ಬಂಧು ಬಳಗದಲ್ಲಿ ನಿಮಗೆ ವಿಶೇಷ ಸ್ಥಾನಮಾನ ದೊರೆಯಲಿದೆ, ಸಂಗಾತಿ ಆರೋಗ್ಯದಲ್ಲಿ ಏರುಪೇರು; ಜೂ 15ರ ರಾಶಿಫಲ
15 ಜೂನ್ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (ಬರಹ: ಎಚ್. ಸತೀಶ್, ಜ್ಯೋತಿಷಿ)
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (15th June 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಶನಿವಾರ
ತಿಥಿ: ನವಮಿ ರಾತ್ರಿ 12.37ರವರೆಗೂ ಇದ್ದು ನಂತರ ದಶಮಿ ಆರಂಭವಾಗುತ್ತದೆ.
ನಕ್ಷತ್ರ : ಉತ್ತರ ನಕ್ಷತ್ರವು ಬೆಳಗ್ಗೆ 07.24 ರವರೆಗೆ ಇದ್ದು ನಂತರ ಹಸ್ತ ನಕ್ಷತ್ರ ಆರಂಭವಾಗಲಿದೆ.
ಸೂರ್ಯೋದಯ: ಬೆಳಗ್ಗೆ 05.52
ಸೂರ್ಯಾಸ್ತ: ಸಂಜೆ 06.46
ರಾಹುಕಾಲ: ಬೆಳಗ್ಗೆ 09.11 ರಿಂದ 10.47
ರಾಶಿಫಲ
ಸಿಂಹ
ಸೋದರಿಯ ಮನೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವಿರಿ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ. ನಿಮ್ಮ ವಿರೋಧಿಗಳ ಮನಸ್ಸಿನಲ್ಲಿರುವ ವಿಚಾರವನ್ನು ಅರಿತುಕೊಳ್ಳುವಿರಿ. ಸಂಗಾತಿಯ ಬುದ್ಧಿವಂತಿಕೆ ಮಾತುಗಳು ಕುಟುಂಬದಲ್ಲಿ ಶಾಂತಿ ನೆಲೆಸುವಂತೆ ಮಾಡುತ್ತದೆ. ಸುಲಭವಾಗಿ ಯಾರನ್ನೂ ನೀವು ನಂಬುವುದಿಲ್ಲ. ಹಣದ ಲೆಕ್ಕಾಚಾರದ ವಿಚಾರದಲ್ಲಿ ಎಲ್ಲರೂ ನಿಮ್ಮನ್ನು ಅವಲಂಬಿಸುತ್ತಾರೆ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿಸಿದ ಯಶಸ್ಸು ಮತ್ತು ಆದಾಯ ದೊರೆಯುತ್ತದೆ. ಗೃಹಿಣಿಯರು ಹಣ ಉಳಿಸುತ್ತಾರೆ. ದಾಂಪತ್ಯ ಜೀವನದಲ್ಲಿ ಪ್ರೀತಿ ವಿಶ್ವಾಸ ಹೆಚ್ಚಾಗಿರುತ್ತದೆ. ಬಿಡುವಿನ ವೇಳೆಯಲ್ಲಿ ಸಮಾಜ ಸೇವೆಯಲ್ಲಿ ತೊಡಗುವಿರಿ. ಎದುರಾಗುವ ತೊಂದರೆಯನ್ನು ಲೆಕ್ಕಿಸದೆ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ.
ಪರಿಹಾರ : ಸಾಧು ಸಂತರ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ :3
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ : ಗುಲಾಬಿ
ಕನ್ಯಾ
ಗೃಹಿಣಿಯರು ವಿನಾಕಾರಣ ವಾದ ವಿವಾದದಲ್ಲಿ ತೊಡಗುತ್ತಾರೆ. ದಾಂಪತ್ಯ ಸಂತೋಷದಿಂದ ಕೂಡಿರುತ್ತದೆ. ಬಂಧು ಬಳಗದಲ್ಲಿ ನಿಮಗೆ ವಿಶೇಷವಾದ ಸ್ಥಾನಮಾನ ದೊರೆಯುತ್ತದೆ. ಸಂಗಾತಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ವಿವಾಹವಾಗುವವರಿಗೆ ಉತ್ತಮ ಸಂಬಂಧ ಕೂಡಿಬರುತ್ತದೆ. ಮಗನ ಜೊತೆ ಉತ್ತಮ ಬಾಂಧವ್ಯ ಇರುವುದಿಲ್ಲ. ಹಣದ ತೊಂದರೆ ಕಾಡುವುದಿಲ್ಲ. ಸಂಗಾತಿಯಿಂದ ವಿಶೇಷವಾದ ಅನುಕೂಲತೆಗಳು ದೊರೆಯುತ್ತದೆ. ಮಹಿಳೆಯರು ಸಾರ್ವಜನಿಕ ಸಮಾರಂಭದ ನೇತೃತ್ವವನ್ನು ವಹಿಸುತ್ತಾರೆ. ಸಂಗಾತಿಯ ಆತುರದ ಮಾತುಗಳು ಕುಟುಂಬದಲ್ಲಿ ಮನಸ್ತಾಪ ಉಂಟುಮಾಡುತ್ತದೆ. ತಾಯಿಯ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ಎದುರಾಗುವ ಸಮಸ್ಯೆಗೆ ಧೈರ್ಯದಿಂದ ಪರಿಹಾರ ಕಂಡುಹಿಡಿಯುವಿರಿ. ತಂದೆಯವರ ರಕ್ತಸಂಬಂಧಿಕರಿಂದ ತೊಂದರೆ ಉಂಟಾಗಬಹುದು.
