Horoscope Today: ಮಾನಸಿಕ ಒತ್ತಡ ಇರುತ್ತದೆ, ಉದ್ಯೋಗ ಬದಲಾವಣೆಯಿಂದ ಪ್ರಯೋಜನವಿಲ್ಲ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಮಾನಸಿಕ ಒತ್ತಡ ಇರುತ್ತದೆ, ಉದ್ಯೋಗ ಬದಲಾವಣೆಯಿಂದ ಪ್ರಯೋಜನವಿಲ್ಲ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ

Horoscope Today: ಮಾನಸಿಕ ಒತ್ತಡ ಇರುತ್ತದೆ, ಉದ್ಯೋಗ ಬದಲಾವಣೆಯಿಂದ ಪ್ರಯೋಜನವಿಲ್ಲ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ

16 ಜುಲೈ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (16th July 2024 Horoscope).

ಮೇಷ, ವೃಷಭ, ಮಿಥುನ ಮತ್ತು ಕಟಕ ದಿನ ಭವಿಷ್ಯ
ಮೇಷ, ವೃಷಭ, ಮಿಥುನ ಮತ್ತು ಕಟಕ ದಿನ ಭವಿಷ್ಯ

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (16th July 2024 Horoscope)

ಇಂದಿನ ಪಂಚಾಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮಋತು-ಆಷಾಡ ಮಾಸ-ಶುಕ್ಲಪಕ್ಷ-ಮಂಗಳವಾರ

ತಿಥಿ: ದಶಮಿ ಹ. 04.47 ರವರೆಗು ಇರುತ್ತದೆ. ಆನಂತರ ಏಕಾದಶಿ ಆರಂಭವಾಗುತ್ತದೆ.

ನಕ್ಷತ್ರ: ವಿಶಾಖ ನಕ್ಷತ್ರವು ರಾ. 11.41 ರವರೆಗು ಇದ್ದು ಆನಂತರ ಅನೂರಾಧ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.01

ಸೂರ್ಯಾಸ್ತ: ಸಂಜೆ 06.49

ರಾಹುಕಾಲ: ಮಧ್ಯಾಹ್ನ 03.41 ರಿಂದ ಸಂಜೆ 05.17

ಮೇಷ ರಾಶಿ

ಯಾರಿಗೂ ತಿಳಿಸದೆ ಸ್ವಂತ ಕೆಲಸವನ್ನು ಯಶಸ್ಚಿಯಿಂದ ಪೂರ್ಣಗೊಳಿಸುವಿರಿ. ಅಸಾಧ್ಯದ ವಿಚಾರಗಳಿಗೆ ಯೋಚಿಸುವ ಕಾರಣ ಮಾನಸಿಕ ಒತ್ತಡ ಇರುತ್ತದೆ. ಉದ್ಯೋಗದಲ್ಲಿ ನಿಮ್ಮ ಮಾತಿಗೆ ತಕ್ಕಂತೆ ಉತ್ತಮ ಬದಲಾವಣೆಗಳು ಕಂಡುಬರಲಿದೆ. ಆತ್ಮೀಯರೊಬ್ಬರು ನಿಮಗೆ ಆಧುನಿಕ ತಂತ್ರಜ್ಞಾನದ ಬಗ್ಗೆ ತಿಳುವಳಿಕೆ ನೀಡುತ್ತಾರೆ. ವಿದ್ಯಾರ್ಥಿಗಳು ಆಸಕ್ತಿಯಿಂದ ಕಲಿಕೆಯಲ್ಲಿ ಮಗ್ನರಾಗುತ್ತಾರೆ. ವ್ಯಾಪಾರ ವ್ಯವಹಾರದ ಆದಾಯದಲ್ಲಿ ಸಮತೋಲನ ಉಂಟಾಗುತ್ತದೆ. ಅನಾವಶ್ಯಕ ಖರ್ಚು ವೆಚ್ಚಗಳನ್ನು ಕಡಿಮೆ ಮಾಡುವಲ್ಲಿ ವಿಫರಾಗುವಿರಿ. ಕುಟುಂಬದೊಂದಿಗೆ ಕಳೆಯಲು ಕೆಲ ಸಮಯವನ್ನು ಮೀಸಲಿಡುವಿರಿ.

