ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಸಮಾಜದಲ್ಲಿ ಸೂಕ್ತ ಸ್ಥಾನಮಾನ, ಕಲಾವಿದರ ಪ್ರತಿಭೆಗೆ ತಕ್ಕ ಅವಕಾಶ; ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ಭವಿಷ್ಯ

Horoscope Today: ಸಮಾಜದಲ್ಲಿ ಸೂಕ್ತ ಸ್ಥಾನಮಾನ, ಕಲಾವಿದರ ಪ್ರತಿಭೆಗೆ ತಕ್ಕ ಅವಕಾಶ; ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ಭವಿಷ್ಯ

15 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (15th April 2024 Daily Horoscope).

ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ
ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(15th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಶುಕ್ಲಪಕ್ಷ-ಸೋಮವಾರ

ತಿಥಿ: ಸಪ್ತಮಿ 03.34 ರವರೆಗೂ ಇದ್ದು ನಂತರ ಅಷ್ಟಮಿ ಆರಂಭವಾಗುತ್ತದೆ.

ನಕ್ಷತ್ರ : ಪುನರ್ವಸು ನಕ್ಷತ್ರವು ಮಂಗಳವಾರ ಬೆಳಗ್ಗೆ 06.03 ರವರೆಗೂ ಇದ್ದು ನಂತರ ಪುಷ್ಯ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.07

ಸೂರ್ಯಾಸ್ತ: ಸಂಜೆ 06.31

ರಾಹುಕಾಲ : ಬೆಳಗ್ಗೆ 07.30 ರಿಂದ 09.00

ರಾಶಿಫಲ

ಧನಸ್ಸು

ಕುಟುಂಬದಲ್ಲಿನ ಒಮ್ಮತದ ನಿರ್ಧಾರದಿಂದ ಸಮಸ್ಯೆಯೊಂದು ದೂರವಾಗಲಿದೆ. ಹಣದ ಕೊರತೆ ಕಡಿಮೆ ಆಗಲಿದೆ. ಉದ್ಯೋಗದಲ್ಲಿ ಪ್ರಗತಿಪರ ಯೋಜನೆಗಳು ಕಾರ್ಯದಕ್ಷತೆಯನ್ನು ಹೆಚ್ಚಿಸುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಯಾವುದೇ ತೊಂದರೆ ಕಾಣದು. ಹಟದ ಗುಣದಿಂದ ನಿಮ್ಮ ಆಸೆ ಆಕಾಂಕ್ಷೆಗಳನ್ನು ಪೂರೈಸಿಕೊಳ್ಳುವಿರಿ. ಯಾರನ್ನೂ ಸಹಾಯಕ್ಕೂ ಕಾಯದೆ ಮುಂದುವರೆಯುವಿರಿ. ಸ್ವಾಭಿಮಾನಿಗಳಾದ ನೀವು ಇತರರಿಗೂ ಸ್ಪೂರ್ತಿಯಾಗುವಿರಿ. ನಿಮ್ಮ ಕಷ್ಟದ ದುಡಿಮೆಯ ಹಣದಲ್ಲಿ ಅವಶ್ಯಕತೆ ಇರುವವರಿಗೆ ಸಹಾಯ ಮಾಡುವಿರಿ. ಸಮಾಜದಲ್ಲಿ ನಿಮಗೆ ಗೌರವಯುತ ಸ್ಥಾನ ಮಾನಗಳು ದೊರೆಯಲಿವೆ. ತಂದೆಯವರ ಆರೋಗ್ಯದಲ್ಲಿ ಸ್ಥಿರತೆ ಕಂಡುಬರುತ್ತದೆ. ಪದೇ ಪದೇ ನಿಮ್ಮ ನಿರ್ಧಾರಗಳನ್ನು ಬದಲಾಯಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಎಲೆ ಹಸಿರು

ಮಕರ

ಕುಟುಂಬದ ಕೆಲಸ ಕಾರ್ಯಗಳನ್ನು ಸುಲಲಿತವಾಗಿ ನಡೆಸಲು ಪ್ರಯತ್ನಿಸುವಿರಿ. ಹಣಕಾಸಿನ ವಿಚಾರದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ವೇಳೆ ಗಲಿಬಿಲಿಗೆ ಒಳಗಾಗುವಿರಿ. ವ್ಯಾಪಾರ ವ್ಯವಹಾರದಲ್ಲಿ ಆತುರ ತೋರದೆ ಹೋದಲ್ಲಿ ಆದಾಯದಲ್ಲಿ ಸ್ಥಿರತೆ ಕಾಣಲಿದೆ. ವಿದ್ಯಾರ್ಥಿಗಳು ನಿದ್ರೆ, ಮನರಂಜನೆಯಿಂದ ದೂರ ಉಳಿಯುತ್ತಾರೆ. ಮಕ್ಕಳು ಸುಲಭವಾಗಿ ಗುರಿಯನ್ನು ತಲುಪಲಿದ್ದಾರೆ. ಆತ್ಮೀಯರೊಬ್ಬರು ಅನಾಯಾಸವಾಗಿ ಕೊಟ್ಟ ಮಾತಿನಿಂದ ದೂರ ಸರಿಯುತ್ತಾರೆ. ಆತುರದಲ್ಲಿ ಬೇಸರ ಬರುವಂತೆ ಮಾತನಾಡುವಿರಿ. ನಿಧಾನವಾದರೂ ಕುಟುಂಬದ ಕೆಲಸ ಕಾರ್ಯಗಳಿಗೆ ಮೊದಲ ಪ್ರಾಶಸ್ತ್ಯ ನೀಡುವಿರಿ. ಕುಟುಂಬದಲ್ಲಿ ಶಾಂತಿ ಸಂಯಮದ ವಾತಾವರಣ ಇರುತ್ತದೆ. ಅವಶ್ಯವಿದ್ದಷ್ಟು ಹಣವನ್ನು ಸಂಪಾದಿಸಬಲ್ಲಿರಿ.

ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕೇಸರಿ

ಕುಂಭ

ಅನಾವಶ್ಯಕವಾಗಿ ಮಾತನಾಡುವುದಿಲ್ಲ. ಮಕ್ಕಳ ಜೊತೆ ಸಂತೋಷದಿಂದ ಕಾಲ ಕಳೆಯುವಿರಿ. ನಿಮ್ಮಲ್ಲಿನ ಉನ್ನತ ಮಟ್ಟದ ಸಮಾಜದಲ್ಲಿ ಉನ್ನತ ಸ್ಥಾನವನ್ನು ನೀಡುತ್ತದೆ. ದೈಹಿಕವಾಗಿ ಶ್ರಮ ಪಡದೆ ಅನ್ಯರ ಸಹಾಯದಿಂದ ಕೆಲಸ ಕಾರ್ಯಗಳನ್ನು ಪೂರೈಸುವಿರಿ. ಮನದ ವಿಚಾರವನ್ನು ನೇರವಾಗಿ ತಿಳಿಸಲು ಪ್ರಯತ್ನಿಸಿ. ನಿಮ್ಮ ಬದಲಾಗದ ಮನಸ್ಸಿನ ಕಾರಣ ಎದುರಾಳಿಗಳು ಗಲಿಬಿಲಿಗೊಳ್ಳುತ್ತಾರೆ. ಹೊಸ ಮನೆ ಕೊಳ್ಳುವ ಬಗ್ಗೆ ಮಾತು ಕತೆ ನಡೆಯುತ್ತದೆ. ನಿಮ್ಮ ಆದಾಯವು ಹೆಚ್ಚಲಿದೆ. ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಲು ನಿರ್ಧರಿಸುವಿರಿ. ಅಪರಿಚಿತ ವ್ಯಕ್ತಿಯೊಬ್ಬರ ಸಹಾಯ ಸಹಕಾರ ದೊರೆಯುತ್ತದೆ, ಕಲಾವಿದರ ಪ್ರತಿಭೆಯ ಅನಾವರಣಕ್ಕೆ ನೂತನ ವೇದಿಕೆಯೊಂದು ದೊರೆಯಲಿದೆ. ದೂರದ ಸ್ಥಳದಲ್ಲಿ ರಜೆಯನ್ನು ಕಳೆಯಲು ಕುಟುಂಬದವರ ಜೊತೆಯಲ್ಲಿ ಪ್ರಯಾಣ ಬೆಳೆಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕೆಂಪು

ಮೀನ

ಜೀವನದಲ್ಲಿನ ಹೊಸತನವು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಅನಾವಶ್ಯಕ ವಿಚಾರದಲ್ಲಿ ಸಮಯ ವ್ಯರ್ಥಮಾಡುವಿರಿ. ಸ್ವಂತ ಕೆಲಸ ಕಾರ್ಯಗಳನ್ನು ಮೊದಲು ಪೂರ್ಣಗೊಳಿಸುವಿರಿ. ಸೂಕ್ತ ಸಹಕಾರವಿಲ್ಲದ್ದೆ ಅತಿ ಮುಖ್ಯ ಕೆಲಸವನ್ನು ಮುಂದೂಡುವಿರಿ. ಕಲಿಕೆಯ ವಿಚಾರದಲ್ಲಿ ವಿದ್ಯಾರ್ಥಿಗಳು ನಿರಾಸಕ್ತಿ ತೋರುತ್ತಾರೆ. ಹಣಕಾಸಿನ ಕೊರತೆ ಕಡಿಮೆ ಆಗಲಿದೆ. ಕುಟುಂಬದ ಜವಾಬ್ದಾರಿಯನ್ನು ಎಲ್ಲರೊಂದಿಗೆ ಹಂಚಿಕೊಳ್ಳುವಿರಿ. ಸೋಲನ್ನು ಒಪ್ಪದೆ ಪ್ರತಿ ಕೆಲಸದಲ್ಲಿಯೂ ಅವಿರತ ಪ್ರಯತ್ನದಿಂದ ಜಯ ಗಳಿಸುವಿರಿ. ಎಲ್ಲರೊಂದಿಗೆ ಹೊಂದಿಕೊಂಡು ಬಾಳುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ತಂದೆಯವರಿಗೆ ವೃತ್ತಿಯಲ್ಲಿ ಬಡ್ತಿ ದೊರೆಯುತ್ತದೆ.

ಪರಿಹಾರ : ತಾಯಿಯ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಹಳದಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).