ನಿಮ್ಮಲ್ಲಿರುವ ಗುಣದಿಂದಾಗಿ ಸ್ನೇಹಿತರು ಹೆಚ್ಚುತ್ತಾರೆ, ಕ್ರೀಡಾ ಸ್ಪರ್ಧಿಗಳಿಗೆ ಉತ್ತಮ ಅವಕಾಶ ದೊರೆಯಲಿದೆ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ನಿಮ್ಮಲ್ಲಿರುವ ಗುಣದಿಂದಾಗಿ ಸ್ನೇಹಿತರು ಹೆಚ್ಚುತ್ತಾರೆ, ಕ್ರೀಡಾ ಸ್ಪರ್ಧಿಗಳಿಗೆ ಉತ್ತಮ ಅವಕಾಶ ದೊರೆಯಲಿದೆ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ನಿಮ್ಮಲ್ಲಿರುವ ಗುಣದಿಂದಾಗಿ ಸ್ನೇಹಿತರು ಹೆಚ್ಚುತ್ತಾರೆ, ಕ್ರೀಡಾ ಸ್ಪರ್ಧಿಗಳಿಗೆ ಉತ್ತಮ ಅವಕಾಶ ದೊರೆಯಲಿದೆ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

15 ಜೂನ್‌ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (15th June 2024 Daily Horoscope).

ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (15th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಶನಿವಾರ

ತಿಥಿ: ನವಮಿ ರಾತ್ರಿ 12.37ರವರೆಗೂ ಇದ್ದು ನಂತರ ದಶಮಿ ಆರಂಭವಾಗುತ್ತದೆ.

ನಕ್ಷತ್ರ : ಉತ್ತರ ನಕ್ಷತ್ರವು ಬೆಳಗ್ಗೆ 07.24 ರವರೆಗೆ ಇದ್ದು ನಂತರ ಹಸ್ತ ನಕ್ಷತ್ರ ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.46

ರಾಹುಕಾಲ: ಬೆಳಗ್ಗೆ 09.11 ರಿಂದ 10.47

ರಾಶಿಫಲ

ಮೇಷ

ಇತರ ದಿನಗಳಿಗಿಂತ ಈ ದಿನ ನೀವು ಬಹಳ ಖುಷಿಯಾಗಿರುತ್ತೀರಿ. ಬುದ್ದಿವಂತಿಕೆಯಿಂದ ನಿಮ್ಮ ಕರ್ತವ್ಯವನ್ನು ಸರಿಯಾದ ಹಾದಿಯಲ್ಲಿ ನಿರ್ವಹಿಸುವಿರಿ. ಸೋದರ ಸೋದರಿಯೊಂದಿಗಿನ ಬಾಂಧವ್ಯ ಹೆಚ್ಚಲಿದೆ. ನಿಮ್ಮಲ್ಲಿರುವ ಕ್ಷಮಾ ಗುಣದಿಂದಾಗಿ ಆತ್ಮೀಯರ ಸಂಖ್ಯೆ ಹೆಚ್ಚುತ್ತದೆ. ಆರೋಗ್ಯದತ್ತ ಗಮನ ಹರಿಸುವುವಿರಿ. ನಿಮ್ಮ ಜೀವನಶೈಲಿಯನ್ನು ಬದಲಾಯಿಸಿಕೊಳ್ಳುವಿರಿ. ಕ್ರೀಡಾ ಸ್ಪರ್ಧಿಗಳಿಗೆ ಉತ್ತಮ ಅವಕಾಶ ಮತ್ತು ಗೆಲುವು ದೊರೆಯುತ್ತದೆ. ಇರುವ ವಾಹನವನ್ನು ಮಾರಾಟ ಮಾಡುವಿರಿ. ಆದರೆ ಹೊಸ ವಾಹನವನ್ನು ಕೊಳ್ಳಲು ಸಾಧ್ಯವಾಗುವುದಿಲ್ಲ. ತಾಯಿಗೆ ಅನಾರೋಗ್ಯವಿರುತ್ತದೆ. ಸಂಗಾತಿಯೊಂದಿಗೆ ಅನಾವಶ್ಯಕವಾಗಿ ವಾದದಲ್ಲಿ ತೊಡಗುವಿರಿ. ವ್ಯಾಪಾರ ಪ್ರತಿನಿಧಿಗಳಿಗೆ ಉತ್ತಮ ಲಾಭ ದೊರೆಯುತ್ತದೆ. ಕುಟುಂಬದ ಸದಸ್ಯರಿಂದ ಹಣ ಪಡೆಯಬೇಕಾಗುತ್ತದೆ.

ಪರಿಹಾರ : ಕೈ ಅಥವ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವುದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಹಳದಿ ಬಣ್ಣ