ಪರಿಹಾರ : ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಬಣ್ಣ : ಬಿಳಿ ಬಣ್ಣ
ತುಲಾ
ಮನದಲ್ಲಿ ವೈರಾಗ್ಯದ ಭಾವನೆ ಮೂಡುತ್ತದೆ. ಧ್ಯಾನ ಯೋಗದಲ್ಲಿ ಹೆಚ್ಚಿನ ಆಸಕ್ತಿ ತೋರುವಿರಿ. ಯಾರಿಗೂ ತೊಂದರೆ ಮಾಡದೆ ಜನಾನುರಾಗಿಯಾಗಿ ಬಾಳುವಿರಿ. ಸಂಗಾತಿಗೆ ವಿಶೇಷ ಶುಭ ಫಲಗಳು ದೊರೆಯುತ್ತವೆ. ತಂದೆಯವರ ಆರೋಗ್ಯದಲ್ಲಿ ಪೂರ್ಣ ಸುಧಾರಣೆ ಕಂಡು ಬರುತ್ತದೆ. ಉತ್ತಮ ಆದಾಯವಿದ್ದರೂ ಹಣತೆ ಕೊರತೆ ನಿಮ್ಮನ್ನು ಕಾಡಲಿದೆ. ಕೂಡಿಟ್ಟ ಹಣವನ್ನು ಖರ್ಚು ಮಾಡಲೇಬೇಕಾದ ಸ್ಥಿತಿ ಬರುತ್ತದೆ. ನೀವು ಅಂದುಕೊಂಡಂತೆ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯಲಿದೆ. ನಿಮ್ಮ ಮನಸ್ಸಿಗೆ ತೃಪ್ತಿ ನೀಡುವ ವಸ್ತ್ರಗಳಿಗೆ ಹಣ ವೆಚ್ಚವಾಗುತ್ತದೆ. ಕುಟುಂಬದ ಬಳಕೆಗಾಗಿ ದೊಡ್ಡ ವಾಹನವನ್ನು ಕೊಳ್ಳುವಿರಿ.
ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ : ಬೂದು ಬಣ್ಣ
ವೃಶ್ಚಿಕ
ಸಂಗಾತಿಗೆ ಹೆಚ್ಚಿನ ವಿದ್ಯೆ ಜೊತೆಗೆ ವಿವೇಕವೂ ಇರುತ್ತದೆ. ಯಾರ ಮನಸ್ಸಿಗೂ ನೋಯಿಸದೆ ದೈನಂದಿನ ಕೆಲಸಗಳನ್ನು ಆರಂಭಿಸುವಿರಿ. ಉತ್ತಮ ಹಣ ಗಳಿಕೆ ಇರುವ ಕಾರಣ ಮನಸ್ಸಿಗೆ ನೆಮ್ಮದಿ ಇರುತ್ತದೆ. ಬಾಳ ಸಂಗಾತಿಗೆ ಶೀತದಿಂದ ತೊಂದರೆ ಇರುತ್ತದೆ. ಮನದಲ್ಲಿ ಭಯವಿರುವುದಿಲ್ಲ. ಯಾವುದೇ ಕೆಲಸವನ್ನು ಸುಲಭವಾಗಿ ಮಾಡಬಲ್ಲಿರಿ. ಆದರೆ ಕೆಲಸದ ಆರಂಭದಲ್ಲಿ ಅಡ್ಡಿ ಆತಂಕಗಳು ಎದುರಾಗುತ್ತವೆ. ವ್ಯಾಪಾರದ ಉದ್ದೇಶದಿಂದ ಹೊಸ ವಾಹನ ಕೊಳ್ಳುವಿರಿ. ಕೇವಲ ಕುಟುಂಬದಲ್ಲಿ ಮಾತ್ರವಲ್ಲದೆ ಹೊರಗಿನ ಜನರ ಪ್ರೀತಿ-ವಿಶ್ವಾಸವನ್ನು ಗಳಿಸುವಿರಿ. ಮಾತನಾಡಲು ಆರಂಭಿಸಿದರೆ ನಿಲ್ಲಿಸುವುದೇ ಇಲ್ಲ. ನಿಮ್ಮ ಮನದಲ್ಲಿರುವ ವಿಚಾರಗಳನ್ನು ಎಲ್ಲರಲ್ಲಿಯೂ ಹಂಚಿಕೊಳ್ಳುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೆಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಕಂದು ಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
