ಸಮಾಜದ ನಾಯಕನ ಸ್ಥಾನ ನಿಮಗೆ ದೊರೆಯಲಿದೆ, ಗರ್ಭಿಣಿಯರು ಆರೋಗ್ಯದ ಕಡೆ ಗಮನ ನೀಡಬೇಕು; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
16 ಜೂನ್ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (16th June 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (16th June 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಭಾನುವಾರ
ತಿಥಿ: ದಶಮಿ ರಾತ್ರಿ 02.14ರವರೆಗೂ ಇದ್ದು ನಂತರ ಏಕಾದಶಿ ಆರಂಭವಾಗುತ್ತದೆ.
ನಕ್ಷತ್ರ: ಹಸ್ತ ನಕ್ಷತ್ರವು ಬೆಳಗ್ಗೆ 09.55 ರವರೆಗೆ ಇದ್ದು ನಂತರ ಚಿತ್ತೆ ನಕ್ಷತ್ರವು ಆರಂಭವಾಗಲಿದೆ.
ಸೂರ್ಯೋದಯ: ಬೆಳಗ್ಗೆ 05.52
ಸೂರ್ಯಾಸ್ತ: ಸಂಜೆ 06.47
ರಾಹುಕಾಲ: ಸಂಜೆ 05.12 ರಿಂದ 06.49
ರಾಶಿಫಲ
ಮೇಷ
ನಿಮಗೆ ಅರಿವಿಲ್ಲದಂತೆ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ಬೇರೆ ಬೇರೆಯಾಗಿದ್ದ ಕುಟುಂಬವನ್ನು ಮತ್ತೆ ಒಂದುಗೂಡಿಸುವಿರಿ. ವಂಶಕ್ಕೆ ಸೇರಿದ ಮನೆಯನ್ನು ನವೀಕರಿಸುವಿರಿ. ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಅತಿಯಾದ ಭಾವುಕತೆಯಿಂದ ವರ್ತಿಸುವಿರಿ. ಗಂಗಾಸ್ನಾನ ಮಾಡುವಿರಿ. ಸುಲಭವಾಗಿ ಹಣವನ್ನು ಖರ್ಚು ಮಾಡುವುದಿಲ್ಲ. ಪಿತ್ತದ ದೋಷವಿರುತ್ತದೆ. ಆರಂಭದಲ್ಲಿ ವಿಘ್ನಗಳು ಉಂಟಾದರೂ ಕ್ರಮೇಣ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿವೆ. ಸಮಾಜದಲ್ಲಿನ ನಾಯಕನ ಪಟ್ಟ ನಿಮಗೆ ದೊರೆಯುತ್ತದೆ. ಭೂ ಲಾಭವಿದೆ. ಕುಟುಂಬದ ಹಿರಿಯರಿಂದ ನಿಮಗೆ ಪ್ರಶಂಸೆ ಲಭಿಸುತ್ತದೆ. ಹೊಸ ವಾಹನ ಕೊಳ್ಳಲಿದ್ದೀರಿ.
ಪರಿಹಾರ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಬಿಳಿ
ವೃಷಭ
ಬೇರೆಯವರಿಗೆ ಅಸಾಧ್ಯವಾದಂತಹ ವಿಚಾರಗಳನ್ನು ಸುಲಭವಾಗಿ ಅರಿತುಕೊಳ್ಳುವಿರಿ. ರಾಜಕೀಯ ಕ್ಷೇತ್ರಗಳಲ್ಲಿ ಉತ್ತಮ ಹೆಸರು ಗಳಿಸುವಿರಿ. ಕೈ ಕಾಲುಗಳಲ್ಲಿ ತೊಂದರೆ ಕಂಡುಬರುತ್ತದೆ. ಜೀವನದಲ್ಲಿ ಸಂತೋಷ ನೆಲೆಸಿರುತ್ತದೆ. ಅನಾವಶ್ಯಕ ಖರ್ಚು ವೆಚ್ಚಗಳಿಂದ ಬೇಸರಗೊಳ್ಳುವಿರಿ. ತಪ್ಪು ನಿಮ್ಮಲ್ಲೇ ಇದ್ದರೂ ಬೇರೆಯವರಿಗೆ ಬುದ್ಧಿವಾದ ಹೇಳುವಿರಿ. ಸಮಾಜದಲ್ಲಿ ಗೌರವಯುತ ಸ್ಥಾನಮಾನ ದೊರೆಯುತ್ತದೆ. ಚಿಕ್ಕಮಕ್ಕಳ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ಅನಾರೋಗ್ಯವಿರುತ್ತದೆ. ತಂದೆ ಮಕ್ಕಳ ನಡುವೆ ಉತ್ತಮ ಬಾಂಧವ್ಯ ಇರುವುದಿಲ್ಲ. ಧೈರ್ಯ ಸಾಹಸದ ಗುಣವಿರುತ್ತದೆ. ಮನಸ್ಸಿಗೆ ಸರಿ ಎನಿಸಿದರೂ ಬೇರೆಯವರ ಮಾತುಗಳನ್ನು ಒಪ್ಪುವುದಿಲ್ಲ. ಹಿಂದೆಯೇ ನಿರ್ಧರಿಸಿದ್ದ ಪ್ರವಾಸವನ್ನು ರದ್ದುಪಡಿಸುವಿರಿ.
