ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಹಣಕಾಸಿನ ವಿಚಾರದಲ್ಲಿ ಅಪವಾದ ಎದುರಿಸುವಿರಿ, ಸೋದರನ ಜೊತೆ ಹೊಸ ವ್ಯಾಪಾರ ಆರಂಭಿಸುವಿರಿ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಹಣಕಾಸಿನ ವಿಚಾರದಲ್ಲಿ ಅಪವಾದ ಎದುರಿಸುವಿರಿ, ಸೋದರನ ಜೊತೆ ಹೊಸ ವ್ಯಾಪಾರ ಆರಂಭಿಸುವಿರಿ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

16 ಜೂನ್‌ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (16th June 2024 Daily Horoscope).

ಹಣಕಾಸಿನ ವಿಚಾರದಲ್ಲಿ ಅಪವಾದ ಎದುರಿಸುವಿರಿ, ಸೋದರನ ಜೊತೆ ಹೊಸ ವ್ಯಾಪಾರ ಆರಂಭಿಸುವಿರಿ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
ಹಣಕಾಸಿನ ವಿಚಾರದಲ್ಲಿ ಅಪವಾದ ಎದುರಿಸುವಿರಿ, ಸೋದರನ ಜೊತೆ ಹೊಸ ವ್ಯಾಪಾರ ಆರಂಭಿಸುವಿರಿ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(16th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಭಾನುವಾರ

ತಿಥಿ: ದಶಮಿ ರಾತ್ರಿ 02.14ರವರೆಗೂ ಇದ್ದು ನಂತರ ಏಕಾದಶಿ ಆರಂಭವಾಗುತ್ತದೆ.

ನಕ್ಷತ್ರ: ಹಸ್ತ ನಕ್ಷತ್ರವು ಬೆಳಗ್ಗೆ 09.55 ರವರೆಗೆ ಇದ್ದು ನಂತರ ಚಿತ್ತೆ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.47

ರಾಹುಕಾಲ: ಸಂಜೆ 05.12 ರಿಂದ 06.49

ರಾಶಿಫಲ

ಧನಸ್ಸು

ಸಂಗಾತಿಯ ಮನಸ್ಸನ್ನು ಅರಿಯದೆ ಅವರಿಗೆ ಬೇಸರ ಉಂಟು ಮಾಡುವಿರಿ. ಉದ್ಯೋಗ ಬದಲಿಸುವ ತೀರ್ಮಾನ ಮಾಡುವಿರಿ. ಬಹಳ ದಿನಗಳ ಹಿಂದೆಯೇ ಯೋಚಿಸಿದ್ದ ಕೆಲಸ ಕಾರ್ಯಗಳು ಸುಲಭವಾಗಿ ಪೂರ್ಣಗೊಳ್ಳುವವು. ಸೋದರ ಅಥವಾ ಸೋದರಿಯ ವಿವಾಹ ನಿಶ್ಚಯವಾಗುತ್ತದೆ. ನಿಮಗೆ ಪ್ರಾಚೀನ ಕಲೆಗಳ ಬಗ್ಗೆ ಉತ್ತಮ ಅಭಿರುಚಿ ಇರುತ್ತದೆ. ಸಂಗಾತಿಗೆ ಕ್ಷಮಾ ಗುಣ ಇರುವ ಕಾರಣ ದಾಂಪತ್ಯ ಸುಖಮಯವಾಗಿರುತ್ತದೆ. ಆಪತ್ಕಾಲಕ್ಕಾಗಿ ಕಷ್ಟವಾದರೂ ಹಣವನ್ನು ಉಳಿಸುವಿರಿ. ಮಕ್ಕಳು ವೈಭವದ ಜೀವನವನ್ನು ನಡೆಸುತ್ತಾರೆ. ಹಣಕಾಸಿನ ವಿವಾದವೊಂದು ಸುಖಾಂತ್ಯಗೊಳ್ಳುತ್ತದೆ. ಮಕ್ಕಳೊಂದಿಗೆ ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡುವಿರಿ.

ಪರಿಹಾರ : ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಮಕರ

ಕುಟುಂಬದಲ್ಲಿ ಆತಂಕದ ಪರಿಸ್ಥಿತಿ ಇರುತ್ತದೆ. ವೃತ್ತಿಯಲ್ಲಿ ಬೇಸರವಿರುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಜೊತೆ ಉತ್ತಮ ಅನುಬಂಧ ಇರುವುದಿಲ್ಲ. ಎಲ್ಲರೊಂದಿಗೆ ಸಹನೆಯಿಂದ ವರ್ತಿಸಿದರೆ ಕೆಲಸ ಕಾರ್ಯಗಳು ಸುಗಮವಾಗಿ ನಡೆಯಲಿವೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಬೇಕು. ಕುಟುಂಬದಲ್ಲಿ ಒಗ್ಗಟ್ಟಿನ ಕೊರತೆ ಕಂಡುಬರುತ್ತದೆ. ಅದೃಷ್ಟವಶಾತ್ ಸೋದರನು ಆಪತ್ತಿನಿಂದ ಪಾರಾಗುತ್ತಾನೆ. ನಿಮಗೆ ರಕ್ತಕ್ಕೆ ಸಂಬಂಧಪಟ್ಟ ದೋಷವಿರುತ್ತದೆ. ದೈಹಿಕ ಶಕ್ತಿಯು ಕಡಿಮೆಯಾಗುತ್ತದೆ. ಎಲ್ಲಾ ಕೆಲಸ ಕಾರ್ಯಗಳಿಗೆ ಬೇರೆಯವರ ಸಹಾಯ ಸಹಕಾರ ಬೇಕಾಗುತ್ತದೆ. ಕುಟುಂಬದ ಸದಸ್ಯರೊಬ್ಬರ ವಿವಾಹ ಮುಂದೂಡಲ್ಪಡುತ್ತದೆ.

