Horoscope Today: ಮಿತಿ ಇಲ್ಲದ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ಏರುಪೇರು: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಮಿತಿ ಇಲ್ಲದ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ಏರುಪೇರು: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಭವಿಷ್ಯ

Horoscope Today: ಮಿತಿ ಇಲ್ಲದ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ಏರುಪೇರು: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಭವಿಷ್ಯ

16 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (16 April 2024 Daily Horoscope).

ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (16th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಶುಕ್ಲಪಕ್ಷ-ಮಂಗಳವಾರ

ತಿಥಿ: ಅಷ್ಟಮಿ 04.07 ವರೆಗು ಇರುತ್ತದೆ ನಂತರ ನವಮಿ ಆರಂಭವಾಗುತ್ತದೆ.

ನಕ್ಷತ್ರ : ಪುಷ್ಯ ನಕ್ಷತ್ರವು ದಿನಪೂರ್ತಿ ಇರುತ್ತದೆ.

ಸೂರ್ಯೋದಯ: ಬೆಳಗ್ಗೆ 06.06

ಸೂರ್ಯಾಸ್ತ: ಸಂಜೆ 06.31

ರಾಹುಕಾಲ: 03.00 ರಿಂದ 04.30 ವರೆಗೆ

ರಾಶಿಫಲ

ಸಿಂಹ

ಕುಟುಂಬದ ಸಂತೋಷದ ವಾತಾವರಣಕ್ಕೆ ಕಾರಣರಾಗುವಿರಿ. ಇಷ್ಟವೆನಿಸುವ ವಸ್ತುಗಳಿಗಾಗಿ ಹಣ ಖರ್ಚಾಗುತ್ತದೆ. ಸಂಗಾತಿಯೊಂದಿಗೆ ಅನಾವಶ್ಯಕವಾದ ವಾದ ವಿವಾದ ಉಂಟಾದರೂ ಬಹುಕಾಲ ಉಳಿಯದು. ಉದ್ಯೋಗದಲ್ಲಿ ಹಿರಿ ಅಧಿಕಾರಿಗಳ ಇಚ್ಛೆಯಂತೆ ಕೆಲಸ ಕಾರ್ಯಗಳು ನಡೆಯಲಿವೆ. ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನಲಾಭವಿದೆ. ವಿದ್ಯಾರ್ಥಿಗಳ ಆತ್ಮಸ್ಥೈರ್ಯ ಮತ್ತು ಧೈರ್ಯದ ನಡೆ ನುಡಿ ಯಶಸ್ಸಿಗೆ ಕಾರಣವಾಗುತ್ತದೆ. ವಿದೇಶ ಪ್ರಯಾಣ ಯೋಗವಿದೆ. ತಂದೆಯಿಂದ ಹಣದ ಸಹಾಯ ದೊರೆಯಲಿದೆ. ತಂದೆಯವರ ಆರೋಗ್ಯದ ಬಗ್ಗೆ ಗಮನವಿರಲಿ. ಸೇವಾವೃತ್ತಿಯಲ್ಲಿ ನಿರೀಕ್ಷಿತ ಯಶಸ್ಸು ದೊರೆಯುತ್ತದೆ. ಉತ್ತಮ ಆರೋಗ್ಯ ಇರಲಿದೆ.

ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ : ನೇರಳೆ

ಕನ್ಯಾ

ಹಣಕಾಸಿನ ಕೊರತೆ ನೀಗಿಸಲು ಹೊಸ ಯೋಜನೆ ರೂಪಿಸುವಿರಿ. ಉದ್ಯೋಗದಲ್ಲಿ ನಿರೀಕ್ಷಿತ ಮಟ್ಟ ತಲುಪಲಿದ್ದೀರಿ. ಕುಟುಂಬದಲ್ಲಿ ಪರಸ್ಪರ ಗೌರವ ನಂಬಿಕೆ ಮನೆಮಾಡಿರುತ್ತದೆ. ಸಂಗಾತಿಯಿಂದ ದೊರೆಯುವ ಸಹಕಾರ ಆತ್ಮಶಕ್ತಿಯನ್ನು ಹೆಚ್ಚಿಸುತ್ತದೆ. ಉದ್ಯೋಗದಲ್ಲಿ ಅಡಚಣೆ ಇರದು. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಬಂಡವಾಳವನ್ನು ತೊಡಗಿಸದಿರಿ. ವಿದ್ಯಾರ್ಥಿಗಳು ವಿಶ್ರಾಂತಿ ಮನರಂಜನೆಯನ್ನು ತೊರೆದು ಕಲೆಕೆಯಲ್ಲಿ ಯಶಸ್ಸಿನಿಂದ ಸಾಗುತ್ತಾರೆ. ಸೋದರಿಯ ಕೌಟುಂಬಿಕ ಕಲಹವನ್ನು ಸರಿಪಡಿಸುವಿರಿ. ಮಿತಿ ಇಲ್ಲದ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ಮನೆಯನ್ನು ಶುಭ್ರವಾಗಿರಿಸಿಕೊಳ್ಳಲು ಪ್ರಯತ್ನಿಸಿ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ತಯಾರಿಸಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಗುಲಾಬಿ ಬಣ್ಣ