ಪರಿಹಾರ : ತಲೆಗೆ ಹಾಲು ಹಚ್ಚಿ ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಬೂದು
ಮಿಥುನ
ಉದ್ಯೋಗ ನಿಮಿತ್ತ ನಿಮ್ಮ ತಂದೆಯವರು ವಿವಿಧ ಸ್ಥಳಗಳಿಗೆ ಪ್ರಯಾಣಿಸುತ್ತಾರೆ. ನಿಮ್ಮ ಮಕ್ಕಳಿಗೆ ನಿಮ್ಮ ಆತ್ಮೀಯರ ಸಹಾಯ ಸಹಕಾರ ದೊರೆಯಲಿದೆ. ನಿಮ್ಮ ತಂದೆಯವರ ಹಟದ ಮನೋಭಾವನೆ ಕುಟುಂಬದ ಬೇಸರಕ್ಕೆ ಕಾರಣವಾಗುತ್ತದೆ. ಸಣ್ಣಪುಟ್ಟ ವಿಚಾರಗಳಿಗೂ ದಿಢೀರ್ ಕೋಪಗೊಳ್ಳುವಿರಿ. ವಾದ ವಿವಾದಗಳಿದ್ದರೂ ಜಂಪತಿಗಳ ನಡುವೆ ಉತ್ತಮ ಅನುಬಂಧ ಇರುತ್ತದೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಆಸಕ್ತಿ ತೋರುವುದಿಲ್ಲ .ನಿಮ್ಮಲ್ಲಿರುವ ವಿಶೇಷ ಜ್ಞಾನ ಎಲ್ಲರಿಗೂ ಸಹಕಾರಿಯಾಗುತ್ತದೆ. ಗೌರವ ಘನತೆಗಳಿಂದ ಜೀವನವನ್ನು ನಡೆಸುವಿರಿ. ಸಾರ್ವಜನಿಕ ಸಂಘ ಸಂಸ್ಥೆಯ ನಾಯಕತ್ವದ ಜವಾಬ್ದಾರಿ ನಿಮ್ಮದಾಗುತ್ತದೆ. ವಿಶೇಷ ವಿದ್ಯೆಯೊಂದು ಸಿದ್ಧಿಸುತ್ತದೆ.
ಪರಿಹಾರ : ಹಣೆಯಲ್ಲಿ ತಿಲಕ ಧರಿಸಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಆಕಾಶ ನೀಲಿ
ಕಟಕ
ವಿಶೇಷವಾದ ಕೆಲಸವೊಂದನ್ನು ಸುಲಭವಾಗಿ ಮಾಡಿ ಮುಗಿಸುವಿರಿ. ಇದರಿಂದಾಗಿ ವಂಶದಲ್ಲಿಯೇ ನಿಮಗೆ ವಿಶೇಷವಾದ ಗೌರವ ದೊರೆಯಲಿದೆ. ತಪ್ಪನ್ನು ಮರೆ ಮಾಚದೆ ಇರುವ ವಿಚಾರವನ್ನು ಹೇಳುವುದರಿಂದ ವಿರೋಧಿಗಳು ಇರುತ್ತಾರೆ. ಮಹಿಳೆಯರು ತಮಗೆ ಇಷ್ಟವಾದಂತಹ ಆಭರಣವನ್ನು ಕೊಳ್ಳುತ್ತಾರೆ. ನಿಮ್ಮ ಮಾತಿಗೆ ಎಲ್ಲೆಡೆ ಧನಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ. ಕುಟುಂಬದ ಹಿರಿಯರ ಸಹಾಯ ದೊರೆಯಲಿದೆ. ಗರ್ಭಿಣಿಯರು ಎಚ್ಚರಿಕೆಯಿಂದ ಇರಬೇಕು. ಮಕ್ಕಳು ಆತಂಕದ ಪರಿಸ್ಥಿತಿಯನ್ನು ಎದುರಿಸುತ್ತಾರೆ. ಅಡ್ಡಿಆತಂಕ ಎದುರಿಸಿದ ನಂತರ ಕೆಲಸ ಕಾರ್ಯದಲ್ಲಿ ಯಶಸ್ಸು ಗಳಿಸುವಿರಿ. ತಂದೆ ಮತ್ತು ಹೆಣ್ಣು ಮಕ್ಕಳ ನಡುವೆ ಜಗಳವಿರುತ್ತದೆ. ಸಂತಾನ ಲಾಭವಿದೆ. ಸೋದರನಿಗೆ ವಿದೇಶದಲ್ಲಿ ಉದ್ಯೋಗ ದೊರೆಯುವ ಸೂಚನೆ ಇದೆ. ತಾಯಿಯ ಆರೋಗ್ಯ ಸುಧಾರಿಸಲಿದೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು: ನೈರುತ್ಯ
ಅದೃಷ್ಟದ ಬಣ್ಣ: ಕೆಂಪು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
