Horoscope Today: ಲೋಹಕ್ಕೆ ಸಂಬಂಧಿಸಿದ ವ್ಯಾಪಾರದಲ್ಲಿ ಲಾಭ, ಮತ್ತೊಬ್ಬರ ಹಣಕಾಸಿನ ವಿಚಾರದಲ್ಲಿ ಮಧ್ಯಸ್ಥಿಕೆ ಬೇಡ ; ಏಪ್ರಿಲ್‌ 16ರ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಲೋಹಕ್ಕೆ ಸಂಬಂಧಿಸಿದ ವ್ಯಾಪಾರದಲ್ಲಿ ಲಾಭ, ಮತ್ತೊಬ್ಬರ ಹಣಕಾಸಿನ ವಿಚಾರದಲ್ಲಿ ಮಧ್ಯಸ್ಥಿಕೆ ಬೇಡ ; ಏಪ್ರಿಲ್‌ 16ರ ರಾಶಿಫಲ

Horoscope Today: ಲೋಹಕ್ಕೆ ಸಂಬಂಧಿಸಿದ ವ್ಯಾಪಾರದಲ್ಲಿ ಲಾಭ, ಮತ್ತೊಬ್ಬರ ಹಣಕಾಸಿನ ವಿಚಾರದಲ್ಲಿ ಮಧ್ಯಸ್ಥಿಕೆ ಬೇಡ ; ಏಪ್ರಿಲ್‌ 16ರ ರಾಶಿಫಲ

16 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (16th April 2024 2024 Daily Horoscope).

ಧನಸ್ಸು, ಮಕರ, ಕುಂಭ, ಮೀನ ರಾಶಿಯರ ದಿನ ಭವಿಷ್ಯ
ಧನಸ್ಸು, ಮಕರ, ಕುಂಭ, ಮೀನ ರಾಶಿಯರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.16th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಶುಕ್ಲಪಕ್ಷ-ಮಂಗಳವಾರ

ತಿಥಿ: ಅಷ್ಟಮಿ 04.07 ವರೆಗು ಇರುತ್ತದೆ ನಂತರ ನವಮಿ ಆರಂಭವಾಗುತ್ತದೆ.

ನಕ್ಷತ್ರ : ಪುಷ್ಯ ನಕ್ಷತ್ರವು ದಿನಪೂರ್ತಿ ಇರುತ್ತದೆ.

ಸೂರ್ಯೋದಯ: ಬೆಳಗ್ಗೆ 06.06

ಸೂರ್ಯಾಸ್ತ: ಸಂಜೆ 06.31

ರಾಹುಕಾಲ: 03.00 ರಿಂದ 04.30 ವರೆಗೆ

ರಾಶಿಫಲ

ಧನಸ್ಸು

ಅನಿಯಮಿತ ಕೆಲಸ ಕಾರ್ಯಗಳ ನಡುವೆ ವಿಶ್ರಾಂತಿ ಪಡೆಯುವಿರಿ. ಕುಟುಂಬದ ಪೂರ್ಣ ಜವಾಬ್ದಾರಿ ದೊರೆಯುತ್ತದೆ. ಕುಟುಂಬದಲ್ಲಿ ನಿಮ್ಮ ತೀರ್ಮಾನಗಳಿಗೆ ಮತ್ತು ಆಡುವ ಮಾತಿಗೆ ಗೌರವ ಇರುತ್ತದೆ. ಉದ್ಯೋಗದಲ್ಲಿ ನಿರೀಕ್ಷಿತ ಧನಾತ್ಮಕ ಫಲಿತಾಂಶಗಳು ದೊರೆಯುತ್ತವೆ. ಆತ್ಮೀಯರ ಸಹಾಯದಿಂದ ಚಿಕ್ಕ ಬಂಡವಾಳದ ಉದ್ದಿಮೆಯೊಂದನ್ನು ಆರಂಭಿಸುವಿರಿ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಏಕಾಗ್ರತೆ ಮತ್ತು ಆಸಕ್ತಿಯನ್ನು ಬೆಳೆಸಿಕೊಳ್ಳುತ್ತಾರೆ. ಚಿಕ್ಕ ಮಕ್ಕಳಿದ್ದಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಬೇಕಾಗುತ್ತದೆ. ರಜಾದಿನದ ಸವಿಯನ್ನು ಸವಿಯಲು ದೀರ್ಘಕಾಲದ ಪ್ರವಾಸಕ್ಕೆ ತೆರಳುವಿರಿ. ಅನಿರೀಕ್ಷಿತ ಧನಲಾಭ ದೊರೆಯಲಿದೆ. ಅನಾವಶ್ಯಕ ತಿರುಗಾಟ ಇರಲಿದೆ.

ಪರಿಹಾರ : ಪಕ್ಷಿಗಳಿಗೆ ಆಹಾರ ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಂದು

ಮಕರ

ಮನೆಗೆ ಮೊಮ್ಮಕ್ಕಳ ಆಗಮನ ಹಿರಿಯರಿಗೆ ಖುಷಿ ನೀಡುತ್ತದೆ. ಅವರ ಆಟ ಪಾಠಗಳು ನಿಮ್ಮಲ್ಲಿ ಹೊಸ ಬದಲಾವಣೆಗೆ ಕಾರಣವಾಗುತ್ತದೆ. ಕಷ್ಟವಿಲ್ಲದ ಕೆಲಸ ಕಾರ್ಯಗಳನ್ನು ಮಾತ್ರ ಮಾಡುವಿರಿ. ಉದ್ಯೋಗದಲ್ಲಿ ಕೇವಲ ಮಾತುಕತೆಯಿಂದ ವಿವಾದವೊಂದನ್ನು ಗೆಲ್ಲುವಿರಿ. ಲೋಹಗಳಿಗೆ ಸಂಬಂಧಿಸಿದ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ದೊರೆಯುತ್ತದೆ. ಬೇರೆಯವರ ಹಣಕಾಸಿನ ವಿವಾದದಲ್ಲಿ ಮಧ್ಯವರ್ತಿಗಳಾದಲ್ಲಿ ತೊಂದರೆಯನ್ನು ಎದುರಿಸಬೇಕಾಗುತ್ತದೆ. ಸ್ವಂತ ಬಳಕೆಗಾಗಿ ಹೊಸ ವಾಹನ ಕೊಳ್ಳುವಿರಿ. ಸಂಗಾತಿಯೊಂದಿಗೆ ಕಿರುಪ್ರವಾಸಕ್ಕೆ ತೆರಳುವಿರಿ. ಕುಟುಂಬದ ಹಿರಿಯರ ಜೊತೆಗಿನ ಮನಸ್ತಾಪ ಕೊನೆಗೊಳ್ಳುವುದು. ಮನೆಯಲ್ಲಿರುವ ಪುಟ್ಟ ಮಕ್ಕಳ ಆರೋಗ್ಯದಲ್ಲಿ ತೊಂದರೆ ಎದುರಾಗಲಿದೆ.

ಪರಿಹಾರ : ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

ಕುಂಭ

ಕುಟುಂಬದ ಪ್ರತಿಯೊಂದು ವಿಚಾರದಲ್ಲಿ ಭಾವನಾತ್ಮಕವಾಗಿ ವರ್ತಿಸುವಿರಿ. ನಿಮ್ಮಲ್ಲಿನ ಒಳ್ಳೆಯತನದ ದುರುಪಯೋಗವಾಗುವ ಸಾಧ್ಯತೆಗಳಿವೆ ಎಚ್ಚರಿಕೆ ಇರಲಿ. ಮನೆಯಲ್ಲಿ ನೆಮ್ಮದಿಗೆ ಕೊರತೆ ಕಂಡು ಬರುವುದಿಲ್ಲ. ಉದ್ಯೋಗದಲ್ಲಿ ಕೊಂಚ ತಡವಾದರೂ ಪ್ರಯತ್ನಕ್ಕೆ ತಕ್ಕಂತೆ ಫಲಗಳು ದೊರೆಯುತ್ತವೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ ಇರದು. ವಿದ್ಯಾರ್ಥಿಗಳು ಮನ ಬಿಚ್ಚಿ ಮಾತನಾಡಿದರೆ ಸುಲಭವಾಗಿ ತಮ್ಮ ಗುರಿ ತಲುಪಲಿದ್ದಾರೆ. ಮಕ್ಕಳ ಇಷ್ಟಾರ್ಥವನ್ನು ಪೂರೈಸಲು ಸಫಲರಾಗುವಿರಿ. ಆತ್ಮೀಯರ ಜೊತೆಗಿನ ವ್ಯಾಪಾರ ವ್ಯವಹಾರದಲ್ಲಿ ಲಾಭವಿರುತ್ತದೆ. ಕುಟುಂಬದವರ ಜೊತೆಯಲ್ಲಿ ಪ್ರವಾಸದ ಯೋಜನೆ ರೂಪಿಸುವಿರಿ. ಖರ್ಚು ವೆಚ್ಚವನ್ನು ಕಡಿತಗೊಳಿಸುವಿರಿ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ

ಮೀನ

ಸೋಲುವ ಸುಳಿವು ದೊರೆತರೆ ಆಡುವ ಮಾತನ್ನು ಬದಲಾಯಿಸುವಿರಿ. ಸೋಲನ್ನು ಒಪ್ಪದ ಕಾರಣ ಸದಾಕಾಲ ಮಾನಸಿಕ ಒತ್ತಡದಿಂದ ಬಳಲುವಿರಿ. ನಿಮಗೆ ಯಾರಿಂದಲೂ ವಿರೋಧವೇ ಉಂಟಾಗುವುದಿಲ್ಲ. ಸಮಾಜದ ಸಂತಸ ಮತ್ತು ನೆಮ್ಮದಿಗೆ ಉತ್ತಮ ಕೊಡುಗೆ ನೀಡುವಿರಿ. ಉದ್ಯೋಗದಲ್ಲಿ ನಿಮ್ಮ ಮಾತನ್ನು ಎಲ್ಲರೂ ಗೌರವಿಸುತ್ತಾರೆ. ಬಡ್ತಿ ದೊರೆತು ಅಧಿಕಾರದ ಗದ್ದುಗೆ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳು ಮಧ್ಯಮ ಗತಿಯಲ್ಲಿ ಸಾಗುತ್ತವೆ. ವಿದ್ಯಾರ್ಥಿಗಳು ಕ್ರೀಡಾ ಸ್ಪೂರ್ತಿಯಿಂದ ಮುಂದುವರೆಯುತ್ತಾರೆ. ಸೋಲು ಗೆಲುವನ್ನು ಒಂದೇ ಭಾವನೆಯಿಂದ ಒಪ್ಪಿಕೊಳ್ಳುವಿರಿ. ಹಣಕಾಸಿನ ವ್ಯವಹಾರದಲ್ಲಿ ಯಾವುದೇ ತೊಂದರೆ ಉಂಟಾಗುವುದಿಲ್ಲ. ಮನೆಯಲ್ಲಿರುವ ಸ್ತ್ರೀಯರಿಗೆ ಉಡುಗೊರೆ ನೀಡುವಿರಿ.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.