಗ್ಗೆ 07.30 ರಿಂದ 09.00

ರಾಶಿಫಲ

ಸಿಂಹ

ಯಾವುದೇ ಯೋಚನೆ ಇಲ್ಲದೆ ಸಂತಸದಿಂದ ದಿನ ಕಳೆಯುವಿರಿ. ಆದರೆ ಆಡುವ ಮಾತಿನಲ್ಲಿ ನಿಖರತೆ ಇರುವುದಿಲ್ಲ. ಕುಟುಂಬದಲ್ಲಿ ನಿಮ್ಮ ನಿರ್ಣಯವೇ ಅಂತಿಮವಾಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಆರೋಗ್ಯದಲ್ಲಿ ಏರಿಳಿತ ಇರುತ್ತದೆ. ಕುಟುಂಬದ ಸದಸ್ಯರ ಜೊತೆ ಮನರಂಜನಾ ಸ್ಥಳಕ್ಕೆ ತೆರಳುವಿರಿ. ಮನಸ್ಸು ಒಪ್ಪದೇ ಇದ್ದರೂ ಉಪಯೋಗವಿರದ ವಿಚಾರಗಳಿಗೆ ಹಣ ಖರ್ಚು ಮಾಡುವಿರಿ. ಬುದ್ಧಿವಂತಿಕೆಯ ಮಾತಿನಿಂದ ಸಮಸ್ಯೆಯೊಂದರಿಂದ ಪಾರಾಗುವಿರಿ. ಯಾರನ್ನೂ ನಂಬದ ಮನಸ್ಥಿತಿಯಲ್ಲಿ ಇರುವಿರಿ. ತಂದೆಯಿಂದ ಹಣದ ಸಹಾಯ ದೊರೆಯುತ್ತದೆ. ಧರ್ಮ ಗುರುಗಳ ಆಶೀರ್ವಾದ ದೊರೆಯುತ್ತದೆ.

ಪರಿಹಾರ : ದೇವರಿಗೆ ತುಪ್ಪದ ದೀಪ ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ

ಕನ್ಯಾ

ಹೊಗಳಿಕೆಯ ಮಾತಿನಿಂದ ಎಲ್ಲರ ಮನಸನ್ನು ಗೆಲ್ಲುವಿರಿ. ಕುಟುಂಬದಲ್ಲಿ ನೆಮ್ಮದಿ ಇರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಮಧ್ಯಮ ಲಾಭ ನಷ್ಟ ದೊರೆಯುತ್ತದೆ. ಯಾರೊಬ್ಬರನೂ ಆಶ್ರಯಿಸದೆ ಸ್ವಂತ ಕೆಲಸಗಳನ್ನು ಪೂರ್ಣಗೊಳಿಸುವಿರಿ. ಬಿಡುವಿಲ್ಲದ ಕೆಲಸದ ನಡುವೆಯೂ ಆತ್ಮೀಯರಿಗೆ ಸಹಾಯ ಮಾಡುವಿರಿ. ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ. ಅನಿರೀಕ್ಷಿತ ಧನಲಾಭವಿದೆ. ಷೇರಿನ ವ್ಯವಹಾರದಲ್ಲಿ ಆದಾಯ ದೊರೆಯುತ್ತದೆ. ಸೋದರಿಯ ಮನೆಯ ಮಂಗಳಕಾರ್ಯಕ್ಕೆ ಸಹಾಯ ಮಾಡುವಿರಿ. ಎಲ್ಲರೊಂದಿಗೆ ಯಾತ್ರಾಸ್ಥಳಕ್ಕೆ ಪ್ರವಾಸ ಹೋಗುವಿರಿ. ಕಲಾವಿದರಿಗೆ ಸಾಮಾಜದಲ್ಲಿ ಉನ್ನತ ಗೌರವ ದೊರೆಯಲಿದೆ. ಯಾರನ್ನೂ ಸುಲಭವಾಗಿ ನಂಬುವುದಿಲ್ಲ.

