ಕನ್ನಡ ಸುದ್ದಿ  /  Astrology  /  Horoscope Today Astrology Prediction 16 March 2024 Leo Virgo Libra Scorpio Daily Horoscope Sts

Horoscope Today: ಮನ ಗೆದ್ದವರಿಗಾಗಿ ಯಾವುದೇ ತ್ಯಾಗ ಮಾಡಬಲ್ಲಿರಿ, ವಿವಾದವೊಂದರಲ್ಲಿ ಜಯ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

ಮಾರ್ಚ್​ 16, ಶನಿವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (16 March 2024 Daily Horoscope).

ಮಾರ್ಚ್​ 16ರ ದಿನಭವಿಷ್ಯ
ಮಾರ್ಚ್​ 16ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (16 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಶನಿವಾರ

ತಿಥಿ : ಸಪ್ತಮಿ ರಾ.02.35 ರವರೆಗು ಇರುತ್ತದೆ. ಆನಂತರ ಅಷ್ಠಮಿ ಆರಂಭವಾಗುತ್ತದೆ.

ನಕ್ಷತ್ರ : ರೋಹಿಣಿ ನಕ್ಷತ್ರವು ರಾ.08.55 ರವರೆಗೆ ಇರುತ್ತದೆ. ಆನಂತರ ಮೃಗಶಿರ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.26

ಸೂರ್ಯಾಸ್ತ: ಸ.06.29

ರಾಹುಕಾಲ : ಬೆ.09.00 ರಿಂದ ಬೆ.10.30

ರಾಶಿ ಫಲಗಳು

ಸಿಂಹ

ಅನಾವಶ್ಯಕವಾಗಿ ಮನಸ್ಸಿನಲ್ಲಿ ಹತಾಶೆಯ ಭಾವನೆ ಮೂಡಲಿದೆ. ಎಲ್ಲರೊಂದಿಗೆ ಮನಬಿಚ್ಚಿ ಮಾತನಾಡಿದಲ್ಲಿ ಸಂತೋಷ ಸಂಭ್ರಮ ಮನೆಮಾಡುತ್ತದೆ. ಕುಟುಂಬದ ಕೆಲಸ ಕಾರ್ಯಗಳು ನಿಮ್ಮ ಮನದ ಇಚ್ಛೆಯಂತೆ ನಡೆಯಲಿದೆ. ಹಣಕಾಸಿನ ವಿಚಾರದಲ್ಲಿ ಅತಿಯಾದ ಆಸೆ ಇರುವುದಿಲ್ಲ. ಬಳಿ ಇರುವ ಹಣಕ್ಕೆ ತಕ್ಕಂತೆ ಯೋಜನೆಗಳನ್ನು ರೂಪಿಸಬಲ್ಲಿರಿ. ಉತ್ತಮ ಗಳಿಕೆ ಕಂಡು ಬರುತ್ತದೆ. ಕುಟುಂಬದ ಎಲ್ಲರೊಡನೆ ಯಾತ್ರಾ ಸ್ಥಳಕ್ಕೆ ಭೇಟಿ ನೀಡುವಿರಿ. ಉದ್ಯೋಗದ ಸಲುವಾಗಿ ಸಂಗಾತಿ ಮತ್ತು ಮಕ್ಕಳಿಂದ ಕೆಲದಿನಗಳು ದೂರವಿರಬೇಕಾಗುತ್ತದೆ. ದುಡುಕುತನದಿಂದ ತೆಗೆದುಕೊಳ್ಳುವ ನಿರ್ಧಾರಗಳು ಸಂಗಾತಿಯ ಮನಸಿನಲ್ಲಿ ಬೇಸರ ಮೂಡಿಸುತ್ತದೆ. ಅತಿಯಾದ ವಾದ ವಿವಾದ ಮಾಡದಿರಿ.

ಪರಿಹಾರ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ನಸುಗೆಂಪು ಬಣ್ಣ

ಕನ್ಯಾ

ಉತ್ತಮ ಆರೋಗ್ಯ ಇರುವ ಕಾರಣ ಕೆಲಸ ಕಾರ್ಯಗಳಲ್ಲಿ ನಿರತರಾಗುವಿರಿ. ಸರಳ ಜೀವನ ನಡೆಸುವಿರಿ. ದುಡುಕಿನ ನಿರ್ಧಾರ ತೆಗೆದುಕೊಳ್ಳದೆ ಹೋದರು ಅನಾವಶ್ಯಕವಾಗಿ ನಿರ್ಧಾರಗಳನ್ನು ಬದಲಾಯಿಸುವಿರಿ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಇರಲಿ. ಸಾಹಸದ ಕೆಲಸಗಳನ್ನು ಮಾಡುವಲ್ಲಿ ಹೆಚ್ಚಿನ ಆಸಕ್ತಿ ವಹಿಸುವಿರಿ. ಪ್ರಯೋಜನವಿಲ್ಲದ ಯಾವುದೇ ಕೆಲಸಗಳನ್ನು ಮಾಡುವುದಿಲ್ಲ. ಎಲ್ಲರೂ ಮೆಚ್ಚಿರುವಂತಹ ನಡವಳಿಕೆಯನ್ನು ತೋರುವಿರಿ. ಸಣ್ಣದಾದ ಕೆಲಸ ಕಾರ್ಯಗಳನ್ನು ಹೆಚ್ಚಿನ ಉತ್ಸಾಹದಿಂದ ಮಾಡುವಿರಿ. ದಂಪತಿಗಳ ನಡುವಿನ ಮನಸ್ತಾಪವು ಮರೆಯಾಗುತ್ತದೆ. ನಿಮ್ಮ ಮನದ ಆಸೆ ಅಭಿಲಾಷೆ ಪೂರ್ಣಗೊಳ್ಳಲಿವೆ. ಸೋಂಕಿನಿಂದ ತೊಂದರೆ ಉಂಟಾಗುವ ಸಾಧ್ಯತೆಗಳಿವೆ. ನಿಮ್ಮಲ್ಲಿರುವ ವಿಶೇಷ ಪ್ರತಿಭೆಗೆ ತಕ್ಕ ಪ್ರಶಂಸೆಯು ದೊರೆಯುತ್ತದೆ.