ಪರಿಹಾರ : ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಕುಂಭ

ಹವ್ಯಾಸಕ್ಕೆಂದು ಕಲಿತ ವಿದ್ಯೆಯೊಂದು ಈಗ ಉಪಯೋಗಕ್ಕೆ ಬರುತ್ತದೆ. ಆಪತ್ತಿನ ಸಮಯಕ್ಕೆ ಸರಿಯಾಗಿ ಸ್ನೇಹಿತರ ಸಹಾಯವು ನಿಮಗೆ ದೊರೆಯುತ್ತದೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ಹಣಕಾಸಿನ ವಿಚಾರದಲ್ಲಿ ಅಪವಾದವೊಂದನ್ನು ಎದುರಿಸಬೇಕಾಗುತ್ತದೆ. ಸಮಾಜದಲ್ಲಿ ಗೌರವಯುತ ಸ್ಥಾನ ದೊರೆಯುತ್ತದೆ. ನಿಮ್ಮ ನಯವಾದ ಮಾತಿನಿಂದ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಕಲಾವಿದರಿಗೆ ಉತ್ತಮ ಅವಕಾಶ ದೊರೆಯಲಿದೆ. ನೆಮ್ಮದಿಯ ಜೀವನವನ್ನು ನಡೆಸುವಿರಿ. ಹಣಕಾಸಿನ ವ್ಯವಹಾರದಲ್ಲಿ ಕುಟುಂಬದಲ್ಲಿ ಮನಸ್ತಾಪ ಉಂಟಾಗುತ್ತದೆ. ಹಣದ ತೊಂದರೆ ಇರುವುದಿಲ್ಲ. ಆತ್ಮೀಯರ ಜೊತೆಗಿನ ಒಡನಾಟ ಮನಸ್ಸಿಗೆ ಸಂತೋಷವನ್ನು ನೀಡುತ್ತದೆ. ನಿಮ್ಮ ಮನದಲ್ಲಿರುವ ಯೋಜನೆಗಳನ್ನು ಯಾರಿಗೂ ತಿಳಿಸುವುದಿಲ್ಲ.

ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನೀಲಿ ಬಣ್ಣ

ಮೀನ

ಆತ್ಮವಿಶ್ವಾಸದ ಕೊರತೆ ಇರುತ್ತದೆ. ಸೋದರನ ಸಹಯೋಗದಲ್ಲಿ ಬೃಹತ್ ವ್ಯಾಪಾರಕ್ಕೆ ಅಡಿಪಾಯ ಹಾಕುವಿರಿ. ಹಣೆ ಅಥವಾ ತಲೆಗೆ ಪೆಟ್ಟಾಗಬಹುದು. ದಿಢೀರನೆ ಯಾವುದೇ ವಿಚಾರದಲ್ಲಿ ಸೂಕ್ತ ತೀರ್ಮಾನವನ್ನು ಕೈಗೊಳ್ಳಲಾರಿರಿ. ವಿದ್ಯಾರ್ಥಿಗಳು ಆತಂಕವಿಲ್ಲದೆ ಕಲಿಕೆಯಲ್ಲಿ ತೊಡಗುತ್ತಾರೆ. ಚಾಡಿ ಮಾತುಗಳನ್ನು ನಂಬುವುದಿಲ್ಲ. ನಿಮ್ಮಿಂದಾಗಿ ಕುಟುಂಬದಲ್ಲಿ ಶಾಂತಿ ನೆಮ್ಮದಿಯ ವಾತಾವರಣ ಇರುತ್ತದೆ. ನಿಮ್ಮ ಸಂಗಾತಿಗೆ ಸ್ನೇಹಿತರಿಗೆ ಸಹಾಯ ಮಾಡುವ ಹಂಬಲವಿರುತ್ತದೆ. ಕುಟುಂಬದಲ್ಲಿ ದಂಪತಿ ನಡುವೆ ಉತ್ತಮ ಒಡನಾಟ ಇರುತ್ತದೆ. ನಿತ್ಯ ಜೀವನಕ್ಕೆ ಸಾಕಾಗುವಷ್ಟು ಹಣ ಸುಲಭವಾಗಿ ದೊರೆಯುತ್ತದೆ. ನಿಮ್ಮ ಮಗಳಿಗೆ ವಿಶೇಷ ಶುಭಫಲಗಳು ದೊರೆಯುತ್ತವೆ.

ಪರಿಹಾರ : ಮಕ್ಕಳಿಗೆ ಗೋಧಿಯಿಂದ ತಯಾರಿಸಿದ ಸಿಹಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ 4

ಅದೃಷ್ಟದ ದಿಕ್ಕು : ಉತ್ತಮ

ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.