ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ವಿದ್ಯಾಭ್ಯಾಸ ಪೂರ್ಣಗೊಳ್ಳುವ ಮುನ್ನವೇ ಈ ರಾಶಿಯವರಿಗೆ ಉನ್ನತ ಸಂಸ್ಥೆಯಲ್ಲಿ ಉದ್ಯೋಗ ದೊರೆಯಲಿದೆ: ಮೇ 15ರ ರಾಶಿಫಲ

Horoscope Today: ವಿದ್ಯಾಭ್ಯಾಸ ಪೂರ್ಣಗೊಳ್ಳುವ ಮುನ್ನವೇ ಈ ರಾಶಿಯವರಿಗೆ ಉನ್ನತ ಸಂಸ್ಥೆಯಲ್ಲಿ ಉದ್ಯೋಗ ದೊರೆಯಲಿದೆ: ಮೇ 15ರ ರಾಶಿಫಲ

15 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (15th May 2024 Daily Horoscope).

ಮೇ 15ರ ರಾಶಿಫಲ
ಮೇ 15ರ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (15th May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಬುಧವಾರ

ತಿಥಿ: ಅಷ್ಟಮಿ ದಿನಪೂರ್ತಿ ಇರುತ್ತದೆ

ನಕ್ಷತ್ರ: ಆಶ್ಲೇಷ ನಕ್ಷತ್ರವು 04.40ರವರೆಗೂ ಇದ್ದು ನಂತರ ಮಖ ನಕ್ಷತ್ರವು ಆರಂಭವಾಗುತ್ತದೆ

ಸೂರ್ಯೋದಯ: ಬೆಳಗ್ಗೆ 05.54

ಸೂರ್ಯಾಸ್ತ: ಸಂಜೆ 06.37

ರಾಹುಕಾಲ: 12.20 ರಿಂದ 01.55

ರಾಶಿಫಲ

ಮೇಷ

ಅನಾವಶ್ಯಕ ಓಡಾಟದಿಂದ ಬೇಸರ ಮೂಡುತ್ತದೆ. ಪರಸ್ಥಳದಲ್ಲಿ ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ಲಬಿಸುತ್ತದೆ. ತಂದೆಯವರ ಉದ್ಯೋಗದಲ್ಲಿ ಇದ್ದ ಅಡಚಣೆಯನ್ನು ದೂರ ಮಾಡುವಿರಿ. ಆರಂಭದಲ್ಲಿ ಸಹೋದ್ಯೋಗಿಗಳ ವಿರೋಧವನ್ನು ಎದುರಿಸುವಿರಿ. ವಿದ್ಯಾರ್ಥಿಗಳು ಚುರುಕುತನದಿಂದ ಗುರಿ ತಲುಪುತ್ತಾರೆ. ಸುಲಭವಾಗಿ ಹಣಕಾಸಿನ ವಿಷಯದಲ್ಲಿ ಯಾರನ್ನೂ ನಂಬುವುದಿಲ್ಲ. ಯಾವುದೇ ಕೆಲಸವಾದರೂ ನಿಷ್ಠೆಯಿಂದ ಪೂರ್ಣಗೊಳಿಸುವಿರಿ. ಭಯವಿಲ್ಲದೆ ತೆಗೆದುಕೊಳ್ಳುವುವ ನಿರ್ಧಾರಗಳು ಸಫಲಗೊಳ್ಳಲಿವೆ. ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭವಿದೆ. ಸೋದರಿಯರಿಗೆ ಉಡುಗೊರೆಯೊಂದನ್ನು ನೀಡುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಗುಲಾಬಿ

ವೃಷಭ

ರೈತಬಾಂಧವರಿಗೆ ಉತ್ತಮ ದಿನಗಳು ಆರಂಭವಾಗುತ್ತವೆ. ಮನಸ್ಸಿಟ್ಟು ಮಾಡುವ ಕೆಲಸಕಾರ್ಯಗಳಲ್ಲಿ ಯಶಸ್ಸು ಗಳಿಸುವಿರಿ. ವಿದ್ಯಾರ್ಥಿಗಳು ಕಷ್ಟಪಟ್ಟು ಓದಿನಲ್ಲಿ ನಿರತರಾಗುವರು. ವ್ಯಾಪಾರ ವಹಿವಾಹಿಟಿನಿಂದ ಉತ್ತಮ ಲಾಭವಿರುತ್ತದೆ. ಆಪತ್ತಿನಲ್ಲಿರುವವರಿಗೆ ಸಹಾಯ ಮಾಡುವಿರಿ. ಸೋದರರ ಜೊತೆಯಲ್ಲಿ ಬೇಸರದ ಸನ್ನಿವೇಶ ಉಂಟಾಗಲಿದೆ. ಕಮೀಷನ್ ಆಧಾರಿತ ಉದ್ಯೋಗದಲ್ಲಿ ಹೆಚ್ಚಿನ ಲಾಭಾಂಶ ಇರುತ್ತದೆ. ಕುಟುಂಬದ ಆದಾಯದಲ್ಲಿ ಹೆಚ್ಚಳ ಕಂಡುಬರುತ್ತದೆ. ಕುಟುಂಬದಲ್ಲಿ ವಿವಾಹದ ಮಾತುಕತೆಯು ಸಫಲಗೊಳ್ಳಲಿದೆ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುತ್ತದೆ. ಮಕ್ಕಳ ಮನಸ್ಸಿಗೆ ಸಂತೋಷವಾಗುವ ನಿರ್ಧಾರವೊಂದನ್ನು ಕೈಗೊಳ್ಳುವಿರಿ. ಎಲ್ಲರ ಜೊತೆ ಮನಬಿಚ್ಚಿ ಮಾತನಾಡಿರಿ.