ಪರಿಹಾರ : ತಲೆಗೆ ಹಾಲನ್ನಿಟ್ಟು ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ

ತುಲಾ

ಸಮಾಜದ ಗಣ್ಯ ವ್ಯಕ್ತಿಗಳ ಸಹಾಯ ಸಹಕಾರ ದೊರೆಯಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ಸಾಲದ ವ್ಯವಹಾರಗಳಿಂದ ದೂರವಿರುವಿರಿ. ಕುಟುಂಬದಲ್ಲಿ ಸಂತಸ ಸಂಭ್ರಮ ನೆಲೆಸಿರುತ್ತದೆ. ವಿದ್ಯಾರ್ಥಿಗಳು ಸಮಯ ಕಳೆಯಲೆಂದು ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸುತ್ತಾರೆ. ಸಂಯಮದಿಂದ ತೆಗೆದುಕೊಳ್ಳುವ ನಿರ್ಧಾರಗಳು ಆಶಾದಾಯಕವಾಗಿರುತ್ತದೆ. ಸಣ್ಣಪುಟ್ಟ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸುವಿರಿ. ಸಂಗಾತಿಯೊಂದಿಗೆ ಹೆಚ್ಚಿನ ಆತ್ಮೀಯತೆ ಇರಲಿದೆ. ಮನ ಗೆದ್ದವರಿಗಾಗಿ ಯಾವುದೇ ತ್ಯಾಗವನ್ನು ಮಾಡಬಲ್ಲಿರಿ. ಕ್ಲಿಷ್ಟಕರ ಪರಿಸ್ಥಿತಿಯೊಂದರಲ್ಲಿ ಸಂಗಾತಿಯಿಂದ ಉತ್ತಮ ಸಲಹೆ ದೊರೆಯುತ್ತದೆ. ಹಣಕಾಸಿನ ವಿವಾದವೊಂದರಲ್ಲಿ ಕಾನೂನಾತ್ಮಕ ಜಯವನ್ನು ಗಳಿಸುವಿರಿ.

ಪರಿಹಾರ : ಹಣೆಯಲ್ಲಿ ತಿಲಕವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಹೊಗೆಯಬಣ್ಣ

ವೃಶ್ಚಿಕ

ಹಿರಿಯರ ಅಥವಾ ಅನುಭವಸ್ಥರ ಮಾರ್ಗದರ್ಶನದಿಂದ ಜೀವನದಲ್ಲಿ ಮುಂದುವರೆಯಿರಿ. ಸರಿ ಇಲ್ಲದ ಹವ್ಯಾಸಗಳಿಂದ ದೂರವಿರುವುದು ಒಳ್ಳೆಯದು. ನಿಮಗೆ ಇಷ್ಟವಾಗಿರುವ ವಸ್ತುವನ್ನು ಕಳೆದುಕೊಳ್ಳುವ ಸಾಧ್ಯತೆಗಳಿವೆ. ವಿದ್ಯಾರ್ಥಿಗಳಿಗೆ ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ದೊರೆಯಲಿದೆ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿರಿ. ಹೊರಾಂಗಣ ಕ್ರೀಡೆಗಳಲ್ಲಿ ಆಸಕ್ತಿ ಉಂಟಾಗಲಿದೆ. ಒಮ್ಮೆ ಯೋಚಿಸಿದ ನಂತರ ಹಣಕಾಸಿನ ವಿಚಾರದಲ್ಲಿ ತೀರ್ಮಾನಗಳನ್ನು ತಿಳಿದುಕೊಳ್ಳಿರಿ. ಆತ್ಮೀಯರ ಜೊತೆ ಹಣಕಾಸಿನ ಯೋಜನೆಯಲ್ಲಿ ಹಣವನ್ನು ಹೂಡುವಿರಿ. ತಿಳಿವಳಿಕೆಯ ಇಲ್ಲದೆ ಮಾಡಿದ ತಪ್ಪಿಗೆ ದೊಡ್ಡ ಮಟ್ಟದ ತೊಂದರೆ ಉಂಟಾಗಲಿದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಆಕಾಶ ನೀಲಿ ಬಣ್ಣ

----------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).