ತುಲಾ

ಸ್ನೇಹಿತರ ಸಹಾಯದಿಂದ ಕುಟುಂಬದ ಸಮಸ್ಯೆಯೊಂದು ಪರಿಹಾರಕೊಳ್ಳುತ್ತದೆ. ಸಂಗಾತಿ ಮತ್ತು ಮಕ್ಕಳ ಜೊತೆಯಲ್ಲಿ ನೆಮ್ಮದಿಯ ಜೀವನ ನಡೆಸುವಿರಿ. ಸಮಯವನ್ನು ವ್ಯರ್ಥ ಮಾಡದೆ ಆದಾಯವನ್ನು ಹೆಚ್ಚಿಸಿಕೊಳ್ಳುವಿರಿ. ಉದ್ಯೋಗಸ್ಥರು ಹಿರಿಯ ಅಧಿಕಾರಿಗಳ ಪ್ರಶಂಸೆ ಪಡೆಯುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ವರಮಾನ ದೊರೆಯುತ್ತದೆ. ವಿದ್ಯಾರ್ಥಿಗಳು ಕೇವಲ ಕಲಿಕೆ ಮಾತ್ರವಲ್ಲದೆ ಜಾಗತಿಕ ವಿಚಾರ ತಿಳಿಯುವಲ್ಲಿ ಮುಂಚೂಣಿಯಲ್ಲಿ ಇರುತ್ತಾರೆ. ಬಿಡುವಿನ ವೇಳೆಯಲ್ಲಿ ಸಮಾಜಸೇವಾ ಕೆಲಸಗಳನ್ನು ಮಾಡುವಿರಿ. ಹಿರಿಯರ ಆಹಾರಕ್ರಮದಲ್ಲಿ ಬದಲಾವಣೆ ಅನಿವಾರ್ಯವಾಗುತ್ತದೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ.

ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು ಈಶಾನ್ಯ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ವೃಶ್ಚಿಕ

ಕುಟುಂಬದ ತೊಂದರೆಯನ್ನು ದೂರಮಾಡುವಿರಿ. ಬೇಸರದಿಂದಲೇ ಉದ್ಯೋಗವನ್ನು ಆರಂಭಿಸುವಿರಿ. ದುಡುಕಿ ಆಡುವ ಮಾತು ವಿವಾದಕ್ಕೆ ಕಾರಣವಾಗುತ್ತದೆ. ಸಿಡುಕುತನ ಬಿಟ್ಟು ಪ್ರೀತಿಯಿಂದ ವರ್ತಿಸಲು ಪ್ರಯತ್ನಿಸುವಿರಿ. ಯಾವುದೇ ಕೆಲಸವು ನಿಮಗೆ ಅಸಾಧ್ಯವೆನಿಸದು. ವ್ಯಾಪಾರ ವ್ಯವಹಾರದಲ್ಲಿ ತೊಂದರೆ ಆಗದು. ಉತ್ತಮ ಆದಾಯವಿರುವ ಕೆಲಸಗಳನ್ನು ಆಯ್ಕೆ ಮಾಡುವಿರಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ದೊರೆಯುತ್ತದೆ. ಬೆಲೆ ಬಾಳುವ ಒಡವೆ ವಸ್ತ್ರಗಳಿಗೆ ಹೆಚ್ಚಿನ ಹಣ ಖರ್ಚು ಮಾಡುವಿರಿ. ಭೂವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಆರೋಗ್ಯದಲ್ಲಿ ಏರುಪೇರು ಇರಲಿದೆ. ಸದುದ್ದೇಶಗಳಿಗೆ ಮಾತ್ರ ಹಣ ನೀಡುವಿರಿ.

ಪರಿಹಾರ : ತಾಯಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಬೂದು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.