ವೃಷಭ

ಉತ್ತಮ ಆದಾಯವಿದ್ದರೂ ಖರ್ಚು ವೆಚ್ಚಗಳು ಹೆಚ್ಚುತ್ತವೆ. ಇದರಿಂದಾಗಿ ಹಣದ ಕೊರತೆ ಉಂಟಾಗುತ್ತದೆ. ಸಂಗಾತಿಯ ಚಂಚಲ ಸ್ವಭಾವದಿಂದ ಸಿಡಿಮಿಡಿಗೊಳ್ಳುವಿರಿ. ಸೋದರಿ ಅಥವಾ ಮಗಳು ಹಣದ ತೊಂದರೆಗೆ ಸಿಲುಕುತ್ತಾರೆ. ಒಳ್ಳೆಯ ಮನಸ್ಸು ಜೀವನದಲ್ಲಿನ ಸಕಾರಾತ್ಮಕ ಬದಲಾವಣೆಗಳಿಗೆ ಕಾರಣವಾಗುತ್ತದೆ. ದಂಪತಿ ನಡುವೆ ಸಣ್ಣಪುಟ್ಟ ವಿಚಾರಗಳಿಗೂ ಮನಸ್ತಾಪ ಉಂಟಾಗಲಿದೆ. ಗಂಡು ಮಕ್ಕಳ ಆರೋಗ್ಯದ ಬಗ್ಗೆ ಗಮನ ವಹಿಸಿ. ಶಾಂತಿಯುತ ಮಾತುಕತೆಯಿಂದ ವಂಶದ ಆಸ್ತಿ ವಿವಾದವು ಬಗೆಹರಿಯುತ್ತದೆ. ಮನಸ್ಸಿಲ್ಲದೆ ಹೋದರು ಸ್ನೇಹಿತರ ಹಣಕಾಸಿನ ವಿಚಾರದಲ್ಲಿ ಸಾಕ್ಷಿದಾರರಾಗುವಿರಿ. ಹಟದ ಮನಸ್ಥಿತಿಯಿಂದ ಹೊರ ಬಂದಲ್ಲಿ ಜೀವನದಲ್ಲಿ ಯಾವುದೇ ರೀತಿಯ ಹಿನ್ನೆಡೆ ಕಂಡು ಬರುವುದಿಲ್ಲ.

ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಹಸಿರು ಬಣ್ಣ

ಮಿಥುನ

ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಅನಾವಶ್ಯಕವಾಗಿ ಬದಲಿಸುವಿರಿ. ಧೈರ್ಯ ಸಾಹಸದ ಗುಣ ನಿಮ್ಮಲ್ಲಿ ಮೇಳೈಸುತ್ತದೆ. ಕುಟುಂಬದ ಸಮಸ್ಯೆಗಳಿಗೆ ಸರಿಯಾದ ಸಮಯದಲ್ಲಿ ಸೂಕ್ತ ಪರಿಹಾರವನ್ನು ತೆಗೆದುಕೊಳ್ಳುವಿರಿ. ನಿಮ್ಮ ತಾಯಿಯವರ ತಾಯಿಗೆ ಸಂಬಂಧಿಸಿದ ಆಸ್ತಿಯಲ್ಲಿ ಪಾಲು ದೊರೆಯುತ್ತದೆ. ಸಮಾಜದಲ್ಲಿ ಗೌರವಾನ್ವಿತ ಸ್ಥಾನ ಮಾನ ದೊರೆಯುತ್ತದೆ. ಮಹಿಳೆಯರ ಆಸೆ ಆಕಾಂಕ್ಷಿಗಳು ಸುಲಭವಾಗಿ ನೆರವೇರುತ್ತದೆ. ಒತ್ತಡಕ್ಕೆ ಮಣಿದು ತಪ್ಪು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಮಹತ್ತರ ತಿರುವು ದೊರೆಯುತ್ತದೆ. ವಾಹನ ಲಾಭವಿದೆ. ವೃತ್ತಿ ಕ್ಷೇತ್ರದಲ್ಲಿ ಹಿರಿಯ ಅಧಿಕಾರಿಗಳ ಸಹಾಯದಿಂದ ಉನ್ನತ ಸ್ಥಾನ ಗಳಿಸುವಿರಿ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೀಲಿ ಬಣ್ಣ

ಕಟಕ

ಕುಟುಂಬಕ್ಕೆ ಸಂಬಂಧಿಸಿದ ಕಾನೂನು ಪ್ರಕ್ರಿಯೆಯಲ್ಲಿ ಯಶಸ್ಸು ದೊರೆಯುತ್ತದೆ. ನಿಮ್ಮ ಸಂಗಾತಿಗೆ ಸಹನೆಯ ಕೊರತೆ ಇರುತ್ತದೆ. ಯಾರಿಗೂ ಬೆದರದೆ ದಿಟ್ಟ ನಡೆನುಡಿಯಿಂದ ಜೀವನ ನಡೆಸುವಿರಿ. ನನ್ನ ರೀತಿ ನೀತಿಗಳೇ ಸರಿ ಎಂಬ ಭಾವನೆ ನಿಮ್ಮಲ್ಲಿರುತ್ತದೆ. ಚಿನ್ನ ಬೆಳ್ಳಿಯ ಒಡವೆಗಳಿಗಾಗಿ ಹೆಚ್ಚಿನ ಹಣ ವೆಚ್ಚವಾಗುತ್ತದೆ. ಉಷ್ಣದ ಪದಾರ್ಥಗಳಿಂದ ದೂರವಿರುವುದು ಒಳ್ಳೆಯದು. ನಿಮ್ಮ ಸಂಗಾತಿಗಿದ್ದ ಚರ್ಮದ ಸಮಸ್ಯೆ ಗುಣಮುಖವಾಗುತ್ತದೆ. ಕುಟುಂಬದಲ್ಲಿನ ಹೆಣ್ಣುಮಕ್ಕಳ ವಿವಾಹ ನಿಶ್ಚಯವಾಗುತ್ತದೆ. ತಪ್ಪು ಕಲ್ಪನೆಯಿಂದ ದೂರವಾದ ಬಂಧು ಬಾಂಧವರು ಮರಳಿ ಬರುತ್ತಾರೆ. ಪ್ರಯೋಜನವಿಲ್ಲದ ವಿಚಾರಗಳಿಗಾಗಿ ಹಣ ಖರ್ಚಾಗುತ್ತದೆ. ವಿದ್ಯಾರ್ಥಿಗಳು ಸಂತೋಷದಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನೇರಳೆ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.