ಪರಿಹಾರ: ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ನೀಲಿ

ವೃಷಭ ರಾಶಿ

ಅರೆ ಮನಸ್ಸಿನ ನಿರ್ಧಾರದಿಂದಾಗಿ ಉತ್ತಮ ಅವಕಾಶವು ಕೈತಪ್ಪಿ ಹೋಗುತ್ತದೆ. ಬೇರೆಯವರ ಸಮಸ್ಯೆಯೊಂದನ್ನು ಬಗೆಹರಿಸುವ ಕಾರಣ ಹಣದ ಸಹಾಯ ದೊರೆಯುತ್ತದೆ. ಹಣದ ತೊಂದರೆಯಿಂದ ಪಾರಾಗುವಿರಿ. ನಿಮ್ಮ ವರ್ತನೆಯಲ್ಲಿ ಉಂಟಾಗುವ ಬದಲಾವಣೆಗಳು ಎಲ್ಲರ ಮನಗೆಲ್ಲುತ್ತದೆ. ಕುಟುಂಬದ ನೆಮ್ಮದಿಗೆ ಯಾವುದೇ ತೊಂದರೆ ಬಾರದಂತೆ ನೋಡಿಕೊಳ್ಳುವಿರಿ. ದಂಪತಿಗಳ ನಡುವೆ ಬೇಸರ ಮೂಡುವ ಪ್ರಸಂಗವೊಂದು ನಡೆಯಲಿದೆ. ನಿರೀಕ್ಷಿಸಿದಂತೆ ಉದ್ಯೋಗದಲ್ಲಿ ಬಡ್ತಿ ದೊರೆಯುತ್ತದೆ. ಆದರೆ ದೂರದ ಊರಿಗೆ ವರ್ಗಾವಣೆಯಾಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ನಿಮ್ಮ ಲೆಕ್ಕಾಚಾರದಂತೆ ಲಾಭ ದೊರೆಯುವುದಿಲ್ಲ.

ಪರಿಹಾರ: ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ನೇರಳೆ

ಮಿಥುನ ರಾಶಿ

ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ಕುಟುಂಬದಲ್ಲಿನ ವಿವಾದವು ಮರೆಯಾಗಿ ಸಹಜ ಸ್ಥಿತಿಗೆ ಮರಳುತ್ತದೆ. ಚಾಡಿ ಮಾತುಗಳನ್ನು ನಂಬಿ ವಿವಾದಕ್ಕೆ ಸಿಲುಕುವಿರಿ. ದಾಂಪತ್ಯದಲ್ಲಿ ವಿವಾದ ಉಂಟಾಗಲಿದೆ. ಉದ್ಯೋಗದಲ್ಲಿ ಉತ್ತಮ ಬದಲಾವಣೆಗಳಿಂದ ನಿಮಗೆ ಯಾವುದೇ ಉಪಯೋಗ ಇರುವುದಿಲ್ಲ. ಬೇಸರದಿಂದ ಉದ್ಯೋಗ ಬದಲಿಸುವ ಸಾಧ್ಯತೆ ಇರುತ್ತದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಕಲಿಕೆಯಲ್ಲಿ ಮುಂದುವರೆಯುವರು. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರಕುತ್ತದೆ. ಆದರೆ ಹಣವನ್ನು ಉಳಿಸಲು ವಿಫಲರಾಗುವಿರಿ. ಆತ್ಮೀಯರೊಬ್ಬರ ಭೇಟಿಯಿಂದ ಮನಸ್ಸಿಗೆ ಸಂತೋಷ ಉಂಟಾಗುತ್ತದೆ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಗುಲಾಬಿ

ಕಟಕ ರಾಶಿ

ಉತ್ತಮ ಆರೋಗ್ಯಕ್ಕಾಗಿ ತೂಕ ಕಡಿಮೆ ಮಾಡಿಕೊಳ್ಳುವ ಪ್ರಯತ್ನದಲ್ಲಿ ಸಫಲರಾಗುವಿರಿ. ಸ್ವಂತ ವೈದ್ಯದ ಬದಲು ವೈದ್ಯರನ್ನು ಭೇಟಿಯಾಗುವುದು ಕ್ಷೇಮಕರ. ಕುಟುಂಬದಲ್ಲಿ ವಾದ ವಿವರಗಳು ಇದ್ದರೂ ವಿಕೋಪಕ್ಕೆ ಹೋಗಲಾರದು. ತಪ್ಪನ್ನು ಕ್ಷಮಿಸುವ ಗುಣದಿಂದ ಎಲ್ಲರ ಪ್ರೀತಿಗೆ ಪಾತ್ರರಾಗುವಿರಿ. ಉದ್ಯೋಗದಲ್ಲಿ ಶಾಂತಿ ಸಂಧಾನದಿಂದ ಸಮಸ್ಯೆಗಳನ್ನು ದೂರ ಮಾಡುವಿರಿ. ಮೌನದಿಂದ ಇದ್ದಲ್ಲಿ ಕುಟುಂಬದಲ್ಲಿ ಸಾಮರಸ್ಯ ಉಂಟಾಗಲು ಸಾಧ್ಯವಾಗುತ್ತದೆ.

ಪರಿಹಾರ: ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

Whats_app_banner