ಪರಿಹಾರ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಹಾಲಿನ ಬಣ್ಣ

ತುಲಾ

ಕುಟುಂಬದಲ್ಲಿ ಸ್ನೇಹಮಯ ವಾತಾವರಣ ಉಂಟಾಗುತ್ತದೆ. ಕೆಲಸ ಕಾರ್ಯಗಳು ತ್ವರಿತವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚುವ ಕಾರಣ ಸಹನೆ ಕಳೆದುಕೊಳ್ಳುವಿರಿ. ಕೈತುಂಬಾ ಹಣವಿದ್ದರೂ ಮಾನಸಿಕ ನೆಮ್ಮದಿ ಇರುವುದಿಲ್ಲ. ಚಾಡಿಮಾತನ್ನು ನಂಬದಿರಿ. ಶಾಂತಿ ಸಹನೆಯಿಂದ ದಾಂಪತ್ಯ ಸುಖಮಯವಾಗಿರುತ್ತದೆ. ಆತುರದಿಂದ ವರ್ತಿಸಿ ಹಣದ ವಿವಾದಕ್ಕೆ ಸಿಲುಕುವಿರಿ. ಆರೋಗ್ಯದಲ್ಲಿ ತೊಂದರೆ ಎದುರಾಗದು. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಯಶಸ್ಸು ದೊರೆಯುತ್ತದೆ. ವಯೋವೃದ್ದರ ಆರೋಗ್ಯ ಸುಧಾರಿಸುತ್ತದೆ. ವಿದ್ಯಾರ್ಥಿಗಳು ಓದಿನಲ್ಲಿ ಹೆಚ್ಚಿನ ಆಸಕ್ತಿ ತೋರುತ್ತಾರೆ.

ಪರಿಹಾರ : ತಲೆಗೆ ಹಾಲನಿಟ್ಟು ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು ದಕ್ಷಿಣ

ಅದೃಷ್ಟದ ಬಣ್ಣ: ಆಕಾಶ ನೀಲಿ

ವೃಶ್ಚಿಕ

ಆತ್ಮೀಯರ ಒಡನಾಟ ಕುಟುಂಬದಲ್ಲಿ ನೆಮ್ಮದಿ ಕಾಪಾಡುತ್ತದೆ. ಮನದ ಯೋಜನೆಗಳು ಪೂರ್ಣವಾಗಲು ಹೆಚ್ಚಿನ ಪ್ರಯತ್ನ ಬೇಕಾಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಅಡಚಣೆ ಉಂಟಾಗುವ ಸಾಧ್ಯತೆಗಳಿವೆ. ಅನಾವಶ್ಯಕ ಖರ್ಚು ವೆಚ್ಚಗಳು ಮುಂಗೋಪಕ್ಕೆ ಕಾರಣವಾಗಲಿದೆ. ವ್ಯಯಕ್ತಿಕ ಕೆಲಸವೊಂದು ಅಪೂರ್ಣವಾಗಬಹುದು. ಸ್ತ್ರೀಯರು ಹಟದಿಂದ ಕೆಲಸ ಸಾಧಿಸುತ್ತಾರೆ. ಮಕ್ಕಳಲ್ಲಿನ ಆತ್ಮವಿಶ್ವಾಸ ತೊಂದರೆಯನ್ನು ದೂರ ಮಾಡುತ್ತದೆ. ವಿದೇಶ ಅಥವಾ ದೂರದ ಪ್ರದೇಶಕ್ಕೆ ಉದ್ಯೋಗವನ್ನು ಅರಸಿ ತೆರಳುವಿರಿ. ಬರಹಗಾರರಿಗೆ ವಿನೂತನ ಅವಕಾಶವೊಂದು ದೊರೆಯುತ್ತದೆ. ಖರ್ಚು ಮಾಡುವುದನ್ನು ಕಡಿಮೆ ಮಾಡಿ ಹಣ ಉಳಿಸಲು ಯೋಜನೆಯೊಂದನ್ನು ರೂಪಿಸುವಿರಿ.

ಪರಿಹಾರ : ಹಣೆಯಲ್ಲಿ ತಿಲಕವನ್ನು ಧರಿಸಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕೆಂಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).