ಪರಿಹಾರ : ತಾಯಿಯ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬಿಳಿ

ಮಿಥುನ

ಹಣಕಾಸಿನ ವ್ಯವಹಾರದಲ್ಲಿ ವಿವಾದವೊಂದು ಎದುರಾಗುತ್ತದೆ. ಚಂಚಲದ ಬುದ್ದಿಯ ಕಾರಣ ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತವೆ. ತಾಯಿಯವರ ಜೊತೆಯಲ್ಲಿ ಧಾರ್ಮಿಕ ಕೆಲಸ ಕಾರ್ಯಗಳನ್ನು ನೆರವೇರಿಸುವಿರಿ. ವಿದ್ಯಾರ್ಥಿಗಳಿಗೆ ಕಲಿಕೆಯ ಹಂತದಲ್ಲಿ ಇರುವಾಗಲೇ ಉದ್ಯೋಗ ದೊರೆಯುತ್ತದೆ. ಕುಟುಂಬದ ಪೂರ್ಣ ಜವಾಬ್ದಾರಿ ನಿಮಗೆ ದೊರೆಯುತ್ತದೆ. ಉದ್ಯೋಗಸ್ಥರು ಒತ್ತಡವಿಲ್ಲದೆ ಜಿವನ ನಡೆಸುವರು. ಹೊಸ ವ್ಯಾಪಾರ ಆರಂಭಿಸುವ ವಿಚಾರ ಮುಂದೆ ಹೋಗಲಿದೆ. ಗೃಹಾಲಂಕಾರ ಸಾಮಗ್ರಿಗಳ ವ್ಯಾಪಾರದಲ್ಲಿ ಲಾಭವಿರುತ್ತದೆ. ಗಣ್ಯವ್ಯಕ್ತಿಗಳ ಸಹಾಯ ಸಹಕಾರ ನಿಮಗೆ ದೊರೆಯುತ್ತದೆ. ದೃಷ್ಠಿ ದೋಷದ ತೊಂದರೆ ಕಾಡಬಹುದು.

ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಬೂದು

ಕಟಕ

ಅಸಾಧಾರಣ ಪ್ರತಿಭೆಯಿಂದಾಗಿ ಸಮಾಜದ ಜನಪ್ರಿಯತೆಯನ್ನು ಗಳಿಸುವಿರಿ. ಬಂಧು ಬಳಗದವರಿಂದ ದೂರ ಉಳಿಯುವಿರಿ. ಆತುರದಿಂದ ಸ್ವಂತ ಕೆಲಸ ಕಾರ್ಯಗಳಲ್ಲಿ ಹಿನ್ನೆಡೆ ಉಂಟಾಗಲಿದೆ. ಹಣಕಾಸಿನ ತೊಂದರೆ ಎದುರಾದರೂ ಎದೆಗುಂದುವುದಿಲ್ಲ. ಸಾರಿಗೆಗೆ ಸಂಬಂಧಿಸಿದ ಉದ್ಯೋಗದಲ್ಲಿ ಹೆಚ್ಚಿನ ಆದಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಚುರುಕುತನದಿಂದ ಕಲಿಕೆಯಲ್ಲಿ ಮುಂದುವರೆಯುವಿರಿ. ಪಾಲುದಾರಿಕೆಯ ವ್ಯಾಪಾರ ವ್ಯವಹಾಗಳಲ್ಲಿ ಹೂಡಿದ ಬಂಡವಾಳಕ್ಕೆ ಮೋಸವಿರುವುದಿಲ್ಲ. ಆರೋಗ್ಯದಲ್ಲಿ ಏರಿಳಿತ ಉಂಟಾಗಲಿದೆ. ಧಾರ್ಮಿಕ ಕೇಂದ್ರದ ನಿರ್ವಹಣೆಯಲ್ಲಿ ನಿಮ್ಮ ಕೈ ಮೇಲಾಗಲಿದೆ. ಮಕ್ಕಳ ಜೊತೆಯಲ್ಲಿ ಬಿಡುವಿನ ವೇಳೆಯನ್ನು ಕಳೆಯುವಿರಿ.

ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಂದು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).